ವಿಶ್ವವಿಖ್ಯಾತ ಮೈಸೂರು ದಸರೆಗೆ ಸರ್ವರಿಗೂ ಆಮಂತ್ರಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ವಿಶ್ವವಿಖ್ಯಾತ ದಸರಾ ಸಂಭ್ರಮ ಎಲ್ಲೆಡೆ ಕಳೆಗಟ್ಟಿದೆ. ನಾಳೆ ಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ದಸರಾಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಹಾಗಾಗಿ ನಾಡಿನ ಹೆಮ್ಮೆಯ ಮೈಸೂರು ದಸರಾಗೆ ಸಿಎಂ ಸಿದ್ದರಾಮಯ್ಯ ಆತ್ಮೀಯ ಸ್ವಾಗತಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಬೆಂಗಳೂರು, ಅಕ್ಟೋಬರ್ 14: ಮೈಸೂರು ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ವಿಶ್ವವಿಖ್ಯಾತ ದಸರಾ ಸಂಭ್ರಮ ಎಲ್ಲೆಡೆ ಕಳೆಗಟ್ಟಿದೆ. ನಾಳೆ ಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ದಸರಾಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಹಾಗಾಗಿ ನಾಡಿನ ಹೆಮ್ಮೆಯ ಮೈಸೂರು ದಸರಾಗೆ ಸಿಎಂ ಸಿದ್ದರಾಮಯ್ಯ (Siddaramaiah) ಆತ್ಮೀಯವಾಗಿ ಆಮಂತ್ರಿಸಿದ್ದಾರೆ. ಈ ಕುರಿತಾಗಿ ಸಿಎಂ ಟ್ಟೀಟ್ ಮಾಡಿದ್ದು, ನಾಡಿನ ಹೆಮ್ಮೆಯ ಮೈಸೂರು ದಸರಾಗೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ನಾಳೆಯಿಂದ 10 ದಿನಗಳ ಕಾಲ ನಡೆಯುವ ಈ ಸಾಂಸ್ಕೃತಿಕ ಹಬ್ಬದಲ್ಲಿ ಪಾಲ್ಗೊಂಡು, ಸಂಭ್ರಮದಲ್ಲಿ ಪಾಲುದಾರರಾಗಬೇಕೆಂದು ನಾಡಬಂಧುಗಳಲ್ಲಿ ವಿನಂತಿಸುತ್ತೇನೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಆಮಂತ್ರಣದಲ್ಲಿ ಏನಿದೆ?
ನಮಸ್ಕಾರ, ನಾನು ನಿಮ್ಮ ಸಿದ್ದರಾಮಯ್ಯ, ಈ ರಾಜ್ಯದ ಮುಖ್ಯಮಂತ್ರಿಯಾಗಿ ನಾಡಿನ ಹೆಮ್ಮೆಯ ಮೈಸೂರು ದಸರಾ ಉತ್ಸವಕ್ಕೆ ತಮ್ಮೆಲ್ಲರನ್ನೂ ಆತ್ಮೀಯವಾಗಿ ಆಮಂತ್ರಿಸುತ್ತಿದ್ದೇನೆ. ಮೈಸೂರು ದಸರಾ ಎಂದರೆ ಬರೀ ಉತ್ಸವವಲ್ಲ, ಇದು ಕರ್ನಾಟಕದ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಗತ ವೈಭವವನ್ನು ಪ್ರತಿಬಿಂಬಿಸುವ ನಾಡಹಬ್ಬ, ತಾಯಿ ಚಾಮುಂಡೇಶ್ವರಿಯ ಪೂಜೆಯೊಂದಿಗೆ ಆರಂಭವಾಗುವ ದಸರಾ ಆಚರಣೆಯು ಜಂಬೂಸವಾರಿಯ ವೈಭವದ ಮೆರವಣಿಗೆ, ಪಂಜಿನ ಕವಾಯತಿನ ರೋಮಾಂಚಕ ಸಾಹಸಗಳೊಂದಿಗೆ ಸಂಪನ್ನಗೊಳ್ಳುತ್ತದೆ.
ಸಿಎಂ ಸಿದ್ದರಾಮಯ್ಯ ಟ್ವೀಟ್
ನಾಡಿನ ಹೆಮ್ಮೆಯ ಮೈಸೂರು ದಸರಾಗೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ನಾಳೆಯಿಂದ 10 ದಿನಗಳ ಕಾಲ ನಡೆಯುವ ಈ ಸಾಂಸ್ಕೃತಿಕ ಹಬ್ಬದಲ್ಲಿ ಪಾಲ್ಗೊಂಡು, ಸಂಭ್ರಮದಲ್ಲಿ ಪಾಲುದಾರರಾಗಬೇಕೆಂದು ನಾಡಬಂಧುಗಳಲ್ಲಿ ವಿನಂತಿಸುತ್ತೇನೆ. – ಮುಖ್ಯಮಂತ್ರಿ @siddaramaiah #ಮೈಸೂರುದಸರಾ2023 pic.twitter.com/KiYGP2k7n5
— CM of Karnataka (@CMofKarnataka) October 14, 2023
ಈ ನಡುವೆ ಮೈಸೂರು ಅರಮನೆಯ ಭವ್ಯ ದೀಪಾಲಂಕಾರ, ಕರಕುಶಲ ವಸ್ತುಗಳ ಪ್ರದರ್ಶನ, ಕೀಡಾಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಧಾರ್ಮಿಕ ಆಚರಣೆಗಳ ಕಣ್ಮನ ಸೆಳೆಯುವ ಹೂರಣವಿರಲಿದೆ. ಪಾರಂಪರಿಕ ಆಚರಣೆ, ಸಮಕಾಲೀನ ಆಶಯಗಳ ಹದವರಿತ ಮಿಶ್ರಣವಾದ ಈ ಉತ್ಸವ ನಿಜ ಅರ್ಥದಲ್ಲಿ ಜನೋತ್ಸವವಾಗಿದೆ. ಕರ್ನಾಟಕದ ಹೆಮ್ಮೆಯ ದ್ಯೋತಕವಾದ ದಸರಾ ಉತ್ಸವಕ್ಕೆ ತಾವೆಲ್ಲರೂ ಆಗಮಿಸಿ, ಸಂಭ್ರಮದಲ್ಲಿ ಪಾಲುದಾರರಾಗಬೇಕೆಂದು ವಿನಂತಿಸುತ್ತೇನೆ. ಸರ್ವರಿಗೂ ಹೃತೂರ್ವಕ ಸ್ವಾಗತ ಕೋರಿದ್ದಾರೆ.
ಇದನ್ನೂ ಓದಿ: ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಬೆಳಗ್ಗೆ ಶುಭ ವೃಶ್ಚಿಕ ಲಗ್ನದಲ್ಲಿ ಚಾಲನೆ
ಸಿಎಂ ಸಿದ್ದರಾಮಯ್ಯ ಹೀಗಾಗಲೇ ಮೈಸೂರಿಗೆ ಆಗಮಿಸಿದ್ದಾರೆ. ಇಂದು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದಾರೆ. ಮೊದಲು ನಾಡದೇವಿಯ ದರ್ಶನ ಪಡೆದು ನಂತರ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: ಚಾಮರಾಜನಗರ ದಸರಾಗೆ ಅ.17 ರಂದು ಚಾಲನೆ: ವಿಶೇಷ ಕಾರ್ಯಕ್ರಮಗಳು ಆಯೋಜನೆ; ಇಲ್ಲಿದೆ ಮಾಹಿತಿ
ಈಗಾಗಲೇ ಮೈಸೂರಿಗೆ ಆಗಮಿಸಿರುವ ದಸರಾ ಉದ್ಘಾಟಕರಾದ ಹಂಸಲೇಖ ನಂಜನಗೂಡು ತಾಲ್ಲೂಕು ಸುತ್ತೂರು ಮಠಕ್ಕೆ ಭೇಟಿ ನೀಡಿ, ಸುತ್ತೂರು ಶ್ರೀಗಳ ಆಶೀರ್ವಾದ ಪಡೆದುಕೊಂಡಿದ್ದಾರೆ. ನಾಳೆ ಬೆಳಗ್ಗೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ದಸರಾಗೆ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಡಾ ಎಚ್ ಸಿ ಮಹದೇವಪ್ಪ ಸೇರಿ ಸಂಸದರು ಶಾಸಕರು ಭಾಗಿಯಾಗಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.