ಮಹಿಷ ದಸರಾ-ಚಾಮುಂಡಿ ಬೆಟ್ಟ ಚಲೋ ಜಟಾಪಟಿ, 144 ಸೆಕ್ಷನ್ ಬ್ರಹ್ಮಾಸ್ತ್ರ ಪ್ರಯೋಗ: ಇಂದು ಭಕ್ತರಿಗೆ ನಿರ್ಬಂಧ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಸಡಗರ ಕಳೆಗಟ್ಟಿದೆ. ನಾಡಹಬ್ಬದ ಉದ್ಘಾಟನೆಗೆ ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದೆ. ಇದರ ನಡುವೆ ಮಹಿಷ ದಸರಾ-ಚಾಮುಂಡಿಬೆಟ್ಟ ಚಲೋ ವಾರ್ ಈಗ ಮತ್ತೊಂದು ಹಂತಕ್ಕೆ ಬಂದು ನಿಂತಿದೆ. ಇಂದು ಶುಕ್ರವಾರ. ಚಾಮುಂಡಿಬೆಟ್ಟಕ್ಕೆ ಸಾಮಾನ್ಯ ದಿನಗಳಿಗಿಂತ ಭಕ್ತರ ಸಂಖ್ಯೆ ಹೆಚ್ಚಾಗಿಯೇ ಇರುತ್ತೆ. ಅದರಲ್ಲೂ ದಸರಾ ಸಂದರ್ಭದಲ್ಲಂತೂ ಚಾಮುಂಡಿ ದರ್ಶನಕ್ಕೆ ನೂಕುನುಗ್ಗಲು ಇದ್ದೇ ಇರುತ್ತೆ. ಆದ್ರೆ ಈ ಮಹಿಷ ದಸರಾ ಹಾಗೂ ಚಾಮುಂಡಿ ಬೆಟ್ಟ ಚಲೋ ಗುದ್ದಾಟ ಈಗ ಚಾಮುಂಡಿ ಭಕ್ತರಿಗೆ ಸಂಕಷ್ಟ ತಂದಿಟ್ಟಿದೆ.

ಮಹಿಷ ದಸರಾ-ಚಾಮುಂಡಿ ಬೆಟ್ಟ ಚಲೋ ಜಟಾಪಟಿ, 144 ಸೆಕ್ಷನ್ ಬ್ರಹ್ಮಾಸ್ತ್ರ ಪ್ರಯೋಗ: ಇಂದು ಭಕ್ತರಿಗೆ ನಿರ್ಬಂಧ
Follow us
ರಾಮ್​, ಮೈಸೂರು
| Updated By: Digi Tech Desk

Updated on:Oct 13, 2023 | 12:45 PM

ಮೈಸೂರು, (ಅಕ್ಟೋಬರ್ 13): ನಾಡಹಬ್ಬ ಮೈಸೂರು ದಸರಾ (Mysuru Dasara 2023) ಉದ್ಘಾಟನೆಗೆ ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದೆ. ಇದರ ಮಧ್ಯೆ ಮೈಸೂರಿನಲ್ಲಿ(Mysuru)  ಮಹಿಷ ದಸರಾ(mahisha dasara), ಚಾಮುಂಡಿಬೆಟ್ಟ ಚಲೋ  ವಾರ್ ಭಕ್ತರಿಗೆ ಸಂಕಷ್ಟ ತಂದೊಡ್ಡಿದೆ. ಮೈಸೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಇಂದು(ಅಕ್ಟೋಬರ್ 13) ಬೆಳಗ್ಗೆ 6 ಗಂಟೆಯಿಂದಲೇ ಚಾಮುಂಡಿಬೆಟ್ಟಕ್ಕೆ (Chamundi betta)) ಭಕ್ತರಗೆ ನಿಷೇಧಿಸಲಾಗಿದೆ.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ ಹಿನ್ನೆಲೆಯಲ್ಲಿ ಬೆಟ್ಟದ ಮೊದಲ ಮೆಟ್ಟಿಲ ಬಳಿ ತಾಯಿ ಚಾಮುಂಡೇಶ್ವರಿ ವಿಗ್ರಹ ಖಾಲಿ ಖಾಲಿಯಾಗಿದೆ. ಪ್ರತಿದಿನ ಸಾವಿರಾರು ಭಕ್ತರು ಬಂದು ಹರಕೆ ತೀರಿಸುತ್ತಿದ್ದರು. ಬರಿಗಾಲಿನಲ್ಲಿ ಬೆಟ್ಟ ಹತ್ತುತ್ತಿದ್ದ ಭಕ್ತರಿಗೆ ಬ್ರೇಕ್ ಹಾಕಲಾಗಿದೆ. ವಿಗ್ರಹಕ್ಕೆ ಪೂಜೆ ಸಲ್ಲಿಸಿ ಪ್ರತಿ ಮೆಟ್ಟಿಲುಗಳಿಗೂ ಅರಿಶಿನ ಕುಂಕುಮ ಲೇಪಿಸಿ ಮೆಟ್ಟಿಲು ಹತ್ತಿಕೊಂಡು ಹೋಗುತ್ತಿದ್ದರು. ಇದೀಗ ಅದಕ್ಕೂ ಪೊಲೀಸರು ನಿರ್ಬಂಧಿಸಿದ್ದು, ಮೆಟ್ಟಿಲ ಮಾರ್ಗದಲ್ಲೂ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ.  ಮೂವರು ಸಬ್‌ಇನ್ಸ್​ಪೆಕ್ಟರ್, ಎಎಸ್‌ಐ ಮಹಿಳಾ ಕಾನ್ಸ್​ಟೇಬಲ್ ಸೇರಿ 25ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಮಹಿಷ ದಸರಾ ಹೆಸರಿನಲ್ಲಿ ಚಾಮುಂಡೇಶ್ವರಿಗೆ ಅಪಮಾನ: ಫೇಸ್​​ಬುಕ್ ಲೈವ್​ನಲ್ಲಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ‌

ಮೊನ್ನೆ ಮೊನ್ನೆಯಷ್ಟೇ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರಗತಿಪರರ ಮಹಿಷ ದಸರಾ ಮತ್ತು ಬಿಜೆಪಿಯವರು ಚಾಮುಂಡಿ ಬೆಟ್ಟ ಚಲೋ ಎರಡಕ್ಕೂ ಬ್ರೇಕ್ ಹಾಕಿದ್ದರು. ಆದ್ರೆ ಪ್ರಗತಿಪರರು ಮಾತ್ರ ಅಕ್ಟೋಬರ್ 13 ಅಂದ್ರೆ ಇವತ್ತು ಮಹಿಷ ದಸರಾ ಮಾಡಿಯೇ ತೀರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಮಹಿಷ ದಸರಾ ಆಚರಿಸುವುದಕ್ಕೆ ನಾವು ಬಿಡುವುದಿಲ್ಲ ಎಂದಿದ್ದ ಸಂಸದ ಪ್ರತಾಪ್ ಸಿಂಹ ಪಕ್ಷದ ವತಿಯಿಂದ ಚಾಮುಂಡಿ ಬೆಟ್ಟ ಚಲೋಗೆ ಕರೆ ಕೊಟ್ಟಿದ್ದರು.. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿಮಾಡಲಾಗಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಆದ್ರೆ ಚಾಮುಂಡಿಬೆಟ್ಟ ನಿವಾಸಿಗಳಿಗೆ, ತುರ್ತು ಸೇವೆಗಳಿಗೆ ಹಾಗೂ ಅಧಿಕೃತ ಅಧಿಕಾರಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ.

ಅಷ್ಟಕ್ಕೂ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ನಿಷೇಧ ಹಾಕಲು ಕಾರಣವಾದ್ರೂ ಏನು ಅಂತ ನೋಡುವುದಾದರೆ ಅಕ್ಟೋಬರ್ 13 ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಿಸಲು ಅನುಮತಿ ನೀಡಬೇಕು ಎಂದು ಮಹಿಷ ದಸರಾ ಆಚರಣಾ ಸಮಿತಿ ಪೊಲೀಸರಿಂದ ಅನುಮತಿ ಕೇಳಿತ್ತು. ಆದ್ರೆ, ಪೊಲೀಸರು ಅನುಮತಿ ನೀಡಿರಲಿಲ್ಲ. ಈಗ, ಮಹಿಷ ಉತ್ಸವ ಎಂಬ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡಲಾಗಿದೆ. ಮೈಸೂರಿನ ಟೌನ್​ಹಾಲ್​ನಲ್ಲಿ ಕಾರ್ಯಕ್ರಮ ನಡೆಯಲಿದೆ.

ದಸರಾ ಹಬ್ಬ ಕಳೆಕಟ್ಟಬೇಕಿದ್ದ ಮೈಸೂರಿನಲ್ಲಿ ಸದ್ಯ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ನಿಷೇಧ ಹಾಕಿರುವುದರಿಂದ ಭಕ್ತರು ನಿರಾಸೆಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:57 am, Fri, 13 October 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ