Mysore Dasara 2022: ಸೆ.16 ರಿಂದ 9 ದಿನಗಳ ಕಾಲ ದಸರಾ ಯುವ ಸಂಭ್ರಮ
ಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022ರ ಅಂಗವಾಗಿ ಸೆ.16ರಿಂದ 9 ದಿನಗಳ ಕಾಲ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಯುವ ಸಂಭ್ರಮ ನಡೆಯಲಿದೆ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022ರ ಅಂಗವಾಗಿ ಸೆ.16ರಿಂದ 9 ದಿನಗಳ ಕಾಲ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಯುವ ಸಂಭ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಚಿತ್ರನಟ ಡಾಲಿ ಧನಂಜಯ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಯುವ ಸಂಭ್ರಮದಲ್ಲಿ 250 ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಲಿದ್ದು, ಪ್ರತಿದಿನ ಸಂಜೆ 5:30ರಿಂದ ರಾತ್ರಿ 10ರವರೆಗೆ ಕಾರ್ಯಕ್ರಮ ನಡೆಯಲಿದೆ.
ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರತಿಭಾ ಪ್ರದರ್ಶನವಾಗಲಿದ್ದು, 9 ವಿಷಯಾಧಾರಿತವಾಗಿ ಕಾರ್ಯಕ್ರಮಗಳು ನಡೆಯಲಿವೆ. 75ನೇ ವರ್ಷದ ಅಮೃತೋತ್ಸವ ಭಾರತ ಸ್ವಾತಂತ್ರ್ಯ ಚಳುವಳಿ, ಮಹಿಳಾ ಸಬಲೀಕರಣ, ಕನ್ನಡ ಸಂಸ್ಕೃತಿ, ಪರಿಸರ, ಸ್ವಚ್ಚ ಭಾರತ ಮತ್ತು ಮೈಸೂರು ಮಹಾರಾಜರ ಕೊಡುಗೆ ಸೇರಿ 9 ವಿಷಯ ಕಾರ್ಯಕ್ರಮಗಳು ನಡೆಯಲಿವೆ.
ಯುವ ಸಂಭ್ರಮ ಕಾರ್ಯದಲ್ಲಿ ಮೈಸೂರು ವಿವಿ ವ್ಯಾಪ್ತಿಯ ವಿದ್ಯಾರ್ಥಿಗಳು ಸೇರಿದಂತೆ ರಾಜ್ಯದ ಬಹುತೇಕ ವಿವಿಯ ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. 18 ತಂಡಗಳಿಗೆ ಯುವದಸರಾ ವೇದಿಕೆಯಲ್ಲಿ ಅವಕಾಶ ನೀಡಲಾಗಿದೆ. ಯುವ ಸಂಭ್ರಮ ವೀಕ್ಷಿಸಲು ಎಲ್ಲರಿಗೂ ಉಚಿತ ಪ್ರವೇಶ ನೀಡಲಾಗಿದೆ. ಎಂದು ಕಾರ್ಯಕ್ರಮ ಉಸ್ತುವಾರಿ ಮೈಸೂರು ಎಸ್ಪಿ ಆರ್.ಚೇತನ್ ಮಾಹಿತಿ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:32 pm, Wed, 14 September 22