ಮೈಸೂರು: ಈ ಬಾರಿಯ ದಸರಾ ಉತ್ಸವಕ್ಕೆ ವಿಶೇಷ ಕಳೆ ಯಾಕೆಂದರೆ ಅದನ್ನು ಈ ಬಾರಿ ಉದ್ಘಾಟಿಸಲಿರುವವರು ಭಾರತದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು. ಇದೇ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಇಂದು ಮೈಸೂರಿಗೆ ಆಗಮಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai ) ಅವರು ರಾಷ್ಟ್ರಪತಿಗಳನ್ನು ಸ್ವಾಗತಿಸಿದರು.