Mysuru Dasara 2023: ವಿಶ್ವವಿಖ್ಯಾತ ಮೈಸೂರು ದಸರಾ 3ನೇ ದಿನದ ಕಾರ್ಯಕ್ರಮಗಳ ವಿವರ

ಇಂದು ಮೈಸೂರಿನ ಕಲಾಮಂದಿರದಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಕಲಾಮಂದಿರದಲ್ಲಿ ಲಲಿತಕಲೆ ಹಾಗೂ ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌ಸಿ.ಮಹದೇವಪ್ಪ ಚಾಲನೆ ನೀಡಲಿದ್ದಾರೆ.

Mysuru Dasara 2023: ವಿಶ್ವವಿಖ್ಯಾತ ಮೈಸೂರು ದಸರಾ 3ನೇ ದಿನದ ಕಾರ್ಯಕ್ರಮಗಳ ವಿವರ
ಸಾಂದರ್ಭಿಕ ಚಿತ್ರ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Oct 17, 2023 | 7:21 AM

ಮೈಸೂರು, ಅ.17: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ (Mysuru Dasara 2023) ಮೂರನೇ ದಿನಕ್ಕೆ ಕಾಲಿಟ್ಟಿದ್ದು ಇಂದು ಅನೇಕ ಕಾರ್ಯಕ್ರಮಗಳು ನಡೆಯಲಿವೆ. ಮೈಸೂರು ದಸರಾ ವೈಭವ ದಿನೇ ದಿನೇ ರಂಗೇರುತ್ತಿದೆ. ಪ್ರತಿದಿನ ನಡೆಯುತ್ತಿರುವ ವೈವಿಧ್ಯಮಯ ಕಾರ್ಯಕ್ರಮಗಳು ನಾಡಹಬ್ಬದ ಮೆರುಗನ್ನು ಹೆಚ್ಚಿಸಿವೆ. ಅದ್ರಲ್ಲೂ ದೀಪಾಲಂಕಾರ ಸಾಂಸ್ಕೃತಿಕ ನಗರಿಗೆ ಆಗಮಿಸುವ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ. ಇಂದು ಮೈಸೂರಿನ ಕಲಾಮಂದಿರದಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಇಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಕಲಾಮಂದಿರದಲ್ಲಿ ಲಲಿತಕಲೆ ಹಾಗೂ ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌ಸಿ.ಮಹದೇವಪ್ಪ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11.30ಕ್ಕೆ ಕಾವ್ಯ ಸಂಭ್ರಮ, ಹಾಸ್ಯ ಚುಟುಕು ಕಾರ್ಯಕ್ರಮ ನಡೆಯಲಿದ್ದು ಸಾಹಿತಿ ಜಯಂತ್ ಕಾಯ್ಕಿಣಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಬುಧವಾರದಂದು ನಡೆಯುವ ವಿವಿಧ ದಸರಾ ಕಾರ್ಯಕ್ರಮದ ವಿವರ

ಬೆಳಗ್ಗೆ 11ಗಂಟೆಗೆ ಮಾನಸ ಗಂಗೋತ್ರಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಚಿಗುರು ಕವಿಗೋಷ್ಠಿ ಮತ್ತು ಮಹಿಳಾ ಕವಿಗೋಷ್ಠಿ ನಡೆಯಲಿದ್ದು ಖ್ಯಾತ ಕವಯತ್ರಿ ಸವಿತಾ ನಾಗಭೂಷಣ್​​ರಿಂದ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಬೆಳಗ್ಗೆ 11 ಗಂಟೆಗೆ ಜಗನ್ಮೋಹನ ಅರಮನೆಯಲ್ಲಿ ಮಕ್ಕಳ ದಸರಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಪ್ರಾಥಮಿ&ಪ್ರೌಡ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಚಾಲನೆ ನೀಡಲಿದ್ದಾರೆ.

ದಸರಾಗೆ ರಾಜವಂಶಸ್ಥ ಯದುವೀರ್ ವಿಶ್

ಇನ್ನು ದಸರಾಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಾಡಿನ ಸಮಸ್ತ ಜನತೆಗೆ ದಸರಾ ಶುಭಾಶಯ ಕೋರಿದ್ದಾರೆ. ಮಹಿಷಾಸುರ ಮರ್ಧಿನಿಯ ಕಲಾತ್ಮಕ ವಿಭಿನ್ನ ಫೋಟೋ ಪೋಸ್ಟ್ ಮಾಡಿ ನಾಡಿನ ಸಮಸ್ತ ಜನತೆಗೆ ಶರನ್ನವರಾತ್ರಿ ಶುಭಪರ್ವದ ಹಾರ್ದಿಕ ಶುಭಾಶಯಗಳು ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ

ಮೈಸೂರು ದಸರಾಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಸರ್ಕಾರ ಹಲವು ಪ್ರಯತ್ನ ಮಾಡ್ತಿದೆ. ಇದೀಗ ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಿದೆ. ಅಕ್ಟೋಬರ್​ 16ರಿಂದ ಅ.24ರವರೆಗೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಶ್ರೀರಂಗಪಟ್ಟಣದಲ್ಲಿ 3 ದಿನಗಳ ದಸರಾಗೆ ಅದ್ಧೂರಿ ಚಾಲನೆ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ 3 ದಿನಗಳ ದಸರಾ ಉತ್ಸವಕ್ಕೆ ನಿನ್ನೆ ಅದ್ಧೂರಿ ಚಾಲನೆ ಸಿಕ್ಕಿದೆ. ಜಂಬೂಸವಾರಿಗೆ ರಾಜಮಾತೆ ಪ್ರಮೋದ ದೇವಿ ಚಾಲನೆ ನೀಡಿದರು. ಅಂಬಾರಿ ಹೊತ್ತ ಮಹೇಂದ್ರನ ಗಜಗಾಂಭೀರ್ಯ ನಡಿಗೆ ಎಲ್ಲರನ್ನ ಆಕರ್ಷಿಸಿತು.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ