ಮೈಸೂರು ದಸರಾ: ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ನಿರ್ಬಂಧ: ಡಿಸಿ ಡಾ ಕೆವಿ ರಾಜೇಂದ್ರ ಆದೇಶ

ಮಹಿಷ ದಸರಾ ಹಾಗೂ ಚಲೋ‌ ಚಾಮುಂಡಿ ಬೆಟ್ಟ ಜಾಥ ಹಿನ್ನೆಲೆ ಪೊಲೀಸ್ ಕಮಿಷನರ್ ರಮೇಶ್ ಬಾನೋತ್‌ರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು 144 ಸೆಕ್ಷನ್ ಜಾರಿ ಮಾಡಲಾಗಿದೆ. ಹಾಗಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6ರ ವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. 

ಮೈಸೂರು ದಸರಾ: ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ನಿರ್ಬಂಧ: ಡಿಸಿ ಡಾ ಕೆವಿ ರಾಜೇಂದ್ರ ಆದೇಶ
ಚಾಮುಂಡಿಬೆಟ್ಟ
Follow us
ರಾಮ್​, ಮೈಸೂರು
| Updated By: Digi Tech Desk

Updated on:Oct 13, 2023 | 12:47 PM

ಮೈಸೂರು, ಅಕ್ಟೋಬರ್​​ 12: ಇಂದು ಶುಕ್ರವಾರ ಮೈಸೂರಿನ ತಾಯಿ ಚಾಮುಂಡೇಶ್ವರಿ (Chamundi Hill) ಸನ್ನಿಧಾನ ಚಾಮುಂಡಿಬೆಟ್ಟಕ್ಕೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮಹಿಷ ದಸರಾ ಹಾಗೂ ಚಲೋ‌ ಚಾಮುಂಡಿ ಬೆಟ್ಟ ಜಾಥ ಹಿನ್ನೆಲೆ ಪೊಲೀಸ್ ಕಮಿಷನರ್ ರಮೇಶ್ ಬಾನೋತ್‌ರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಈ ಕಾರಣದಿಂದ ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರರಿಂದ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.

ಮೈಸೂರು ಜಿಲ್ಲಾಡಳಿತದ ನಿರ್ಧಾರ ಸ್ವಾಗತಿಸಿದ ಸಂಸದ ಪ್ರತಾಪ್ ಸಿಂಹ

ಮಹಿಷ ಮಹೋತ್ಸವ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ನಿಷೇಧ ವಿಧಿಸಿದಕ್ಕೆ ಮೈಸೂರು ಜಿಲ್ಲಾಡಳಿತದ ನಿರ್ಧಾರವನ್ನು ಸಂಸದ ಪ್ರತಾಪ್ ಸಿಂಹ ಸ್ವಾಗತಿಸಿದ್ದಾರೆ. ಫೇಸ್‌ಬುಕ್ ಲೈವ್‌ನಲ್ಲಿ ಪೊಲೀಸ್ ಆಯುಕ್ತ, ಡಿಸಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಮಹಿಷ ದಸರಾ ಎನ್ನುವ ಅನಾಚಾರ ಚಾಮುಂಡಿ ಬೆಟ್ಟದಲ್ಲಿ ನಡೆಯಬಾರದು. ಬೇಕಿದ್ದರೆ ಅವರವರ ಮನೆಯಲ್ಲಿ ಮಾಡಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮಹಿಷ ದಸರಾ ಹೆಸರಿನಲ್ಲಿ ಚಾಮುಂಡೇಶ್ವರಿಗೆ ಅಪಮಾನ: ಫೇಸ್​​ಬುಕ್ ಲೈವ್​ನಲ್ಲಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ‌

ಚಾಮುಂಡಿ ಬೆಟ್ಟ ಚಾಮುಂಡೇಶ್ವರಿ ದೇವಿ ನೆಲೆಸಿರುವ ಜಾಗ. ಅಲ್ಲಿ ಮಹಿಷ ದಸರಾ ನಡೆಯದಂತೆ ಪ್ರವೇಶ ನಿರ್ಬಂಧ ಮಾಡಲಾಗಿದೆ. ನಾನು ಪಕ್ಷ ಮೀರಿ ಚಾಮುಂಡೇಶ್ವರಿಯ ಭಕ್ತ ಆಗಿದ್ದೇನೆ. ಸಂಸದ ಪದವಿಗಿಂತ ಚಾಮುಂಡೇಶ್ವರಿ ಭಕ್ತ ಎನ್ನುವ ಪದವಿ ದೊಡ್ಡದು ಎಂದಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಮಹಿಷ ದಸರಾ ಆಚರಣೆಗೆ ಅನುಮತಿ ನೀಡಿದ ಪೊಲೀಸ್ ಇಲಾಖೆ: ಷರತ್ತು ಅನ್ವಯ

ಬಿಜೆಪಿ ಹಿಂದೂ ಧರ್ಮದ ಪ್ರತಿಪಾದನೆ ಮಾಡುತ್ತೆ ಎಂಬ ಕಾರಣಕ್ಕೆ ಇಲ್ಲಿದ್ದೇನೆ. ಪುರಭವನ ಸರ್ಕಾರಿ ಸ್ವಾಮ್ಯದ ಸಭಾಂಗಣ. ಅಲ್ಲಿ ಮಹಿಷ ಉತ್ಸವ ಆಚರಿಸಲು ಅವಕಾಶ ಕೊಟ್ಟಿದ್ದು ಸರಿ ಕಾಣುತ್ತಿಲ್ಲ. ಮುಂದೆ ಅದನ್ನೂ ಅವೈಡ್ ಮಾಡಲಿ. ಹೋರಾಟಕ್ಕೆ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ.

ಮಹಿಷ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ

ಮೈಸೂರಿನ ಟೌನ್​​ಹಾಲ್​ನಲ್ಲಿ ಮಹಿಷ ದಸರಾ ಆಚರಣೆಗೆ ಅವಕಾಶ ಕೊಡಲಾಗಿದೆ. ಆದರೆ, ವೇದಿಕೆ ಕಾರ್ಯಕ್ರಮಕ್ಕಷ್ಟೇ ಅವಕಾಶ ನೀಡಲಾಗಿದೆ. ಮೈಸೂರಿನಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆಗೆ, ಸಂಭ್ರಮಾಚರಣೆ ನಿಷೇಧವಾಗಿದೆ. ಜೊತೆಗೆ ಧಾರ್ಮಿಕ ಭಾವನೆ ಕೆಣಕುವ, ಪ್ರಚೋದನೆ ಭಾಷಣ ಮಾಡಬಾರದು ಹೀಗೆ ಇನ್ನಿತರ ನಿಬಂಧನೆಗಳನ್ವಯ ಮಹಿಷ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:46 pm, Thu, 12 October 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ