ರೈತಾಪಿ ವರ್ಗ ಸಂಕಷ್ಟ: ಪ್ರಸಕ್ತ ವರ್ಷ ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾವನ್ನು ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ H.C.ಮಹದೇವಪ್ಪ ಟ್ವೀಟ್​ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ರೈತಾಪಿ ವರ್ಗ ಸಂಕಷ್ಟ: ಪ್ರಸಕ್ತ ವರ್ಷ ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ
ಮೈಸೂರು ದಸರಾ (ಸಂಗ್ರಹ ಚಿತ್ರ)
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Sep 21, 2023 | 10:15 PM

ಬೆಂಗಳೂರು, ಸೆಪ್ಟೆಂಬರ್​ 21: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಪ್ರಸಕ್ತ ವರ್ಷ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ H.C.ಮಹದೇವಪ್ಪ (hc mahadevappa) ಮಾಹಿತಿ ನೀಡಿದ್ದಾರೆ. ಈ ಕುರಿತಾಗಿ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾವನ್ನು ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಸಚಿವ HC ಮಹದೇವಪ್ಪ ಟ್ವೀಟ್ 

ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ಬರಸಿಡಿಲು ಬಡಿದಿದೆ. ಅದ್ಧೂರಿ ದಸರಾ ಆಚರಣೆ ಸಿದ್ಧತೆಯಲ್ಲಿದ್ದ ಸರ್ಕಾರ ಇದೀಗ ಸರಳ ದಸರಾ ಆಚರಣೆ ಮಾಡಬೇಕಾ ಅಥವಾ ಅದ್ಧೂರಿ ದಸರಾ ಆಚರಣೆ ಮಾಡಬೇಕಾ ಎನ್ನುವ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿತ್ತು. ಅದ್ಧೂರಿ ದಸರಾ ಆಚರಣೆಗೆ ಈ ಹಿಂದೆ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಮುಂಗಾರು ಕೈ ಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ.

ಇದನ್ನೂ ಓದಿ: ಗಣೇಶ ಚತುರ್ಥಿ: ಅಭಿಮನ್ಯು ನೇತೃತ್ವದ 9 ಗಜಪಡೆಗೆ ವಿಶೇಷ ಪೂಜೆ: ಮಳೆ ಅಡ್ಡಿ

ಮತ್ತೊಂದು ಕಡೆ ರಾಜ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು, ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಇದು ಸರ್ಕಾರದ ಇಕ್ಕಟ್ಟಿಗೆ ಸಿಲುಕಿದಂತಾಗಿತ್ತು. ಇವೆಲ್ಲದರ ಮಧ್ಯೆ ದಸರಾ ಸರಳವಾಗಿ ಮಾಡಬೇಕಾ ಅಥವಾ ಅದ್ಧೂರಿಯಾಗಿ ಮಾಡಬೇಕಾ ಎಂಬ ಬಗ್ಗೆ ಈವರೆಗೂ ಸರ್ಕಾರದ ನಿರ್ಧಾರ ಅಂತಿಮವಾಗಿರಲಿಲ್ಲ. ಆದರೆ ಸದ್ಯ ಪ್ರಸಕ್ತ ವರ್ಷ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಯಾವಾಗೆಲ್ಲಾ ಸರಳವಾಗಿ ದಸರಾ ಆಚರಿಸಲಾಗಿದೆ

  • 2000- ಡಾ.ರಾಜ್ ಕುಮಾರ್ ಅಪಹರಣದ ವೇಳೆ
  • 2001 – ಗುಜರಾತ್ ಭೂಕಂಪ
  • 2002 – ರಾಜ್ಯದಲ್ಲಿ ಬರ ಪರಿಸ್ಥಿತಿ
  • 2011, 2012 – ಬರಗಾಲ
  • 2015, 2016 – ಬರ, ರೈತರ ಆತ್ಮಹತ್ಯೆ
  • 2020, 2021 – ಕೊರೊನಾ ಕರಿನೆರಳು, ಈ ವೇಳೆ ಸರಳವಾಗಿ ದಸರಾ ಆಚರಣೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:00 pm, Thu, 21 September 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ