AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara: ಮೈಸೂರು ಅರಮನೆಯಲ್ಲಿ ಗಂಡು ಮರಿಗೆ ಜನ್ಮ ನೀಡಿದ ಲಕ್ಷ್ಮಿ ಆನೆ

ದಸರೆಗೆ ಕಾಡಿನಿಂದ ನಾಡಿಗೆ ಆಗಮಿಸಿರುವ ಲಕ್ಷ್ಮಿ ಎಂಬ ಆನೆ ಅರಮನೆ ಕೋಡಿ ಸೋಮೇಶ್ವರ ದೇಗುಲದ ಬಳಿ ಗಂಡು ಮರಿಗೆ ಜನ್ಮ ನೀಡಿದೆ.

Mysore Dasara: ಮೈಸೂರು ಅರಮನೆಯಲ್ಲಿ ಗಂಡು ಮರಿಗೆ ಜನ್ಮ ನೀಡಿದ ಲಕ್ಷ್ಮಿ ಆನೆ
ಆನೆ (ಸಂಗ್ರಹ ಚಿತ್ರ)
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 13, 2022 | 10:14 PM

Share

ಮೈಸೂರು: ದಸರೆಗೆ ಕಾಡಿನಿಂದ ನಾಡಿಗೆ ಆಗಮಿಸಿರುವ ಲಕ್ಷ್ಮಿ ಎಂಬ ಆನೆ ಅರಮನೆ ಕೋಡಿ ಸೋಮೇಶ್ವರ ದೇಗುಲದ ಬಳಿ ಗಂಡು ಮರಿಗೆ ಜನ್ಮ ನೀಡಿದೆ. ರಾಂಪುರ ಆನೆ ಶಿಬಿರದಲ್ಲಿ ಲಕ್ಷ್ಮಿ ಅರ್ಜುನ ಆನೆ ಜೊತೆ ಸೇರಿತ್ತು. ತಾಯಿ ಆನೆ ಲಕ್ಷ್ಮಿ ಮತ್ತು ಮರಿ ಆನೆ ಎರಡು ಆರೋಗ್ಯವಾಗಿವೆ. 15 ವರ್ಷದ ಹಿಂದೆ ದಸರೆಗೆ ಬಂದಿದ್ದ ಸರಳ ಸಹಾ ಅರಮನೆಯಲ್ಲೇ ಮರಿಗೆ ಜನ್ಮ ನೀಡಿತ್ತು. ಸರಳ ಜನ್ಮ ನೀಡಿದ ಮರಿಗೆ ಚಾಮುಂಡಿ ಎಂದು ಹೆಸರಿಡಲಾಗಿತ್ತು.

ಆನೆಗಳ ತಾಲೀಮು

ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಬಂದಿದೆ. 4 ಹೆಣ್ಣಾನೆಗಳು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿವೆ. ಗೋಪಾಲಸ್ವಾಮಿ, ಅಭಿಮನ್ಯು, ಭೀಮ, ಮಹೇಂದ್ರ, ಅರ್ಜುನ, ವಿಕ್ರಮ, ಧನಂಜಯ, ಕಾವೇರಿ, ಗೋಪಿ, ಶ್ರೀರಾಮ, ವಿಜಯಾ, ಚೈತ್ರಾ, ಲಕ್ಷ್ಮೀ, ಪಾರ್ಥಸಾರಥಿ ಆನೆಗಳು ಮೈಸೂರಿನಲ್ಲಿ ಬೀಡುಬಿಟ್ಟಿದ್ದು, ಪ್ರತಿದಿನ ತಾಲೀಮು ಮಾಡುತ್ತಿವೆ.

ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭ: ಇಲ್ಲಿದೆ ಅರಮನೆ ವೇಳಾಪಟ್ಟಿ

ಮೈಸೂರು ಅರಮನೆ (Mysore Palace) ಮತ್ತು ವಿವಿಧೆಡೆ ಸಿದ್ಧತೆ ಆರಂಭವಾಗಿದೆ. ಸೆ.20ರ ಮಂಗಳವಾರದಿಂದ ಸಿಂಹಾಸನ ಜೋಡಣೆ ಆರಂಭವಾಗಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರಗೆ ಅರಮನೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೆ.26ರಂದು ಖಾಸಗಿ ದರ್ಬಾರ್ ಹಾಗೂ ವಿವಿಧ ಪೂಜೆಗಳು, ಧಾರ್ಮಿಕ ವಿಧಿಗಳು ನೆರವೇರಲಿವೆ. ಅಂದೂ ಸಹ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಅಕ್ಟೋಬರ್ 4ರಂದು ಅರಮನೆಯಲ್ಲಿ ಆಯುಧಪೂಜೆ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಅ.5ರಂದು ವಿಜಯದಶಮಿ ಆಚರಣೆ ಇರುತ್ತದೆ. ಅಂದೂ ಸಹ ಸಂಪೂರ್ಣ ಅರಮನೆ ಪ್ರವೇಶಕ್ಕೆ ನಿರ್ಬಂಧವಿದೆ. ಅ.20ರಂದು ಸಿಂಹಾಸನ ವಿಸರ್ಜನೆ‌ ಹಿನ್ನೆಲೆಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಇರುತ್ತದೆ ಎಂದು ‘ಟಿವಿ9’ಗೆ ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಮಾಹಿತಿ ನೀಡಿದರು.

ರಾಷ್ಟ್ರಪತಿಯಿಂದ ಉದ್ಘಾಟನೆ

ಜಗದ್ವಿಖ್ಯಾತ ಮೈಸೂರು ದಸರಾ ಉತ್ಸವ ಸೆಪ್ಟೆಂಬರ್ 26ರಿಂದ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:13 pm, Tue, 13 September 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ