ಸಿಎಂ-ಡಿಸಿಎಂ ಶುಭ ಸಂದೇಶವಿರುವ ಮೈಸೂರು ದಸರಾ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ

ಸಾಂಸ್ಕೃತಿ ನಗರಿಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ 2023 ವೈಭವ ಮನೆ ಮಾಡಿದೆ. ಅದಕ್ಕಾಗಿ ಮೈಸೂರಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ ಸಿಎಂ‌ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಂದೇಶವನ್ನೊಳಗೊಂಡ ನಾಡಹಬ್ಬ ದಸರಾ ಮಹೋತ್ಸವದ ಅಧಿಕೃತ ಆಹ್ವಾನ ಪತ್ರಿಕೆಯನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ.

ಸಿಎಂ-ಡಿಸಿಎಂ ಶುಭ ಸಂದೇಶವಿರುವ ಮೈಸೂರು ದಸರಾ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ
ಅಧಿಕೃತ ಆಹ್ವಾನ ಪತ್ರಿಕೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 08, 2023 | 3:42 PM

ಮೈಸೂರು, ಅಕ್ಟೋಬರ್​​ 08: ಸಾಂಸ್ಕೃತಿ ನಗರಿಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ 2023 (Mysore Dasara) ವೈಭವ ಮನೆ ಮಾಡಿದೆ. ಅದಕ್ಕಾಗಿ ಮೈಸೂರಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೇ ಹೊತ್ತಲ್ಲೇ ಅರಮನೆ ನಗರಿಯಲ್ಲಿ ಮಹಿಷ ದಸರಾ ಮತ್ತೆ ಸದ್ದು ಮಾಡುತ್ತಿದೆ. ಸದ್ಯ ಸಿಎಂ‌ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಂದೇಶವನ್ನೊಳಗೊಂಡ ನಾಡಹಬ್ಬ ದಸರಾ ಮಹೋತ್ಸವದ ಅಧಿಕೃತ ಆಹ್ವಾನ ಪತ್ರಿಕೆಯನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ. ನಾಡದೇವತೆ ತಾಯಿ ಚಾಮುಂಡೇಶ್ವರಿ, ಚಾಮುಂಡಿಬೆಟ್ಟ, ಅರಮನೆ, ಗಜಪಡೆಯ ಭಾವಚಿತ್ರವನ್ನೊಳಗೊಂಡ ಆಕರ್ಷಕ ಆಹ್ವಾನ ಪತ್ರಿಕೆ ಬಿಡುಗಡೆಯಾಗಿದೆ.

ಸಿಎಂ ಸಿದ್ದರಾಮಯ್ಯ ಶುಭ ಸಂದೇಶ

ಸಮಸ್ತ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳು. ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬವನ್ನು ಅಕ್ಟೋಬರ್ 15 ರಿಂದ 24ರ ವರೆಗೆ ಆಚರಿಸಲಾಗುತ್ತಿದ್ದು, ಸರ್ವರಿಗೂ ಹೃತೂರ್ವಕ ಸ್ವಾಗತವನ್ನು ಬಯಸುತ್ತೇನೆ. ಕನ್ನಡ ನಾಡಿನ ಸಂಪ್ರದಾಯ, ಸಂಸ್ಕೃತಿ, ಕಲಾ ವೈಭವವನ್ನು ಅನಾವರಣ ಮಾಡುವ ದಸರಾ ಹಬ್ಬ ಮನಸ್ಸಿಗೂ, ಕಣ್ಣಿಗೂ ಮುದ ನೀಡುವ ಜೊತೆಗೆ ದುಷ್ಟರ ಶಿಕ್ಷೆ ಶಿಷ್ಟರ ರಕ್ಷಣೆ ಎನ್ನುವ ಮೌಲ್ಯವನ್ನು ಸಾರುವ, ಕೆಡುಕನ್ನು ಅಳಿಸಿ, ಒಳತನ್ನು ಪಸರಿಸುವ ಆಧ್ಯಾತ್ಮಿಕ ಮಹತ್ವದ ಹಬ್ಬವಾಗಿದೆ.

ಇದನ್ನೂ ಓದಿ: ಮಹಿಷ ದಸರಾ ಆಚರಣೆ ಉದ್ದೇಶ ತಿಳಿಸಿದ ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ

ಮೈಸೂರು ದಸರಾ ಈ ಬಾರಿ ನಮ್ಮ ನಾಡಿಗೆ ಬರದ ಸ್ಥಿತಿ ಆವರಿಸಿದ್ದರೂ ವೈಭವ, ಸಂಭ್ರಮ ಮತ್ತು ಪಾರಂಪಾರಿಕ ಮೆರುಗಿಗೆ ಕೊರತೆಯಾಗದಂತೆ ಅವ್ಯಾಹತವಾಗಿ ಸಾಂಪ್ರದಾಯಿಕ ರೀತಿಯಲ್ಲಿ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ. ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯು ನಾಡನ್ನು ಎಲ್ಲಾ ಕೆಡುಕುಗಳಿಂದ ರಕ್ಷಿಸಲಿ ಎಂದು ಪ್ರಾರ್ಥಿಸೋಣ. ಬನ್ನಿ, ನಾಡಹಬ್ಬ ದಸರೆಯ ಸಂಭ್ರಮವನ್ನು ಕಣ್ಣುಂಬಿಕೊಳ್ಳಿ, ಸವಿ ನೆನಪುಗಳನ್ನು ಮನದ ಭಿತ್ತಿಯಲ್ಲಿ ಅಚ್ಚಳಿಯದಂತೆ ದಾಖಲಿಸಿಕೊಳ್ಳಿ. ನಾಡಹಬ್ಬ ಮೈಸೂರು ದಸರಾ – 2023 ಕ್ಕೆ ಸರ್ವರಿಗೂ ಸ್ವಾಗತ ಎಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಶುಭ ಸಂದೇಶ ಹೀಗಿದೆ

ಸಮಸ್ತರಿಗೂ ನಾಡಹಬ್ಬ ದಸರಾ ಶುಭಾಶಯಗಳು. ಪಾರಂಪರಿಕ ನಗರಿ ಮೈಸೂರಿನಲ್ಲಿ ಪ್ರತಿವರ್ಷವೂ ನಮ್ಮ ನಾಡಿನ ಹೆಮ್ಮೆಯ ದಸರಾ ಹಬ್ಬವನ್ನು ಅರ್ಥಪೂರ್ಣ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಕರ್ನಾಟಕ ರಾಜ್ಯದ ಸಾಂಸ್ಕೃತಿಕ ಅಸ್ಮಿತೆಯ ಪ್ರತೀಕ ನಾಡಹಬ್ಬ ದಸರಾವನ್ನು ಈ ವರ್ಷ ಸಾಂಪ್ರದಾಯಿಕವಾಗಿ ಆಚರಣೆ ಮಾಡುತ್ತಿರುವುದು ಸಂತಸದ ಸಂಗತಿ. ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆಶೀರ್ವಾದ ನಾಡಿನ ಸಮಸ್ತ ಜನರ ಮೇಲಿರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: Mysore Dasara: ದಸರಾ ಉತ್ಸವದ ಮುನ್ನುಡಿಯಾಗಿರುವ ಯುವ ಸಂಭ್ರಮ ಇಂದಿನಿಂದ, ಪ್ರತಿಭೆ ಮೆರೆಯಲು ಕಾಲೇಜು ವಿದ್ಯಾರ್ಥಿಗಳಿಗೆ ಸದವಕಾಶ

ದಸರಾ ಮಹೋತ್ಸವದ ಕಾರ್ಯಕ್ರಮಗಳ ಪಟ್ಟಿ ಸಹಾ ಬಿಡುಗಡೆ ಮಾಡಲಾಗಿದ್ದು, ಅದು ಈ ಕೆಳಗಿನಂತಿದೆ.

  • ಮೈಸೂರಿನ ವಿವಿಧ ವೇದಿಕೆಗಳಲ್ಲಿ ವಿವಿಧ ಸಮಿತಿಗಳಿಂದ ಕಾರ್ಯಕ್ರಮ.
  • ಅರಮನೆ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು
  • ಕಲಾಮಂದಿರದಲ್ಲಿ ಚಲನಚಿತ್ರೋತ್ಸವ ಹಾಗೂ ಶಿಲ್ಪ ಚಿತ್ರಕಲೆ ಪ್ರದರ್ಶ‌ನ
  • ಜಗನ್ಮೋಹನ ಅರಮನೆಯಲ್ಲಿ ಕವಿಗೋಷ್ಠಿ
  • ಕುಪ್ಪಣ್ಣ ಪಾರ್ಕ್‌ನಲ್ಲಿ ಫಲ ಪುಷ್ಪ ಪ್ರದರ್ಶನ
  • ಭಾರತ್ ಸ್ಕೌಟ್ ಅಂಡ್ ಗೈಡ್ಸ್‌ ಮೈದಾನದಲ್ಲಿ ಆಹಾರ ಮೇಳ
  • ಈ ಬಾರಿ ಒಂದೇ ಕಡೆಗೆ ಆಹಾರ ಮೇಳ ಆಯೋಜನೆ
  • ದೊಡ್ಡಕೆರೆ ಮೈದಾನದಲ್ಲಿ ಕುಸ್ತಿ ಆಯೋಜನೆ
  • ವಸ್ತು ಪ್ರದರ್ಶನ ಆವರಣದಲ್ಲಿ ದಸರಾ ವಸ್ತು ಪ್ರದರ್ಶನ
  • ಸೆನೆಟ್ ಭವನದಲ್ಲಿ ಯೋಗ ದಸರಾ
  • ಸಯ್ಯಾಜಿರಾವ್ ರಸ್ತೆ ಸೇರಿ ಹಲವು ಕಡೆ ದೀಪಾಲಂಕಾರ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:38 pm, Sun, 8 October 23

ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ