AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಅರಮನೆ ಹೊರಾಂಗಣದಲ್ಲಿ ಡ್ರೋನ್ ಕ್ಯಾಮರಾ ಬಳಕೆಗೆ ನಿರ್ಬಂಧ: ಆಡಳಿತ ಮಂಡಳಿಯಿಂದ ಆದೇಶ

mysore dasara: ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಕೆಗೆ ನಿರ್ಬಂಧ ಹೇರಿದೆ. ಈ ಕುರಿತಾಗಿ ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿಎಸ್ ಸುಬ್ರಮಣ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು ಅರಮನೆ ಹೊರಾಂಗಣದಲ್ಲಿ ಡ್ರೋನ್ ಕ್ಯಾಮರಾ ಬಳಕೆಗೆ ನಿರ್ಬಂಧ: ಆಡಳಿತ ಮಂಡಳಿಯಿಂದ ಆದೇಶ
ಮೈಸೂರು ಅರಮನೆ
Follow us
ಗಂಗಾಧರ​ ಬ. ಸಾಬೋಜಿ
|

Updated on: Aug 07, 2023 | 3:41 PM

ಮೈಸೂರು, ಆಗಸ್ಟ್​ 07: ನಾಡಹಬ್ಬ ದಸರಾ ಮಹೋತ್ಸವವನ್ನ (mysore dasara) ಅದ್ಧೂರಿಯಾಗಿ ಆಚರಣೆ ಮಾಡುವುದಕ್ಕೆ ರಾಜ್ಯ ಸರ್ಕಾರ ಈಗಿನಿಂದಲೇ ಸಿದ್ಧವಾಗುತ್ತಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕೂಡ ನಡೆಸಿದ್ದಾರೆ. ಸದ್ಯ ಇದರೆ ಮಧ್ಯೆ ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಕೆಗೆ ನಿರ್ಬಂಧ ಹೇರಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಈ ಬಗ್ಗೆ‌ ಅರಮನೆ ಮಂಡಳಿ ಉಪ ನಿರ್ದೇಶಕ ಟಿಎಸ್ ಸುಬ್ರಮಣ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು ಅರಮನೆಯೂ ವಿಶ್ವ ವಿಖ್ಯಾತಿಯನ್ನು ಹೊಂದಿದ್ದು, ಅರಮನೆಯ ಸುತ್ತಮುತ್ತಲ ಪ್ರದೇಶವನ್ನು ‘ಹಳದಿ ವಲಯ’ (Yellow Zone) ವೆಂದು ಘೋಷಿಸಲಾಗಿದೆ. ಆದ್ದರಿಂದ ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಸುವುದನ್ನು ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಸೆ.1ಕ್ಕೆ ಮೈಸೂರಿಗೆ ಗಜ ಪಡೆ ಆಗಮನ, ಈ ಬಾರಿ ದಸರಾ ಉದ್ಘಾಟನೆ ಮಾಡುವವರು ಯಾರು? ಜಿಲ್ಲಾ ಉಸ್ತುವಾರಿ ಸಚಿವ ಹೇಳಿದ್ದಿಷ್ಟು

ಡ್ರೋನ್​ ಹಾರಾಟಕ್ಕೆ ಅನುಮತಿ ಕಡ್ಡಾಯ

ಒಂದು ವೇಳೆ ಈ ಪ್ರದೇಶದಲ್ಲಿ ಡ್ರೋನ್​ ಕ್ಯಾಮೆರಾವನ್ನು ಬಳಸುವುದಾದರೆ ಮೈಸೂರು ಅರಮನೆ ಮಂಡಳಿಯಿಂದ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯದೆ ಅನಧಿಕೃತವಾಗಿ ಡ್ರೋನ್​ ಹಾರಾಟ ಮಾಡಿದಲ್ಲಿ ಅಂತವರ ವಿರುದ್ಧ ಕಾನುನೂ ನಿಯಮಾನುಸಾರ ಕ್ರಮಕೈಗೊಳ್ಳಲಾಗುತ್ತದೆ.

ಅಕ್ಟೋಬರ್ 15 ರ ಬೆಳಗ್ಗೆ ದಸರಾ ಉದ್ಘಾಟನೆ

ಅಕ್ಟೋಬರ್ 15 ರಂದು ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ. ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನ ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: Mysuru Dasara 2023: ಇದೇ ಮೊದಲ ಬಾರಿಗೆ ಪಟಾಕಿ ಸಿಡಿಸಿ ದಸರಾ ಆನೆಗಳಿಗೆ ಅಭ್ಯಾಸ, ಗಜಪಡೆಗಳ ಪ್ರೆಗ್ನೆನ್ಸಿ ಟೆಸ್ಟ್ ವರದಿಗಾಗಿ ಕಾದು ಕುಳಿತ ಅಧಿಕಾರಿಗಳು

ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ಹಿಡಿದು, ದಸರಾ ಮುಗಿಯುವರೆಗೂ ಹಾಗೂ ನಂತರ ಒಂದು ವಾರದವವರೆಗೆ ಇರಲಿದೆ.

ಈ ಬಾರಿ ಸ್ತಬ್ಧ ಚಿತ್ರಗಳ ಆಯ್ಕೆ ಮಾಡುವ ವೇಳೆ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆ ಜತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಅಂತ ಸ್ವತಃ ಸಿಎಂ ಸಿದ್ಧರಾಮಯ್ಯ ಹೇಳಿದ್ದರು.

ಏರ್​​ಶೋ ಆಯೋಜನೆಗೆ ಚಿಂತನೆ

ಇಂಟ್ರೆಸ್ಟಿಂಗ್ ಅಂದರೆ ದಸರಾ ವೇಳೆ ಏರ್​​ಶೋ ಆಯೋಜನೆಗೆ ಚಿಂತನೆ ನಡೆಸಲಾಗುತ್ತಿದ್ದು, ಇದಕ್ಕಾಗಿ ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲು ತೀರ್ಮಾನಿಸಲಾಗುತ್ತಿದೆ. ಕಳೆದ ಬಾರಿಗಿಂತ ಈ ಬಾರಿ ಅದ್ಧೂರಿ ದಸರಾ ಆಚರಣೆಗೆ ಪ್ಲ್ಯಾನ್​ ಮಾಡಿರುವ ಸರ್ಕಾರ ಈಗನಿಂದಲೇ ಗ್ರೌಂಡ್​​ ವರ್ಕ್​ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.