ಮೈಸೂರು ದಸರಾ: ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು

Updated on: Oct 21, 2026 | 5:30 PM

ಮೈಸೂರು ದಸರಾ 2026ರ ಸಂಭ್ರಮದಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಕೇರಳ ಮುಖ್ಯಮಂತ್ರಿ ಸತೀಶನ್ ಅವರು ಕೂಡ ಭಾಗಿಯಾಗಿದ್ದಾರೆ. ಪ್ರಶಾಂತ ಆನೆಯ ಮೇಲೆ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ಚಾಮುಂಡೇಶ್ವರಿಗೆ ಅವರೂ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. 11 ದೇಶಗಳ ರಾಯಭಾರಿಗಳು, ವಿದೇಶಿ ಗಣ್ಯರು ಕೂಡ ಅದ್ಧೂರಿ ಮೈಸೂರು ದಸರಾವನ್ನು ಕಣ್ತುಂಬಿಕೊಂಡಿದ್ದಾರೆ.

ಮೈಸೂರು, ಅಕ್ಟೋಬರ್​​ 21: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಐತಿಹಾಸಿಕ ಮೈಸೂರು ದಸರಾ 2026ರ ಸಂಭ್ರಮಕ್ಕೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಕೇರಳ ಮುಖ್ಯಮಂತ್ರಿ ಸತೀಶನ್ ಅವರು ಕೂಡ ಸಾಕ್ಷಿಯಾದರು. ಪ್ರಶಾಂತ ಆನೆಯ ಮೇಲೆ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ಚಾಮುಂಡೇಶ್ವರಿಗೆ ಸಂಜೆ 4.28ರ ಶುಭ ಮೀನ ಲಗ್ನದಲ್ಲಿ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್​​ ಪುಷ್ಪಾರ್ಚನೆಗೂದ ಬಳಿಕ, ನೆರೆ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಚಾಮುಂಡೇಶ್ವರಿಗೆ ಹೂಮಳೆ ಗೈದಿದ್ದು ವಿಶೇಷವಾಗಿತ್ತು. ಈ ಸಂದರ್ಭ ವೇದಿಕೆಯಲ್ಲಿ ಸಂಸದ ಮತ್ತು ರಾಜವಂಶಸ್ಥ ಯದುವೀರ್​​ ಒಡೆಯರ್​​, ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಮೈಸೂರು ಡಿಸಿ ಲಕ್ಷ್ಮೀಕಾಂತರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸೇರದಂತೆ ಗಣ್ಯಾತಿ ಗಣ್ಯರು ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 21, 2026 05:29 PM
Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More