AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾಕ್ಕೆ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಬಂಪರ್ ಆಫರ್; ಕಾಂಬೋ ಟಿಕೆಟ್ ಪಡೆದು ಈ ಐದು ಸ್ಥಳಗಳನ್ನು ವೀಕ್ಷಿಸಬಹುದು

ಪ್ರವಾಸಿಗರ ಅನುಕೂಲಕ್ಕಾಗಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಏಕೀಕೃತ ಟಿಕೇಟ್ (ಕಾಂಬೋ ಟಿಕೆಟ್) ವ್ಯವಸ್ಥೆ ಜಾರಿ ಮಾಡಿದೆ.

ದಸರಾಕ್ಕೆ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಬಂಪರ್ ಆಫರ್; ಕಾಂಬೋ ಟಿಕೆಟ್ ಪಡೆದು ಈ ಐದು ಸ್ಥಳಗಳನ್ನು ವೀಕ್ಷಿಸಬಹುದು
ಮೈಸೂರು ದಸರಾ (ಸಂಗ್ರಹ ಚಿತ್ರ)
TV9 Web
| Updated By: Digi Tech Desk|

Updated on:Sep 20, 2022 | 11:02 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022ಕ್ಕೆ(Mysuru Dasara 2022) ಕ್ಷಣಗಣನೆ ಶುರುವಾಗಿದೆ. ಈ ಹಿನ್ನೆಲೆ ಅರಮನೆ ನಗರಿ ಮೈಸೂರಿನಲ್ಲಿ ಸಿದ್ದತೆಗಳು ಜೋರಾಗಿವೆ. ದಸರಾ ಸಮಯದಲ್ಲಿ ಮೈಸೂರಿಗೆ ದೂರದೂರಿಂದ ಲಕ್ಷಾಂತರ ಮಂದಿ ಪ್ರವಾಸಿಗರು ಬರುತ್ತಾರೆ. ಹೀಗಾಗಿ ಪ್ರವಾಸಿಗರ ಅನುಕೂಲಕ್ಕಾಗಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಏಕೀಕೃತ ಟಿಕೇಟ್ (ಕಾಂಬೋ ಟಿಕೆಟ್) ವ್ಯವಸ್ಥೆ ಜಾರಿ ಮಾಡಿದೆ.

ದಸರಾ ಮಹೋತ್ಸವದ ಹಿನ್ನೆಲೆ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗಾಗಿ ಮತ್ತು ಸಾರ್ವಜನಿಕರಿಗಾಗಿ ಮೈಸೂರಿನ ಕೆಲವು ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕಾಂಬೋ ಟಿಕೆಟ್ ವ್ಯವಸ್ಥೆ ಜಾರಿ ಮಾಡಿದೆ. ಕಾಂಬೋ ಟಿಕೆಟ್ ಮೂಲಕ ಪ್ರವಾಸಿಗರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ ಹಾಗೂ ಕೆಆರ್‌ಎಸ್ ಬೃಂದಾವನ ಸೇರಿ ಒಟ್ಟು ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದು. ಇದನ್ನೂ ಓದಿ: ರಸ್ತೆಯಲ್ಲಿ ಡಿಕ್ಕಿ ಹೊಡೆದು ಬೈಕ್ ಚಾಲಕನನ್ನು ಎಳೆದುಕೊಂಡು ಹೋದ ಫಾರ್ಚುನರ್ ಕಾರು; ಶಾಕಿಂಗ್ ವಿಡಿಯೋ ಇಲ್ಲಿದೆ

ಕಾಂಬೊ ಟಿಕೆಟ್‌ ಬೆಲೆ 500 ರೂ

ಇನ್ನು ಕಾಂಬೊ ಟಿಕೆಟ್ ಪಡೆದವರು ಈ ಐದು ಪ್ರವಾಸಿ ತಾಣಗಳಿಗೆ ಭೇಟಿ ಕೊಟ್ಟಾಗ ಸರತಿಯಲ್ಲಿ ನಿಲ್ಲುವ ಅವಶ್ಯಕತೆ ಇರಿವುದಿಲ್ಲ. ಈಗಾಗಲೇ ಕಾಂಬೊ ಟಿಕೆಟ್ ಪಡೆದಿರುವುದರಿಂದ ಅವರು ಡೈರೆಕ್ಟ್​ ಆಗಿ ಪ್ರವೇಶಿಸಬಹುದು. ​ಈ ವ್ಯವಸ್ಥೆ ಸೆಪ್ಟೆಂಬರ್ 20ರಂದು ಆರಂಭಗೊಂಡು ಅಕ್ಟೋಬರ್‌ 5ರವರೆಗೆ ಚಾಲ್ತಿಯಲ್ಲಿರುತ್ತದೆ. ಟಿಕೆಟ್ ಬೆಲೆ 500 ರೂ.ಗಳಾಗಿದ್ದು, ಮಕ್ಕಳಿಗೆ 250 ರೂ. ನಿಗದಿಪಡಿಸಲಾಗಿದೆ. ಈ ಟಿಕೆಟ್ ಗಳನ್ನು ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮಾರಾಟ ಮಾಡಲಾಗುತ್ತಿದ್ದು, ನಗರದ ಕೆಎಸ್‌ಟಿಡಿಸಿ ಹೋಟೆಲ್ ಹಾಗೂ ಟ್ರಾವೆಲ್ಸ್ ವಿಭಾಗದಲ್ಲಿ, ಕೆಎಸ್‌ಆರ್‌ಟಿಸಿ ಸಬರ್ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ, ರೈಲ್ವೆ ನಿಲ್ದಾಣದ 2 ಕಡೆ, ಚಾಮುಂಡಿಬೆಟ್ಟ, ಮೃಗಾಲಯ, ಕೆಆರ್‌ಎಸ್, ಅರಮನೆ ಹಾಗೂ ಮೈಸೂರು ನಗರದ ಪ್ರಮುಖ ಹೋಟೆಲ್‌ಗಳಲ್ಲಿ ಟಿಕೆಟ್ ದೊರೆಯಲಿದೆ.

ಮೈಸೂರಿನ ಶಾಲೆಗಳಿಗೆ ಸೆ.26 ರಿಂದ ದಸರಾ ರಜೆ ಶುರು

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ(Dasara) ಸಂಭ್ರಮ ಮನೆ ಮಾಡಿದೆ. ಸದ್ಯ ದಸರಾ ಅಂಗವಾಗಿ ಜಿಲ್ಲೆಯ ಶಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9 ರವರೆಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಉಪನಿರ್ದೇಶಕರ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ಸುತ್ತೋಲೆ ಹೊರಡಿಸಿದೆ.

2022-23ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅವಧಿಯನ್ನು ನಿಗದಿಪಡಿಸಲಾಗಿದೆ. ಮೈಸೂರು ದಸರಾ ನವರಾತ್ರಿ ಕಾರ್ಯಕ್ರಮಗಳು ದಿನಾಂಕ 26-09-2022 ರಿಂದ ಪ್ರಾರಂಭವಾಗುತ್ತಿದೆ. ಹಾಗೂ ದಿನಾಂಕ 02-10-2022ರಂದು ಮಹಾತ್ಮ ಗಾಂಧಿ ಜಯಂತಿ ಮತ್ತು 09-10-2022ರಂದು ವಾಲ್ಮೀಕಿ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವ ಷರತ್ತಿನ ಮೇರೆಗೆ ಮೈಸೂರು ಜಿಲ್ಲೆಗೆ ದಿನಾಂಕ 26-09-2022 ರಿಂದ 9-10-2022ರವರೆಗೆ ಮಕ್ಕಳ ಹಿತದೃಷ್ಟಿಯಿಂದ ದಸರಾ ರಜೆ ನೀಡಲು ಮೈಸೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಮೈಸೂರಿಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:41 am, Tue, 20 September 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!