AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara ನಾಳೆ ಬೆಳಿಗ್ಗೆ 11.30ರಿಂದ ಚಾಮುಂಡಿ ಬೆಟ್ಟದಲ್ಲಿ ಸಾರ್ವಜನಿಕ ದರ್ಶನಕ್ಕೆ ನಿರ್ಬಂಧ, ಪ್ಲಾಸ್ಟಿಕ್ ಮುಕ್ತ ದಸರಾ ಅಭಿಯಾನಕ್ಕೆ ಕೈಜೋಡಿಸಿದ ರಾಜವಂಶಸ್ಥರು

ರಾಷ್ಟ್ರಪತಿ‌ ಭೇಟಿ ಹಿನ್ನೆಲೆಯಲ್ಲಿ ಬೆಳಿಗ್ಗೆ 11.30ರಿಂದ ಸಾರ್ವಜನಿಕರಿಗೆ ಚಾಮುಂಡಿ ಬೆಟ್ಟದಲ್ಲಿ ದೇವರ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

Mysore Dasara ನಾಳೆ ಬೆಳಿಗ್ಗೆ 11.30ರಿಂದ ಚಾಮುಂಡಿ ಬೆಟ್ಟದಲ್ಲಿ ಸಾರ್ವಜನಿಕ ದರ್ಶನಕ್ಕೆ ನಿರ್ಬಂಧ, ಪ್ಲಾಸ್ಟಿಕ್ ಮುಕ್ತ ದಸರಾ ಅಭಿಯಾನಕ್ಕೆ ಕೈಜೋಡಿಸಿದ ರಾಜವಂಶಸ್ಥರು
ಮೈಸೂರಿನ ಚಾಮುಂಡೇಶ್ವರಿ ದೇಗುಲ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 25, 2022 | 8:27 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಬೆಳಿಗ್ಗೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ರಾಷ್ಟ್ರಪತಿ‌ ಭೇಟಿ ಹಿನ್ನೆಲೆಯಲ್ಲಿ ಬೆಳಿಗ್ಗೆ 11.30ರಿಂದ ಸಾರ್ವಜನಿಕರಿಗೆ ಚಾಮುಂಡಿ ಬೆಟ್ಟದಲ್ಲಿ ದೇವರ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದರ್ಶನಕ್ಕೆ ಅವಕಾಶ ಇರಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮಾಹಿತಿ ನೀಡಿದ್ದಾರೆ.

ದಸರಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ದಿನ ಮೈಸೂರಿನಲ್ಲಿಯೇ ಇರಲಿದ್ದಾರೆ. ಸಾಂಸ್ಕೃತಿಕ ನಗರಿಗೆ ಇಂದು ಮಧ್ಯಾಹ್ನ 3 ಗಂಟೆಗೆ ಆಗಮಿಸುವ ಮುಖ್ಯಮಂತ್ರಿ ‘ಮೋದಿ ಯುಗ್ ಉತ್ಸವ್’ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಾಳೆ ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ದಸರಾ ಉದ್ಘಾಟನೆಗೆಂದು ಮೈಸೂರಿಗೆ ಆಗಮಿಸುವ ರಾಷ್ಟ್ರಪತಿ ಮುರ್ಮು ಅವರಿಗೆ ಸ್ವಾಗತ ಕೋರಿ, ಕುಟುಂಬ ಸಮೇತ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ರಾಷ್ಟ್ರಪತಿಗಳೊಂದಿಗೆ ಹುಬ್ಬಳ್ಳಿಗೆ ತೆರಳಲಿದ್ದಾರೆ.

ನಾಡದೇವತೆ ತಾಯಿ ಚಾಮುಂಡೇಶ್ವರಿ ಮಹಿಷಾಸುರ ಮರ್ದಿನಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಉತ್ಸವಕ್ಕೆ ಚಾಲನೆ ಸಿಗಲಿದೆ. ಚಾಮುಂಡಿ ತಾಯಿಯ ಉತ್ಸವ ಮೂರ್ತಿ ಶುದ್ದಿ ಕಾರ್ಯವನ್ನು ದೇಗುಲದ ಪ್ರಧಾನ ಅರ್ಚಕ ಡಾ ಶಶಿ ಶೇಖರ್ ದೀಕ್ಷಿತ್ ನೆರವೇರಿಸಲಿದ್ದಾರೆ. ನಂತರ ಪಂಚಲೋಹದ ಚಾಮುಂಡೇಶ್ವರಿ ಮಹಿಷಾಸುರ ಮರ್ದಿನಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಇರಿಸಲಾಗುತ್ತಿದೆ. ದೇವಿಯ ವಿಗ್ರಹಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಷ್ಪಾರ್ಚನೆ ಮಾಡಲಿದ್ದಾರೆ. ನಾಳೆಯಿಂದ 9 ದಿನಗಳ ಕಾಲ‌ ಉತ್ಸವ ಮೂರ್ತಿಗೆ ವಿಶೇಷ ಪೂಜೆ ನಡೆಯಲಿದ್ದು, ವಿಜಯದಶಮಿಯ ದಿನದಂದು ಉತ್ಸವ ಕಳೆಕಟ್ಟಲಿದೆ. ನಂತರ ಮೆರವಣಿಗೆಯ ಮೂಲಕ ಅರಮನೆಗೆ ವಿಗ್ರಹವನ್ನು ಕಳುಹಿಸಲಾಗುತ್ತದೆ.

ಪ್ಲಾಸ್ಟಿಕ್ ಮುಕ್ತ ದಸರಾಕ್ಕೆ ಅಭಿಯಾನ

ಈ ವರ್ಷ ಪ್ಲಾಸ್ಟಿಕ್ ಮುಕ್ತ ಮೈಸೂರು ದಸರಾ ಆಚರಣೆಗಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಯದುವಂಶದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮುಂದಾಗಿದ್ದಾರೆ. ಜಿಎಸ್‌ಎಸ್ ಯೋಗಸಂಸ್ಥೆಯು ಅಭಿಯಾನ ಆಯೋಜಿಸಿದ್ದು, ದಸರಾ ಕಾರ್ಯಕ್ರಮ ಹಾಗೂ ಪ್ರವಾಸಿ ತಾಣದಲ್ಲಿ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಲು ಯತ್ನಿಸುತ್ತಿದೆ. ಅಭಿಯಾನಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಜೊತೆಯಾಗಿದ್ದು, ವಿಡಿಯೋ ಸಂದೇಶದ ಮೂಲಕ ಪ್ಲಾಸ್ಟಿಕ್ ಬಳಸದಂತೆ ಮನವಿ ಮಾಡಿದ್ದಾರೆ.

Published On - 8:18 am, Sun, 25 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?