Mysore Dasara: ಸೆ 20ರಿಂದ ಒಂದು ತಿಂಗಳು ಮೈಸೂರು ದಸರ ಸಂಭ್ರಮ, ಇಲ್ಲಿದೆ ಅರಮನೆ ವೇಳಾಪಟ್ಟಿ

Myosre Palace: ಅರಮನೆಯಲ್ಲಿ ಧಾರ್ಮಿಕ ವಿಧಿಗಳು ನಡೆಯುವಾಗ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಇರುತ್ತದೆ.

Mysore Dasara: ಸೆ 20ರಿಂದ ಒಂದು ತಿಂಗಳು ಮೈಸೂರು ದಸರ ಸಂಭ್ರಮ, ಇಲ್ಲಿದೆ ಅರಮನೆ ವೇಳಾಪಟ್ಟಿ
ಸಾಂದರ್ಭಿಕ ಚಿತ್ರ
Follow us
| Edited By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 13, 2022 | 12:37 PM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೈಸೂರು ಅರಮನೆ (Mysore Palace) ಮತ್ತು ವಿವಿಧೆಡೆ ಸಿದ್ಧತೆ ಆರಂಭವಾಗಿದೆ. ಸೆ.20ರ ಮಂಗಳವಾರದಿಂದ ಸಿಂಹಾಸನ ಜೋಡಣೆ ಆರಂಭವಾಗಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರಗೆ ಅರಮನೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೆ.26ರಂದು ಖಾಸಗಿ ದರ್ಬಾರ್ ಹಾಗೂ ವಿವಿಧ ಪೂಜೆಗಳು, ಧಾರ್ಮಿಕ ವಿಧಿಗಳು ನೆರವೇರಲಿವೆ. ಅಂದೂ ಸಹ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಅಕ್ಟೋಬರ್ 4ರಂದು ಅರಮನೆಯಲ್ಲಿ ಆಯುಧಪೂಜೆ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಅ.5ರಂದು ವಿಜಯದಶಮಿ ಆಚರಣೆ ಇರುತ್ತದೆ. ಅಂದೂ ಸಹ ಸಂಪೂರ್ಣ ಅರಮನೆ ಪ್ರವೇಶಕ್ಕೆ ನಿರ್ಬಂಧವಿದೆ. ಅ.20ರಂದು ಸಿಂಹಾಸನ ವಿಸರ್ಜನೆ‌ ಹಿನ್ನೆಲೆಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಇರುತ್ತದೆ ಎಂದು ‘ಟಿವಿ9’ಗೆ ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಮಾಹಿತಿ ನೀಡಿದರು.

ಆನೆಗಳ ತಾಲೀಮು

ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಬಂದಿದೆ. 4 ಹೆಣ್ಣಾನೆಗಳು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿವೆ. ಗೋಪಾಲಸ್ವಾಮಿ, ಅಭಿಮನ್ಯು, ಭೀಮ, ಮಹೇಂದ್ರ, ಅರ್ಜುನ, ವಿಕ್ರಮ, ಧನಂಜಯ, ಕಾವೇರಿ, ಗೋಪಿ, ಶ್ರೀರಾಮ, ವಿಜಯಾ, ಚೈತ್ರಾ, ಲಕ್ಷ್ಮೀ, ಪಾರ್ಥಸಾರಥಿ ಆನೆಗಳು ಮೈಸೂರಿನಲ್ಲಿ ಬೀಡುಬಿಟ್ಟಿದ್ದು, ಪ್ರತಿದಿನ ತಾಲೀಮು ಮಾಡುತ್ತಿವೆ.

ರಾಷ್ಟ್ರಪತಿಯಿಂದ ಉದ್ಘಾಟನೆ

ಜಗದ್ವಿಖ್ಯಾತ ಮೈಸೂರು ದಸರಾ ಉತ್ಸವ ಸೆಪ್ಟೆಂಬರ್ 26ರಿಂದ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಗೋಲ್ಡ್ ಪಾಸ್ ಇಲ್ಲ

2022ರ ಮೈಸೂರು ದಸರಾ (Mysore Dasara) ಉತ್ಸವಕ್ಕೆ ಗೋಲ್ಡ್ ಪಾಸ್ ಇರುವುದಿಲ್ಲ ಎಂದು ಮೈಸೂರಿನಲ್ಲಿ ಸಚಿವ ಎಸ್ ಟಿ ಸೋಮಶೇಖರ್ (S T Somashekar) ಹೇಳಿದ್ದಾರೆ. ಗಣ್ಯರು, ವಿದೇಶಿಗರು ಹೆಚ್ಚಾಗಿ ಗೋಲ್ಡ್ ಪಾಸ್ ಅವಲಂಬಿಸಿದ್ದರು. ಒತ್ತಡ ಕಡಿಮೆ ಮಾಡುವ ಸಲುವಾಗಿ ಗೋಲ್ಡ್ ಪಾಸ್​ನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವಿವಿಐಪಿ ಪಾಸ್ ಹಾಗೂ ಕರ್ತವ್ಯನಿರತ ಪಾಸ್ ಹೊರತುಪಡಿಸಿ ಉಳಿದ ಪಾಸ್‌ಗಳನ್ನು ರದ್ದು ಮಾಡಲು ಚಿಂತನೆ ಮಾಡಲಾಗಿದೆ.

Published On - 11:43 am, Tue, 13 September 22

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್