AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dasara 2022 Inauguration: ನಾಡಹಬ್ಬ ಮೈಸೂರು ದಸರಾಕ್ಕೆ ವಿಧ್ಯುಕ್ತ ಚಾಲನೆ, ಚಾಮುಂಡೇಶ್ವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಷ್ಪಾರ್ಚನೆ

ಮೈಸೂರು ದಸರಾ 2022 ಉದ್ಘಾಟನೆ: ಬೆಳ್ಳಿರಥದಲ್ಲಿ ಮಹಿಳಾಸುರ ಮರ್ದಿನಿ ಅವತಾರದ ಪಂಚಲೋಹದ ವಿಗ್ರಹಕ್ಕೆ ಶುಭ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿಗಳು ಪುಷ್ಪಾರ್ಚನೆ ಮಾಡುವುದರೊಂದಿಗೆ 412ನೇ ದಸರಾದ ವಿಧಿವಿಧಾನಗಳು ಆರಂಭವಾದವು.

Dasara 2022 Inauguration: ನಾಡಹಬ್ಬ ಮೈಸೂರು ದಸರಾಕ್ಕೆ ವಿಧ್ಯುಕ್ತ ಚಾಲನೆ, ಚಾಮುಂಡೇಶ್ವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಷ್ಪಾರ್ಚನೆ
ನಾಡಹಬ್ಬ ಮೈಸೂರು ದಸರಾಕ್ಕೆ ವಿಧ್ಯುಕ್ತ ಚಾಲನೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 26, 2022 | 12:39 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ(Mysuru Dasara 2022) ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಸೋಮವಾರ (ಸೆ 26) ವಿಧ್ಯುಕ್ತ ಚಾಲನೆ ನೀಡಿದರು. ದೀಪ ಬೆಳಗಿ ಬೆಳ್ಳಿರಥದಲ್ಲಿ ಮಹಿಳಾಸುರ ಮರ್ದಿನಿ ಅವತಾರದ ಪಂಚಲೋಹದ ವಿಗ್ರಹಕ್ಕೆ ಶುಭ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿಗಳು ಪುಷ್ಪಾರ್ಚನೆ ಮಾಡುವುದರೊಂದಿಗೆ 412ನೇ ದಸರಾದ ವಿಧಿವಿಧಾನಗಳು ಆರಂಭವಾದವು. ಕಾರ್ಯಕ್ರಮದಲ್ಲಿ ರಾಜ್ಯಪಾಲರು ಸೇರಿ ಗಣ್ಯರು ಭಾಗವಹಿಸಿದ್ದಾರೆ.

ಇದಕ್ಕೂ ಮೊದಲು ನಾಡಹಬ್ಬ ಮೈಸೂರು ದಸರಾಕ್ಕೆ ಚಾಲನೆ ನೀಡಲೆಂದು ಬಂದಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಟ್ಟದ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಕುಂಕುಮಾರ್ಚನೆಯ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವರು ಉಪಸ್ಥಿತರಿದ್ದರು. ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ.ಸೋಮಶೇಖರ್​, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿ ಆಯ್ದ ಕೆಲ ಗಣ್ಯರಿಗೆ ಮಾತ್ರ ರಾಷ್ಟ್ರಪತಿ ಜೊತೆ ವೇದಿಕೆ ಮೇಲೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Mysore Dasara 2022 Inauguration Live: ಚಾಮುಂಡಿ ಬೆಟ್ಟ ತಲುಪಿದ ದ್ರೌಪದಿ ಮುರ್ಮು: ಅಮ್ಮನವರಿಗೆ ಪೂಜೆ ಸಲ್ಲಿಸುವ ಮೂಲಕ ದಸರಾಕ್ಕೆ ಚಾಲನೆ

ಕರ್ನಾಟಕದ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗಾಗಿ ಇಂದು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ನಾಡಹಬ್ಬ ದಸರಾಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದ್ದಾರೆ. ಈ ಮುನ್ನ ಭದ್ರತಾ ಸಿಬ್ಬಂದಿ ವೇದಿಕೆಯನ್ನು ಸಂಪೂರ್ಣವಾಗಿ ಪರಿಶೀಲಿಸಿದ್ರು. ದಸರಾ ಸಂಭ್ರಮದ ತಾಜಾ ಮಾಹಿತಿ ಟಿವಿ9 ಯುಟ್ಯೂಬ್​ ಚಾನೆಲ್​ನ ಲೈವ್ ವಿಡಿಯೊದಲ್ಲಿ ಲಭ್ಯ.

Published On - 10:11 am, Mon, 26 September 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ