ದಸರಾ ಶಬ್ದದ ಉತ್ಪತ್ತಿ: ನವರಾತ್ರಿಯ ಬಗ್ಗೆ ಧರ್ಮಶಾಸ್ತ್ರ ಏನು ಹೇಳುತ್ತದೆ? ಈ ಹಿಂದೆ ಒಟ್ಟು ಎಷ್ಟು ನವರಾತ್ರಿಗಳನ್ನು ಆಚರಿಸುತ್ತಿದ್ದರು?

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನವರಾತ್ರಿ ಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಶಕ್ತಿಯ ಆರಾಧನೆ ಈ ಹಬ್ಬದ ವೈಶಿಷ್ಟ್ಯ. 9 ದಿನ ಆಚರಿಸುವ ಈ ಪರ್ವಕ್ಕೆ ದುರ್ಗೋತ್ಸವ ಎಂದೂ ಕರೆಯುತ್ತಾರೆ. ಹಿಂದೆ ಐದು ನವರಾತ್ರಿ ಆಚರಣೆ ವಿಶೇಷವಾಗಿತ್ತು. ಈಗ ಎರಡು ನವರಾತ್ರಿ ವಿಶೇಷವಾಗಿದ್ದು, ಆಚರಣೆಯಲ್ಲಿದೆ. ಒಂದು ಶರನ್ನವರಾತ್ರಿ ಇನ್ನೊಂದು ಚೈತ್ರ ನವರಾತ್ರಿ. ನವರಾತ್ರಿಯ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ? ಪುರಾಣ ಮಹತ್ವ ಏನು? ಇತಿಹಾಸವೇನು? ಆಧ್ಯಾತ್ಮಿಕ ಪ್ರಯೋಜನಗಳೇನು? ತಿಳಿಯೋಣ.

ದಸರಾ ಶಬ್ದದ ಉತ್ಪತ್ತಿ: ನವರಾತ್ರಿಯ ಬಗ್ಗೆ ಧರ್ಮಶಾಸ್ತ್ರ ಏನು ಹೇಳುತ್ತದೆ? ಈ ಹಿಂದೆ ಒಟ್ಟು ಎಷ್ಟು ನವರಾತ್ರಿಗಳನ್ನು ಆಚರಿಸುತ್ತಿದ್ದರು?
ದಸರಾ ಶಬ್ದದ ಉತ್ಪತ್ತಿ

Updated on: Oct 05, 2024 | 8:45 AM

ನವರಾತ್ರಿ, ಇದು ದೇವಿಯನ್ನು ಆರಾಧಿಸುವ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು (ನವ) ರಾತ್ರಿಗಳು, ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೆಯ ದಿನ ‘ವಿಜಯ ದಶಮಿ’, ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವುದು ಕರ್ನಾಟಕದ ಆಚರಣೆಯ ಪದ್ಧತಿ. ಇದೇ ದಿನ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೂರ್ತಿಯ ಮೆರವಣಿಗೆಯು ಮೈಸೂರಿನಲ್ಲಿ ನಡೆಯುತ್ತದೆ. ಮೈಸೂರು ದಸರಾ ಉತ್ಸವವು ಜಗತ್ಪ್ರಸಿದ್ಧಿಯನ್ನು ಪಡೆದಿದೆ. ಈ ಹಬ್ಬವು ಹಿಂದು ಪಂಚಾಂಗದ ಅಶ್ವಯುಜ ಶುದ್ಧ ಪ್ರತಿಪದೆಯ ದಿನ ಪ್ರಾರಂಭವಾಗುತ್ತದೆ. ನವರಾತ್ರಿಯ ವೈಶಿಷ್ಟ್ಯತೆಗಳು ನವರಾತ್ರಿ ಒಂಭತ್ತು ರಾತ್ರಿಗಳ ಸಮೂಹ. ಹಿಂದೆ ಐದು ನವರಾತ್ರಿ ಆಚರಣೆ ವಿಶೇಷವಾಗಿತ್ತು. ಈಗ ಎರಡು ನವರಾತ್ರಿ ವಿಶೇಷವಾಗಿದ್ದು, ಆಚರಣೆಯಲ್ಲಿದೆ. ಒಂದು ಶರನ್ನವರಾತ್ರಿ ಇನ್ನೊಂದು ಚೈತ್ರ ನವರಾತ್ರಿ. ಈಗ ನಾವು ಆಚರಿಸುವುದು ಶರನ್ನವರಾತ್ರಿ. ನವರಾತ್ರಿ ಎಲ್ಲ ಜನರೂ ಆಚರಿಸುವ ಒಂದು ವಿಶಿಷ್ಟವಾದ ಹಬ್ಬ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನವರಾತ್ರಿ ಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಶಕ್ತಿಯ ಆರಾಧನೆ ಈ ಹಬ್ಬದ ವೈಶಿಷ್ಟ್ಯ. 9 ದಿನಗಳ ಕಾಲ ಆಚರಿಸುವ ಈ ಪರ್ವಕ್ಕೆ ದುರ್ಗೋತ್ಸವ ಎಂದೂ ಕರೆಯುತ್ತಾರೆ. ವಿಜಯನಗರದ ಅರಸರು ಹಾಗೂ ಮೈಸೂರು ಅರಸರು ಜೈತ್ರಯಾತ್ರೆಯಲ್ಲಿ ಗೆಲುವು ಪಡೆದು ಸಂಭ್ರಮದಿಂದ ನಡೆಸುವ ವಿಶಿಷ್ಟ ಹಬ್ಬ ಎಂಬುದು ಇತಿಹಾಸದ ಉಲ್ಲೇಖ.ಪುರಾಣದ...

Published On - 2:02 am, Sat, 5 October 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ