
ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ವಿಶೇಷ ಸ್ಥಾನಮಾನ ಇದೆ. ಮನೆ ಖರೀದಿ, ನಿರ್ಮಾಣದಿಂದ ಹಿಡಿದು ಮನೆಯಲ್ಲಿ ಇಡುವ ವಸ್ತುಗಳವರೆಗೆ ಎಲ್ಲದಕ್ಕೂ ವಾಸ್ತು ನಿಯಮಗಳಿವೆ. ಅದರಂತೆ ಮನೆಯಲ್ಲಿ ಗೂಬೆಯ ಪ್ರತಿಮೆ ಇಡುವುದರ ಬಗ್ಗೆ ಸಾಕಷ್ಟು ಜನರಿಗೆ ಗೊಂದಲವಿದೆ. ಕೆಲವರು ಗೂಬೆಯ ಪ್ರತಿಮೆಯನ್ನು ಶುಭ ಎಂದು ಪರಿಗಣಿಸಿದರೆ ಕೆಲವರು ಇದನ್ನು ಅಶುಭದ ಸಂಕೇತ ಎಂದು ಪರಿಗಣಿಸುತ್ತಾರೆ. ಅದ್ದರಿಂದ ಮನೆಯಲ್ಲಿ ಗೂಬೆಯ ಪ್ರತಿಮೆ ಇಡಬಹುದೇ? ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿಗಳಾದ ಬಸವರಾಜ ಗುರೂಜಿಯವರು ನೀಡಿರುವ ಮಾಹಿತಿ ಇಲ್ಲಿದೆ.
ಕೆಲವರು ಗೂಬೆಯನ್ನು ಶುಭದ ಸಂಕೇತವೆಂದು ಪರಿಗಣಿಸುತ್ತಾರೆ, ಆದರೆ ಇನ್ನು ಕೆಲವರು ಅಶುಭದ ಸಂಕೇತವೆಂದು ನಂಬುತ್ತಾರೆ. ವಾಸ್ತುಶಾಸ್ತ್ರದ ಪ್ರಕಾರ, ಗೂಬೆಯ ಚಿತ್ರ ಅಥವಾ ವಿಗ್ರಹವನ್ನು ಇಟ್ಟುಕೊಳ್ಳುವುದು ಶುಭವೆಂದು ಹೇಳಲಾಗುತ್ತದೆ. ಆದರೆ ಇದರ ಬಗ್ಗೆ ನಂಬಿಕೆ ಇಟ್ಟುಕೊಳ್ಳುವುದು ಬಹಳ ಮುಖ್ಯ ಎಂದು ಬಸವರಾಜ ಗುರೂಜಿ ಹೇಳುತ್ತಾರೆ.
ಇದನ್ನೂ ಓದಿ: ಮನೆಯಲ್ಲಿ ‘ಕಾಮಧೇನು ವಿಗ್ರಹ’ ಇಡುವುದು ಉತ್ತಮವೇ? ಬಸವರಾಜ ಗುರೂಜಿ ನೀಡಿರುವ ಮಾಹಿತಿ ಇಲ್ಲಿದೆ
ಹಿಂದೂ ಧರ್ಮದಲ್ಲಿ ಗೂಬೆಗೆ ಮಹತ್ವದ ಸ್ಥಾನವಿದೆ. ಅದನ್ನು ಲಕ್ಷ್ಮಿ ದೇವಿ ವಾಹನ ಎಂದೇ ನಂಬಲಾಗುತ್ತದೆ. ಗೂಬೆಯ ವಿಗ್ರಹವನ್ನು ಮನೆಯಲ್ಲಿ ಇಡುವಂತೆ ಶಾಸ್ತ್ರಗಳಲ್ಲಿ ಹೇಳಲಾಗಿದೆ. ನೀವೂ ಕೂಡ ಗೂಬೆಯ ಚಿತ್ರ ಅಥವಾ ವಿಗ್ರಹವನ್ನು ಮನೆಯಲ್ಲಿ ಇಟ್ಟುಕೊಳ್ಳಲು ಬಯಸಿದರೆ ಮಹಾಲಕ್ಷ್ಮಿಯೊಂದಿಗೆ ಇರುವ ಗೂಬೆಯ ಚಿತ್ರವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು. ಆದರೆ ಎಂದಿಗೂ ಒಂಟಿ ಗೂಬೆಯ ಚಿತ್ರ ಅಥವಾ ಪ್ರತಿಮೆಯನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಶುಭವಲ್ಲ ಎಂದು ಬಸವರಾಜ ಗುರೂಜಿ ಎಚ್ಚರಿಸುತ್ತಾರೆ.
ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:46 am, Fri, 21 February 25