AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puri Jagannath Temple: ಪುರಿ ಜಗನ್ನಾಥ ದೇವಾಲಯದಲ್ಲಿ ಕಟ್ಟುನಿಟ್ಟಿನ ವಸ್ತ್ರ ಸಂಹಿತೆ ಜಾರಿಗೆ ಸಿದ್ಧತೆ

ಒಡಿಶಾದ ಪುರಿ ಜಗನ್ನಾಥ ದೇವಾಲಯದಲ್ಲಿ ಕಟ್ಟುನಿಟ್ಟಾದ ವಸ್ತ್ರ ಸಂಹಿತೆ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ದೇವಾಲಯದ ಪಾವಿತ್ರ್ಯತೆ ಕಾಪಾಡಲು ಒಡಿಶಾ ಕಾನೂನು ಆಯೋಗವು ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಲು ಶಿಫಾರಸು ಮಾಡಿದೆ. ಮಹಿಳೆಯರಿಗೆ ಸೀರೆ, ಸಲ್ವಾರ್, ಪುರುಷರಿಗೆ ಧೋತಿ, ಕುರ್ತಾ ಸೂಕ್ತವೆಂದು ತಿಳಿಸಿದ್ದು, ಜೀನ್ಸ್, ಟಿ-ಶರ್ಟ್‌ಗೆ ನಿಷೇಧ ಪ್ರಸ್ತಾಪಿಸಲಾಗಿದೆ. ‘ಶ್ರೀ ಜಗನ್ನಾಥ ದೇವಾಲಯ ಕಾಯ್ದೆ’ಗೆ ತಿದ್ದುಪಡಿ ತರಲು ಸಲಹೆ ನೀಡಲಾಗಿದೆ.

Puri Jagannath Temple: ಪುರಿ ಜಗನ್ನಾಥ ದೇವಾಲಯದಲ್ಲಿ ಕಟ್ಟುನಿಟ್ಟಿನ ವಸ್ತ್ರ ಸಂಹಿತೆ ಜಾರಿಗೆ ಸಿದ್ಧತೆ
ಪುರಿ ಜಗನ್ನಾಥ ದೇವಾಲಯದಲ್ಲಿ ವಸ್ತ್ರ ಸಂಹಿತೆImage Credit source: Pinterest
ಅಕ್ಷತಾ ವರ್ಕಾಡಿ
|

Updated on:Apr 29, 2026 | 12:25 PM

Share

ದಕ್ಷಿಣ ಭಾರತದ ಹಲವು ಪ್ರಸಿದ್ಧ ದೇವಾಲಯಗಳಲ್ಲಿ ಈಗಾಗಲೇ ಕಟ್ಟುನಿಟ್ಟಾದ ವಸ್ತ್ರ ಸಂಹಿತೆ ಜಾರಿಯಲ್ಲಿದ್ದು, ಇದೀಗ ಅದೇ ಮಾದರಿಯನ್ನು ಒಡಿಶಾದ ವಿಶ್ವಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದಲ್ಲೂ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಗಂಭೀರ ಆಲೋಚನೆ ನಡೆಸುತ್ತಿದೆ. ದೇವಾಲಯದ ಪಾವಿತ್ರ್ಯತೆಯನ್ನು ಕಾಪಾಡುವ ದೃಷ್ಟಿಯಿಂದ ಭಕ್ತರಿಗೆ ನಿರ್ದಿಷ್ಟ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸುವಂತೆ ಒಡಿಶಾ ರಾಜ್ಯ ಕಾನೂನು ಆಯೋಗವು ಶಿಫಾರಸು ಮಾಡಿದೆ.

ನ್ಯಾಯಮೂರ್ತಿ ಬಿಶ್ವನಾಥ್ ರಾತ್ ನೇತೃತ್ವದ ಕಾನೂನು ಆಯೋಗವು ಈ ಕುರಿತು ವರದಿಯನ್ನು ಸಿದ್ಧಪಡಿಸಿದ್ದು, ಹಿಂದೂ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ಪೂರಕವಾದ ಉಡುಪುಗಳನ್ನು ಧರಿಸಿದವರಿಗೆ ಮಾತ್ರ ದೇವಾಲಯದೊಳಗೆ ಪ್ರವೇಶ ನೀಡಬೇಕು ಎಂದು ಸಲಹೆ ನೀಡಿದೆ. ಪ್ರಮುಖವಾಗಿ ಮಹಿಳೆಯರು ಜೀನ್ಸ್, ಟಿ-ಶರ್ಟ್ ಅಥವಾ ಶರ್ಟ್ ಧರಿಸಿ ದೇವಾಲಯಕ್ಕೆ ಬರುವುದನ್ನು ನಿಷೇಧಿಸಬೇಕೆಂದು ಆಯೋಗವು ಸರ್ಕಾರಕ್ಕೆ ತಿಳಿಸಿದೆ. ಈ ಹೊಸ ನಿಯಮವನ್ನು ಜಾರಿಗೆ ತರಲು ‘ಶ್ರೀ ಜಗನ್ನಾಥ ದೇವಾಲಯ ಕಾಯ್ದೆ’ಗೆ ಅಗತ್ಯ ತಿದ್ದುಪಡಿ ತರಲು ಕೂಡ ಪ್ರಸ್ತಾಪಿಸಲಾಗಿದೆ.

ಆಯೋಗದ ಶಿಫಾರಸಿನ ಪ್ರಕಾರ, ಪುರುಷ ಭಕ್ತರು ಧೋತಿ-ಕುರ್ತಾ, ಪಂಚೆ ಅಥವಾ ಸಾಂಪ್ರದಾಯಿಕ ಪೈಜಾಮ-ಕುರ್ತಾವನ್ನು ಧರಿಸಬಹುದು. ಮಹಿಳೆಯರಿಗೆ ಸೀರೆ, ಬ್ಲೌಸ್ ಅಥವಾ ಸಲ್ವಾರ್-ಕಮೀಜ್ ಧರಿಸಲು ಸೂಚಿಸಲಾಗಿದೆ. 10 ವರ್ಷದೊಳಗಿನ ಬಾಲಕಿಯರು ಫ್ರಾಕ್ ಅಥವಾ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಲು ಅವಕಾಶ ನೀಡಲಾಗಿದೆ. ದೇವಾಲಯದ ಆಡಳಿತ ಮಂಡಳಿಯು ಈ ಹಿಂದೆಯೇ ಅರ್ಧ ಪ್ಯಾಂಟ್, ಹರಿದ ಜೀನ್ಸ್ ಮತ್ತು ಸ್ಲೀವ್‌ಲೆಸ್ ಬಟ್ಟೆಗಳನ್ನು ಧರಿಸದಂತೆ ಭಕ್ತರಲ್ಲಿ ಮನವಿ ಮಾಡಿತ್ತು. ಆದರೆ ಕಾಯ್ದೆಯಲ್ಲಿ ಸ್ಪಷ್ಟ ನಿಯಮಗಳಿಲ್ಲದ ಕಾರಣ ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಮೋದಿ ವಿಶೇಷ ಪೂಜೆ; ಸರ್ವಾರ್ಥ ಸಿದ್ಧಿ ಯೋಗದ ಮಹತ್ವವೇನು ಗೊತ್ತಾ?

ದೇವಾಲಯವು ಕೇವಲ ದರ್ಶನದ ಸ್ಥಳವಲ್ಲ, ಅದು ಆಧ್ಯಾತ್ಮಿಕ ಶಕ್ತಿಯ ಕೇಂದ್ರವಾಗಿದೆ. ಅಲ್ಲಿಗೆ ಬರುವ ಭಕ್ತರು ಶಿಸ್ತು ಮತ್ತು ಭಕ್ತಿಯಿಂದ ಕೂಡಿದ ಉಡುಪುಗಳನ್ನು ಧರಿಸುವುದರಿಂದ ದೇವಾಲಯದ ಪವಿತ್ರ ವಾತಾವರಣವು ಮತ್ತಷ್ಟು ವೃದ್ಧಿಯಾಗುತ್ತದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಒಡಿಶಾ ಸರ್ಕಾರವು ಈ ಶಿಫಾರಸುಗಳನ್ನು ಸದ್ಯ ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಈ ಕುರಿತು ಅಧಿಕೃತ ಕಾನೂನು ರೂಪಿಸುವ ಸಾಧ್ಯತೆಯಿದೆ. ಕರ್ನಾಟಕದ ಉಡುಪಿ ಶ್ರೀಕೃಷ್ಣ ಮಠ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ದೇವಾಲಯ ಸೇರಿದಂತೆ ದೇಶದ ಹಲವು ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಈಗಾಗಲೇ ಇಂತಹ ನಿಯಮಗಳು ಜಾರಿಯಲ್ಲಿರುವುದು ಗಮನಾರ್ಹ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:24 pm, Wed, 29 April 26

Follow Us
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ