AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಅಧಿಕ ಮಾಸದಲ್ಲಿ ಮಕ್ಕಳು ಹುಟ್ಟಿದರೆ ಶುಭನಾ? ಶಾಸ್ತ್ರಗಳು ಹೇಳುವುದೇನು?

ಪ್ರಸ್ತುತ ಅಧಿಕ ಮಾಸ ನಡೆಯುತ್ತಿದೆ. ಅಧಿಕ ಮಾಸದಲ್ಲಿ ಮಕ್ಕಳು ಜನಿಸಬಾರದೇ ಎಂಬ ಪ್ರಶ್ನೆ ಸಾಕಷ್ಟು ಜನರಲ್ಲಿದೆ. ಈ ಗೊಂದಲಕ್ಕೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭವಿಷ್ಯ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.

Daily Devotional: ಅಧಿಕ ಮಾಸದಲ್ಲಿ ಮಕ್ಕಳು ಹುಟ್ಟಿದರೆ ಶುಭನಾ? ಶಾಸ್ತ್ರಗಳು ಹೇಳುವುದೇನು?
ಅಧಿಕ ಮಾಸImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jun 10, 2026 | 7:19 AM

Share

ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ಅಧಿಕ ಮಾಸದಲ್ಲಿ ಜನಿಸಿದ ಮಕ್ಕಳ ಭವಿಷ್ಯದ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅಧಿಕ ಮಾಸವು ಪುರುಷೋತ್ತಮ ಮಾಸವೆಂದು ಪರಿಗಣಿತವಾಗಿದ್ದು, ವಿಷ್ಣುವಿಗೆ ಪ್ರಿಯವಾದ ಮಾಸವಾಗಿದೆ. “ಅಧಿಕಸ್ಯ ಅಧಿಕ ಫಲಂ” ಎಂಬ ಮಾತಿನಂತೆ, ಈ ಮಾಸದಲ್ಲಿ ಮಾಡುವ ಜಪ, ತಪ, ದಾನಗಳಿಗೆ ವಿಶೇಷ ಫಲ ಸಿಗುತ್ತದೆ. ಇತ್ತೀಚೆಗೆ ಅನೇಕರು ಅಧಿಕ ಮಾಸದಲ್ಲಿ ಮಕ್ಕಳ ಜನನದ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

ನಿರ್ದಿಷ್ಟವಾಗಿ, ಅಧಿಕ ಮಾಸದಲ್ಲಿ ಸೋಮವಾರ, ಬುಧವಾರ ಮತ್ತು ಶನಿವಾರದಂದು ಜನಿಸಿದ ಮಕ್ಕಳು ಹೆಚ್ಚು ಚತುರತೆ, ಚಾಕಚಕ್ಯತೆ ಮತ್ತು ವಿಷಯಗಳನ್ನು ಬೇಗ ಗ್ರಹಿಸುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಮಂಗಳವಾರ, ಗುರುವಾರ, ಶುಕ್ರವಾರ ಮತ್ತು ಭಾನುವಾರದಂದು ಜನಿಸಿದ ಮಕ್ಕಳು ತಾಳ್ಮೆ ಮತ್ತು ಸಹಿಷ್ಣುತೆಗೆ ಹೆಸರಾಗಿರುತ್ತಾರೆ. ಆಮೆ ಮತ್ತು ನರಿಯ ಕಥೆಯಲ್ಲಿ ಆಮೆಯು ಗೆಲ್ಲುವಂತೆ, ಈ ಮಕ್ಕಳು ತಮ್ಮ ತಾಳ್ಮೆಯಿಂದ ಯಶಸ್ಸನ್ನು ಸಾಧಿಸುತ್ತಾರೆ.

ಅಧಿಕ ಮಾಸದಲ್ಲಿ ಜನಿಸಿದ ಮಕ್ಕಳು ಹೆಚ್ಚಿನ ಚುರುಕುತನ ಹೊಂದಿರುತ್ತಾರೆ. ಅವರು ವೈದ್ಯರು, ಸಾಫ್ಟ್‌ವೇರ್ ಇಂಜಿನಿಯರ್‌ಗಳು, ಹಾಗೆಯೇ ಐಎಎಸ್, ಐಪಿಎಸ್‌ನಂತಹ ಉನ್ನತ ಮಟ್ಟದ ಉದ್ಯೋಗಗಳನ್ನು ಪಡೆಯುವ ಯೋಗವನ್ನು ಹೊಂದಿರುತ್ತಾರೆ. ಇವರಿಗೆ ಆಡಳಿತದ ಬಗ್ಗೆ ವಿಶೇಷ ಒಲವಿರುತ್ತದೆ. ಅವರು ಎಂದಿಗೂ ಇನ್ನೊಬ್ಬರ ಪರಾವಲಂಬಿಗಳಾಗಿರುವುದಿಲ್ಲ, ಬದಲಾಗಿ ಸ್ವಾಲಂಬಿಗಳಾಗಿರುತ್ತಾರೆ. ಸ್ವಂತ ಸಾಮರ್ಥ್ಯ ಮತ್ತು ನಿರ್ವಹಣೆಯ ಶಕ್ತಿ ಇವರಲ್ಲಿ ಅತಿ ಹೆಚ್ಚಾಗಿರುತ್ತದೆ.

ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಆದ್ದರಿಂದ, ಅಧಿಕ ಮಾಸದಲ್ಲಿ ಜನಿಸಿದ ಮಕ್ಕಳಿಗೆ ಯಾವುದೇ ದೋಷವಿಲ್ಲ. ಯಾವುದೇ ರೀತಿಯ ಪರಿಹಾರಗಳು, ಹೋಮಗಳು ಅಗತ್ಯವಿಲ್ಲ. ಈ ಮಕ್ಕಳು ವಿಶೇಷ ಪ್ರತಿಭೆ ಮತ್ತು ಅದೃಷ್ಟವನ್ನು ಹೊಂದಿರುತ್ತಾರೆ. ಭಗವಂತನ ಕೃಪೆ ಮತ್ತು ಆಶೀರ್ವಾದದೊಂದಿಗೆ, ಈ ಮಕ್ಕಳು ಕೀರ್ತಿ ಮತ್ತು ಪ್ರತಿಷ್ಠೆಗೆ ಭಾಜನರಾಗುತ್ತಾರೆ. ಸ್ಥಿತಿಕಾರಕನಾಗಿರುವ ವಿಷ್ಣುವಿನ ಅನುಗ್ರಹದಿಂದ, ಇವರು ಅತಿ ಹೆಚ್ಚು ಚುರುಕುತನ ಮತ್ತು ಅದ್ಭುತವಾದ ನಿರ್ವಹಣಾ ಶಕ್ತಿಯನ್ನು ಹೊಂದಿರುತ್ತಾರೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:19 am, Wed, 10 June 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಸದ್ಯ ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ರಾಜಕೀಯ, ಕ್ರೈಂ ಸುದ್ದಿಗಳನ್ನು ಬರೆಯುತ್ತಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!
ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು
ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು
ಆನೆ ಯಾವುದು ಅಂತಾನೇ ಹೇಳಿಲ್ಲ ಅಂದ್ರೆ ಅಂಬಾರಿ ಯಾಕೆ ಕೊಡಬೇಕು?
ಆನೆ ಯಾವುದು ಅಂತಾನೇ ಹೇಳಿಲ್ಲ ಅಂದ್ರೆ ಅಂಬಾರಿ ಯಾಕೆ ಕೊಡಬೇಕು?
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ