AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ‘R’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ ಗೊತ್ತಾ?

ಸಂಖ್ಯಾಶಾಸ್ತ್ರದ ಪ್ರಕಾರ, 'R' ಅಕ್ಷರದಿಂದ ಹೆಸರಿಸುವವರು ಅತೀವ ಬುದ್ಧಿವಂತರು, ಆದರೆ ದ್ವಂದ್ವ ಸ್ವಭಾವದವರು. ಹಣ ಗಳಿಸುವಲ್ಲಿ ಚತುರರಾದರೂ, ಉಳಿತಾಯದಲ್ಲಿ ಹಿಂದೆ ಬೀಳುವ ಸಾಧ್ಯತೆ ಇರುತ್ತದೆ. ಇವರ ವೈವಾಹಿಕ ಜೀವನ ಸಾಮಾನ್ಯವಾಗಿ ಸುಖಮಯವಾಗಿದ್ದರೂ, ನೇರ ಮಾತುಗಾರಿಕೆಯಿಂದ ಸಣ್ಣ ಭಿನ್ನಾಭಿಪ್ರಾಯಗಳು ಮೂಡಬಹುದು. ವಾಗ್ಚಾತುರ್ಯ ಮತ್ತು ಅದೃಷ್ಟ ಇವರ ಬಲವಾಗಿದೆ.

Personality Test: 'R' ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ ಗೊತ್ತಾ?
'R' ಅಕ್ಷರದಿಂದ ಹೆಸರು ಪ್ರಾರಂಭImage Credit source: Pinterest
ಅಕ್ಷತಾ ವರ್ಕಾಡಿ
|

Updated on: May 04, 2026 | 12:56 PM

Share

ಸಂಖ್ಯಾಶಾಸ್ತ್ರದ ಪ್ರಕಾರ ನಿಮ್ಮ ಹೆಸರಿನ ಮೊದಲ ಅಕ್ಷರವು ನಿಮ್ಮ ಜೀವನದ ದಿಕ್ಕನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅದರಲ್ಲೂ ‘R’ ಅಕ್ಷರದಿಂದ ಹೆಸರು ಪ್ರಾರಂಭವಾಗುವ ವ್ಯಕ್ತಿಗಳ ಗುಣಸ್ವಭಾವ, ಆರ್ಥಿಕ ಸ್ಥಿತಿ ಮತ್ತು ವೈವಾಹಿಕ ಜೀವನ ಹೇಗಿರುತ್ತದೆ ಎಂಬುದರ ಕುರಿತು ಆಸಕ್ತಿದಾಯಕ ಮಾಹಿತಿ ಇಲ್ಲಿದೆ.

ಬುದ್ಧಿವಂತಿಕೆ ಮತ್ತು ಸಂಯಮದ ವ್ಯಕ್ತಿತ್ವ:

ಸಂಖ್ಯಾಶಾಸ್ತ್ರದ ಪ್ರಕಾರ, ‘R’ ಅಕ್ಷರದಿಂದ ಹೆಸರು ಆರಂಭವಾಗುವ ವ್ಯಕ್ತಿಗಳು ಅತೀವ ಬುದ್ಧಿವಂತರು. ಇವರಲ್ಲಿ ಒಂದು ವಿಶಿಷ್ಟವಾದ ದ್ವಂದ್ವ ಗುಣವಿರುತ್ತದೆ. ಅಂದರೆ ಕೆಲವೊಮ್ಮೆ ಅತ್ಯಂತ ಶಾಂತರಾಗಿದ್ದರೆ, ಮತ್ತೆ ಕೆಲವೊಮ್ಮೆ ಅನಿರೀಕ್ಷಿತವಾಗಿ ವರ್ತಿಸುತ್ತಾರೆ. ಈ ಸ್ವಭಾವವೇ ಅವರಿಗೆ ಆಗಾಗ ಸಮಸ್ಯೆಗಳನ್ನು ತಂದೊಡ್ಡಬಹುದು. ಇವರು ಎಲ್ಲರೊಂದಿಗೆ ಸುಲಭವಾಗಿ ಬೆರೆಯುವ ಗುಣ ಹೊಂದಿದ್ದರೂ, ಕೆಲವೊಮ್ಮೆ ಅತಿಯಾದ ಮುಕ್ತವಾಗಿ ಮಾತನಾಡುವ ಪ್ರವೃತ್ತಿಯಿಂದ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುತ್ತದೆ.

ಆರ್ಥಿಕ ಪರಿಸ್ಥಿತಿ ಮತ್ತು ಹೂಡಿಕೆ:

ಇವರ ಆರ್ಥಿಕ ಜೀವನದ ಬಗ್ಗೆ ಹೇಳುವುದಾದರೆ, ಇವರು ಹಣ ಗಳಿಸುವಲ್ಲಿ ಬಹಳ ಚತುರರು. ಅತೀವ ಪರಿಶ್ರಮದಿಂದ ಕೈತುಂಬಾ ಸಂಪಾದಿಸುತ್ತಾರೆ. ಆದರೆ, ಬಂದ ಹಣವನ್ನು ಉಳಿಸುವ ವಿಷಯದಲ್ಲಿ ಇವರು ತುಸು ಹಿಂದೆ. ಅನಗತ್ಯ ಖರ್ಚು ಅಥವಾ ಯೋಜಿತವಲ್ಲದ ಹೂಡಿಕೆಯಿಂದಾಗಿ ಅನಿರೀಕ್ಷಿತ ಆರ್ಥಿಕ ನಷ್ಟ ಅನುಭವಿಸುವ ಸಂಭವವಿರುತ್ತದೆ. ಆದ್ದರಿಂದ, ಯಾವುದೇ ದೊಡ್ಡ ಮಟ್ಟದ ಹೂಡಿಕೆ ಮಾಡುವ ಮುನ್ನ ಎರಡು ಬಾರಿ ಯೋಚಿಸುವುದು ಇವರಿಗೆ ಬಹಳ ಮುಖ್ಯ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ವೈವಾಹಿಕ ಜೀವನ ಮತ್ತು ಮಾತುಗಾರಿಕೆ:

ಇವರ ವೈವಾಹಿಕ ಜೀವನ ಸಾಮಾನ್ಯವಾಗಿ ಸುಖಮಯವಾಗಿರುತ್ತದೆ. ಆದರೆ ಮನಸ್ಸಿನಲ್ಲಿರುವುದನ್ನು ಮುಚ್ಚುಮರೆ ಇಲ್ಲದೆ ನೇರವಾಗಿ ಹೇಳುವ ಇವರ ಗುಣವು ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿಗೆ ಕಾರಣವಾಗಬಹುದು. ‘R’ ಅಕ್ಷರದವರ ದೊಡ್ಡ ಶಕ್ತಿಯೆಂದರೆ ಅವರ ‘ಮಾತುಗಾರಿಕೆ’. ತಮ್ಮ ವಾಗ್ಚತುರ್ಯದಿಂದಲೇ ಇವರು ವೃತ್ತಿಜೀವನದಲ್ಲಿ ಉನ್ನತ ಸ್ಥಾನಕ್ಕೇರುತ್ತಾರೆ.

ಅದೃಷ್ಟದ ಸಾಥ್:

ಒಟ್ಟಾರೆಯಾಗಿ ಹೇಳುವುದಾದರೆ, ‘R’ ಅಕ್ಷರದವರು ಜೀವನದಲ್ಲಿ ಅದೃಷ್ಟವಂತರು. ಎಷ್ಟೇ ಕಠಿಣ ಸಮಸ್ಯೆ ಎದುರಾದರೂ ಇವರ ಅದೃಷ್ಟವು ಇವರನ್ನು ಪಾರು ಮಾಡುತ್ತದೆ. ವೃತ್ತಿ ಮತ್ತು ಸಂಸಾರ ಎರಡರಲ್ಲೂ ಸಮತೋಲನ ಸಾಧಿಸುವ ಶಕ್ತಿ ಇವರಿಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!