Sign In

By signing in or creating an account, you agree with Associated Broadcasting Company's Terms & Conditions and Privacy Policy.

Rama Navami 2025: ಈ ವರ್ಷ ರಾಮ ನವಮಿ ಯಾವಾಗ ಆಚರಿಸಲಾಗುತ್ತದೆ? ಪುರಾಣ ಕಥೆ ಹಾಗೂ ಮಹತ್ವ ಇಲ್ಲಿದೆ

ಹಿಂದೂ ಕ್ಯಾಲೆಂಡರ್ ಪ್ರಕಾರ, ಈ ವರ್ಷ ರಾಮನವಮಿಯನ್ನು ಏಪ್ರಿಲ್ 6 ರಂದು ಆಚರಿಸಲಾಗುತ್ತದೆ. ಈ ದಿನ ಭಗವಾನ್ ಶ್ರೀರಾಮನ ಜನ್ಮದಿನವಾಗಿದ್ದು, ರಾಮಾಯಣ ಪಠನೆ, ಉಪವಾಸ, ಹಾಗೂ ರಾಮನಾಮ ಜಪದ ಮೂಲಕ ಆಚರಿಸಲಾಗುತ್ತದೆ. ಭಗವಾನ್ ರಾಮನನ್ನು ಆದರ್ಶ ಮಾನವ, ನೀತಿ, ಶೌರ್ಯ ಮತ್ತು ಧೈರ್ಯದ ಸಂಕೇತವೆಂದು ನಂಬಲಾಗಿದೆ. ವಿಶ್ವದಾದ್ಯಂತ ಎಲ್ಲಾ ಶ್ರೀ ರಾಮ ಭಕ್ತರು ಈ ಹಬ್ಬವನ್ನು ಬಹಳ ವೈಭವದಿಂದ ಆಚರಿಸಲಾಗುತ್ತದೆ.

Rama Navami 2025: ಈ ವರ್ಷ ರಾಮ ನವಮಿ ಯಾವಾಗ ಆಚರಿಸಲಾಗುತ್ತದೆ? ಪುರಾಣ ಕಥೆ ಹಾಗೂ ಮಹತ್ವ ಇಲ್ಲಿದೆ
Rama Navami 2025
Follow us
ಅಕ್ಷತಾ ವರ್ಕಾಡಿ
|

Updated on: Apr 03, 2025 | 8:29 AM

ಭಗವಾನ್ ವಿಷ್ಣುವಿನ ಅವತಾರವಾದ ಶ್ರೀರಾಮನು ಜನಿಸಿದ ದಿನವನ್ನು ರಾಮನವಮಿ ಎಂದು ಆಚರಿಸಲಾಗುತ್ತದೆ. ಈ ಹಬ್ಬವನ್ನು ಶ್ರೀ ರಾಮಚಂದ್ರನ ಹುಟ್ಟುಹಬ್ಬ ಮಾತ್ರವಲ್ಲದೇ, ಸೀತಾ ಮಾತೆಯೊಂದಿಗಿನ ವಿವಾಹ ಮತ್ತು ಶ್ರೀ ರಾಮಪಟ್ಟಾಭಿಷೇಕದ ದಿನವಾಗಿಯೂ ಆಚರಿಸಲಾಗುತ್ತದೆ. ಈ ವಿಶೇಷ ದಿನ ಚೈತ್ರ ಮಾಸದ ಶುಕ್ಲಪಕ್ಷದ ನವಮಿಯಂದು ನಡೆಯುತ್ತದೆ. ಇದು ಸಾಮಾನ್ಯವಾಗಿ ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ಬರುತ್ತದೆ. ಈ ದಿನ ಶ್ರೀರಾಮನ ಭಕ್ತರು ಉಪವಾಸ ಕೈಗೊಂಡು ರಾಮಾಯಣವನ್ನು ಪಠಿಸುತ್ತಾರೆ, ಭಜನೆಗಳನ್ನು ಮಾಡುತ್ತಾರೆ.

ಈ ವರ್ಷ ಶ್ರೀ ರಾಮ ನವಮಿ ಯಾವಾಗ?

ಹಿಂದೂ ಕ್ಯಾಲೆಂಡರ್ ಪ್ರಕಾರ, ಚೈತ್ರ ಮಾಸದ ಶುಕ್ಲಪಕ್ಷ ನವಮಿ ತಿಥಿ ಏಪ್ರಿಲ್ 5 ರ ಸಂಜೆ 7:26 ಗಂಟೆಗೆ ಪ್ರಾರಂಭವಾಗುತ್ತದೆ. ಈ ತಿಥಿ ಏಪ್ರಿಲ್ 6 ರಂದು ಸಂಜೆ 7:22 ಗಂಟೆಗೆ ಮುಕ್ತಾಯವಾಗುತ್ತದೆ. ಹಿಂದೂ ಧರ್ಮದಲ್ಲಿ ಉದಯತಿಥಿಯನ್ನು ಪ್ರಾಥಮಿಕವಾಗಿ ಪರಿಗಣಿಸಲಾಗುತ್ತದೆ. ಹೀಗಾಗಿ, ಈ ವರ್ಷ 2025 ರಲ್ಲಿ ಶ್ರೀ ರಾಮ ನವಮಿ ಏಪ್ರಿಲ್ 6 ರಂದು ನಡೆಯಲಿದೆ.

ರಾಮ ನವಮಿ ಪುರಾಣ ಕಥೆ:

ಹಿಂದೂ ಧರ್ಮಗ್ರಂಥಗಳ ಪ್ರಕಾರ, ಕೋಸಲ ರಾಜ ದಶರಥನಿಗೆ ಮೂವರು ಹೆಂಡತಿಯರಿದ್ದರು. ಆದರೆ ಅವನಿಗೆ ಗಂಡು ಮಕ್ಕಳಿರಲಿಲ್ಲ. ಆದ್ದರಿಂದ ರಾಜ ದಶರಥನು ಮಹಾ ಋಷಿ ವಸಿಷ್ಠರ ಸಲಹೆಯ ಮೇರೆಗೆ ಪುತ್ರ ಪ್ರಾಪ್ತಿಗಾಗಿ ಅಶ್ವಮೇಧ ಯಾಗವನ್ನು ಮಾಡಿದನು.ಬಳಿಕ ಅವರು ಆಶೀರ್ವದಿಸಿದ ಪಾಯಸವನ್ನು ಅವನ ಹೆಂಡತಿಯರಿಗೆ ಕೊಡಲು ಹೇಳಿದರು. ಬಳಿಕ ಪ್ರಸಾದವನ್ನು ಸೇವಿಸಿದ ನಂತರ, ಪ್ರತಿಯೊಬ್ಬ ರಾಣಿಯೂ ಗರ್ಭಧರಿಸುತ್ತಾರೆ. ಕೌಸಲ್ಯೆಯು ರಾಮನಿಗೆ ಜನ್ಮವನ್ನು ನೀಡಿದರೆ, ಕೈಕೇಯಿಯು ಭರತನಿಗೆ ಜನ್ಮ ನೀಡುತ್ತಾಳೆ ಮತ್ತು ಸುಮಿತ್ರೆಯು ಲಕ್ಷ್ಮಣ ಹಾಗೂ ಶತ್ರುಘ್ನನಿಗೆ ಜನ್ಮವನ್ನು ನೀಡಿದಳು. ಅಂದಿನಿಂದ ಭಗವಾನ್ ಶ್ರೀ ರಾಮನ ಜನ್ಮ ದಿನವನ್ನು ವಿಶ್ವದಾದ್ಯಂತ ಹಿಂದೂ ಭಕ್ತರು ಬಹಳ ವೈಭವದಿಂದ ಆಚರಿಸುತ್ತಾರೆ.

ಇದನ್ನೂ ಓದಿ
Image
ಬೆಳಿಗ್ಗೆ ಎದ್ದ ತಕ್ಷಣ ತಪ್ಪಿಯೂ ಈ ಕೆಲಸ ಮಾಡಬೇಡಿ!
Image
ಕನಸಿನಲ್ಲಿ ಬಾವಲಿ ಕಂಡರೆ ಶುಭವೋ, ಅಶುಭವೋ? ಸ್ವಪ್ನ ಶಾಸ್ತ್ರ ಹೇಳುವುದೇನು?
Image
ಜಾತಕದಲ್ಲಿ ಮಂಗಳ ದೋಷ ಇದ್ದರೆ ತಿಳಿಯುವುದು ಹೇಗೆ? ಅದಕ್ಕೆ ಪರಿಹಾರಗಳೇನು?
Image
ಹನುಮ ಜಯಂತಿ ಯಾವಾಗ? ಸರಿಯಾದ ದಿನಾಂಕ ಮತ್ತು ಪೂಜಾ ವಿಧಾನ

ಇದನ್ನೂ ಓದಿ: ರಾಮ ನವಮಿಯಂದು ಈ ವಸ್ತುಗಳನ್ನು ಮನೆಗೆ ತರುವುದು ತುಂಬಾ ಒಳ್ಳೆಯದು!

ಶ್ರೀ ರಾಮ ನವಮಿಯ ಮಹತ್ವ:

ಶ್ರೀ ರಾಮ ನವಮಿ ಹಬ್ಬವು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಧರ್ಮವನ್ನು ಸ್ಥಾಪಿಸಲು ಮತ್ತು ಅಧರ್ಮವನ್ನು ನಾಶಮಾಡಲು ಮಾನವನಾಗಿ ಶ್ರೀ ಮಹಾವಿಷ್ಣು ಅವತಾರಗೊಂಡ ಆರನೇ ಅವತಾರವು ಶ್ರೀ ರಾಮನು. ಈ ದಿನ ಭಕ್ತರು ರಾಮಾಯಣ, ರಾಮಚರಿತಮಾನಸ್ ಅನ್ನು ಪಠಿಸುತ್ತಾರೆ. ಭಗವಾನ್ ರಾಮನನ್ನು ಆದರ್ಶ ಮಾನವ, ನೀತಿ, ಶೌರ್ಯ ಮತ್ತು ಧೈರ್ಯದ ಸಂಕೇತವೆಂದು ನಂಬಲಾಗಿದೆ. ವಿಶ್ವದಾದ್ಯಂತ ಎಲ್ಲಾ ಶ್ರೀ ರಾಮ ಭಕ್ತರು ಈ ಹಬ್ಬವನ್ನು ಬಹಳ ವೈಭವದಿಂದ ಆಚರಿಸುತ್ತಾರೆ. ಮುಖ್ಯವಾಗಿ ರಾಮ ಲಲ್ಲಾ ಜನಿಸಿದ ಅಯೋಧ್ಯೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹೆಚ್ಚಿನ ಸಂಖ್ಯೆಯ ಭಕ್ತರು ಆ ಸ್ಥಳಕ್ಕೆ ಭೇಟಿ ನೀಡುತ್ತಾರೆ ಮತ್ತು ಶ್ರೀ ರಾಮನ ದರ್ಶನ ಪಡೆಯುತ್ತಾರೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್