AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ratha Saptami 2024: ರಥಸಪ್ತಮಿಯ ದಿನ ಉಪವಾಸ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳಿವೆ?

ಹಿಂದೂ ಕ್ಯಾಲೆಂಡರ್ ಪ್ರಕಾರ, ಮಾಘ ಮಾಸದ ಸಪ್ತಮಿ ದಿನದಂದು ಆಚರಿಸಲಾಗುವ ರಥ ಸಪ್ತಮಿಯ ಉಪವಾಸವನ್ನು ಭಕ್ತರು ಶ್ರದ್ದೆಯಿಂದ ಆಚರಿಸುತ್ತಾರೆ. ಈ ದಿನ ಸೂರ್ಯ ದೇವನನ್ನು ಪೂಜಿಸಲಾಗುತ್ತದೆ. ಅಲ್ಲದೆ ಸೂರ್ಯ ದೇವರನ್ನು ಸರಿಯಾದ ಆಚರಣೆಗಳ ಮೂಲಕ ಪೂಜಿಸುವುದರಿಂದ, ನಿಮ್ಮ ಎಲ್ಲಾ ಆಸೆಗಳು ಈಡೇರುತ್ತವೆ ಎಂದು ನಂಬಲಾಗಿದೆ.

Ratha Saptami 2024: ರಥಸಪ್ತಮಿಯ ದಿನ ಉಪವಾಸ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳಿವೆ?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 16, 2024 | 11:21 AM

Share

ಪಂಚಾಂಗದ ಪ್ರಕಾರ, ರಥಸಪ್ತಮಿಯ (Ratha Saptami) ಉಪವಾಸವನ್ನು ಫೆ. 16 ರಂದು (ಶುಕ್ರವಾರ) ಆಚರಿಸಲಾಗುತ್ತದೆ. ಸೂರ್ಯ ಜಯಂತಿ ಎಂದೂ ಕರೆಯಲ್ಪಡುವ ರಥ ಸಪ್ತಮಿ ಹಿಂದೂಗಳ ಪ್ರಮುಖ ಹಬ್ಬವಾಗಿದೆ. ಈ ಉಪವಾಸವು ಮಾಘ ಮಾಸದ ಏಳನೇ ದಿನದಂದು ಬರುತ್ತದೆ. ರಥ ಸಪ್ತಮಿಯನ್ನು ಸೂರ್ಯ ದೇವರ ಜನನದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ರಥ ಸಪ್ತಮಿಯ ದಿನ ಪೂಜೆ ಮಾಡುವ ಮೂಲಕ ಸೂರ್ಯ ದೇವನ ಆಶೀರ್ವಾದ ಪಡೆಯಲಾಗುತ್ತದೆ. ಅಲ್ಲದೆ ರಥಸಪ್ತಮಿಯು ವಸಂತ ಋತುವಿನ ಬದಲಾವಣೆ ಮತ್ತು ಸುಗ್ಗಿಯ ಋತುವಿನ ಆರಂಭವನ್ನು ಸಹ ಸೂಚಿಸುತ್ತದೆ.

ಭಾರತದ ರೈತರಿಗೆ, ಈ ಹಬ್ಬವು ಹೊಸ ವರ್ಷದ ಶುಭ ಆರಂಭವಾಗಿದೆ. ಪೌರಾಣಿಕ ಕಥೆಯ ಪ್ರಕಾರ, ಮಾಘ ಮಾಸದ ಶುಕ್ಲಪಕ್ಷದ ಏಳನೇ ದಿನದಂದು, ಸೂರ್ಯ ದೇವರು ತನ್ನ ರಥದ ಮೇಲೆ ಸವಾರಿ ಮಾಡುವ ಮೂಲಕ ಇಡೀ ಜಗತ್ತನ್ನು ಬೆಳಗಿಸಲು ಪ್ರಾರಂಭಿಸಿದನು. ಆದ್ದರಿಂದ ಈ ಹಬ್ಬವನ್ನು ರಥ ಸಪ್ತಮಿ ಅಥವಾ ಸೂರ್ಯ ಜಯಂತಿ ಎಂದು ಆಚರಿಸಲಾಗುತ್ತದೆ. ರಥ ಸಪ್ತಮಿಯ ಪೂಜಾ ವಿಧಾನವನ್ನು ಸರಿಯಾಗಿ ತಿಳಿದುಕೊಳ್ಳುವ ಮೂಲಕ ವ್ರತವನ್ನು ಆಚರಿಸಿ. ಹಾಗಾದರೆ ಪೂಜಾ ನಿಯಮಗಳೇನು? ಇಲ್ಲಿದೆ ಮಾಹಿತಿ.

ರಥಸಪ್ತಮಿಯಂದು ಈ ರೀತಿ ಪೂಜೆ ಮಾಡಿ;

-ಧಾರ್ಮಿಕ ನಂಬಿಕೆಗಳ ಪ್ರಕಾರ, ರಥ ಸಪ್ತಮಿಯ ದಿನವನ್ನು ಸೂರ್ಯ ದೇವರ ವಿಶೇಷ ಪೂಜೆಯ ದಿನವೆಂದು ಪರಿಗಣಿಸಲಾಗುತ್ತದೆ.

-ಗಂಗಾ ನದಿಯಲ್ಲಿ ಅಥವಾ ಪವಿತ್ರ ನದಿಗಳಲ್ಲಿ ಸ್ನಾನ ಮಾಡಿದ ನಂತರ, ಈ ದಿನ ಸೂರ್ಯ ದೇವರಿಗೆ ನೀರನ್ನು ಅರ್ಪಿಸುವುದರಿಂದ ಎಲ್ಲಾ ದುಃಖಗಳು ನಿವಾರಣೆಯಾಗುತ್ತವೆ ಎಂದು ನಂಬಲಾಗಿದೆ.

-ಈ ದಿನ, ಭಕ್ತರು ಬೆಳಿಗ್ಗೆ ಸ್ನಾನ ಮಾಡಿದ ನಂತರ ಸೂರ್ಯ ದೇವರಿಗೆ ನಮಸ್ಕರಿಸಬೇಕು. ಅದರ ನಂತರ, ತುಪ್ಪದ ದೀಪವನ್ನು ಬೆಳಗಿಸಬೇಕು ಮತ್ತು ಕೆಂಪು ಅಥವಾ ಹಳದಿ ಹೂವುಗಳನ್ನು ದೇವರಿಗೆ ಅರ್ಪಿಸಬೇಕು.

-ಈ ದಿನ ಸೂರ್ಯ ನಾರಾಯಣನನ್ನು ಪೂಜಿಸುವ ಮೂಲಕ, ವ್ಯಕ್ತಿಯು ಶಕ್ತಿ, ಬುದ್ಧಿವಂತಿಕೆ ಮತ್ತು ಸಂಪತ್ತನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಬದರೀನಾಥನಿಗೆ ತುಪ್ಪ ಲೇಪಿತ ಕಂಬಳಿ ಯಾಕೆ? ಧಾಮದ ಬಾಗಿಲು ತೆರೆಯುವ ದಿನಾಂಕ, ಸಮಯ ಇಲ್ಲಿದೆ

-ಅಲ್ಲದೆ ಈ ದಿನ ವ್ರತಾಚರಣೆ ಮಾಡುವವರು ಉಪ್ಪು ಬಳಸಿದ ಆಹಾರಗಳನ್ನು ಸೇವನೆ ಮಾಡದೆಯೇ ಹಣ್ಣುಗಳನ್ನು ಮಾತ್ರ ತಿನ್ನುತ್ತಾರೋ, ಅವರು ಇಡೀ ವರ್ಷ ಸೂರ್ಯ ದೇವರನ್ನು ಪೂಜಿಸಿದಷ್ಟು ಪುಣ್ಯಗಳನ್ನು ಪಡೆಯುತ್ತಾರೆ. ಅಲ್ಲದೆ, ಜಾತಕದಲ್ಲಿ ಸೂರ್ಯನ ಸ್ಥಾನವು ಬಲವಾಗಿರುತ್ತದೆ, ಮತ್ತು ಜೀವನದಲ್ಲಿ ಶುಭ ಫಲಿತಾಂಶಗಳನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.

-ರಥ ಸಪ್ತಮಿಯ ದಿನ ಉಪವಾಸ ಮಾಡುವುದರಿಂದ ಬದುಕಿನಲ್ಲಿ ಅದೃಷ್ಟ ಒಲಿದು ಬರುತ್ತದೆ. ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಕಾಣಬಹುದಾಗಿದೆ.

-ಈ ದಿನ, ಸಂಪೂರ್ಣ ಬ್ರಹ್ಮಚರ್ಯವನ್ನು ಅನುಸರಿಸುವುದರ ಜೊತೆಗೆ, ಸಾತ್ವಿಕ ಆಹಾರವನ್ನು ಮಾತ್ರ ಸೇವಿಸುವುದರಿಂದ ಪುಣ್ಯ ಫಲವೂ ಪ್ರಾಪ್ತಿಯಾಗುತ್ತದೆ.

-ಈ ಉಪವಾಸವನ್ನು ಕಟ್ಟು ನಿಟ್ಟಾಗಿ ಆಚರಿಸುವ ಮೂಲಕ ಜಾತಕದಲ್ಲಿ ಶುಭ ಫಲಿತಾಂಶಗಳನ್ನು ಪಡೆಯಬಹುದು. ಆದರೆ ಈ ದಿನ ಮಾಂಸ ಮತ್ತು ಮದ್ಯವನ್ನು ಸೇವಿಸಬಾರದು.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್