AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sankashti Chaturthi: ಸಂಕಷ್ಟ ಚತುರ್ಥಿ ಯಾವಾಗ? ಈ ದಿನದ ಆಚರಣೆ ಹೇಗಿರಬೇಕು?

 ಹಿಂದೂ ಕ್ಯಾಲೆಂಡರ್‌ನ ಪ್ರಕಾರ ಪ್ರತಿ ತಿಂಗಳ ಕೃಷ್ಣ ಪಕ್ಷದ ನಾಲ್ಕನೇ ದಿನವನ್ನು ಸಂಕಷ್ಟ ಚತುರ್ಥಿಯನ್ನಾಗಿ ಆಚರಿಸಲಾಗುತ್ತದೆ. ಇದನ್ನು ಸಂಕಟಹರ ಚತುರ್ಥಿ, ಸಂಕಷ್ಟಹರ ಚತುರ್ಥಿ ಎಂದೂ ಕರೆಯಲಾಗುತ್ತದೆ. ಇನ್ನು ಈ ಸಂಕಷ್ಟ ಚತುರ್ಥಿ ಮಂಗಳವಾರ ಬಂದರೆ ಅದನ್ನು ಅತಿ ಶ್ರೇಷ್ಠ ಮತ್ತು ಅಂಗಾರಕ ಸಂಕಷ್ಟ ಚತುರ್ಥಿ ಎಂದು ಕರೆಯಲಾಗುತ್ತದೆ. ಗಣೇಶನ ದೇವಳದಲ್ಲಿ ಈ ದಿನ ಗಣಹೋಮ ಮಾಡುವುದರಿಂದ ಇಷ್ಟಾರ್ಥ ಸಿದ್ಧಿಸುತ್ತದೆ ಎಂಬ ನಂಬಿಕೆ ಇದೆ.

Sankashti Chaturthi: ಸಂಕಷ್ಟ ಚತುರ್ಥಿ ಯಾವಾಗ? ಈ ದಿನದ ಆಚರಣೆ ಹೇಗಿರಬೇಕು?
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 23, 2024 | 4:00 PM

Share

ಸಂಕಷ್ಟ ಚತುರ್ಥಿಯನ್ನು ಶುಭ ದಿನವೆಂದು ಪರಿಗಣಿಸಲಾಗುತ್ತದೆ ಏಕೆಂದರೆ ಇದು ಗಣೇಶನಿಗೆ ಸಮರ್ಪಿತವಾಗಿದ್ದು ಆತ ಪ್ರಥಮ ಪೂಜಿತ ಅದಕ್ಕೂ ಮಿಗಿಲಾಗಿ ಸಂಕಟ ಹರಣ ಮಾಡುವ ದೇವ. ಚತುರ್ಥಿ ದಿನದಂದು ವ್ರತಾಚರಣೆ ಮಾಡುವ ಭಕ್ತರನ್ನು ಎಲ್ಲಾ ರೀತಿಯಿಂದಲೂ ಗಣಪ ಕಾಪಾಡಿಕೊಳ್ಳುತ್ತಾನೆ ಹಾಗಾಗಿ ಜನರು ಗಣಪತಿಯ ಆಶೀರ್ವಾದ ಪಡೆಯಲು ಈ ಶುಭ ದಿನದಂದು ವ್ರತಾಚರಣೆ ಮಾಡಿ ಪೂಜೆ ಮಾಡುತ್ತಾರೆ. ಈ ದಿನ ಗಣೇಶನ ಆರಾಧನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿಯಾಗುತ್ತದೆ. ಹಿಂದೂ ಕ್ಯಾಲೆಂಡರ್‌ನ ಪ್ರಕಾರ ಪ್ರತಿ ತಿಂಗಳ ಕೃಷ್ಣ ಪಕ್ಷದ ನಾಲ್ಕನೇ ದಿನವನ್ನು ಸಂಕಷ್ಟ ಚತುರ್ಥಿಯನ್ನಾಗಿ ಆಚರಿಸಲಾಗುತ್ತದೆ. ಇದನ್ನು ಸಂಕಟಹರ ಚತುರ್ಥಿ, ಸಂಕಷ್ಟಹರ ಚತುರ್ಥಿ ಎಂದೂ ಕರೆಯಲಾಗುತ್ತದೆ. ಇನ್ನು ಈ ಸಂಕಷ್ಟ ಚತುರ್ಥಿ ಮಂಗಳವಾರ ಬಂದರೆ ಅದನ್ನು ಅತಿ ಶ್ರೇಷ್ಠ ಮತ್ತು ಅಂಗಾರಕ ಸಂಕಷ್ಟ ಚತುರ್ಥಿ ಎಂದು ಕರೆಯಲಾಗುತ್ತದೆ. ಗಣೇಶನ ದೇವಳದಲ್ಲಿ ಈ ದಿನ ಗಣಹೋಮ ಮಾಡುವುದರಿಂದ ಇಷ್ಟಾರ್ಥ ಸಿದ್ಧಿಸುತ್ತದೆ ಎಂಬ ನಂಬಿಕೆ ಇದೆ.

ಸಂಕಷ್ಟ ಚತುರ್ಥಿಯ ದಿನಾಂಕ ಮತ್ತು ಸಮಯ;

ಈ ಬಾರಿಯ ಸಂಕಷ್ಟ ಚತುರ್ಥಿಯನ್ನು ಜ. 29ರಂದು ಆಚರಣೆ ಮಾಡಲಾಗುತ್ತದೆ. ಚತುರ್ಥಿ ತಿಥಿ ಜ. 29ರಂದು ಬೆಳಿಗ್ಗೆ 06:10ಕ್ಕೆ ಪ್ರಾರಂಭವಾಗುತ್ತದೆ. ಜ. 30ರಂದು ಬೆಳಿಗ್ಗೆ 08:54ಕ್ಕೆ ಚತುರ್ಥಿ ತಿಥಿ ಕೊನೆಗೊಳ್ಳುತ್ತದೆ. ಚಂದ್ರೋದಯ ಸಮಯ ಜ. 29ರ ರಾತ್ರಿ 08:39ಕ್ಕೆ.

ಇದನ್ನೂ ಓದಿ: ವಿಭುವನ ಸಂಕಷ್ಟ ಚತುರ್ಥಿ ಯಾವಾಗ? ಸಮಯ, ಆಚರಣೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಸಂಕಷ್ಟ ಚತುರ್ಥಿ ಪೂಜಾ ವಿಧಾನ ಹೇಗಿರಬೇಕು?

1. ಬೆಳಿಗ್ಗೆ ಬೇಗನೆ ಎದ್ದು ಸ್ನಾನ ಮಾಡಿ.

2. ಮನೆಯನ್ನು ಅದರಲ್ಲಿಯೂ ವಿಶೇಷವಾಗಿ ಪೂಜಾ ಕೋಣೆಯನ್ನು ಸ್ವಚ್ಛಗೊಳಿಸಿ.

3. ಗಣೇಶನ ವಿಗ್ರಹವನ್ನು ಇಟ್ಟು, ಅಲಂಕಾರ ಮಾಡಿ ತುಪ್ಪದ ದೀಪ ಹಚ್ಚಿ.

4. ಹಳದಿ ಬಣ್ಣದ ಹೂವು, ದುರ್ವೆ ಮತ್ತು ಬೂಂದಿ ಲಡ್ಡುಗಳನ್ನು ಅರ್ಪಿಸಿ.

5. ಸಂಕಷ್ಟಿ ಕಥೆಯನ್ನು ಪಠಿಸಿ, ದೇವರಿಗೆ ಆರತಿ ಮಾಡಿ.

6. ಆ ದಿನ ಸಂಜೆಯೂ ಗಣೇಶನಿಗೆ ಪೂಜೆ ಮಾಡಬೇಕು.

7. ಉಪವಾಸ ಮಾಡುವವರು ಸಂಜೆ ಪೂಜಾ ವಿಧಿಗಳನ್ನು ಪೂರ್ಣಗೊಳಿಸಿದ ನಂತರ ತಮ್ಮ ಉಪವಾಸವನ್ನು ಮುರಿಯಬೇಕು.

8. ಸಾತ್ವಿಕ ಆಹಾರವನ್ನು ಮಾತ್ರ ಸೇವಿಸಿ. ಈರುಳ್ಳಿ, ಬೆಳ್ಳುಳ್ಳಿ, ಮೊಟ್ಟೆ ಮತ್ತು ಮಾಂಸ ಆಹಾರ ಪದಾರ್ಥಗಳನ್ನು ತಿನ್ನಬೇಡಿ.

ಈ ದಿನ ಯಾವ ಮಂತ್ರವನ್ನು ಪಠಣ ಮಾಡಬೇಕು?

-ಓಂ ಗಣಪತಯೇ ನಮಃ

-ವಕ್ರ ತುಂಡಾ ಮಹಾಕಾಯ ಸೂರ್ಯಕೋಟಿ ಸಮಪ್ರಭಾ

ನಿರ್ವಿಘ್ನಂ ಕುರುಮೇ ದೇವ ಸರ್ವ ಕಾರ್ಯೇಶು ಸರ್ವದಾ

-ಓಂ ಶ್ರೀಂ ಗಂ ಸೌಭ್ಯಾಯ ಗಣಪತಯೇ ವರ ವರದ ಸರ್ವಜನಂ ಮೇ ವಶಮಾನಯ ಸ್ವಾಹಾ

-ಓಂ ಸುಮುಖಾಯ ನಮಃ

-ಓಂ ವಕ್ರತುಂಡಾಯ ಹುಂ

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ