AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Secret: ಈ ವಿಷಯಗಳನ್ನು ಯಾರ ಬಳಿಯೂ ಹಂಚಿಕೊಳ್ಳಬೇಡಿ!

ಮನೆ, ಜಾಗ, ಕಾರು ಮುಂತಾದಗಳ ಖರೀದಿಗೂ ಮೊದಲೇ ಎಲ್ಲರಿಗೂ ಹೇಳಿಕೊಂಡು ಬರುವ ಅಭ್ಯಾಸ ನಿಮಗಿದೆಯಾ? ಹಾಗಾದರೆ ಇಂದೇ ಆ ಅಭ್ಯಾಸವನ್ನು ಬಿಟ್ಟು ಬಿಡಿ. ಏಕಂದರೆ ನಿಮ್ಮ ಕೆಲವು ಖಾಸಗಿ ಸಂಗತಿಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವುದರಿಂದ ನೀವು ಅಂದುಕೊಂಡ ಕೆಲಸ ಕೆಡಬಹುದು. ಹಾಗಾದರೆ ಯಾವ ಯಾವ ವಿಷಯಗಳನ್ನು ಹಂಚಿಕೊಳ್ಳಬಾರದು? ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ.

Secret: ಈ ವಿಷಯಗಳನ್ನು ಯಾರ ಬಳಿಯೂ ಹಂಚಿಕೊಳ್ಳಬೇಡಿ!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 19, 2024 | 9:30 AM

Share

ಒಳ್ಳೆ ಕೆಲಸ ಮಾಡಬೇಕು ಎಂದು ಅಂದುಕೊಂಡಿದ್ದೀರಾ? ಹಾಗಾದರೆ ಯಾರಿಗೂ ಹೇಳಬೇಡಿ. ನೀವು ಈ ಮಾತನ್ನು ಮನೆಯಲ್ಲಿರುವ ದೊಡ್ಡವರು ಹೇಳಿದ್ದನ್ನು ಕೇಳಿರಬಹುದು. ಮನೆ, ಜಾಗ, ಕಾರು ಮುಂತಾದಗಳ ಖರೀದಿಗೂ ಮೊದಲೇ ಎಲ್ಲರಿಗೂ ಹೇಳಿಕೊಂಡು ಬರುವ ಅಭ್ಯಾಸ ನಿಮಗಿದೆಯಾ? ಹಾಗಾದರೆ ಇಂದೇ ಆ ಅಭ್ಯಾಸವನ್ನು ಬಿಟ್ಟು ಬಿಡಿ. ಏಕಂದರೆ ನಿಮ್ಮ ಕೆಲವು ಖಾಸಗಿ ಸಂಗತಿಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವುದರಿಂದ ನೀವು ಅಂದುಕೊಂಡ ಕೆಲಸ ಕೆಡಬಹುದು. ಹಾಗಾದರೆ ಯಾವ ಯಾವ ವಿಷಯಗಳನ್ನು ಹಂಚಿಕೊಳ್ಳಬಾರದು? ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ.

ನಿಮ್ಮ ಕನಸು ಮತ್ತು ಆಕಾಂಕ್ಷೆ

ಜೀವನದಲ್ಲಿ ನೀವು ಹಲವಾರು ರೀತಿಯಲ್ಲಿ ಕನಸು ಕಟ್ಟಿಕೊಂಡಿರುತ್ತೀರಿ ಅದು ಸಾಕಾರಗೊಳ್ಳುವಷ್ಟು ಶಕ್ತಿಯೂ ಇರುತ್ತದೆ. ಆದರೆ ಆ ಕನಸು ಮತ್ತು ಆಕಾಂಕ್ಷೆಗಳನ್ನು ನೀವು ತುಂಬಾ ನಂಬಿರುವವರು, ಆತ್ಮೀಯರ ಜೊತೆಗೂ ಕೂಡ ಹಂಚಿಕೊಳ್ಳಬೇಡಿ. ಏಕೆಂದರೆ ನಾವು ನಂಬಿ ಹೇಳಿರುವ ವಿಷಯಗಳು ಈಡೇರುವುದಕ್ಕಿಂತ, ವಿಫಲಗೊಳ್ಳುವುದೇ ಹೆಚ್ಚು. ಹಾಗಾಗಿ ನಿಮ್ಮ ಆಸೆಗಳನ್ನು ಯಾರೊಂದಿಗೂ ಹೇಳಬೇಡಿ.

ನಿಮ್ಮ ಸಂಸಾರದ ಸಮಸ್ಯೆಗಳು

ಸಂಸಾರದ ಗುಟ್ಟು ಮೂರು ಗೋಡೆಯೊಳಗೆ ಇರಬೇಕು ಎಂಬ ಮಾತಿದೆ. ನೀವು ನಿಮ್ಮ ಮನಸ್ಸನ್ನು ಹಗುರ ಮಾಡಿಕೊಳ್ಳಲು ಬೇರೆಯವರ ಜೊತೆಗೆ ನಿಮ್ಮ ಸಂಸಾರದ ವಿಷಯಗಳನ್ನು ಹೇಳಿಕೊಂಡಲ್ಲಿ ಮುಂದೆ ಅದೇ ನಿಮಗೆ ಮುಳುವಾಗಬಹುದು. ಏಕೆಂದರೆ ನಿಮ್ಮ ಸಮಸ್ಯೆಗೆ ಪರಿಹಾರ ನೀಡುವುದಕ್ಕಿಂತ, ಮನದೊಳಗೆ ಖುಷಿ ಪಡುವವರೇ ಹೆಚ್ಚಿರುತ್ತಾರೆ. ಹಾಗಾಗಿ ಸಾಧ್ಯವಾದಷ್ಟು ಆ ಸಮಸ್ಯೆಗಳನ್ನು ನೀವೇ ಬಗೆಹರಿಸಿಕೊಳ್ಳಿ.

ನಿಮ್ಮ ಸಂಬಳ ಹಾಗೂ ಹಣದ ವಿಷಯಗಳು

ಎಷ್ಟೇ ಆಪ್ತರಾಗಿರಲಿ, ನೀವು ಎಷ್ಟು ಸಂಪಾದನೆ ಮಾಡುತ್ತಿದ್ದೀರಿ ಅಥವಾ ನಿಮ್ಮ ಹಣದ ವಹಿವಾಟುಗಳಿಗೆ ಸಂಬಂಧ ಪಟ್ಟ ವಿಷಯಗಳನ್ನು ಯಾವುದೇ ಪರಿಸ್ಥಿತಿಯಲ್ಲಿಯೂ ಹೇಳಿಕೊಳ್ಳಬೇಡಿ. ನಿಮ್ಮ ಸಂಬಳ ಹೆಚ್ಚಿದ್ದರೆ ಕೇಳಿ ಅಸೂಯೆ ಪಡುತ್ತಾರೆ. ಕಡಿಮೆ ಇದ್ದರೆ ವ್ಯಂಗ್ಯ ಮಾಡಿ ನಗುತ್ತಾರೆ ಹಾಗಾಗಿ ಹಣದ ವಿಷಯಗಳನ್ನು ಯಾರ ಜೊತೆಯಲ್ಲಿಯೂ ಹಂಚಿಕೊಳ್ಳಬೇಡಿ. ಅದೂ ಅಲ್ಲದೆ ಹಣದ ವಿಷಯಗಳು ಸಂಬಂಧವನ್ನು ಒಡೆಯುತ್ತದೆ ಅದರಿಂದಾಗಿ ಈ ಬಗ್ಗೆ ಜಾಗರೂಕರಾಗಿರಿ.

ಇದನ್ನೂ ಓದಿ: ನಿಮ್ಮ ರಾಶಿಗೆ ಅನುಗುಣವಾಗಿ ಈ ಪ್ರಾಣಿಗಳನ್ನು ಸಾಕಿದರೆ ಅದೃಷ್ಟವೇ ಬದಲಾಗುತ್ತೆ!

ನಿಮ್ಮ ಕುಟುಂಬದ ವಿಷಯಗಳು

ನಿಮ್ಮ ಮನೆಯ ಕೌಟುಂಬಿಕ ವಿಷಯಗಳನ್ನು ಎಲ್ಲಿಯೂ ಹಂಚಿಕೊಳ್ಳಬೇಡಿ. ಇದು ಇನ್ನೊಬ್ಬರ ಮಾತಿಗೆ ವಿಷಯವಾಗುತ್ತದೆ. ಅದರ ಹೊರತಾಗಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ ಹಾಗಾಗಿ ಮನೆಯ ವಿಷಯಗಳನ್ನು ಮನೆಯವರೊಂದಿಗೆ ಕುಳಿತು ಬಗೆಹರಿಸಿಕೊಳ್ಳಿ.

ಪ್ರಗತಿಯಲ್ಲಿರುವ ಕೆಲಸಗಳು

ಈ ವರ್ಷ ಕಾರು, ಜಾಗ ಅಥವಾ ನಿವೇಶನ ಖರೀದಿಸಬೇಕು ಎಂದು ಬಯಸಿದ್ದಲ್ಲಿ ಅಥವಾ ಅದಕ್ಕೆ ಪೂರ್ವ ತಯಾರಿ ಮಾಡಿಕೊಳ್ಳುತ್ತಿರುವಾಗ ಯಾವುದೇ ಕಾರಣಕ್ಕೂ ಅದನ್ನು ಮೊತ್ತೊಬ್ಬರ ಬಳಿ ಹಂಚಿಕೊಳ್ಳಬೇಡಿ. ಏಕಂದರೆ ಅಸೂಯೆ ಯಾವ ಕೆಲಸವನ್ನಾದರೂ ಕೆಡಿಸಬಹುದು ಹಾಗಾಗಿ ಅಂದುಕೊಂಡ ಪೂರ್ವ ನಿಯೋಜಿತ ಕೆಲಸಗಳು ಮುಗಿಯುವವರೆಗೆ ಯಾರಿಗೂ ಹೇಳಬೇಡಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ