Shivaratri Special: ಶಿವರಾತ್ರಿಯಂದು ಹೆಣ್ಣುಮಕ್ಕಳು ಮಹಾದೇವನ ಪೂಜೆ ಮಾಡಬೇಕು, ಯಾಕೆ ಗೊತ್ತಾ?

Shivaratri Special: ಶಿವನನ್ನು ಪೂಜಿಸುವುದರಿಂದ ಕರುಣಾಮಯಿಯಾದ ಶಿವನು ಸರ್ವರನ್ನು ಅನುಗ್ರಹಿಸುತ್ತಾನೆ ಎಂಬ ಪ್ರತೀತಿ ಇದೆ.. ಬೇಡರ ಕಣ್ಣಪ್ಪನು ಶಿವನನ್ನು ಪೂಜಿಸಿದ್ದರಿಂದ ಅವನನ್ನು ಅನುಗ್ರಹಿಸಿ ಮುಕ್ತಿ ಮಾರ್ಗ ತೋರಿಸಿದನು.. ' ಸ್ಕಂದ ಪುರಾಣ 'ದ ಪ್ರಕಾರ ಬೇಡ ಚಂದನನಿಗೂ ಶಿವನು ಅನುಗ್ರ ನೀಡಿದ್ದಾನೆ

Shivaratri Special: ಶಿವರಾತ್ರಿಯಂದು ಹೆಣ್ಣುಮಕ್ಕಳು ಮಹಾದೇವನ ಪೂಜೆ ಮಾಡಬೇಕು, ಯಾಕೆ ಗೊತ್ತಾ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 01, 2022 | 7:40 AM

ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಬರುತ್ತದೆ. ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ, 4 ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ.ಇದರ ಮುಂದಿನ ದಿನ ವಿವಿಧ ರೀತಿಯ ಸಿಹಿ ತಿನಿಸುಗಳನ್ನು ತಯಾರಿಸುವರು. ತಂಬಿಟ್ಟು ಈ ಹಬ್ಬದ ಪ್ರಮುಖ ತಿನಿಸು. ಶಿವರಾತ್ರಿ, ಈ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿ ಯಂದು ಬರುವ ಶಿವರಾತ್ರಿಯ ದಿನ ಭಕ್ತಾದಿಗಳು ಶಂಭೋ ಶಂಕರನನ್ನು ನೆನೆದು, ಪುನೀತರಾಗುತ್ತಾರೆ. ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ.

ಶಿವಪುರಾಣದಲ್ಲಿ ಶಿವಾರಾತ್ರಿಯ ಆಚರಣೆ ಬಂದಿರುವ ಬಗ್ಗೆ ಒಂದು ಸಣ್ಣ ಕಥೆ ಇದೆ…. ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾರೆ. ವಿಷ್ಣು ಹಾಗೂ ಬ್ರಹ್ಮರ ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ, ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ಸೂಚಿಸುತ್ತಾನೆ.

ಶಿವರಾತ್ರಿಗೆ ಪೌರಣಿಕ ಹಿನ್ನಲೆ 

ಆಗ ಹಂಸದ ರೂಪ ತಾಳಿದ ಬ್ರಹ್ಮ ಅಗ್ನಿ ಕಂಭದ ಶಿರವನ್ನು ಹುಡುಕಲು ಮೇಲ್ಮುಖವಾಗಿ ಹೊರಡುತ್ತಾನೆ. ವಿಷ್ಣು ವರಾಹವತಾರ ತಾಳಿ ಕಂಭದ ತಳವನ್ನು ನೋಡುವುದಕ್ಕಾಗಿ ಪಾತಾಳಕ್ಕೆ ಇಳಿಯುತ್ತಾನೆ. ಎಷ್ಟೇ ಮುಂದೆ ಸಾಗಿದರೂ ಬ್ರಹ್ಮ ಹಾಗೂ ವಿಷ್ಣು ಇವರಿಬ್ಬರಿಗೂ ಕಂಭದ ಅಂತ್ಯವೇ ಕಾಣುವುದಿಲ್ಲ. ಅನಂತವಾಗಿರುವ ಶಿವನ ಶಕ್ತಿಯನ್ನು ನೋಡಿದ ವಿಷ್ಣು ಹಾಗೂ ಬ್ರಹ್ಮರಿಗೆ ಸತ್ಯದ ಅರಿವಾಗುತ್ತದೆ. ಆದರೆ ಶಿವನ ಜಡೆಯಿಂದ ಕೆಳಗೆ ಬೀಳುತ್ತಿದ್ದ ಕೇತಕಿ ಪುಷ್ಫದ ಬಳಿ ಬ್ರಹ್ಮ , ನೀನು ಎಲ್ಲಿಂದ ಬೀಳುತ್ತಿದ್ದೀಯ ಎಂದು ಪ್ರಶ್ನಿಸುತ್ತಾನೆ. ಆಗ ಆ ಪುಷ್ಪವು ನಾನು ಅಗ್ನಿ ಕಂಭದ ಶಿರದಿಂದ ಬೀಳುತ್ತಿದ್ದೇನೆ ಎಂಬ ಉತ್ತರ ನೀಡುತ್ತದೆ. ಆಗ ಬ್ರಹ್ಮ ಶಿವನಲ್ಲಿಗೆ ಬಂದು ಕೇತಕಿ ಪುಪ್ಪವನ್ನು ತೋರಿಸಿ, ತಾನು ಅಗ್ನಿ ಕಂಭದ ಶಿರಭಾಗವನ್ನು ನೋಡಿರುವುದಾಗಿಯೂ ಅಲ್ಲಿಂದಲೇ ಕೇತಕಿ ಪುಷ್ಪವನ್ನು ತಂದಿರುವುದಾಗಿಯೂ ಹೇಳುತ್ತಾನೆ. ಇವರಿಬ್ಬರ ಮೋಸವನ್ನು ಅರಿತ ಶಿವ, ಬ್ರಹ್ಮನನ್ನು ಯಾರೂ ಪೂಜಿಸಕೂಡದು ಎಂದು ಶಾಪ ನೀಡಿ ಲಿಂಗರೂಪ ತಾಳುತ್ತಾನೆ. ಅಂದು ಮಾಘ ಮಾಸದ ಬಹುಳ ಚತುರ್ದಶಿಯಾಗಿರುತ್ತದೆ. ಹೀಗಾಗಿ, ಶಿವ ಲಿಂಗರೂಪ ತಾಳಿದ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ.

ಶಿವನಿಗೆ ಅತೀ ಶ್ರೇಷ್ಠವಾಗಿರುವ ಬಿಲ್ವ ಪತ್ರೆಯನ್ನು ಅರ್ಪಿಸಿ, ತಿಲಗಿ ಪುಷ್ಪ, ತುಳಸಿಯಿಂದ ಶಿವಲಿಂಗವನ್ನು ಅಲಂಕಾರ ಮಾಡಿ ಶಿವನ್ನು ಭಜಿಸಿದರೆ, ಪಾಪಗಳು ಪರಿಹಾರವಾಗುತ್ತವೆ, ಮೋಡಗಳೇ ಇಲ್ಲದ ಶುಭ್ರ ಆಕಾಶದಲ್ಲಿ ಬಂದಿರುವ ಚಂದ್ರನ ಬೆಳಕಿನಲ್ಲಿ ಶಿವನಿಗೆ ಅಭಿಷೇಕ ಮಾಡಿ ಆರಾಧಿಸಿದರೆ ಅತ್ಯಂತ್ರ ಶ್ರೇಷ್ಠ ಎಂಬ ನಂಬಿಕೆಗಳಿವೆ. ಶಿವರಾತ್ರಿಯ ದಿನವಿಡೀ ಉಪವಾಸ ಮಾಡಿ, ಜಾಗರಣೆ ಮಾಡಿ ಶಿವನನ್ನು ಆರಾಧಿಸಿದರೆ ಸಕಲ ಪಾಪಗಳೂ ಕಳೆಯುತ್ತವೆ ಎಂದು ನಂಬಲಾಗಿದೆ.

ಎಲ್ಲಾ ಜೀವರಾಶಿಗಳನ್ನು ಪೊರೆಯುವ ಶಿವ ಎಲ್ಲಾ ಆಡಂಬರಗಳಿಂದ ಮುಕ್ತ. ಆತ ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ. ಭಸ್ಮವನ್ನು ಬಳಿದುಕೊಂಡು, ಹುಲಿಯ ಚರ್ಮವನ್ನು ಉಟ್ಟು, ಸ್ಮಶಾನದಲ್ಲಿರುವ ಸರಳ ಮತ್ತು ಅಮೋಘ ಶಕ್ತಿ.

ಶಿವನು ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಕಲ್ಮಶ ಮನಸ್ಸುಗಳ ಪ್ರತೀಕ. ಛಲಬಿಡದ ಸಾಧನೆಯ ದ್ಯೋತಕ. ಧ್ಯಾನಪ್ರಿಯ ಶಿವ ಭಕ್ತರಿಂದ ಬಯಸುವುದು ನಿಶ್ಕಲ್ಮಶ ಮತ್ತು ಪ್ರಾಮಾಣಿಕ ಭಕ್ತಿ ಮಾತ್ರ. ತೋರಿಕೆಯ ಮತ್ತು ಆಡಂಬರದ ಪೂಜೆಯನ್ನು ಬಯಸದ ಮಹಾದೇವನನ್ನು ಇಂದ್ರಿಯ ನಿಗ್ರಹ, ಧ್ಯಾನ, ಸಂಯಮ ಮತ್ತು ವಿಶ್ವಾಸ ಭರಿತರಾಗಿ ಶಿವರಾತ್ರಿ ಯಂದು ಧ್ಯಾನಿಸಿದರೆ ಆತ ಪ್ರಸನ್ನಗೊಳ್ಳುತ್ತಾನೆ.

ಶಿವರಾತ್ರಿ ಆಚರಣೆಯ ಕುರಿತಾಗಿ ಪ್ರಚಲಿತದಲ್ಲಿರುವ ಕಥೆಯಿದು. ಹಿಂದೆ ಬೇಡನೊಬ್ಬ ಕಾಡಿನಲ್ಲಿ ಬೇಟೆಗಾಗಿ ತೆರಳಿದ್ದ. ದಿನವಿಡಿ ಅಲೆದರೂ ಆತನಿಗೆ ಯಾವುದೇ ಬೇಟೆ ಸಿಗಲಿಲ್ಲ. ಬೇಟೆ ಅರಸಿ ಹೊರಟ ಬೇಡ ದಾರಿ ತಪ್ಪಿ ಅರಣ್ಯದಲ್ಲೇ ಅಲೆಯತೊಡಗಿದ. ಅದಾಗಲೇ ಸಂಜೆಯಾಗಿತ್ತು. ಕ್ರೂರ ಪ್ರಾಣಿಗಳು ಆತನನ್ನು ಸುತ್ತುವರಿಯತೊಡಗಿದವು. ಭಯಗ್ರಸ್ತನಾದ ಬೇಡ ಮರವೇರಿದ. ಮನದಲ್ಲೇ ಶಿವನನ್ನು ಧ್ಯಾನಿಸುತ್ತಾ ಮರದ ಎಲೆಗಳನ್ನು ಕಿತ್ತು ಕೆಳಗಡೆ ಹಾಕತೊಡಗಿದ. ಆ ಎಲೆಗಳು ಅವನಿಗರಿವಿಲ್ಲದಂತೆಯೇ ಕೆಳಗಡೆಯಿದ್ದ ಶಿವಲಿಂಗದ ಮೇಲೆ ಬೀಳತೊಡಗಿದವು. ಕಾಕತಾಳೀಯವೆಂದರೆ ಆತ ಏರಿದ್ದ ಮರ ಬಿಲ್ವಮರವಾಗಿತ್ತು. ಶಿವರಾತ್ರಿಯಂದು ಪೂರ್ತಿ ಜಾಗರಣೆಯಿದ್ದು, ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸಿದ ಬೇಡನಿಗೆ ಶಿವ ಅಭಯ ನೀಡಿದ. ಶಿವನೇ ಆತನನ್ನು ರಕ್ಷಿಸಿದ ಎಂಬ ಸುದ್ದಿ ಹರಡಿ ಭಕ್ತರು ಶಿವರಾತ್ರಿಯಂದು ಶಿವನನ್ನು ಪೂಜಿಸಲು ಆರಂಭಿಸಿದರು. ಪುಣ್ಯದ ಲವಾಗಿ ಬೇಡ ಮುಂದಿನ ಜನ್ಮದಲ್ಲಿ ರಾಜಾ ಚಿತ್ರಭಾನುವಾಗಿ ಜನಿಸಿದ ಎಂಬುದು ಕಥೆ. ಮಹಾಭಾರತದಲ್ಲಿ ಬರುವ ಈ ಕಥೆಯನ್ನು ಮರಣಶಯ್ಯೆಯಲ್ಲಿ ಮಲಗಿದ್ದ ಭೀಷ್ಮ ಹೇಳಿದನೆಂಬುದು ಪ್ರತೀತಿ.

ಶಿವನನ್ನು ಪೂಜಿಸುವುದರಿಂದ ಕರುಣಾಮಯಿಯಾದ ಶಿವನು ಸರ್ವರನ್ನು ಅನುಗ್ರಹಿಸುತ್ತಾನೆ ಎಂಬ ಪ್ರತೀತಿ ಇದೆ.. ಬೇಡರ ಕಣ್ಣಪ್ಪನು ಶಿವನನ್ನು ಪೂಜಿಸಿದ್ದರಿಂದ ಅವನನ್ನು ಅನುಗ್ರಹಿಸಿ ಮುಕ್ತಿ ಮಾರ್ಗ ತೋರಿಸಿದನು.. ‘ ಸ್ಕಂದ ಪುರಾಣ ‘ದ ಪ್ರಕಾರ ಬೇಡ ಚಂದನನಿಗೂ ಶಿವನು ಅನುಗ್ರ ನೀಡಿದ್ದಾನೆ… ‘ ಗರುಡ ಮತ್ತು ಅಗ್ನಿ ಪುರಾಣ ‘ ಗಳಲ್ಲಿ ಉಲ್ಲೇಖವಿರುವಂತೆ, ಬೇಡ ಸುಂದರ ಸೇನನಿಗೂ ಶಿವನು ಆಶೀರ್ವಾದಿಸಿದ್ದಾನೆ.. ಹೀಗಾಗಿ ಮಹಾ ಶಿವರಾತ್ರಿಯಂದು ಉಪವಾಸ ಮಾಡಿ ಶಿವನಿಗೆ ಅಭಿಷೇಕ ಮಾಡಿ, ಬಿಲ್ವ ಪತ್ರೆಗಳನ್ನು ಅರ್ಪಿಸುವುದರಿಂದ ಎಲ್ಲರಿಗೂ ಸದ್ಗತಿ ಪ್ರಾಪ್ತವಾಯಿತು. ಮದುವೆಯಾಗದ ಹೆಣ್ಣುಮಕ್ಕಳು ಶಿವಗುಣರೂಪಿಯಾದ ಅನುರೂಪ ಪತಿಗಾಗಿ ಪ್ರಾರ್ಥಿಸಿದರೆ, ಮುತ್ತೈದೆಯರು ಪತಿಯ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸುವುದು ಸಂಪ್ರದಾಯ. ಶಿವರಾತ್ರಿಯಂದು ಶಿವನನ್ನು ಪೂಜಿಸಿದರೆ, ಸುಖ, ಶಾಂತಿ, ಸಮೃದ್ಧಿ ದೊರೆಯುವುದೆಂಬ ನಂಬಿಕೆ ಆಸ್ತಿಕರದು.

ವೈಷ್ಣವಿ ಪುರಾಣಿಕ್ ಉಡುಪಿ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?