Shivratri 2022: ಈ ದಿನ ಶಿವನು, ಪಾರ್ವತಿಯ ಜೊತೆಯಲ್ಲಿ ಭೂಮಿಗೆ ಆಗಮಿಸುತ್ತಾನೆ; ಶಿವರಾತ್ರಿ ವಿಶೇಷತೆ ಏನು?

ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ.

Shivratri 2022: ಈ ದಿನ ಶಿವನು, ಪಾರ್ವತಿಯ ಜೊತೆಯಲ್ಲಿ ಭೂಮಿಗೆ ಆಗಮಿಸುತ್ತಾನೆ; ಶಿವರಾತ್ರಿ ವಿಶೇಷತೆ ಏನು?
ಶಿವ-ಪಾರ್ವತಿ
Follow us
TV9 Web
| Updated By: ಆಯೇಷಾ ಬಾನು

Updated on: Mar 01, 2022 | 6:30 AM

ಸಾಮಾನ್ಯವಾಗಿ ಎಲ್ಲ ಹಬ್ಬಗಳಲ್ಲಿಯೂ ದೇವರಿಗೆ ಹಗಲು ಪೂಜೆ ನಡೆಯುತ್ತದೆ. ಆದರೆ ಶಿವರಾತ್ರಿ ಮಾತ್ರ ರಾತ್ರಿಯ ಹೊತ್ತು ಪೂಜೆ, ಭಜನೆ ನಡೆಸುವ ವಿಶೇಷ ಆಚರಣೆ. ರಾತ್ರಿ ಎಂದರೆ ಕತ್ತಲು, ಕತ್ತಲು ಎಂದರೆ ಅಜ್ಞಾನ. ಅಜ್ಞಾನವನ್ನು ಕಳೆದು ಸುಜ್ಞಾನ ಬೆಳಗಿಸು ಎಂದು ಆ ಶಿವನನ್ನು ಬೇಡುವ ಶುಭ ದಿನವೇ ಶಿವರಾತ್ರಿ. ಅಜ್ಞಾನ ತುಂಬಿರುವಲ್ಲಿ ಶಿವ ಸಂಚರಿಸಿ ಜ್ಞಾನ ದೀವಿಗೆಯನ್ನು ಬೆಳಗುತ್ತಾನೆ ಎಂಬ ನಂಬಿಕೆ ಇದೆ. ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ, ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ. ಇದರ ಮುಂದಿನ ದಿನ ವಿವಿಧ ರೀತಿಯ ಸಿಹಿ ತಿನಿಸುಗಳನ್ನು ತಯಾರಿಸುವರು. ತಂಬಿಟ್ಟು ಈ ಹಬ್ಬದ ಪ್ರಮುಖ ತಿನಿಸು.

ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ. ಶಿವಪುರಾಣದಲ್ಲಿ ಶಿವಾರಾತ್ರಿಯ ಆಚರಣೆ ಬಂದಿರುವ ಬಗ್ಗೆ ಒಂದು ಸಣ್ಣ ಕಥೆ ಇದೆ. ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾರೆ. ವಿಷ್ಣು ಹಾಗೂ ಬ್ರಹ್ಮರ ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ, ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ಸೂಚಿಸುತ್ತಾನೆ.

ಲಿಂಗರೂಪ ತಾಳಿದ ಶಿವ ಆಗ ಹಂಸದ ರೂಪ ತಾಳಿದ ಬ್ರಹ್ಮ ಅಗ್ನಿ ಕಂಭದ ಶಿರವನ್ನು ಹುಡುಕಲು ಮೇಲ್ಮುಖವಾಗಿ ಹೊರಡುತ್ತಾನೆ. ವಿಷ್ಣು ವರಾಹವತಾರ ತಾಳಿ ಕಂಭದ ತಳವನ್ನು ನೋಡುವುದಕ್ಕಾಗಿ ಪಾತಾಳಕ್ಕೆ ಇಳಿಯುತ್ತಾನೆ. ಎಷ್ಟೇ ಮುಂದೆ ಸಾಗಿದರೂ ಬ್ರಹ್ಮ ಹಾಗೂ ವಿಷ್ಣು ಇವರಿಬ್ಬರಿಗೂ ಕಂಭದ ಅಂತ್ಯವೇ ಕಾಣುವುದಿಲ್ಲ. ಅನಂತವಾಗಿರುವ ಶಿವನ ಶಕ್ತಿಯನ್ನು ನೋಡಿದ ವಿಷ್ಣು ಹಾಗೂ ಬ್ರಹ್ಮರಿಗೆ ಸತ್ಯದ ಅರಿವಾಗುತ್ತದೆ. ಆದರೆ ಶಿವನ ಜಡೆಯಿಂದ ಕೆಳಗೆ ಬೀಳುತ್ತಿದ್ದ ಕೇತಕಿ ಪುಷ್ಫದ ಬಳಿ ಬ್ರಹ್ಮ, ನೀನು ಎಲ್ಲಿಂದ ಬೀಳುತ್ತಿದ್ದೀಯ ಎಂದು ಪ್ರಶ್ನಿಸುತ್ತಾನೆ. ಆಗ ಆ ಪುಷ್ಪವು ನಾನು ಅಗ್ನಿ ಕಂಭದ ಶಿರದಿಂದ ಬೀಳುತ್ತಿದ್ದೇನೆ ಎಂಬ ಉತ್ತರ ನೀಡುತ್ತದೆ. ಆಗ ಬ್ರಹ್ಮ ಶಿವನಲ್ಲಿಗೆ ಬಂದು ಕೇತಕಿ ಪುಪ್ಪವನ್ನು ತೋರಿಸಿ, ತಾನು ಅಗ್ನಿ ಕಂಭದ ಶಿರಭಾಗವನ್ನು ನೋಡಿರುವುದಾಗಿಯೂ ಅಲ್ಲಿಂದಲೇ ಕೇತಕಿ ಪುಷ್ಪವನ್ನು ತಂದಿರುವುದಾಗಿಯೂ ಹೇಳುತ್ತಾನೆ. ಇವರಿಬ್ಬರ ಮೋಸವನ್ನು ಅರಿತ ಶಿವ, ಬ್ರಹ್ಮನನ್ನು ಯಾರೂ ಪೂಜಿಸಕೂಡದು ಎಂದು ಶಾಪ ನೀಡಿ ಲಿಂಗರೂಪ ತಾಳುತ್ತಾನೆ. ಅಂದು ಮಾಘ ಮಾಸದ ಬಹುಳ ಚತುರ್ದಶಿಯಾಗಿರುತ್ತದೆ. ಹೀಗಾಗಿ, ಶಿವ ಲಿಂಗರೂಪ ತಾಳಿದ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ.

ಪ್ರತಿ ವರ್ಷದ ಶಿವರಾತ್ರಿಯ ಸಮಯದಲ್ಲಿ ಶಿವನು, ಪಾರ್ವತಿಯ ಜೊತೆಯಲ್ಲಿ ಭೂಮಿಗೆ ಆಗಮಿಸುತ್ತಾನೆ. ಭೂ – ಸಂಚಾರ ಮಾಡುತ್ತಾನೆ. ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣಗೊಳ್ಳುತ್ತಾನೆ. ಹೀಗಾಗಿ ಶಿವರಾತ್ರಿಯ ಶಿವನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಇದೆ.

ಮದುವೆಯಾಗದ ಹೆಣ್ಣುಮಕ್ಕಳು ಶಿವಗುಣರೂಪಿಯಾದ ಅನುರೂಪ ಪತಿಗಾಗಿ ಪ್ರಾರ್ಥಿಸಿದರೆ, ಮುತ್ತೈದೆಯರು ಪತಿಯ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸುವುದು ಸಂಪ್ರದಾಯ. ಶಿವರಾತ್ರಿಯಂದು ಶಿವನನ್ನು ಪೂಜಿಸಿದರೆ, ಸುಖ, ಶಾಂತಿ, ಸಮೃದ್ಧಿ ದೊರೆಯುವುದೆಂಬ ನಂಬಿಕೆ ಆಸ್ತಿಕರದು. ಬಿಲ್ವದ ಎಲೆ ಹೃದಯವನ್ನು ಹೋಲುತ್ತದೆ ಮತ್ತು ಲಿಂಗ ಪರಮಾತ್ಮನ ಪ್ರತೀಕ. ಆದ್ದರಿಂದ ಇವೆರಡರ ಜೊತೆಗೂಡಿಕೆ ಆತ್ಮ ಪರಮಾತ್ಮಗಳ ಮಿಲನ. ರಾತ್ರಿಯು ಅಜ್ಞಾನದ ಸಂಕೇತ ಮತ್ತು ಆ ವೇಳೆಯಲ್ಲಿ ನಿದ್ರೆ ಮಾಡದೇ ಎಚ್ಚರವಾಗಿರುವುದು ತಿಳುವಳಿಕೆಯ ಕಡೆಗೆ ಹೋಗುತ್ತಿರುವ ಸಂಕೇತ. ಹೀಗೆ ಶಿವರಾತ್ರಿಯ ರಾತ್ರಿ ಜಾಗರಣೆ ಮಾಡುವುದು ಮೋಕ್ಷದ ಕಡೆಗೆ ಹೊಗುವುದು ಎಂದು ತತ್ವಗಳು ತಿಳಿಸುತ್ತವೆ.

ಉಪವಾಸ ಮಾಡುವುದರ ಪ್ರಯೋಜನ ಉಪವಾಸ ಮಾಡುವುದು ಎಂದರೆ, ದೇವರಿಗೆ ಹತ್ತಿರವಾಗಿರುವುದು / ದೇವರ ಬಗ್ಗೆ ಚಿಂತಿಸುತ್ತಿರುವುದು ಎಂದು ಅರ್ಥ. ಹೀಗೆ ಆತನ ಧ್ಯಾನದಲ್ಲಿ ಇರುವಾಗ ಊಟ / ತಿಂಡಿಯ ಕಡೆ ಗಮನ ಹೋಗುವುದಿಲ್ಲ. ಜಾಗರಣೆ ಎಂದರೆ, ಜಾಗೃತರಾಗಿರೋದು ಎಂದು.

ರಾತ್ರಿಯಲ್ಲಿ ಜಾಗರಣೆ ಮಾಡುವುದರ ಅರ್ಥವೇನು? ರಾತ್ರಿ ಎನ್ನುವುದು ತಮೋ ಗುಣದ ಪ್ರತೀಕ. ಆಲಸ್ಯ, ನಿದ್ರೆ, ಅಹಂಕಾರ, ಅಜ್ಞಾನಗಳ ದ್ಯೋತಕ ನಿಶೆ. ಆ ಸಮಯದಲ್ಲಿ ಜಾಗೃತರಾಗಿರಬೆಕು ಎಂದರೆ, ಅವುಗಳಿಂದ ಜಾಗೃತರಾಗಿರಬೇಕು ಎಂಬರ್ಥ. ಹಾಗೆ ಜಾಗೃತರಾಗಿರುವುದಕ್ಕೆ ನಮಗೆ ಸಹಾಯವನ್ನು ಮಾಡುವವನು ದೇವರು. ಆ ದೇವರನ್ನು ಸ್ಮರಿಸುತ್ತ ಈ ತಮೋ ಗುಣಗಳಿಂದ ಜಾಗೃತರಾಗಿರಬೇಕು ಎನ್ನುವುದರ ಪ್ರತೀಕ ಶಿವರಾತ್ರಿಯ ಜಾಗರಣೆ.

ಶಿವ ಅಂದ್ರೆ ಕಲ್ಯಾಣ ಎಂದು ಅರ್ಥ. ಲೋಕ ಕಲ್ಯಾಣಕ್ಕಾಗಿ ಮತ್ತು ಕುಟುಂಬದ ಕಲ್ಯಾಣಕ್ಕಾಗಿ ರಾತ್ರಿ ಇಡೀ ಆ ಪರಶಿವನ ಧ್ಯಾನ ಮಾಡುವುದು. ಶಿವರಾತ್ರಿಯ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿವನಿಗೆ ಅತೀ ಶ್ರೇಷ್ಠವಾಗಿರುವ ಬಿಲ್ವ ಪತ್ರೆಯನ್ನು ಅರ್ಪಿಸಿ, ತಿಲಗಿ ಪುಷ್ಪ, ತುಳಸಿಯಿಂದ ಶಿವಲಿಂಗವನ್ನು ಅಲಂಕಾರ ಮಾಡಿ ಶಿವನ್ನು ಭಜಿಸಿದರೆ, ಪಾಪಗಳು ಪರಿಹಾರವಾಗುತ್ತವೆ, ಮೋಡಗಳೇ ಇಲ್ಲದ ಶುಭ್ರ ಆಕಾಶದಲ್ಲಿ ಬಂದಿರುವ ಚಂದ್ರನ ಬೆಳಕಿನಲ್ಲಿ ಶಿವನಿಗೆ ಅಭಿಷೇಕ ಮಾಡಿ ಆರಾಧಿಸಿದರೆ ಅತ್ಯಂತ್ರ ಶ್ರೇಷ್ಠ ಎಂಬ ನಂಬಿಕೆಗಳಿವೆ. ಶಿವರಾತ್ರಿಯ ದಿನವಿಡೀ ಉಪವಾಸ ಮಾಡಿ, ಜಾಗರಣೆ ಮಾಡಿ ಶಿವನನ್ನು ಆರಾಧಿಸಿದರೆ ಸಕಲ ಪಾಪಗಳೂ ಕಳೆಯುತ್ತವೆ ಎಂದು ನಂಬಲಾಗಿದೆ.

ಎಲ್ಲಾ ಜೀವರಾಶಿಗಳನ್ನು ಪೊರೆಯುವ ಶಿವ ಎಲ್ಲಾ ಆಡಂಬರಗಳಿಂದ ಮುಕ್ತ. ಆತ ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ. ಭಸ್ಮವನ್ನು ಬಳಿದುಕೊಂಡು, ಹುಲಿಯ ಚರ್ಮವನ್ನು ಉಟ್ಟು, ಸ್ಮಶಾನದಲ್ಲಿರುವ ಸರಳ ಮತ್ತು ಅಮೋಘ ಶಕ್ತಿ. ಶಿವನು ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಕಲ್ಮಶ ಮನಸ್ಸುಗಳ ಪ್ರತೀಕ. ಛಲಬಿಡದ ಸಾಧನೆಯ ದ್ಯೋತಕ. ಧ್ಯಾನಪ್ರಿಯ ಶಿವ ಭಕ್ತರಿಂದ ಬಯಸುವುದು ನಿಶ್ಕಲ್ಮಶ ಮತ್ತು ಪ್ರಾಮಾಣಿಕ ಭಕ್ತಿ ಮಾತ್ರ. ತೋರಿಕೆಯ ಮತ್ತು ಆಡಂಬರದ ಪೂಜೆಯನ್ನು ಬಯಸದ ಮಹಾದೇವನನ್ನು ಇಂದ್ರಿಯ ನಿಗ್ರಹ, ಧ್ಯಾನ, ಸಂಯಮ ಮತ್ತು ವಿಶ್ವಾಸ ಭರಿತರಾಗಿ ಶಿವರಾತ್ರಿ ಯಂದು ಧ್ಯಾನಿಸಿದರೆ ಆತ ಪ್ರಸನ್ನಗೊಳ್ಳುತ್ತಾನೆ.

ಎಲ್ಲ ಆಡಂಬರಗಳಿಂದ ಮುಕ್ತರಾಗಿ, ಸರಳ ಮನಸ್ಸಿನಿಂದ ಪರಶಿವನನ್ನು ನೆನದು, ಭಜಿಸಿ ಶಿವರಾತ್ರಿಯನ್ನು ಆಚರಿಸೋಣ. ಸರಳತೆ, ಪ್ರಾಮಾಣಿಕತೆ, ಸತ್ಯ ಮತ್ತು ಶಕ್ತಿಯ ದೇವತೆ ಈಶ್ವರ ಲೋಕದಲ್ಲಿರುವ ಸಕಲ ಸಂಕಷ್ಟಗಳಿಗೆ ಪರಿಹಾರ ನೀಡಲಿ ಎಂಬುದು ಎಲ್ಲರ ಕೋರಿಕೆ. ಎಲ್ಲರಿಗೂ ಮಹಾ ಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು.

ವೇ!!ಶ್ರೀ!! ಕುಮಾರಸ್ವಾಮಿ, ಶ್ರೀ ಜ್ಯೋತಿಷ್ಯ ಸಲಹಾ ಕೇಂದ್ರ

ಇದನ್ನೂ ಓದಿ: Maha Shivaratri 2022: ಶಿವರಾತ್ರಿಯಂದು ಮಾಡಬೇಕಾದ ಮೂರು ಸರಳ ಕರ್ತವ್ಯಗಳು ಯಾವುವು ಗೊತ್ತಾ?

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್