AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಶುಕ್ರ ಯೋಗ: ಈ 3 ರಾಶಿಯವರಿಗೆ ಒಲಿಯಲಿದೆ ಲಕ್ಷ್ಮೀ ಕೃಪೆ!

ಸೆಪ್ಟೆಂಬರ್ ಅಂತ್ಯದಲ್ಲಿ ರೂಪುಗೊಳ್ಳುವ ಶುಕ್ರ ಯೋಗವು 3 ರಾಶಿಯವರ ಬಾಳಿನಲ್ಲಿ ಸುವರ್ಣ ಯುಗವನ್ನು ತರಲಿದೆ. ಮಹಾಲಕ್ಷ್ಮಿಯ ವಿಶೇಷ ಕೃಪೆಯಿಂದ ಸಿಂಹ, ಮೀನ, ಧನುಸ್ಸು ರಾಶಿಯವರಿಗೆ ಆರ್ಥಿಕ ಸಂಕಷ್ಟಗಳು ದೂರವಾಗಿ ಅಪಾರ ಧನಸಂಪತ್ತು ಲಭಿಸಲಿದೆ. ಸಾಲದ ಬಾಧೆಯಿಂದ ಮುಕ್ತಿ, ಆಕಸ್ಮಿಕ ಧನಲಾಭ ಹಾಗೂ ಸಮಾಜದಲ್ಲಿ ಗೌರವ ಪ್ರಾಪ್ತಿಯಾಗುತ್ತದೆ. ಈ ಶುಭ ಯೋಗವು ನಿಮ್ಮ ಜೀವನದಲ್ಲಿ ಅದೃಷ್ಟ ಮತ್ತು ಪ್ರಗತಿಯನ್ನು ತರಲಿದೆ.

ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಶುಕ್ರ ಯೋಗ: ಈ 3 ರಾಶಿಯವರಿಗೆ ಒಲಿಯಲಿದೆ ಲಕ್ಷ್ಮೀ ಕೃಪೆ!
ಶುಕ್ರ ಯೋಗ
ಅಕ್ಷತಾ ವರ್ಕಾಡಿ
|

Updated on: Sep 19, 2026 | 11:18 AM

Share

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳು ಮತ್ತು ನಕ್ಷತ್ರಗಳ ಸಂಚಾರದಿಂದಾಗಿ ಹಲವಾರು ಶುಭ ಯೋಗಗಳು ರೂಪುಗೊಳ್ಳುತ್ತವೆ. ಅದರಂತೆ ಇದೀಗ ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ‘ಶುಕ್ರ ಯೋಗ’ ನಿರ್ಮಾಣವಾಗುತ್ತಿದ್ದು, ಇದರ ಶುಭ ಪ್ರಭಾವದಿಂದ ಮೂರು ರಾಶಿಯವರ ಜೀವನದಲ್ಲಿ ಸುವರ್ಣ ಯುಗ ಆರಂಭವಾಗಲಿದೆ. ಮಹಾಲಕ್ಷ್ಮಿಯ ವಿಶೇಷ ಕೃಪೆಯಿಂದಾಗಿ ಈ ರಾಶಿಯವರು ಆರ್ಥಿಕ ಸಂಕಷ್ಟಗಳಿಂದ ಮುಕ್ತಿ ಪಡೆದು, ಅಪಾರ ಧನ-ಸಂಪತ್ತನ್ನು ಗಳಿಸಲಿದ್ದಾರೆ. ಆ ಅದೃಷ್ಟದ ರಾಶಿಗಳು ಯಾವುವು ಎಂಬುದರ ವಿವರ ಇಲ್ಲಿದೆ.

ಸಿಂಹ ರಾಶಿಗೆ ಧನ-ಧಾನ್ಯಗಳ ಸುರಿಮಳೆ:

ಸಿಂಹ ರಾಶಿಯವರಿಗೆ ಶುಕ್ರ ಯೋಗವು ಅತ್ಯಂತ ಅದ್ಭುತ ಫಲಗಳನ್ನು ನೀಡಲಿದೆ. ಮಹಾಲಕ್ಷ್ಮಿಯ ಕೃಪಾದೃಷ್ಟಿ ಇವರ ಮೇಲಿರುವುದರಿಂದ ಧನ-ಧಾನ್ಯಕ್ಕೆ ಯಾವುದೇ ಕೊರತೆ ಎದುರಾಗುವುದಿಲ್ಲ. ದೀರ್ಘಕಾಲದ ಆರ್ಥಿಕ ಸಮಸ್ಯೆಗಳು ಬಗೆಹರಿದು, ಕೈತುಂಬಾ ಹಣ ಹರಿದು ಬರಲಿದೆ. ಇನ್ನು ವಿದ್ಯಾರ್ಥಿಗಳಿಗೆ ತಮ್ಮ ಶ್ರಮಕ್ಕೆ ತಕ್ಕಂತೆ ಉತ್ತಮ ಫಲಿತಾಂಶ ಲಭಿಸಲಿದ್ದು, ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಫಲತೆ ಸಿಗಲಿದೆ.

ಮೀನ ರಾಶಿಗೆ ಸಾಲದ ಬಾಧೆಯಿಂದ ಮುಕ್ತಿ:

ಮೀನ ರಾಶಿಯವರಿಗೆ ಈ ಸಮಯವು ಅತ್ಯಂತ ಅನುಕೂಲಕರವಾಗಿದೆ. ಕಳೆದ ಕೆಲವು ದಿನಗಳಿಂದ ತೊಂದರೆ, ಕಷ್ಟಗಳಿಂದ ಬಳಲುತ್ತಿದ್ದವರಿಗೆ ಕೊನೆಗೂ ಮುಕ್ತಿ ಸಿಗಲಿದೆ. ಆರ್ಥಿಕವಾಗಿ ಉತ್ತಮ ಪ್ರಗತಿ ಕಂಡುಬರಲಿದ್ದು, ಹಳೆಯ ಸಾಲದ ಬಾಧೆಯಿಂದ ಬಳಲುತ್ತಿದ್ದವರು ಸಾಲಮುಕ್ತರಾಗಿ ನೆಮ್ಮದಿಯ ಜೀವನ ನಡೆಸಲಿದ್ದಾರೆ. ವಿದ್ಯಾರ್ಥಿಗಳಿಗೂ ಸಹ ಇದು ಅತ್ಯುತ್ತಮ ಸಮಯವಾಗಿದೆ.

ಇದನ್ನೂ ಓದಿ: ರವಿ ಸಿಂಹ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಧನುಸ್ಸು ರಾಶಿಗೆ ಆಕಸ್ಮಿಕ ಧನಲಾಭ ಹಾಗೂ ಶುಭ ಯೋಗ:

ಧನುಸ್ಸು ರಾಶಿಯವರಿಗೆ ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿದ್ದು, ಆದಾಯ ಗಣನೀಯವಾಗಿ ಹೆಚ್ಚಾಗಲಿದೆ. ಆಕಸ್ಮಿಕ ಧನಲಾಭದ ಯೋಗವಿದ್ದು, ಸಮಾಜದಲ್ಲಿ ಗೌರವ ಹಾಗೂ ವಿಶೇಷ ಗುರುತಿಸುವಿಕೆ ಸಿಗಲಿದೆ. ಕೋರ್ಟ್-ಕಚೇರಿ ಅಥವಾ ಕಾನೂನು ವ್ಯವಹಾರಗಳಲ್ಲಿ ನಿರೀಕ್ಷಿತ ಗೆಲುವು ಸಿಗಲಿದೆ. ಮನೆಯಲ್ಲಿ ಸಂತಸದ ವಾತಾವರಣವಿರಲಿದ್ದು, ಕುಟುಂಬ ಸದಸ್ಯರೊಂದಿಗೆ ತೀರ್ಥಯಾತ್ರೆಗೆ ತೆರಳುವ ಸಾಧ್ಯತೆಯಿದೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ​

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!