Sindhura: ಮದುವೆಯಾದ ಹೆಂಗಸರು ಹಣೆಯಲ್ಲಿ ಸಿಂಧೂರ ಹಚ್ಚುವುದು ಏಕೆ? ಕೈಗಳಿಗೆ ಮೆಹಂದಿ ಹಚ್ಚಿಕೊಳ್ಳುವುದೇಕೆ?

ಕೈಗಳಿಗೆ ಮೆಹಂದಿ ಹಚ್ಚಿಕೊಳ್ಳುವುದು: ಕೈಗಳಿಗೆ ಅಲಂಕಾರವನ್ನು ನೀಡುವುದರ ಜೊತೆಗೆ ಮೆಹಂದಿಯು ತನ್ನಲ್ಲಿರುವ ಔಷಧೀಯ ಗುಣಗಳಿಂದ ಖ್ಯಾತಿ ಪಡೆದಿದೆ. ಮದುವೆಯು ಅತ್ಯಂತ ಒತ್ತಡಕಾರಿಯಾಗಿರುವ ಸಂಗತಿ ಎಲ್ಲರಿಗು ತಿಳಿದ ವಿಚಾರವೇ. ಈ ಒತ್ತಡವು ತಲೆನೋವು ಮತ್ತು ಜ್ವರವನ್ನು ತರಬಹುದು. ಆದ್ದರಿಂದ ಮದುವೆ ದಿನ ಹತ್ತಿರ ಬಂದಾಗ ವಧುವಿಗೆ ಮೆಹಂದಿಯನ್ನು ಹಚ್ಚುತ್ತಾರೆ.

Sindhura: ಮದುವೆಯಾದ ಹೆಂಗಸರು ಹಣೆಯಲ್ಲಿ ಸಿಂಧೂರ ಹಚ್ಚುವುದು ಏಕೆ? ಕೈಗಳಿಗೆ ಮೆಹಂದಿ ಹಚ್ಚಿಕೊಳ್ಳುವುದೇಕೆ?
Sindhura: ಮದುವೆಯಾದ ಹೆಂಗಸರು ಹಣೆಯಲ್ಲಿ ಸಿಂಧೂರ ಅಥವಾ ಕುಂಕುಮ ಹಚ್ಚುವುದು ಏಕೆ?
Follow us
TV9 Web
| Updated By: ಸಾಧು ಶ್ರೀನಾಥ್​

Updated on: Mar 29, 2022 | 6:06 AM

ಸನಾತನ ಧರ್ಮದಲ್ಲಿ ಅನೇಕ ಸದ್ವಿಚಾರಗಳು-ವೈಜ್ಞಾನಿಕ ಸತ್ಯಗಳು ಅಡಗಿವೆ. ಉದಾಹರಣೆಗೆ ಉತ್ತರಕ್ಕೆ ತಲೆ ಇಟ್ಟು ಏಕೆ ಮಲಗಬಾರದು: ಇದರ ಹಿಂದೆ ಒಂದು ಕಟ್ಟುಕತೆಯಿದೆ, ಅದೇನೆಂದರೆ ಉತ್ತರಕ್ಕೆ ತಲೆ ಇಟ್ಟು ಮಲಗುವುದರಿಂದ ದೆವ್ವ ಅಥವಾ ಭೂತಗಳನ್ನು ಆಹ್ವಾನಿಸಿದಂತಾಗುತ್ತವೆ ಎಂಬುದು. ಆದರೆ ವಿಜ್ಞಾನವು ಹೇಳುವುದೇನೆಂದರೆ ಮಾನವ ದೇಹಕ್ಕೆ ತನ್ನದೇ ಆದ ಕಾಂತ ಕ್ಷೇತ್ರವು ಇರುತ್ತದೆ (ಇದನ್ನು ಹೃದಯದ ಕಾಂತ ಅಥವಾ ಮ್ಯಾಗ್ನೆಟಿಕ್ ಕ್ಷೇತ್ರ ಎಂದು ಸಹ ಕರೆಯುತ್ತಾರೆ. ಏಕೆಂದರೆ ರಕ್ತ ಪರಿಚಲನೆಯ ಕಾರಣವಾಗಿ) ಮತ್ತು ಭೂಮಿಯೇ ಒಂದು ದೊಡ್ಡ ಸೂಜಿಗಲ್ಲು ಅಥವಾ ಮ್ಯಾಗ್ನೆಟ್. ಯಾವಾಗ ನಾವು ಉತ್ತರಕ್ಕೆ ತಲೆ ಇಟ್ಟು ಮಲಗುತ್ತೇವೆಯೋ, ಆಗ ನಮ್ಮ ದೇಹದಲ್ಲಿನ ಕಾಂತ ಕ್ಷೇತ್ರವು ಸಮತೋಲನವನ್ನು ಕಳೆದುಕೊಳ್ಳುತ್ತದೆ. ಇದರಿಂದ ಮುಂದೆ ರಕ್ತದ ಒತ್ತಡ ಮತ್ತು ಹೃದ್ರೋಗದಂತಹ ಸಮಸ್ಯೆಗಳು ಕಂಡು ಬರುತ್ತವೆ.

  1.  ಹಣೆಗೆ ಸಿಂಧೂರ ಅಥವಾ ಕುಂಕುಮ ಹಚ್ಚುವುದು ಏಕೆ? ಮದುವೆಯಾದ ಹೆಂಗಸರು ಹಣೆಯಲ್ಲಿ ಧರಿಸುವ ಸಿಂಧೂರವು ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿರುತ್ತದೆ. ಏಕೆಂದರೆ ಸಿಂಧೂರವನ್ನು ಅರಿಶಿಣ-ಸುಣ್ಣ ಮತ್ತು ಪಾದರಸದ ಲೋಹಗಳನ್ನು ಸೇರಿಸಿ ಮಾಡಿರುತ್ತಾರೆ. ಪಾದರಸವು ಸ್ವಾಭಾವಿಕವಾಗಿ ರಕ್ತದ ಒತ್ತಡವನ್ನು ನಿಯಂತ್ರಿಸುವುದರ ಜೊತೆಗೆ ಲೈಂಗಿಕಾಸಕ್ತಿಯನ್ನು ಸಹ ಕೆರಳಿಸುತ್ತದೆ. ಇದರಿಂದಾಗಿಯೇ ವಿಧವೆಯರು ಸಿಂಧೂರವನ್ನು ಧರಿಸಲು ಸಂಪ್ರದಾಯ ನಿಷೇಧ ಹೇರಿರುವುದು. ಸಿಂಧೂರವನ್ನು ಹಚ್ಚಿಕೊಳ್ಳುವಾಗ ಪಿಟ್ಯುಟರಿ ಗ್ರಂಥಿಗಳವರೆಗೆ ಹಚ್ಚಿಕೊಂಡರೆ ಒಳ್ಳೆಯದು. ಏಕೆಂದರೆ ಈ ಗ್ರಂಥಿಗಳಲ್ಲಿಯೇ ನಮ್ಮ ಭಾವನೆಗಳೆಲ್ಲವು ಕ್ರೋಢೀಕರಣಗೊಳ್ಳುವುದು. ಪಾದರಸವು ಒತ್ತಡ ಮತ್ತು ಆಯಾಸವನ್ನು ಹೊಡೆದೋಡಿಸುವ ಸಾಮರ್ಥ್ಯವನ್ನು ತನ್ನಲ್ಲಿ ಹೊಂದಿದೆ.
  2.  ನಾವೇಕೆ ಅರಳಿ ಮರವನ್ನು ಪೂಜಿಸುತ್ತೇವೆ: ಅರಳಿ ಮರ ಅಥವಾ ಅಶ್ವತ್ಥ ವೃಕ್ಷ ಎಂದು ಕರೆಯಲ್ಪಡುವ ಮರವನ್ನು ನಾವು ಸಾಮಾನ್ಯವಾಗಿ ಎಲ್ಲಾ ಊರುಗಳ ನಾಗರ ಕಟ್ಟೆ, ಅಶ್ವತ್ಥ ಕಟ್ಟೆ, ದೇವಾಲಯಗಳ ಬಳಿಯಲ್ಲಿ ಕಾಣುತ್ತೇವೆ. ನಿಜ ಹೇಳಬೇಕೆಂದರೆ ಇದು ಸಾಮಾನ್ಯ ಮನುಷ್ಯರಿಗೆ ನೆರಳನ್ನು ಬಿಟ್ಟರೆ ಬೇರೇನು ನೀಡುವುದಿಲ್ಲ. ಇದರಲ್ಲಿ ರುಚಿಕರವಾದ ಹಣ್ಣು ನೀಡುವುದಿಲ್ಲ. ಆದರೂ ಜನ ಇದನ್ನು ಬೆಳೆಸಿ, ಪೋಷಿಸಿ, ಇದರ ರಕ್ಷಣೆಗೆ ನಿಂತಿರುತ್ತಾರೆ ಎಂದರೆ ಅಂತಹದು ಏನಿದೆ ಈ ಮರದಲ್ಲಿ? ಹೌದು, ಅದರ ಮಹತ್ವವನ್ನು ನಮ್ಮ ಪೂರ್ವಿಕರು ಕಂಡು ಹಿಡಿದಿದ್ದರು. ಈ ಮರವು ರಾತ್ರಿ ಸಮಯದಲ್ಲಿ ಸಹ ಆಮ್ಲಜನಕವನ್ನು ಬಿಡುಗಡೆ ಮಾಡುವ ಗುಣವನ್ನು ಹೊಂದಿದೆ. ಇಂತಹ ಮರವು ಮನುಕುಲಕ್ಕೆ ಅತ್ಯಾವಶ್ಯಕ ಎಂದು ಪರಿಗಣಿಸಿಯೇ, ಅಶ್ವತ್ಥ ವೃಕ್ಷಕ್ಕೆ ಇದಕ್ಕೆ ತ್ರಿಮೂರ್ತಿಗಳ ಆವಾಸ ಸ್ಥಾನವೆಂದು ಕರೆದು ಇದನ್ನು ಪೂಜಿಸಲು ತಿಳಿಸಿದ್ದಾರೆ.
  3.  ಉತ್ತರಕ್ಕೆ ತಲೆ ಇಟ್ಟು ಏಕೆ ಮಲಗಬಾರದು: ಇದರ ಹಿಂದೆ ಒಂದು ಕಟ್ಟುಕತೆಯಿದೆ, ಅದೇನೆಂದರೆ ಉತ್ತರಕ್ಕೆ ತಲೆ ಇಟ್ಟು ಮಲಗುವುದರಿಂದ ದೆವ್ವ ಅಥವಾ ಭೂತಗಳನ್ನು ಆಹ್ವಾನಿಸಿದಂತಾಗುತ್ತವೆ ಎಂಬುದು. ಆದರೆ ವಿಜ್ಞಾನವು ಹೇಳುವುದೇನೆಂದರೆ ಮಾನವ ದೇಹಕ್ಕೆ ತನ್ನದೇ ಆದ ಕಾಂತ ಕ್ಷೇತ್ರವು ಇರುತ್ತದೆ (ಇದನ್ನು ಹೃದಯದ ಕಾಂತ ಅಥವಾ ಮ್ಯಾಗ್ನೆಟಿಕ್ ಕ್ಷೇತ್ರ ಎಂದು ಸಹ ಕರೆಯುತ್ತಾರೆ. ಏಕೆಂದರೆ ರಕ್ತ ಪರಿಚಲನೆಯ ಕಾರಣವಾಗಿ) ಮತ್ತು ಭೂಮಿಯೇ ಒಂದು ದೊಡ್ಡ ಸೂಜಿಗಲ್ಲು ಅಥವಾ ಮ್ಯಾಗ್ನೆಟ್. ಯಾವಾಗ ನಾವು ಉತ್ತರಕ್ಕೆ ತಲೆ ಇಟ್ಟು ಮಲಗುತ್ತೇವೆಯೋ, ಆಗ ನಮ್ಮ ದೇಹದಲ್ಲಿನ ಕಾಂತ ಕ್ಷೇತ್ರವು ಸಮತೋಲನವನ್ನು ಕಳೆದುಕೊಳ್ಳುತ್ತದೆ. ಇದರಿಂದ ಮುಂದೆ ರಕ್ತದ ಒತ್ತಡ ಮತ್ತು ಹೃದ್ರೋಗದಂತಹ ಸಮಸ್ಯೆಗಳು ಕಂಡು ಬರುತ್ತವೆ. ಆದ್ದರಿಂದ ಈ ಕಾಂತ ಕ್ಷೇತ್ರದ ಸಮತೋಲವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ. ಇದರ ಜೊತೆಗೆ ನಮ್ಮ ದೇಹದಲ್ಲಿ ಹರಿಯುವ ರಕ್ತದಲ್ಲಿ ಕಬ್ಬಿಣಾಂಶವಿರುತ್ತದೆ. ನಾವು ಉತ್ತರ ದಿಕ್ಕಿಗೆ ತಲೆಯಿಟ್ಟು ಮಲಗುವುದರಿಂದ ಆ ಕಾಂತ ಕ್ಷೇತ್ರದಿಂದ ಆಕರ್ಷಣೆಯಾಗುವ ನಮ್ಮ ದೇಹದ ಕಬ್ಬಿಣಾಂಶವು ತಲೆಯಲ್ಲಿ ಶೇಖರಗೊಳ್ಳುತ್ತದೆ. ಇದರಿಂದ ತಲೆನೋವು, ಅಲ್ಜೀಮರ್ ಕಾಯಿಲೆ, ಪ್ರಜ್ಞಾಶೂನ್ಯತೆ ( ಅರಿವಿನ ಕೊರತೆ), ಪಾರ್ಕಿನ್‍ಸನ್ ಕಾಯಿಲೆ ಮತ್ತು ಮೆದುಳಿನ ಕಾರ್ಯ ಕ್ಷೀಣಿಸುವ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
  4.  ನವರಾತ್ರಿ ಆಚರಣೆ ಏಕೆ ಗೊತ್ತಾ: ನೂರಾರು ಅಥವಾ ಸಾವಿರಾರು ವರ್ಷಗಳ ಹಿಂದಿನ ಜೀವನಕ್ಕೂ ಮತ್ತು ಇಂದಿನ ಜೀವನಕ್ಕೂ ಅಜಗಜಾಂತರ ವ್ಯತ್ಯಾಸಗಳು ನಮಗೆ ಕಂಡು ಬರುತ್ತವೆ. ಇಂದು ನಾವು ಆಚರಿಸುತ್ತಿರುವ ಎಷ್ಟೋ ಸಂಪ್ರದಾಯಗಳು ಇಂದು-ನಿನ್ನೆ ಜನ್ಮ ತಾಳಿದವಲ್ಲ. ಅವುಗಳೆಲ್ಲವು ಹಿಂದೆಂದೊ ಜನ್ಮ ತಳೆದಿವೆ. ನೀವು ಎಂದಾದರು ಆಲೋಚಿಸಿದ್ದೀರೇ? ನಾವೇಕೆ ವರ್ಷಕ್ಕೆ ಒಂದು ದೀಪಾವಳಿ, ಹೋಳಿಯನ್ನು ಆಚರಿಸುತ್ತೇವೆ, ಆದರೆ ನವರಾತ್ರಿಯನ್ನು ಮಾತ್ರ ಎರಡು ಬಾರಿ ಆಚರಿಸುತ್ತೇವೆ. ಹೌದು ವಸಂತ ನವರಾತ್ರಿ ಮತ್ತು ಶರನ್ನಾವರಾತ್ರಿ ಎಂಬ ಎರಡು ನವರಾತ್ರಿಗಳನ್ನು ನಾವು ಆಚರಿಸುತ್ತೇವೆ. ಈ ಎರಡು ಮಾಸಗಳು ಋತು ಬದಲಾವಣೆಯನ್ನು ಹೊಂದಿರುವ ಮಾಸಗಳಾಗಿದ್ದು, ನಮ್ಮ ಆಹಾರ ಸೇವನೆಯ ಕ್ರಮವು ಈ ಅವಧಿಯಲ್ಲಿ ಪರಸ್ಪರ ಬದಲಾವಣೆಯಿಂದ ಕೂಡಿರುತ್ತದೆ. ನವರಾತ್ರಿಗಳು ನಮ್ಮನ್ನು ನಾವು ಈ ಆಹಾರ ಪದ್ಧತಿಗೆ ಹೊಂದಿಕೊಳ್ಳುವಂತೆ ಮಾಡುವ ಗುಣಗಳನ್ನು ಹೊಂದಿದೆ. ಅದು ಹೇಗೆಂದರೆ ಆಸ್ತಿಕ ಭಕ್ತ ಸಮೂಹವು ಈ ನವರಾತ್ರಿಗಳ ಸಂದರ್ಭದಲ್ಲಿ ಉಪವಾಸವಿರುತ್ತಾರೆ. ಇದರಿಂದ ಅವರು ಹೊಸ ಆಹಾರ ಶೈಲಿಗೆ ಒಗ್ಗಿಕೊಳ್ಳುತ್ತಾರೆ. ಈ ಅವಧಿಯಲ್ಲಿ ಜನರು ಉಪ್ಪು ಮತ್ತು ಸಕ್ಕರೆಯನ್ನು ಮಿತ ಪ್ರಮಾಣದಲ್ಲಿ ಸೇವಿಸುತ್ತಾರೆ. ಇದರಿಂದಾಗಿ ಹೆಚ್ಚಿನ ಧನಾತ್ಮಕ ಶಕ್ತಿಯನ್ನು, ಆತ್ಮ ವಿಶ್ವಾಸವನ್ನು ಮತ್ತು ದೃಢ ನಿರ್ಧಾರದ ಶಕ್ತಿಯನ್ನು (ಉಪವಾಸ ಮಾಡುವುದರಿಂದ ದೃಢ ನಿರ್ಧಾರ ಕೈಗೊಳ್ಳುವ ಶಕ್ತಿಯು ಹೆಚ್ಚಾಗುತ್ತದೆ) ಹೆಚ್ಚಿಸುತ್ತದೆ ಮತ್ತು ಕೊನೆಗೆ ಆ ಋತುವಿನಲ್ಲಿ ಸಂಭವಿಸುವ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ದೇಹಕ್ಕೆ ನೀಡುತ್ತದೆ.
  5.  ಆಹಾರ ಸೇವನೆ ಖಾರದೊಂದಿಗೆ ಆರಂಭ, ಸಿಹಿ ತಿಂಡಿಯ ಜೊತೆಗೆ ಮುಕ್ತಾಯ: ನಮ್ಮ ಪೂರ್ವಿಕರು ನಮಗೆ ಹೇಳಿರುವುದು ಹೀಗೆ – ಊಟ ಮಾಡುವಾಗ ಖಾರವನ್ನು ಸೇವಿಸಿ ಆರಂಭಿಸಿ, ಮುಕ್ತಾಯ ಮಾಡುವಾಗ ಸಿಹಿಯನ್ನು ಸೇವಿಸಿ ಎಂದು. ಇದರ ಹಿಂದಿನ ಕಾರಣವೇನೆಂದರೆ, ಖಾರವು ನಮ್ಮ ಹೊಟ್ಟೆಯಲ್ಲಿ ಜೀರ್ಣ ಮಾಡುವಂತಹ ಆಮ್ಲಗಳನ್ನು ಉತ್ಪತ್ತಿ ಮಾಡುತ್ತದೆ ಮತ್ತು ಜೀರ್ಣ ಕ್ರಿಯೆಯನ್ನು ಪ್ರಚೋದಿಸುತ್ತದೆ. ಇದರಿಂದ ಜೀರ್ಣ ಕ್ರಿಯೆ ಯಾವುದೇ ಅಡೆತಡೆಗಳಿಲ್ಲದೆ ಸಾಗುತ್ತದೆ. ಇನ್ನೂ ಸಿಹಿ ತಿಂಡಿಗಳು ಅಥವಾ ಕಾರ್ಬೋಹೈಡ್ರೇಟ್‍ಗಳು ಜೀರ್ಣ ಕ್ರಿಯೆಯನ್ನು ಕೆಳಗೆ ಎಳೆಯುವ ಸಾಮರ್ಥ್ಯವನ್ನು ಹೊಂದಿವೆ. ಇದರಿಂದಾಗಿ ಜೀರ್ಣವಾದ ಆಹಾರವು ಸರಾಗವಾಗಿ ಕರುಳುಗಳಲ್ಲಿ ಸಾಗಿ ಹೋಗುತ್ತದೆ. ಇದಕ್ಕಾಗಿಯೇ ಸಿಹಿಯನ್ನು ಕಡೆಯಲ್ಲಿ ಸೇವಿಸಿ ಎಂದು ಹೇಳುವುದು.
  6.  ಕೈಗಳಿಗೆ ಮೆಹಂದಿ ಹಚ್ಚಿಕೊಳ್ಳುವುದು: ಕೈಗಳಿಗೆ ಅಲಂಕಾರವನ್ನು ನೀಡುವುದರ ಜೊತೆಗೆ ಮೆಹಂದಿಯು ತನ್ನಲ್ಲಿರುವ ಔಷಧೀಯ ಗುಣಗಳಿಂದ ಖ್ಯಾತಿ ಪಡೆದಿದೆ. ಮದುವೆಯು ಅತ್ಯಂತ ಒತ್ತಡಕಾರಿಯಾಗಿರುವ ಸಂಗತಿ ಎಲ್ಲರಿಗು ತಿಳಿದ ವಿಚಾರವೇ. ಈ ಒತ್ತಡವು ತಲೆನೋವು ಮತ್ತು ಜ್ವರವನ್ನು ತರಬಹುದು. ಆದ್ದರಿಂದ ಮದುವೆ ದಿನ ಹತ್ತಿರ ಬಂದಾಗ ವಧುವಿಗೆ ಮೆಹಂದಿಯನ್ನು ಹಚ್ಚುತ್ತಾರೆ. ಇದರಿಂದ ವಧುವಿಗೆ ಒತ್ತಡವು ಕಡಿಮೆಯಾಗುತ್ತದೆ ಮತ್ತು ಆಕೆಯ ದೇಹಕ್ಕೆ ಇದು ತಂಪನ್ನು ನೀಡಿ, ನರಗಳು ಒತ್ತಡಕ್ಕೆ ಒಳಗಾಗುವುದನ್ನು ತಡೆಯುತ್ತದೆ. ಆದ್ದರಿಂದಲೇ ಮೆಹಂದಿಯನ್ನು ನರಗಳು ಕೊನೆಗೊಳ್ಳುವ ಭಾಗದಲ್ಲಿ ಅಂದರೆ, ಅಂಗೈ ಮತ್ತು ಅಂಗಾಲುಗಳಿಗೆ ಹಚ್ಚುತ್ತಾರೆ.
  7.  ದೀಪಾವಳಿಯ ಆಚರಣೆ ಮತ್ತು ಅದಕ್ಕೆ ಸಂಬಂಧಿಸಿದ ಸ್ವಚ್ಛತಾ ಕಾರ್ಯಗಳು: ದೀಪಾವಳಿಯು ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಅಂದರೆ ಚಳಿಗಾಲದ ಆರಂಭ ಕಾಲದಲ್ಲಿ ಬರುತ್ತದೆ. ಆಗ ತಾನೇ ಮಳೆಗಾಲವು ಮುಗಿದಿರುತ್ತದೆ ಈ ಕಾಲದಲ್ಲಿ. ಮಳೆಗಾಲವು ಎಲ್ಲರಿಗು ತಿಳಿದಂತೆ ಪ್ರತಿಯೊಂದಕ್ಕು ಹಾನಿಯನ್ನು ಮಾಡಿರುತ್ತದೆ. ಸುಮಾರು ಮನೆಗಳು ಇದರಿಂದ ಹಾನಿಗೆ ಒಳಗಾಗಿರುತ್ತವೆ. ಸುಮಾರು ಮನೆಗಳ ದುರಸ್ತಿ ಕಾರ್ಯವು ನಡೆಯಬೇಕಾಗಿರುತ್ತದೆ. ಆದ್ದರಿಂದ ಚಳಿಗಾಲದ ಆರಂಭದಲ್ಲಿ ಬರುವ ಈ ಹಬ್ಬದ ನೆಪದಲ್ಲಿ ಸುಮಾರು ಜನರು ತಮ್ಮ ಮನೆಗಳನ್ನು ದುರಸ್ತಿ ಮಾಡಿಕೊಳ್ಳುತ್ತಾರೆ. ಮನೆಗೆ ಸುಣ್ಣ – ಬಣ್ಣ ಬಳಿದು ಅಂದವನ್ನು ಸಹ ಹೆಚ್ಚಿಸುತ್ತಾರೆ. ಜೊತೆಗೆ ಚಳಿಗಾಲದ ಉಡುಗೆ-ತೊಡುಗೆಗಳನ್ನು ಸಹ ಕೊಂಡುಕೊಳ್ಳುತ್ತಾರೆ. (ಸದ್ವಿಚಾರ ಸಂಗ್ರಹ)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ