ಬ್ರಾಹ್ಮೀ ಮುಹೂರ್ತ: ಒಳಗೆ ಮನಸ್ಸು ಪ್ರಫುಲ್ಲ, ಸ್ಥಿರ, ಶಾಂತಸ್ಥಿತಿ – ಹೊರಗೆ ಶುದ್ಧ ಆಹ್ಲಾದಕರ ವಾತಾವರಣ; ಸಾಧನೆಗೆ ಇದು ಪ್ರಶಸ್ತ ಸಮಯ!

Brahma Muhurta: ಸೀತೆಯನ್ನು ಹುಡುಕುತ್ತಾ ಸಾಗಿದ ಆಂಜನೇಯ ಬ್ರಹ್ಮ ಮುಹೂರ್ತದಂದೇ ಅಶೋಕವನ ತಲುಪಿದ್ದ. ಅಲ್ಲಿ ವೇದ ಮಂತ್ರಗಳ ಉಚ್ಛಾರಣೆಯನ್ನು ಕೇಳಿದ್ದ, ಮತ್ತು ಯಜ್ಞಾದಿ ಕಾರ್ಯಗಳನ್ನು ನೋಡಿದ್ದನೆಂದು ವಾಲ್ಮೀಕಿ ರಾಮಾಯಣದಲ್ಲಿ ತಿಳಿಸಲಾಗಿದೆ

ಬ್ರಾಹ್ಮೀ ಮುಹೂರ್ತ: ಒಳಗೆ ಮನಸ್ಸು ಪ್ರಫುಲ್ಲ, ಸ್ಥಿರ, ಶಾಂತಸ್ಥಿತಿ - ಹೊರಗೆ ಶುದ್ಧ ಆಹ್ಲಾದಕರ ವಾತಾವರಣ; ಸಾಧನೆಗೆ ಇದು ಪ್ರಶಸ್ತ ಸಮಯ!
ಬ್ರಾಹ್ಮೀ ಮುಹೂರ್ತ
Follow us
ಸಾಧು ಶ್ರೀನಾಥ್​
|

Updated on: Aug 09, 2024 | 6:06 AM

ಬ್ರಾಹ್ಮೀ ಮುಹೂರ್ತ ಎಂಬುದು ಆಯುರ್ವೇದದ ಪ್ರಕಾರ ಮುಂಜಾನೆ ನಸುಕಿನ 3:00 ರಿಂದ 6:00 ರವರೆಗಿನ ಸಮಯ. ನಮ್ಮ ಪ್ರಾಚೀನ ಋಷಿಮುನಿಗಳು ಈ ಸಮಯಕ್ಕೆ ವಿಶೇಷವಾದಂತಹ ಸ್ಥಾನಮಾನವನ್ನು ನೀಡಿದ್ದಾರೆ. ಈ ಸಮಯದಲ್ಲಿ ಧ್ಯಾನ, ಯೋಗ, ಜಪ, ಪೂಜೆ ಮುಂತಾದ ಸತ್ಕರ್ಮಗಳನ್ನಾಚರಿಸಿದರೆ ಹೆಚ್ಚು ಫಲಪ್ರದವಾಗುತ್ತದೆ.

1. ಪ್ರತಿನಿತ್ಯ ಬ್ರಹ್ಮಮುಹೂರ್ತದಲ್ಲಿ ಎದ್ದೇಳುವುದರಿಂದ ಶರೀರದ ಸೌಂದರ್ಯ, ಬಲ, ವಿದ್ಯೆ, ಬುದ್ಧಿ ಹಾಗೂ ಆರೋಗ್ಯಗಳು ವೃದ್ಧಿಸುತ್ತವೆ. ಈ ಸಮಯದಲ್ಲಿ ನಿದ್ರಿಸುವುದು ಶಾಸ್ತ್ರ ನಿಷಿದ್ಧ.

2. ವೈಜ್ಞಾನಿಕ ದೃಷ್ಟಿಯಿಂದಲೂ ಬ್ರಹ್ಮ ಮುಹೂರ್ತಕ್ಕೆ ವಿಶೇಷವಾದ ಮಹತ್ವವಿದೆ. ಈ ಸಮಯದಲ್ಲಿ ವಾಯುಮಂಡಲ ಮಾಲಿನ್ಯದಿಂದ ವಿಮುಕ್ತವಾಗಿರುತ್ತದೆ, ಇದರಿಂದ ನಮ್ಮ ಶ್ವಾಸಕೋಶಗಳು ಶುದ್ಧಿಯಾಗುತ್ತದೆ. ಶುದ್ಧವಾಯುವಿನಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯವಾಗಿರುತ್ತವೆ.

3. ಯಾರು ಬ್ರಹ್ಮ ಮುಹೂರ್ತದಲ್ಲೆದ್ದು ನಡೆಯುತ್ತಾರೋ ಅವರ ಶರೀರದಲ್ಲಿ ಸಂಜೀವಿನೀ ಶಕ್ತಿಯ ಸಂಚಾರವಾಗುತ್ತದೆಂದು ಆಯುರ್ವೇದ ತಿಳಿಸುತ್ತದೆ. ಈ ಸಮಯದಲ್ಲಿ ಬೀಸುವ ಗಾಳಿಗೆ ಅಮೃತದಂತಹ ಶಕ್ತಿಯಿರುತ್ತದೆ. ರಾತ್ರಿಯ ವಿಶ್ರಾಂತಿಯ ನಂತರ ಶರೀರ ಹಾಗೂ ಬುದ್ಧಿ ಉಲ್ಲಸಿತವಾಗಿರುತ್ತವೆ.

4. ಬ್ರಾಹ್ಮೀ ಮುಹೂರ್ತದಲ್ಲಿ ಅಧ್ಯಯನ ಮಾಡಿದರೆ ಸುಲಭವಾಗಿ ಮನವರಿಕೆಯಾಗುತ್ತದೆ. ಅಧ್ಯಯನ ಮಾಡಲು ಬ್ರಹ್ಮ ಮುಹೂರ್ತವೇ ಪ್ರಶಸ್ತ.

5. ಪ್ರಮುಖ ಮಂದಿರಗಳ ಮುಖ್ಯದ್ವಾರ ತೆರೆಯುವುದು ಬ್ರಹ್ಮ ಮುಹೂರ್ತದ ಸಮಯದಲ್ಲೇ. ದೇವರ ಶೃಂಗಾರ ಹಾಗೂ ಪೂಜೆಗಳನ್ನು ಬ್ರಹ್ಮ ಮುಹೂರ್ತದಲ್ಲಿ ನಡೆಸಲಾಗುತ್ತದೆ. ಬ್ರಹ್ಮ ಮುಹೂರ್ತದಲ್ಲಿ ಭಗವಂತನ ಪೂಜೆ, ಧ್ಯಾನ ಹಾಗೂ ಪವಿತ್ರ ಕಾರ್ಯಗಳನ್ನು ಮಾಡುವುದರಿಂದ ಆತ್ಮ ಶಕ್ತಿ ಪ್ರಾಪ್ತಿಯಾಗುತ್ತದೆ. ಮನುಷ್ಯನ ಜ್ಞಾನ, ವಿವೇಕ, ಶಾಂತಿ, ಸುಖ ಮುಂತಾದ ಸದ್ಗುಣಗಳ ವೃದ್ಧಿಯಾಗುತ್ತದೆ.

6. ಬ್ರಾಹ್ಮೀ ಮುಹೂರ್ತದಲ್ಲಿ ಏಳುವುದರಿಂದ ಶರೀರದ ಸೌಂದರ್ಯ, ಬಲ, ವಿದ್ಯೆ, ಬುದ್ಧಿ ಹಾಗೂ ಆರೋಗ್ಯಗಳು ವೃದ್ಧಿಸುತ್ತವೆ ಎನ್ನುತ್ತದೆ ಪೂರ್ವಜರ ಜ್ಞಾನ. ತಮ್ಮ ಮುಂದಿನ ಪೀಳಿಗೆ ಈ ಮುಹೂರ್ತದ ಲಾಭ ಪಡೆಯಲೆಂದು ಅದರ ಪ್ರಯೋಜನಗಳನ್ನು ಹೇಳುವುದರ ಜೊತೆಗೆ, ಅದನ್ನು ಪಾಲಿಸದಿದ್ದರೆ ಆಗುವ ನಷ್ಟದ ಬಗ್ಗೆಯೂ ಕಿವಿಮಾತು ಹೇಳಿದ್ದಾರೆ.

ಬ್ರಾಹ್ಮೀ ಮುಹೂರ್ತೇ ಯಾ ನಿದ್ರಾ ಸಾ ಪುಣ್ಯಕ್ಷಯಕಾರಿಣೀ – ಅಂದರೆ ಬ್ರಹ್ಮ ಮುಹೂರ್ತದಲ್ಲಿ ಯಾರು ನಿದ್ರೆ ಮಾಡುತ್ತಾರೋ ಅವರಿಗೆ ಪುಣ್ಯಫಲಗಳು ನಾಶವಾಗುತ್ತವೆ ಎಂದು ಎಚ್ಚರಿಸಿದ್ದಾರೆ.

7. ಭಗವಂತನ ಸ್ಮರಣೆಯ ನಂತರ ಮೊಸರು, ತುಪ್ಪ, ಬಿಲ್ವ ಪತ್ರೆ, ಹೂವಿನ ಮಾಲೆ ಮುಂತಾದ ಪವಿತ್ರ ವಸ್ತುಗಳನ್ನು ನೋಡುವುದರಿಂದ ದಿನ ಶುಭವಾಗಿರುತ್ತದೆ.

8. ರಾತ್ರಿಯ ವಿಶ್ರಾಂತಿಯ ನಂತರ ಮನಸ್ಸು ಪ್ರಫುಲ್ಲವಾಗಿದ್ದು, ಶಾಂತವಾಗಿ, ಸ್ಥಿರವಾಗಿರುತ್ತದೆ. ಶುದ್ಧ ಮತ್ತು ಆಹ್ಲಾದಕರ ವಾತಾವರಣದಲ್ಲಿ ದೇವರ ಉಪಾಸನೆ, ಧ್ಯಾನ, ಯೋಗ, ಪೂಜೆಗಳನ್ನು ಮಾಡುವುದರಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯದಿಂದ ಕೂಡಿರುತ್ತವೆ.

9. ಆಲಸ್ಯವನ್ನು ಬಿಟ್ಟು ಬ್ರಹ್ಮ ಮುಹೂರ್ತದಲ್ಲೆದ್ದು ಪುಣ್ಯ ಕರ್ಮಗಳನ್ನು ಮಾಡಿದರೆ ಶ್ರೇಯಸ್ಸು ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು