ಮಹಾವಿಷ್ಣುವಿನ ಏಳನೆಯ ಅವತಾರವಾದ ಶ್ರೀರಾಮನು ಜನಿಸಿದ ನವಮಿ ದಿನ ಶ್ರೀ ರಾಮ ನವಮಿ ಹಬ್ಬ ಆಚರಿಸಲಾಗುತ್ತದೆ. ಈ ಬಾರಿ ಬಾಳೆ ಭಾನುವಾರ ಏಪ್ರಿಲ್ 10ರಂದು ಆಚರಿಸಲಾಗುವುದು. ಈ ದಿನ ಪುನರ್ವಸು ನಕ್ಷತ್ರದಲ್ಲಿ, ಕಟಕ ರಾಶಿಯಲ್ಲಿ, ಮಧ್ಯಾಹ್ನದ ವೇಳೆಯಲ್ಲಿ ಕರ್ಕಾಟಕ ಲಗ್ನದಲ್ಲಿ (Muhurat) ಅಯೋಧ್ಯೆಯಲ್ಲಿ ರಾಮನು ಜನಿಸಿದನೆಂಬ ನಂಬಿಕೆ ಇದೆ. ಹಿಂದೂ ಧರ್ಮದಲ್ಲಿ ಶ್ರೀ ರಾಮ ನವಮಿ ಎಂದರೆ ಹಬ್ಬದ ಸಂಭ್ರಮ (Spiritual). ಚೈತ್ರ ಮಾಸದ ಒಂಭತ್ತನೇ ದಿನ, ಅಂದರೆ ವರ್ಷದ ಮೊದಲ ತಿಂಗಳಿನಲ್ಲಿ ಬರುವ ಹಬ್ಬ (Ram Navami 2022).
ಪೌರಾಣಿಕ ಹಿನ್ನೆಲೆ
ಧರ್ಮ ಶಾಸ್ತ್ರಗಳ ಪ್ರಕಾರ ಅಯೋಧ್ಯೆಯ ರಾಜನಾದ ದಶರಥನಿಗೆ ಕೌಸಲ್ಯಾ, ಕೈಕೇಯೀ ಹಾಗೂ ಸುಮಿತ್ರೆ ಎಂಬ ಮೂರು ಜನ ಪತ್ನಿಯರಿದ್ದರು. ಆದರೆ ಯಾರಿಗೂ ಪುತ್ರ ಸಂತಾನವಾಗಿರಲಿಲ್ಲ. ನಂತರ ದಶರಥನು ಋಷಿಮುನಿಗಳ ಸಲಹೆಯಂತೆ ಪುತ್ರಕಾಮೇಷ್ಠಿ ಯಾಗವನ್ನು ಮಾಡಿಸಿದ. ಈ ಯಜ್ಞದಿಂದ ಸಂತುಷ್ಟನಾದ ಪ್ರಜಾಪತಿಯು ದಶರಥನಿಗೆ ದಿವ್ಯಪಾಯಸವನ್ನು ನೀಡುತ್ತಾನೆ. ಈ ದಿವ್ಯ ಪಾಯಸವನ್ನು ದಶರಥನು ತನ್ನ ಮೂವರು ಪತ್ನಿಯರಿಗೂ ಹಂಚುತ್ತಾನೆ. ಇದರಂತೆ ಚೈತ್ರ ಮಾಸದ ಶುಕ್ಲಪಕ್ಷದ ನವಮಿ ತಿಥಿಯಂದು ಮಧ್ಯಾಹ್ನ ಪುನರ್ವಸು ನಕ್ಷತ್ರದಲ್ಲಿ ಕೌಸಲ್ಯೆಗೆ ರಾಮನೂ, ಪುಷ್ಯನಕ್ಷತ್ರದ ದಶಮಿಯಂದು ಸೂರ್ಯೋದಯಕ್ಕೆ ಮುನ್ನ ಕೈಕೇಯಿಗೆ ಭರತನೂ, ಅದೇ ದಿನ ಆಶ್ಲೇಷಾ ನಕ್ಷತ್ರದಲ್ಲಿ ಮಧ್ಯಾಹ್ನ ಲಕ್ಷ್ಮಣ, ಶತ್ರುಘ್ನರೂ ಜನಿಸುತ್ತಾರೆ. ಹೀಗೆ ರಾಮನು ಜನಿಸಿದ ನವಮಿಯಂದು ರಾಮನವಮಿಯನ್ನಾಗಿ ಆಚರಿಸುತ್ತಾರೆ.
ಶ್ರೀ ರಾಮ ನವಮಿಯ ಮಹತ್ವ
ಶ್ರೀ ರಾಮನು ಜನಿಸಿದ ದಿನವೆಂದು ಆಚರಿಸಲಾಗುವ ಹಬ್ಬ ರಾಮನವಮಿ. ಅಯೋಧ್ಯೆಯ ರಾಜ ದಶರಥ ಹಾಗೂ ಕೌಸಲ್ಯೆಯ ಪುತ್ರನಾಗಿ ಮಹಾವಿಷ್ಣುವಿನ ಏಳನೇ ಅವತಾರವಾಗಿ ಶ್ರೀರಾಮನು ಜನಿಸುತ್ತಾನೆ. ಹಿಂದೂ ಗ್ರಂಥಗಳಲ್ಲಿ ಉಲ್ಲೇಖವಿರುವಂತೆ ನಾಲ್ಕು ಯುಗಗಳಲ್ಲಿ ಒಂದಾದ ತ್ರೇತಾಯುಗದಲ್ಲಿ ರಾಮನು ಜನಿಸಿದನು. ಈ ದಿನ ಶ್ರೀರಾಮನನ್ನು ಪೂಜಿಸಿದರೆ ಕೆಟ್ಟ ಶಕ್ತಿಗಳು ನಿವಾರಣೆಯಾಗಿ, ಭೂಮಿಯ ಮೇಲೆ ದೈವೀಕ ಶಕ್ತಿಯು ನೆಲೆಸುತ್ತದೆ.
ಧಾರ್ಮಿಕ ನಂಬಿಕೆಯ ಪ್ರಕಾರ ದೇವತೆಗಳು ಹಾಗೂ ದೇವರುಗಳು ಅವತಾರ ತಾಳಿದ ದಿನದಂದು ಭೂಮಿಯ ಮೇಲೆ ಅವರ ದೈವೀ ತತ್ತ್ವ, ಮಹ್ವತ್ವಗಳು ಹೆಚ್ಚಿನ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತದೆ. ಶ್ರೀ ರಾಮ ನವಮಿಯಂದು ಶ್ರೀ ರಾಮ ತತ್ತ್ವವು ಎಂದಿಗಿಂತಲೂ ಸಾವಿರಪಟ್ಟು ಹೆಚ್ಚು ಭೂಮಿಯಲ್ಲಿ ಕಾರ್ಯನಿರತವಾಗಿರುತ್ತದೆ. ಹೀಗಾಗಿ ಈ ದಿನ ರಾಮ ನಾಮ ಜಪ, ಶ್ರೀ ರಾಮನ ಉಪಾಸನೆಗಳನ್ನು ಮಾಡುವುದರಿಂದ ಬಹಳ ಪ್ರಯೋಜನ ಪಡೆಯಬಹುದೆಂದು ಹೇಳಲಾಗುತ್ತದೆ.
ರಾಮ ನವಮಿಯ ಆಧ್ಯಾತ್ಮಿಕ ಮಹತ್ವ
ಶ್ರೀ ರಾಮನ ಕುರಿತಾಗಿರುವ ಅಚ್ಚರಿಯ ಸಂಗತಿಗಳು ಏನು ಗೊತ್ತಾ?
ನಮ್ಮೊಳಗಿರುವ ಶ್ರೀ ರಾಮ: ಸತ್ಯಯುಗದಲ್ಲಿ ವಿವಿಧ ಗ್ರಹಗಳ ದೇವರು ಹಾಗೂ ರಾಕ್ಷಸರ ಮಧ್ಯೆ ಯುದ್ಧ ನಡೆದವು. ತ್ರೇತಾಯುಗದಲ್ಲಿ ಒಂದೇ ಗ್ರಹದಲ್ಲಿ ವಾಸಿಸುತ್ತಿದ್ದ ದೇವರು ಮತ್ತು ಅಸುರರ ಮಧ್ಯೆ ಯುದ್ಧ ನಡೆದವು. ಅಂದರೆ ಅಯೋಧ್ಯೆಯಿಂದ ರಾಮ ಹಾಗೂ ಲಂಕೆಯ ರಾವಣನ ಮಧ್ಯೆ ಯುದ್ಧ ನಡೆಯಿತು. ದ್ವಾಪರ ಯುಗದಲ್ಲಿ ಒಂದೇ ಕುಟುಂಬದಲ್ಲಿರುವ ಜನರ ಮಧ್ಯೆ ಯುದ್ಧಗಳು ನಡೆದವು. ಅಂದರೆ ಪಾಂಡವರು ಮತ್ತು ಕೌರವರ ಮಧ್ಯೆ. ಕಲಿಯುಗದಲ್ಲಿ ಯುದ್ಧಗಳು ನಮ್ಮೊಳಗೇ ನಡೆಯುತ್ತಿವೆ!
ರಾಮನು ನಮ್ಮ ಆತ್ಮವಾದರೆ, ಸೀತೆಯು ನಮ್ಮ ಮನಸ್ಸು, ಹನುಮಾನ್ ನಮ್ಮ ಜೀವಶಕ್ತಿಯಾದರೆ ರಾವಣನು ನಮ್ಮ ಅಹಂ. ಅಹಂ ಮನಸ್ಸನ್ನು ಆವರಿಸಿಕೊಂಡಾಗ ನಮ್ಮ ಆತ್ಮವು ಪ್ರಕ್ಷುಬ್ಧಗೊಳ್ಳುತ್ತದೆ. ಮನಸ್ಸು ಮತ್ತು ಆತ್ಮವನ್ನು ಸಮನತ್ವಯಗೊಳಿಸಲು ಧ್ಯಾನ ಮಾಡಿ, ಉಸಿರಾಟದ ಮೂಲಕ ನಮ್ಮ ಮನಸ್ಸು ಮತ್ತು ಆತ್ಮವನ್ನು ನಿಯಂತ್ರಿಸಬಹುದು. ರಾಮ ಮತ್ತು ಸೀತೆ ಒಂದಾದರೆ ಅಹಂ ನಾಶವಾಗುತ್ತದೆ.
ರಾಮ ನವಮಿ ಆಚರಣೆ ಅಂದರೆ ಉಪವಾಸ ಮಾಡುತ್ತಾ ಶ್ರೀರಾಮ ಜಪ, ರಾಮಾಯಣ ಪಾರಾಯಣ, ಕಲ್ಯಾಣ್ಯೋತ್ಸವ ಮಾಡಬೇಕು:
ಅನೇಕ ಕಡೆಗಳಲ್ಲಿ ಚೈತ್ರ ಮಾಸದ ಪ್ರತಿಪಾದದಿಂದ ಒಂಬತ್ತು ದಿನಗಳವರೆಗೆ ರಾಮ ನವಮಿ ಉತ್ಸವವು ನಡೆಯುತ್ತದೆ. ರಾಮ ನವಮಿಯಂದು ಶ್ರೀ ರಾಮನನ್ನು ಪೂಜಿಸಿ, ಅರ್ಚಿಸಲಾಗುತ್ತದೆ. ಈ ದಿನದಂದು ಉಪವಾಸವನ್ನು ಮಾಡಿದರೆ ಅತ್ಯಂತ ಶ್ರೇಷ್ಠ. ರಾಮ ನವಮಿಯಂದು ಬೆಳಗ್ಗೆಯಿಂದ ಮರುದಿನ ಬೆಳಗ್ಗೆಯವರೆಗೂ ಉಪವಾಸವನ್ನು ಕೈಗೊಳ್ಳಬೇಕು. ಈ ಸಮಯದಲ್ಲಿ ಶ್ರೀರಾಮ ಜಪ, ರಾಮಾಯಣ ಪಾರಾಯಣ, ಶ್ರೀ ರಾಮ ಸೀತಾ ಕಲ್ಯಾಣ್ಯೋತ್ಸವವನ್ನೂ ಮಾಡಬಹುದು.
ಕೆಲವೆಡೆ ಪ್ರತಿಪಾದದಿಂದ ನವಮಿಯವರೆಗೂ ಒಂಬತ್ತು ದಿನಗಳಲ್ಲಿ ಭಜನೆ ಹಾಗೂ ಕೀರ್ತನೆಗಳನ್ನು ಆಯೋಜಿಸುತ್ತಾರೆ. ಈ ದಿನ ಕೆಲವು ಭಕ್ತರು ಕಟ್ಟುನಿಟ್ಟಾದ ಉಪವಾಸ ವ್ರತವನ್ನು ಆಚರಿಸುತ್ತಾರೆ ಮತ್ತು ನಿರಾಹಾರ ಉಪವಾಸವನ್ನೂ ಮಾಡುವವರಿದ್ದಾರೆ. ಕೆಲವರು ಸೌಮ್ಯವಾದ ಉಪವಾಸವನ್ನು ಆಚರಿಸಿ, ನೀರು ಹಾಗೂ ಹಣ್ಣುಗಳನ್ನು ಸೇವಿಸುತ್ತಾರೆ. ರಾಮನವಮಿಯಂದು ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಗೆ ಭೇಟಿ ನೀಡಿ ಸರಯೂ ನದಿಯಲ್ಲಿ ಮಿಂದು ಶ್ರೀರಾಮನ ದರ್ಶನ ಮಾಡಿ ಪಾವನರಾಗುತ್ತಾರೆ.
ಧರ್ಮವನ್ನು ರಕ್ಷಿಸಲು ಮತ್ತು ಉತ್ತಮ ನಡತೆಯ ಮಾದರಿಯನ್ನು ಹೊಂದಿಸಲು ಅವರು ತಮ್ಮ ಇಡೀ ಜೀವನವನ್ನು ಪಣಕ್ಕಿಟ್ಟರು. ಅವರು ತಮ್ಮನ್ನು ತಾವು ಆದರ್ಶ ಪುರುಷ ಎಂದು ಜೀವನದುದ್ದಕ್ಕೂ ನೋಡಿಕೊಂಡರು. ಈ ಕಾರಣದಿಂದ ಅವನನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ ಎಂದು ಕರೆಯುತ್ತಾರೆ. ಕಷ್ಟಕಾಲದಲ್ಲಿಯೂ ಶ್ರೀರಾಮನು ಧರ್ಮ ಮಾರ್ಗವನ್ನು ಅರ್ಧಕ್ಕೆ ಬಿಡದೆ ಸಮಾಜದ ಮುಂದೆ ತಾನೊಬ್ಬ ಪರಿಪೂರ್ಣ ವ್ಯಕ್ತಿ ಎಂದು ಸಾಬೀತುಪಡಿಸಿದನು.
ರಾಮ ನವಮಿಯ ಪೂಜೆ ವಿಧಾನ:
ರಾಮ ನವಮಿಯಂದು ಈ ಮೇಲಿನಂತೆ ರಾಮನನ್ನು ಪೂಜಿಸುವುದರಿಂದ ಅಥವಾ ರಾಮ ನವಮಿ ವ್ರತವನ್ನು ಆಚರಿಸುವುದರಿಂದ ಭಗವಾನ್ ರಾಮನ ಆಶೀರ್ವಾದವನ್ನು ಪಡೆದುಕೊಳ್ಳಬಹುದು. ರಾಮ ನವಮಿ ದಿನದಂದು ಶುಭ ಮುಹೂರ್ತದಲ್ಲಿ ರಾಮನನ್ನು ಪೂಜಿಸಿದರೆ ಪೂಜೆಯ ಫಲ ಮತ್ತಷ್ಟು ಹೆಚ್ಚಾಗುತ್ತದೆ ಎನ್ನುವುದು ವಾಡಿಕೆ. (ಬರಹ -ವಾಟ್ಸಪ್ ಸಂದೇಶ)