AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu Tips: ಮನೆಯ ಮುಂದೆ ಹುಣಸೆ ಮರ ಇದ್ದರೆ ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಸುತ್ತಮುತ್ತಲಿನ ಪರಿಸರವು ಕುಟುಂಬದ ಸುಖ-ಸಮೃದ್ಧಿ ಮೇಲೆ ಪ್ರಭಾವ ಬೀರುತ್ತದೆ. ಮನೆಯ ಮುಂದೆ ಹುಣಸೆ ಮರ ನೆಡುವುದು ಅಶುಭವೆಂದು ವಾಸ್ತು ತಜ್ಞರು ಹೇಳುತ್ತಾರೆ. ಇದು ನಕಾರಾತ್ಮಕ ಶಕ್ತಿ ಹೆಚ್ಚಿಸಿ ಆರ್ಥಿಕ ಸಮಸ್ಯೆ, ಕುಟುಂಬ ಕಲಹ ಮತ್ತು ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಮನೆಯ ಪ್ರವೇಶ ದ್ವಾರದ ಮುಂದೆ ಈ ಮರ ಇರುವುದನ್ನು ತಪ್ಪಿಸಿ; ಅಕಸ್ಮಾತ್ ಇದ್ದರೆ ವಾಸ್ತು ಪರಿಹಾರಗಳನ್ನು ಅನುಸರಿಸಿ.

Vasthu Tips: ಮನೆಯ ಮುಂದೆ ಹುಣಸೆ ಮರ ಇದ್ದರೆ ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?
ಹುಣಸೆ ಮರ
ಅಕ್ಷತಾ ವರ್ಕಾಡಿ
|

Updated on: Feb 19, 2026 | 11:17 AM

Share

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಸುತ್ತಮುತ್ತಲಿನ ಪರಿಸರವು ಕುಟುಂಬದ ಸುಖ, ಸಮೃದ್ಧಿ ಮತ್ತು ಮಾನಸಿಕ ಶಾಂತಿಯ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ಅನೇಕರು ತಮ್ಮ ಮನೆಗಳ ಮುಂದೆ ಹಣ್ಣಿನ ಮರಗಳು, ಹೂವಿನ ಗಿಡಗಳು ಮತ್ತು ತರಕಾರಿ ಸಸ್ಯಗಳನ್ನು ನೆಟ್ಟು ಮನೆಗೆ ಹಸಿರಿನ ಸೊಬಗು ನೀಡುತ್ತಾರೆ. ಸಾಮಾನ್ಯವಾಗಿ ಇದು ಒಳ್ಳೆಯದ್ದೇ. ಆದರೆ ವಾಸ್ತು ತಜ್ಞರ ಪ್ರಕಾರ, ಕೆಲವು ಮರಗಳು ತಪ್ಪು ಸ್ಥಳದಲ್ಲಿ ಇದ್ದರೆ ವಾಸ್ತು ದೋಷಗಳಿಗೆ ಕಾರಣವಾಗಬಹುದು.

ವಿಶೇಷವಾಗಿ ಮನೆಯ ಮುಂದೆ ಅಥವಾ ಮನೆಯ ಹತ್ತಿರ ಹುಣಸೆ ಮರ ಇರುವುದು ವಾಸ್ತು ಶಾಸ್ತ್ರದ ಪ್ರಕಾರ ಅಶುಭ ಎಂದು ಹೇಳಲಾಗುತ್ತದೆ. ಹುಣಸೆ ಮರವು ಗಾಢ ನೆರಳನ್ನು ನೀಡುವ ಮರವಾಗಿದ್ದು, ಇದರ ನೆರಳು ಮನೆಯ ಮೇಲೆ ಶುಭವಲ್ಲ ಎಂದು ತಜ್ಞರು ಸಲಹೆ ನೀಡುತ್ತಾರೆ. ಮನೆಯ ಮುಖ್ಯ ಬಾಗಿಲಿನ ಎದುರು ಹುಣಸೆ ಮರ ಇದ್ದರೆ ಅದು ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಬಹುದು ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಮನೆಯ ಹತ್ತಿರ ಪಾರಿಜಾತ ಗಿಡ ಇರುವುದು ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ವಾಸ್ತು ನಂಬಿಕೆಗಳ ಪ್ರಕಾರ, ಮನೆಯ ಮುಂದೆ ಹುಣಸೆ ಮರ ಇರುವುದು ಮನೆಯ ಸದಸ್ಯರಿಗೆ ಆರ್ಥಿಕ ಸಮಸ್ಯೆ, ಕುಟುಂಬ ಕಲಹಗಳು ಮತ್ತು ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ವಿಶೇಷವಾಗಿ ಮನೆಯ ಪ್ರವೇಶ ದ್ವಾರದ ಮುಂದೆ ಈ ಮರ ಇರುವುದರಿಂದ ಬಡತನ, ಸಾಲದ ಸಮಸ್ಯೆಗಳು ಮತ್ತು ಅಭಿವೃದ್ಧಿಯಲ್ಲಿ ವಿಳಂಬ ಉಂಟಾಗಬಹುದು ಎಂದು ಎಚ್ಚರಿಸಲಾಗಿದೆ.

ಆದ್ದರಿಂದ, ಮನೆಯ ಆವರಣದಲ್ಲಿ ಹುಣಸೆ ಮರ ನೆಡುವುದನ್ನು ತಪ್ಪಿಸುವುದು ಉತ್ತಮ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ. ಈಗಾಗಲೇ ಹುಣಸೆ ಮರ ಇದ್ದರೆ, ಅದರ ನೆರಳು ಮನೆ ಮೇಲೆ ಬೀಳದಂತೆ ಕ್ರಮ ಕೈಗೊಳ್ಳುವುದು ಅಥವಾ ವಾಸ್ತು ಪರಿಹಾರಗಳನ್ನು ಅನುಸರಿಸುವುದು ಒಳಿತು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್