ತಮಿಳುನಾಡಿನ ಆ ವ್ಯಕ್ತಿ ಏಲಿಯನ್ ಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ! ಯಾಕೆ ಗೊತ್ತಾ?

Alien Temple in Salem: ಲೋಕನಾಥನ್​​​ ಅವರು ಅನ್ಯಗ್ರಹ ಜೀವಿಗಳಿಗಾಗಿ ನಿರ್ಮಿಸಿರುವ ದೇಗುಲದ ನಿರ್ಮಾಣ ಕಾರ್ಯ ಇನ್ನೂ ನಡೆಯುತ್ತಿದ್ದು, ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿರುವುದರಿಂದ ಇಲ್ಲಿನ ವಿಶಿಷ್ಟ ದೇವಾಲಯದ ಕುರಿತು ಚರ್ಚೆ ನಡೆದಿದೆ.

ತಮಿಳುನಾಡಿನ ಆ ವ್ಯಕ್ತಿ ಏಲಿಯನ್ ಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ! ಯಾಕೆ ಗೊತ್ತಾ?
ತಮಿಳುನಾಡಿನ ಆ ವ್ಯಕ್ತಿ ಏಲಿಯನ್ ಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ!
Follow us
ಸಾಧು ಶ್ರೀನಾಥ್​
|

Updated on:Aug 03, 2024 | 9:36 AM

ಸೇಲಂ (ತಮಿಳುನಾಡು): ದೇವಾನುದೇವತೆಗಳ ವಿಗ್ರಹಗಳನ್ನು ಕೆತ್ತಿ, ಸಾಂಪ್ರದಾಯಿಕ ದೇವಾಲಯಗಳನ್ನು ನಿರ್ಮಿಸುವುದು ಅನಾದಿ ಕಾಲದಿಂದಲೂ ನಡೆದುಬಂದಿದೆ. ಇನ್ನು ಆಗಾಗ್ಗೆ ಮನುಷ್ಯರಿಗಾಗಿಯೂ ಅವರವರ ಭಾವ ಭಕುತಿಗೆ ತಕ್ಕಂತೆ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದುಂಟು. ಆದರೆ ತಮಿಳುನಾಡಿನ ಸೇಲಂನಲ್ಲಿ ವ್ಯಕ್ತಿಯೊಬ್ಬರು ಅನ್ಯಲೋಕದ ದೇವರಿಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ. ಅನ್ಯಲೋಕದ ಆ ದೇವ ಭೂಲೋಕದ ತನ್ನ ಭಕ್ತರನ್ನು ನೈಸರ್ಗಿಕ ವಿಕೋಪಗಳಿಂದ (natural disasters) ರಕ್ಷಿಸುವ ಶಕ್ತಿ ಹೊಂದಿದ್ದಾರೆ ಎನ್ನುತ್ತಾರೆ ಆ ದೇವಸ್ಥಾನವ (spiritual ) ನಿರ್ಮಿಸಿದಾತ.

ಸೇಲಂನ ಮಲ್ಲಮೂಪಂಬಟ್ಟಿಯ (Mallamoopambatti in Salem) ಲೋಗನಾಥನ್ ಅವರು (Loganathan) ಸುಮಾರು ಮುಕ್ಕಾಲು ಎಕರೆ ಭೂಮಿಯಲ್ಲಿ ಹರಡಿರುವ ಅನ್ಯಗ್ರಹ ದೇವರನ್ನು ಪ್ರತಿಷ್ಠಾಪಿಸಿದ್ದಾರೆ. “ನಾನು ಅನ್ಯಗ್ರಹ ಜೀವಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ದೇವಾಲಯವನ್ನು ನಿರ್ಮಿಸಲು ಅವರಿಂದ ಅನುಮತಿ ಸಹ ಪಡೆದಿದ್ದೇನೆ” ಎಂದು ಅವರು ಹೇಳುತ್ತಾರೆ. ಪರಕೀಯ ‘ದೇವರು’ ಅಲ್ಲದೆ ಶಿವ, ಪಾರ್ವತಿ, ಮುರುಗನ್, ಕಾಳಿ ಮುಂತಾದ ದೇವ-ದೇವತೆಗಳ ವಿಗ್ರಹಗಳನ್ನು ಸಹ ನೆಲದಿಂದ 11 ಅಡಿ ಕೆಳಗಿರುವ ನೆಲಮಾಳಿಗೆಯಲ್ಲಿ ಸ್ಥಾಪಿಸಲಾಗಿದೆ.

Also Read: ಇಂದು ಶನಿವಾರ – ಶನಿ ಮಹಾತ್ಮನ ದಿನಕ್ಕೆ ಇಲ್ಲಿದೆ ಆರ್ಥಿಕ ಪರಿಹಾರಗಳು, ಇದರಿಂದ ಖಜಾನೆ ತುಂಬುತ್ತದೆ

ಜಗತ್ತಿನಲ್ಲಿ ನೈಸರ್ಗಿಕ ವಿಕೋಪಗಳು ಹೆಚ್ಚುತ್ತಿರುವಾಗ, ಅವುಗಳನ್ನು ತಡೆಯುವ ಶಕ್ತಿ ಅನ್ಯಗ್ರಹ ಜೀವಿಗಳಿಗೆ ಇದೆ ಎಂದು ಲೋಗನಾಥನ್ ಅವರು ನಂಬುತ್ತಾರೆ. ಅವರ ನಂಬಿಕೆಯ ಪ್ರಕಾರ, ಏಲಿಯನ್‌ಗಳು ಚಲನಚಿತ್ರಗಳಲ್ಲಿ ಚಿತ್ರಿಸುವಂತಹವರಲ್ಲ. ಬಾಳೆ ಎಲೆಯನ್ನು ದೇಹಕ್ಕೆ ಸುತ್ತಿಕೊಂಡರೆ ಅನ್ಯಗ್ರಹ ಜೀವಿಗಳ ವಿಕಿರಣದಿಂದ ಪಾರಾಗಬಹುದು ಎಂಬ ಹೇಳಿಕೆಯನ್ನೂ ಲೋಗನಾಥನ್ ನೀಡಿದ್ದಾರೆ.

Also Read: Monsoon Love Predictions – ಮುಂಗಾರು ಮಳೆಯಲ್ಲಿ ಪ್ರೀತಿಯ ಅಲೆಗಳು.. ಯಾವ ರಾಶಿಯವರೆಲ್ಲಾ ಪ್ರೀತಿ-ಪ್ರೇಮದಲ್ಲಿ ನೆನೆಯುತ್ತಾರೆ ನೋಡಿ!

ಲೋಕನಾಥನ್​​​ ಅವರು ಅನ್ಯಗ್ರಹ ಜೀವಿಗಳಿಗಾಗಿ ನಿರ್ಮಿಸಿರುವ ದೇಗುಲದ ನಿರ್ಮಾಣ ಕಾರ್ಯ ಇನ್ನೂ ನಡೆಯುತ್ತಿದ್ದು, ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿರುವುದರಿಂದ ಇಲ್ಲಿನ ವಿಶಿಷ್ಟ ದೇವಾಲಯದ ಕುರಿತು ಚರ್ಚೆ ನಡೆದಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:30 am, Sat, 3 August 24

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು