AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ನಿಂತು ಅಥವಾ ಮಾತನಾಡುತ್ತಾ ಊಟ ಮಾಡುವ ಅಭ್ಯಾಸ ನಿಮಗಿದ್ಯಾ? ವಾಸ್ತು ತಜ್ಞರು ಏನ್​​ ಹೇಳ್ತಾರೆ ಕೇಳಿ

ಡಾ. ಬಸವರಾಜ ಗುರೂಜಿ ಅವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಆಹಾರ ಸೇವನೆಯ ಸರಿಯಾದ ವಿಧಾನದ ಬಗ್ಗೆ ಚರ್ಚಿಸಿದ್ದಾರೆ. ನಿಂತು ಊಟ ಮಾಡುವುದು ಅನುಚಿತ. ಆಹಾರವನ್ನು ಗೌರವದಿಂದ ಸ್ವೀಕರಿಸುವುದು, ತಾಳ್ಮೆಯಿಂದ ತಿನ್ನುವುದು ಮತ್ತು ಊಟದ ಸಮಯದಲ್ಲಿ ಮಾತನಾಡದಿರುವುದು ಮುಖ್ಯ ಎಂದು ತಿಳಿಸಿದ್ದಾರೆ. ರಾತ್ರಿಯ ಊಟದಲ್ಲಿ ಮೊಸರು ಮತ್ತು ಎಳ್ಳಿನ ಪದಾರ್ಥಗಳನ್ನು ಸೇವಿಸಬಾರದು ಎಂದೂ ಸಲಹೆ ನೀಡಿದ್ದಾರೆ.

Daily Devotional: ನಿಂತು ಅಥವಾ ಮಾತನಾಡುತ್ತಾ ಊಟ ಮಾಡುವ ಅಭ್ಯಾಸ ನಿಮಗಿದ್ಯಾ? ವಾಸ್ತು ತಜ್ಞರು ಏನ್​​ ಹೇಳ್ತಾರೆ ಕೇಳಿ
ನಿಂತು ಊಟ ಮಾಡುವುದು
ಅಕ್ಷತಾ ವರ್ಕಾಡಿ
|

Updated on: Aug 20, 2025 | 8:15 AM

Share

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಆಹಾರ ಸೇವನೆಯ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ವಿವರಿಸಿದ್ದಾರೆ. ಪ್ರಾಚೀನ ಕಾಲದಿಂದಲೂ ಅನ್ನವನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಊಟವನ್ನು ಒಂದು ಪೂಜೆಯಂತೆ ಪರಿಗಣಿಸಿ, ತಾಳ್ಮೆ ಮತ್ತು ಭಕ್ತಿಯಿಂದ ಸೇವಿಸಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಈ ಸಂಪ್ರದಾಯಗಳು ಮರೆಯಾಗುತ್ತಿವೆ. ಹೆಚ್ಚಿನ ಜನರು ನಿಂತುಕೊಂಡು ಅಥವಾ ಆತುರದಲ್ಲಿ ಊಟ ಮಾಡುತ್ತಾರೆ ಎಂದು ಗುರೂಜಿ ವಿವರಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಗುರೂಜಿಯವರು ಅನ್ನವನ್ನು ಪರಬ್ರಹ್ಮದ ಸ್ವರೂಪವೆಂದು ಪರಿಗಣಿಸಿ, ಗೌರವದಿಂದ ಸ್ವೀಕರಿಸಬೇಕು ಎಂದು ಹೇಳಿದ್ದಾರೆ. ಊಟ ಮಾಡುವಾಗ ಮಾತನಾಡುವುದು, ಫೋನ್ ಬಳಸುವುದು, ಅಥವಾ ಬೇರೆ ಯಾವುದೇ ಕೆಲಸಗಳಲ್ಲಿ ತೊಡಗುವುದು ಸರಿಯಲ್ಲ. ಆಹಾರದ ಕಡೆಗೆ ಸಂಪೂರ್ಣ ಗಮನವಿರಬೇಕು. “ಅನ್ನಪೂರ್ಣಾಯೇ ನಮಃ” ಎಂಬ ಶ್ಲೋಕದ ಮಹತ್ವ ಮತ್ತು ಹರಿರ್ದಾತ ಹರಿರ್ಭೋಕ್ತ ಹರಿರನ್ನಂ ಪ್ರಜಾಪತಯೇ ಎಂಬ ಶ್ಲೋಕದ ಮೂಲಕ ಆಹಾರದ ಪವಿತ್ರತೆಯನ್ನು ಇಲ್ಲಿ ಒತ್ತಿ ಹೇಳಲಾಗಿದೆ.

ಇದನ್ನೂ ಓದಿ: ಶಾಸ್ತ್ರಗಳ ಪ್ರಕಾರ ಪ್ರಾಣಿಗಳಿಗೆ ಆಹಾರ ನೀಡುವುದರಿಂದ ಸಿಗುತ್ತೆ ಅಪಾರ ಪ್ರಯೋಜನ

ರಾತ್ರಿಯ ಊಟದಲ್ಲಿ ಮೊಸರು ಮತ್ತು ಎಳ್ಳಿನ ಪದಾರ್ಥಗಳನ್ನು ಸೇವಿಸುವುದು ಒಳ್ಳೆಯದಲ್ಲ. ಎಡಗೈಯಿಂದ ತಟ್ಟೆಯನ್ನು ಹಿಡಿಯುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ. ಸಾಧ್ಯವಾದಷ್ಟು ಪೂರ್ವಾಭಿಮುಖವಾಗಿ ಅಥವಾ ಉತ್ತರಾಭಿಮುಖವಾಗಿ ಕುಳಿತು ಆಹಾರ ಸೇವಿಸುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ