AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಕಳಸಕ್ಕೆ ಎಲೆ ಇಡುವ ವಿಷಯದಲ್ಲಿ ಈ ತಪ್ಪುಗಳನ್ನು ಮಾಡಬೇಡಿ

ಕಲಶವು ಮನೆಗೆ ಶಕ್ತಿಯನ್ನು ನೀಡುವ ಒಂದು ಪರಿಕರ. ವಾರಕ್ಕೊಮ್ಮೆ ಕಲಶ ಬದಲಾಯಿಸಿದರೆ ಐದು ಎಲೆಗಳನ್ನು, ಮೂರು ದಿನಕ್ಕೊಮ್ಮೆ ಬದಲಾಯಿಸಿದರೆ ಮೂರು ಎಲೆಗಳನ್ನು ಇಡಬೇಕು. ಒಣಗಿದ ಎಲೆಗಳನ್ನು ಕಸಕ್ಕೆ ಹಾಕದೆ, ನೀರಿನಲ್ಲಿ ಅಥವಾ ಮರದ ಕೆಳಗೆ ಹಾಕಬೇಕು. ಐದು ಎಲೆಗಳು ಪಂಚಭೂತಗಳನ್ನು ಪ್ರತಿನಿಧಿಸುತ್ತವೆ ಮತ್ತು ಮನೆಗೆ ಶ್ರೇಯಸ್ಸು ಮತ್ತು ಆರೋಗ್ಯವನ್ನು ತರುತ್ತವೆ ಎಂದು ಡಾ. ಬಸವರಾಜ ಗುರೂಜಿಯವರು ವಿವರಿಸಿದ್ದಾರೆ.

Daily Devotional: ಕಳಸಕ್ಕೆ ಎಲೆ ಇಡುವ ವಿಷಯದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
Kalasha
ಅಕ್ಷತಾ ವರ್ಕಾಡಿ
|

Updated on:Jul 10, 2025 | 8:32 AM

Share

ಹಿಂದೂ ಸಂಸ್ಕೃತಿಯಲ್ಲಿ ಕಲಶವು ಪವಿತ್ರವಾದ ಮತ್ತು ಮಹತ್ವಪೂರ್ಣವಾದ ವಸ್ತುವಾಗಿದೆ. ಇದನ್ನು ಸಾಮಾನ್ಯವಾಗಿ ಪೂಜಾ ಕಾರ್ಯಕ್ರಮಗಳಲ್ಲಿ ಬಳಸಲಾಗುತ್ತದೆ ಮತ್ತು ಮನೆಯಲ್ಲಿ ಇರಿಸುವುದರಿಂದ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಕಲಶಕ್ಕೆ ಸಂಬಂಧಿಸಿದ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಅದರಲ್ಲಿ ಮುಖ್ಯವಾದದ್ದು ಕಲಶದಲ್ಲಿ ಎಷ್ಟು ಎಲೆಗಳನ್ನು ಇಡಬೇಕು ಎಂಬುದು.

ಕಲಶವನ್ನು ವಾರಕ್ಕೊಮ್ಮೆ ಬದಲಾಯಿಸುವುದಾದರೆ, ಐದು ಎಲೆಗಳನ್ನು ಇಡಬೇಕು. ಐದು ಎಲೆಗಳು ಪಂಚಭೂತಗಳಾದ ಭೂಮಿ, ಅಗ್ನಿ, ಆಕಾಶ, ನೀರು ಮತ್ತು ವಾಯುವನ್ನು ಪ್ರತಿನಿಧಿಸುತ್ತವೆ. ಇದು ಮನೆಗೆ ಸಮಗ್ರವಾದ ರಕ್ಷಣೆ ಮತ್ತು ಸಮೃದ್ಧಿಯನ್ನು ನೀಡುತ್ತದೆ ಎಂದು ನಂಬಲಾಗಿದೆ. ಮೂರು ದಿನಗಳಿಗೊಮ್ಮೆ ಕಲಶವನ್ನು ಬದಲಾಯಿಸುವುದಾದರೆ, ಮೂರು ಎಲೆಗಳನ್ನು ಇಡಬೇಕು. ಎಲೆಗಳು ತಾಜಾವಾಗಿರಬೇಕು ಮತ್ತು ಒಣಗಿದ ಎಲೆಗಳನ್ನು ಬಳಸಬಾರದು. ಒಣಗಿದ ಎಲೆಗಳನ್ನು ಕಸಕ್ಕೆ ಎಸೆಯದೆ, ನೀರಿನಲ್ಲಿ ಅಥವಾ ಮರದ ಬುಡದಲ್ಲಿ ಬಿಡಬೇಕು ಎಂದು ಗುರೂಜಿ ಸಲಹೆ ನೀಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ
Image
ಈ ದೇವಾಲಯಕ್ಕೆ ಗಂಡ ಹೆಂಡತಿ ಒಟ್ಟಿಗೆ ಹೋಗುವಂತಿಲ್ಲ, ಯಾಕೆ ಗೊತ್ತಾ?
Image
ಈ ಪ್ರಾಣಿಗಳು ನಿಮ್ಮ ಕನಸಿನಲ್ಲಿ ಪದೇ ಪದೇ ಕಾಣಿಸಿಕೊಂಡರೆ ಅದೃಷ್ಟದ ಸೂಚನೆ
Image
ಕೇದಾರನಾಥ ಯಾತ್ರೆಯ ಸಮಯದಲ್ಲಿ ಈ ವಸ್ತುಗಳನ್ನು ತೆಗೆದುಕೊಂಡು ಹೋಗಲೇಬಾರದು
Image
ವಾರದಲ್ಲಿ ಈ ಎರಡು ದಿನ ಬಟ್ಟೆ ಒಗೆಯಲೇಬೇಡಿ; ಕಷ್ಟಗಳು ತಪ್ಪಿದಲ್ಲ!

ಇದನ್ನೂ ಓದಿ: ಮದುವೆ ಸಮಯದಲ್ಲಿ ಅಲಂಕೃತ ತೆಂಗಿನಕಾಯಿ ಬಳಸುವುದು ಶುಭವೇ?

ಕಲಶಕ್ಕೆ ಬಳಸುವ ಎಲೆಗಳನ್ನು ಮಾವಿನ ಎಲೆ ಅಥವಾ ವೀಳ್ಯದ ಎಲೆಗಳನ್ನಾಗಿರಬಹುದು. ಎರಡೂ ರೀತಿಯ ಎಲೆಗಳು ಒಂದೇ ರೀತಿಯ ಪರಿಣಾಮವನ್ನು ಬೀರುತ್ತವೆ. ಕಲಶದಲ್ಲಿ ಬೆಳ್ಳಿ ಅಥವಾ ಚಿನ್ನದ ಎಲೆಗಳನ್ನು ಬಳಸುವುದು ಕೂಡ ಒಳ್ಳೆಯದು ಎಂದು ಹೇಳಲಾಗಿದೆ. ಕಲಶದಲ್ಲಿ ಮಹಾಲಕ್ಷ್ಮಿ ಮತ್ತು ಸರಸ್ವತಿಯ ಆವಾಸವಿದೆ ಎಂದು ನಂಬಲಾಗಿದೆ. ಆದ್ದರಿಂದ ಕಲಶವನ್ನು ಸ್ವಚ್ಛವಾಗಿ ಮತ್ತು ಶುಭ್ರವಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯ. ಐದು ಎಲೆಗಳನ್ನು ಇಟ್ಟುಕೊಳ್ಳುವುದರಿಂದ ಮನೆಗೆ ಶ್ರೇಯಸ್ಸು, ಆರೋಗ್ಯ ಮತ್ತು ಅದೃಷ್ಟ ಬರುತ್ತದೆ ಎಂದು ನಂಬಲಾಗಿದೆ. ಯಾವುದೇ ಮಾಟ ಮಂತ್ರಗಳಿಂದಲೂ ಮನೆಗೆ ತೊಂದರೆ ಆಗುವುದಿಲ್ಲ ಎಂದು ಗುರೂಜಿ ವಿವರಿಸಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:30 am, Thu, 10 July 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!