AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD News: ತಿರುಮಲ ಶ್ರೀವಾರಿ ಭಕ್ತರೇ ಎಚ್ಚರ; 259 ನಕಲಿ ವೆಬ್‌ಸೈಟ್‌ಗಳು ಬಂದ್, ಸೈಬರ್ ಕ್ರೈಮ್ ತನಿಖೆ ಚುರುಕು!

ತಿರುಮಲ ಶ್ರೀವಾರಿ ದರ್ಶನ, ಸೇವೆಗಳು ಮತ್ತು ವಸತಿ ಬುಕಿಂಗ್ ಹೆಸರಿನಲ್ಲಿ ಸೈಬರ್ ವಂಚನೆಗಳು ಹೆಚ್ಚುತ್ತಿವೆ ಎಂದು ಟಿಟಿಡಿ ಭಕ್ತರಿಗೆ ಎಚ್ಚರಿಕೆ ನೀಡಿದೆ. ನಕಲಿ ವೆಬ್‌ಸೈಟ್‌ಗಳು, ವಾಟ್ಸಾಪ್ ಗುಂಪುಗಳ ಮೂಲಕ ಹಣ ವಸೂಲಿ ಮಾಡಲಾಗುತ್ತಿದೆ. ಟಿಟಿಡಿ ಈಗಾಗಲೇ 259 ನಕಲಿ ವೆಬ್‌ಸೈಟ್‌ಗಳನ್ನು ಬಂದ್ ಮಾಡಿದೆ. ಭಕ್ತರು ಅಧಿಕೃತ ಟಿಟಿಡಿ ವೆಬ್‌ಸೈಟ್ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ಮಾತ್ರ ಬುಕಿಂಗ್ ಮಾಡಬೇಕೆಂದು ಮನವಿ ಮಾಡಿದೆ.

TTD News: ತಿರುಮಲ ಶ್ರೀವಾರಿ ಭಕ್ತರೇ ಎಚ್ಚರ; 259 ನಕಲಿ ವೆಬ್‌ಸೈಟ್‌ಗಳು ಬಂದ್, ಸೈಬರ್ ಕ್ರೈಮ್ ತನಿಖೆ ಚುರುಕು!
ತಿರುಮಲ ಶ್ರೀವಾರಿ ದರ್ಶನImage Credit source: Getty Images
ಅಕ್ಷತಾ ವರ್ಕಾಡಿ
|

Updated on:Aug 15, 2026 | 2:21 PM

Share

ತಿರುಮಲ ಶ್ರೀವಾರಿ ದರ್ಶನ, ಆರ್ಜಿತ ಸೇವೆಗಳು ಮತ್ತು ವಸತಿ ಬುಕಿಂಗ್ ಹೆಸರಿನಲ್ಲಿ ಸೈಬರ್ ವಂಚನೆಗಳು ಹೆಚ್ಚುತ್ತಿದ್ದು, ಭಕ್ತರು ಜಾಗರೂಕರಾಗಿರಬೇಕೆಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮನವಿ ಮಾಡಿದೆ. ನಕಲಿ ವೆಬ್‌ಸೈಟ್‌ಗಳು, ವಾಟ್ಸಾಪ್ ಗ್ರೂಪ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಭಕ್ತರನ್ನು ವಂಚಿಸಿ ಹಣ ಸಂಗ್ರಹಿಸುತ್ತಿರುವ ಕುರಿತು ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಟಿಟಿಡಿ ಈ ಎಚ್ಚರಿಕೆಯನ್ನು ನೀಡಿದೆ.

ಟಿಟಿಡಿ ಹೆಸರಿನಲ್ಲಿ ನಡೆಯುತ್ತಿರುವ ನಕಲಿ ಬುಕಿಂಗ್ ವಂಚನೆ:

ಕೆಲವು ವಂಚಕರು ಟಿಟಿಡಿಯ ಅಧಿಕೃತ ಹೆಸರು, ಲೋಗೋ, ಚಿತ್ರಗಳು ಹಾಗೂ ಟ್ರೇಡ್‌ಮಾರ್ಕ್‌ಗಳನ್ನು ಅಕ್ರಮವಾಗಿ ಬಳಸಿ ನಕಲಿ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ನಡೆಸುತ್ತಿದ್ದಾರೆ. ಶ್ರೀವಾರಿಯ ಶೀಘ್ರ ದರ್ಶನ, ಸೇವೆಗಳು ಮತ್ತು ವಸತಿ ಕೊಠಡಿಗಳನ್ನು ಕಾಯ್ದಿರಿಸಿಕೊಡುವುದಾಗಿ ನಂಬಿಸಿ ಭಕ್ತರಿಂದ ಬೃಹತ್ ಮೊತ್ತದ ಹಣ ವಸೂಲಿ ಮಾಡಲಾಗುತ್ತಿದೆ. ವಿಶೇಷವಾಗಿ ವಾಟ್ಸಾಪ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಬರುವ ಅಪರಿಚಿತ ಬುಕಿಂಗ್ ಆಫರ್‌ಗಳು ಹಾಗೂ ಲಿಂಕ್‌ಗಳನ್ನು ನಂಬಿ ಹಣ ರವಾನಿಸಬಾರದು ಎಂದು ಟಿಟಿಡಿ ಸ್ಪಷ್ಟಪಡಿಸಿದೆ.

ವಂಚಕರ ವಿರುದ್ಧ ಸೂಕ್ತ ಕ್ರಮ: 259 ನಕಲಿ ವೆಬ್‌ಸೈಟ್‌ಗಳು ಬಂದ್:

ನಕಲಿ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೇಲೆ ಟಿಟಿಡಿ ಐಟಿ ವಿಭಾಗ, ವಿಜಿಲೆನ್ಸ್ ಹಾಗೂ ಸೈಬರ್ ಕ್ರೈಮ್ ಪೊಲೀಸ್ ಇಲಾಖೆಗಳು ಜಂಟಿಯಾಗಿ ಕಟ್ಟುನಿಟ್ಟಿನ ಕಣ್ಗಾವಲು ಇರಿಸಿವೆ. ಸೈಬರ್ ಅಪರಾಧಿಗಳನ್ನು ಗುರುತಿಸಿ ಅವರ ವಿರುದ್ಧ ಕಾನೂನು ತನಿಖೆ ನಡೆಸಲಾಗುತ್ತಿದ್ದು, ಕಳೆದ ಎರಡು ವರ್ಷಗಳಲ್ಲಿ ಭಕ್ತರನ್ನು ವಂಚಿಸುತ್ತಿದ್ದ 259 ನಕಲಿ ವೆಬ್‌ಸೈಟ್‌ಗಳನ್ನು ಗುರುತಿಸಿ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಈ ಅಕ್ರಮಗಳಲ್ಲಿ ಭಾಗಿಯಾಗಿದ್ದ ಹಲವು ವ್ಯಕ್ತಿಗಳ ವಿರುದ್ಧ ಈಗಾಗಲೇ ಪೊಲೀಸ್ ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ತಿರುಮಲ ಶ್ರೀವಾರಿ ಪವಿತ್ರೋತ್ಸವ: ಆಗಸ್ಟ್ 23ರಿಂದ 25ರವರೆಗೆ ವಿಶೇಷ ಪೂಜೆ; ಹಲವು ಸೇವೆಗಳು ರದ್ದು

ಅಧಿಕೃತ ಚಾನೆಲ್‌ಗಳ ಮೂಲಕ ಮಾತ್ರ ಬುಕಿಂಗ್ ಮಾಡಿ:

ಶ್ರೀವಾರಿ ದರ್ಶನ, ವಸತಿ ಅಥವಾ ಸೇವೆಗಳನ್ನು ಕೇವಲ ಟಿಟಿಡಿಯ ಅಧಿಕೃತ ವೆಬ್‌ಸೈಟ್ ಅಥವಾ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಮೂಲಕವೇ ಬುಕ್ ಮಾಡಬೇಕು ಎಂದು ಟಿಟಿಡಿ ತಿಳಿಸಿದೆ. ಯಾವುದೇ ಪಾವತಿ ಮಾಡುವ ಮುನ್ನ ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮ ಖಾತೆಯ ಅಧಿಕೃತತೆಯನ್ನು ಭಕ್ತರು ಕಡ್ಡಾಯವಾಗಿ ಪರಿಶೀಲಿಸಬೇಕು. ಟಿಟಿಡಿಯ ಬೌದ್ಧಿಕ ಆಸ್ತಿ, ಹೆಸರು ಮತ್ತು ಲೋಗೋಗಳನ್ನು ದುರುಪಯೋಗಪಡಿಸಿಕೊಳ್ಳುವ ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ಹಕ್ಕುಸ್ವಾಮ್ಯ (Copyright), ಟ್ರೇಡ್‌ಮಾರ್ಕ್ ಹಾಗೂ ಸೈಬರ್ ಕಾನೂನುಗಳ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:21 pm, Sat, 15 August 26

Follow Us