Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu Tips: ಚಿಟಿಕೆ ಅರಶಿನ ಬಳಸಿ ಮನೆಯ ವಾಸ್ತು ದೋಷ ನಿವಾರಿಸಿ

ವಾಸ್ತು ಶಾಸ್ತ್ರದ ಪ್ರಕಾರ, ಅರಿಶಿನವು ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಮತ್ತು ದುಷ್ಟಶಕ್ತಿಗಳನ್ನು ತಡೆಯುತ್ತದೆ ಎಂದು ನಂಬಲಾಗಿದೆ. ಮನೆಯ ಪ್ರವೇಶ ದ್ವಾರದಲ್ಲಿ ಅಥವಾ ಹಣ ಇಡುವ ಸ್ಥಳದಲ್ಲಿ ಅರಿಶಿನವನ್ನು ಇಡುವುದರಿಂದ ಆರ್ಥಿಕ ಸಮೃದ್ಧಿ ಮತ್ತು ಸಂಪತ್ತನ್ನು ಪಡೆಯಬಹುದು. ಈ ಲೇಖನದಲ್ಲಿ ಅರಿಶಿನದ ವಾಸ್ತು ಬಳಕೆಯ ಬಗ್ಗೆ ವಿವರವಾದ ಮಾಹಿತಿ ನೀಡಲಾಗಿದೆ.

Vasthu Tips: ಚಿಟಿಕೆ ಅರಶಿನ ಬಳಸಿ ಮನೆಯ ವಾಸ್ತು ದೋಷ ನಿವಾರಿಸಿ
Turmeric For Wealth And Prosperity
Follow us
ಅಕ್ಷತಾ ವರ್ಕಾಡಿ
|

Updated on:Mar 14, 2025 | 11:53 AM

ಅರಿಶಿನವನ್ನು ಅಡುಗೆಯಲ್ಲಿ ಮಾತ್ರವಲ್ಲದೆ ಹಿಂದೂ ಸಂಪ್ರದಾಯಗಳಲ್ಲಿಯೂ ಬಳಸಲಾಗುತ್ತದೆ. ಇದು ಸ್ವಚ್ಛತೆ ಮತ್ತು ಸಕಾರಾತ್ಮಕ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ನಂಬಲಾಗಿದೆ. ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಈ ಅರಿಶಿನವನ್ನು ವಾಸ್ತು ಶಾಸ್ತ್ರದ ಪ್ರಕಾರ ಸರಿಯಾದ ಸ್ಥಳದಲ್ಲಿ ಇರಿಸಿದರೆ ಶುಭ ಫಲಿತಾಂಶಗಳನ್ನು ಪಡೆಯಬಹುದು. ಮನೆಯಲ್ಲಿ ಹಣವನ್ನು ಸಂಗ್ರಹಿಸಲು ಮತ್ತು ದುಷ್ಟಶಕ್ತಿಗಳನ್ನು ತಪ್ಪಿಸಲು ಅರಶಿನವನ್ನು ಬಳಸುವುದು ಹೇಗೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ವಾಸ್ತು ತಜ್ಞರು ಹೇಳುವಂತೆ ಯಾವುದೇ ಶಕ್ತಿಯು ಮುಖ್ಯದ್ವಾರದ ಮೂಲಕ ಮನೆಯೊಳಗೆ ಪ್ರವೇಶಿಸುತ್ತದೆ. ಆದ್ದರಿಂದ, ಅರಿಶಿನವನ್ನು ಮನೆಯ ಹೊಸ್ತಿಲಿನಲ್ಲಿ ಬಳಸುವುದು ಒಳ್ಳೆಯದು. ಇದು ದುಷ್ಟಶಕ್ತಿಗಳು ಮನೆಯೊಳಗೆ ಬರದಂತೆ ತಡೆಯುತ್ತದೆ ಮತ್ತು ಸಕರಾತ್ಮಕ ಶಕ್ತಿಯನ್ನು ಮನೆಯೊಳಗೆ ತರುತ್ತದೆ. ವಿಶೇಷವಾಗಿ ಮನೆಯ ಮುಖ್ಯ ದ್ವಾರದಲ್ಲಿ ಹಳದಿ ಬಟ್ಟೆಯನ್ನು ನೇತುಹಾಕುವುದರಿಂದ ಮನೆಗೆ ಅದೃಷ್ಟ ಮತ್ತು ಸಮೃದ್ಧಿ ಬರುತ್ತದೆ ಎಂದು ಹೇಳಲಾಗುತ್ತದೆ. ಹೀಗೆ ಮಾಡುವುದರಿಂದ ಲಕ್ಷ್ಮಿ ದೇವಿಗೆ ಅನುಗ್ರಹ ಸದಾ ನಿಮ್ಮ ಮನೆಯ ಮೇಲಿರುತ್ತದೆ ಎಂದು ವಿದ್ವಾಂಸರು ಸಲಹೆ ನೀಡುತ್ತಾರೆ.

ನೀವು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದೀರಾ? ಹಾಗಿದ್ರೆ ನೀವು ಹಣ ಇಡುವ ಲಾಕರ್​ ನಲ್ಲಿ ಚಿಟಿಕೆ ಅರಿಶಿನ ಇಡುವುದರಿಂದ ಆರ್ಥಿಕ ಸಮಸ್ಯೆಯಿಂದ ಮುಕ್ತಿ ಪಡೆಯುತ್ತೀರಿ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಇದು ಹಣವನ್ನು ಉಳಿಸಲು ಮತ್ತು ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ನಂಬಲಾಗಿದೆ. ನಿಮ್ಮ ಮನೆಯಲ್ಲಿ ಸಂಪತ್ತು ಹೆಚ್ಚಾಗಬೇಕೆಂದರೆ, ಇದನ್ನು ಪ್ರಯತ್ನಿಸಿ.

ಇದನ್ನೂ ಓದಿ
Image
ಮನೆಯಿಂದಲೇ ಕೆಲಸ ಮಾಡುತ್ತಿದ್ದೀರಾ? ಹಾಗಿದ್ರೆ ಈ ವಾಸ್ತು ಸಲಹೆ ಅನುಸರಿಸಿ
Image
ಈ ಮೂರು ರಾಶಿಯವರಿಗೆ ಗಜಕೇಸರಿ ಯೋಗ; ಅದೃಷ್ಟ ಖುಲಾಯಿಸಲಿದೆ
Image
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗ ಈ ವಿಷ್ಯ ನೆನಪಿಟ್ಟುಕೊಳ್ಳಿ
Image
ನರಸಿಂಹ ದ್ವಾದಶಿ ಯಾವಾಗ? ದಿನಾಂಕ, ಶುಭ ಸಮಯ ಮತ್ತು ಪೂಜಾ ವಿಧಾನ ತಿಳಿಯಿರಿ

ವಾಸ್ತು ತಜ್ಞರು ಹೇಳುವಂತೆ ಚಿಟಿಕೆ ಅರಶಿನವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ಲಕ್ಷ್ಮಿ ದೇವಿಯ ಅನುಗ್ರಹ ದೊರೆಯುತ್ತದೆ. ಇದು ನಮ್ಮ ಹಣವನ್ನು ರಕ್ಷಿಸುವ ಮತ್ತು ಆರ್ಥಿಕ ವ್ಯವಹಾರಗಳಲ್ಲಿ ಲಾಭದಾಯಕತೆಯನ್ನು ಒದಗಿಸುವ ಶಕ್ತಿಯನ್ನು ಹೊಂದಿದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಹೋಳಿ ಹಬ್ಬದಂದೇ ಚಂದ್ರಗ್ರಹಣ; ಈ 4 ರಾಶಿಯವರು ಜಾಗರೂಕರಾಗಿರಿ!

ಮನೆಯಲ್ಲಿ ಶುಭ ಮತ್ತು ಸಂಪತ್ತಿಗಾಗಿ ವಾಸ್ತು ಶಾಸ್ತ್ರದ ಕೆಲವು ಸಲಹೆಗಳನ್ನು ಅನುಸರಿಸುವುದು ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ನಿರ್ದಿಷ್ಟವಾಗಿ ಅರಿಶಿನದ ಸರಿಯಾದ ಬಳಕೆಯು ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ಮನೆಗೆ ಶುಭ ಶಕ್ತಿಗಳನ್ನು ತರುತ್ತದೆ ಎಂದು ನಂಬಲಾಗಿದೆ. ನೀವು ಕೂಡ ಈ ಸಲಹೆಗಳನ್ನು ಅನುಸರಿಸುವ ಮೂಲಕ ಶುಭ ಫಲಿತಾಂಶಗಳನ್ನು ಪಡೆಯಬಹುದು.

ಮತ್ತಷ್ಟು ಅಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:51 am, Fri, 14 March 25

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ