ugadi 2021: ಯುಗಾದಿ ಆಚರಣೆ ಹಿಂದಿರುವ ನೈಸರ್ಗಿಕ, ಆಧ್ಯಾತ್ಮಿಕ ಹಾಗೂ ಐತಿಹಾಸಿಕ ಹಿನ್ನೆಲೆ ಏನು ಗೊತ್ತಾ?

ಎಲ್ಲಾ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ಚೈತ್ರ ಶುಕ್ಲ ಪ್ರತಿಪದೆ. ಈ ದಿನ ಆಚರಣೆಗೆ ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

ugadi 2021: ಯುಗಾದಿ ಆಚರಣೆ ಹಿಂದಿರುವ ನೈಸರ್ಗಿಕ, ಆಧ್ಯಾತ್ಮಿಕ ಹಾಗೂ ಐತಿಹಾಸಿಕ ಹಿನ್ನೆಲೆ ಏನು ಗೊತ್ತಾ?
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು

Updated on:Apr 13, 2021 | 6:51 AM

ಎಲ್ಲಾ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ಚೈತ್ರ ಶುಕ್ಲ ಪ್ರತಿಪದೆ. ಈ ದಿನ ಆಚರಣೆಗೆ ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ. ಆ ಕಾರಣಗಳು ಏನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ನೈಸಗಿಕ ಕಾರಣಗಳು: ಸರಿ ಸುಮಾರು ಪ್ರತಿಪದೆಯ ಸಮಯದಲ್ಲಿ ಸೂರ್ಯನು ವಸಂತ-ಸಂಪಾತದ ಮೇಲೆ ಬರುತ್ತಾನೆ. (ಸಂಪಾತ ಬಿಂದು ಎಂದರೆ (ಮಕರ) ಕ್ರಾಂತಿವೃತ್ತ ಮತ್ತು ವಿಷುವವೃತ್ತ (ಕರ್ಕಾಟಕ). ಈ ಎರಡೂ ವೃತ್ತಗಳು ಯಾವ ಬಿಂದುವಿನಲ್ಲಿ ಪರಸ್ಪರ ಬೇಧಿಸುತ್ತವೆಯೋ ಆ ಬಿಂದು) ಮತ್ತು ವಸಂತ ಋತುವು ಪ್ರಾರಂಭವಾಗುತ್ತದೆ. ಎಲ್ಲ ಋತುಗಳಲ್ಲಿ ‘ಕುಸುಮಾಕರಿ ವಸಂತ ಋತುವು ನನ್ನ ವಿಭೂತಿಯಾಗಿದೆ’ ಎಂದು ಭಗವಂತನು ಶ್ರೀಮದ್ಭಗವದ್ಗೀತೆಯಲ್ಲಿ (10:25) ಹೇಳಿದ್ದಾನೆ.

ಈ ಸಮಯದಲ್ಲಿ ಸಮಶೀತೋಷ್ಣ, ಉತ್ಸಾಹವರ್ಧಕ ಮತ್ತು ಆಹ್ಲಾದಕರ ವಾತಾವರಣವಿರುತ್ತದೆ. ಶಿಶಿರ ಋತುವಿನಲ್ಲಿ ಗಿಡಮರಗಳ ಎಲೆಗಳು ಉದುರಿ ಹೋಗಿರುತ್ತವೆ ಮತ್ತು ಪ್ರತಿಪದೆಯ ಸಮಯದಲ್ಲಿ ಅವುಗಳಿಗೆ ಹೊಸ ಚಿಗುರು ಬರುತ್ತಿರುತ್ತವೆ. ಗಿಡಮರಗಳು ಚೆನ್ನಾಗಿ ಕಾಣುತ್ತವೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸ ವರ್ಷದ ಕಾಲ ಚಕ್ರವು ವಿಶ್ವದ ಉತ್ಪತ್ತಿಯ ಕಾಲಚಕ್ರಕ್ಕೆ ಸಂಬಂಧಿಸಿದೆ. ಆದುದರಿಂದ ಸೃಷ್ಟಿಯು ನವಚೇತನದಿಂದ ತುಂಬಿರುತ್ತದೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ತುಲನೆಯನ್ನು ಸೂರ್ಯೋದಯಕ್ಕೆ ಉದಯವಾಗುವ ತೇಜೋಮಯ ದಿನದೊಂದಿಗೆ ಮಾಡಬಹುದು.

ಐತಿಹಾಸಿಕ ಕಾರಣಗಳು: ಈ ದಿನದಂದು ರಾಮನು ವಾಲಿಯನ್ನು ವಧಿಸಿದನು. ವಿಜಯದ ಪ್ರತೀಕ ಎತ್ತರದಲ್ಲಿರುತ್ತದೆ. ಹಾಗಾಗಿ ಬ್ರಹ್ಮಧ್ವಜ ಎತ್ತರದಲ್ಲಿರುತ್ತದೆ. ಈ ದಿನದಿಂದಲೇ ‘ಶಾಲಿವಾಹನ ಶಕೆ’ ಪ್ರಾರಂಭವಾಯಿತು. ಏಕೆಂದರೆ ಈ ದಿನ ಶಾಲಿವಾಹನನು ಶತ್ರುಗಳ ಮೇಲೆ ವಿಜಯ ಪಡೆದನು.

ಆಧ್ಯಾತ್ಮಿಕ ಕಾರಣಗಳು: ಬ್ರಹ್ಮ ದೇವನು ಇದೇ ದಿನದಿಂದು ಸೃಷ್ಟಿಯನ್ನು ನಿರ್ಮಿಸಿದ. ಅರ್ಥಾತ್ ಈ ದಿನ ಸತ್ಯ ಯುಗ ಪ್ರಾರಂಭವಾಯಿತು. ಆದ್ದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಯುಗಾದಿಯಂದು ತೇಜ ಮತ್ತು ಪ್ರಜಾಪತಿ ಲಹರಿಗಳು ಹೆಚ್ಚಿನ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತವೆ. ಸೂರ್ಯೋದಯದ ಸಮಯದಲ್ಲಿ ಈ ಲಹರಿಗಳಿಂದ ಪ್ರಕ್ಷೇಪಿತವಾಗುವ ಚೈತನ್ಯವು ಹೆಚ್ಚಿನ ಸಮಯದವರೆಗೆ ಉಳಿಯುತ್ತದೆ. ಅದು ಜೀವದ ಜೀವಕೋಶಗಳಲ್ಲಿ ಸಂಗ್ರಹವಾಗುತ್ತದೆ ಹಾಗೂ ಅವಶ್ಯಕತೆಗನುಸಾರ ಆ ಜೀವದಿಂದ ಉಪಯೋಗಿಸಲ್ಪಡುತ್ತದೆ.

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:47 am, Tue, 13 April 21

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!