AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varalakshmi Vrata 2026: ವರಲಕ್ಷ್ಮಿ ವ್ರತ; ಈ 4 ರಾಶಿಗಳಿಗೆ ಒಲಿಯಲಿದೆ ಮಹಾಲಕ್ಷ್ಮಿಯ ಕೃಪೆ, ಅಪಾರ ಸಂಪತ್ತು!

ಶ್ರಾವಣ ಮಾಸದ ವರಮಹಾಲಕ್ಷ್ಮಿ ವ್ರತವು ಮಹಿಳೆಯರಿಗೆ ಪವಿತ್ರ ಹಬ್ಬ. ಈ ದಿನ ಲಕ್ಷ್ಮಿ ದೇವಿಯ ಪೂಜೆಯಿಂದ ಕುಟುಂಬದಲ್ಲಿ ಸೌಭಾಗ್ಯ, ಯೋಗಕ್ಷೇಮ, ಆರ್ಥಿಕ ಸಮೃದ್ಧಿ ಹೆಚ್ಚುತ್ತದೆ. ಈ ಬಾರಿಯ ವರಲಕ್ಷ್ಮಿ ವ್ರತದ ಶುಭ ಸಂದರ್ಭದಲ್ಲಿ ಮಹಾಲಕ್ಷ್ಮಿಯ ವಿಶೇಷ ಆಶೀರ್ವಾದದಿಂದ ನಾಲ್ಕು ರಾಶಿಗಳ ಜನರಿಗೆ ಅಪಾರ ಧನಲಾಭ ಮತ್ತು ಯಶಸ್ಸು ಸಿಗಲಿದೆ. ಆ ರಾಶಿಗಳು ಯಾವುವು ಎಂಬ ವಿವರ ಇಲ್ಲಿದೆ.

Varalakshmi Vrata 2026: ವರಲಕ್ಷ್ಮಿ ವ್ರತ; ಈ 4 ರಾಶಿಗಳಿಗೆ ಒಲಿಯಲಿದೆ ಮಹಾಲಕ್ಷ್ಮಿಯ ಕೃಪೆ, ಅಪಾರ ಸಂಪತ್ತು!
ವರಲಕ್ಷ್ಮಿ ವ್ರತImage Credit source: Getty Images
ಅಕ್ಷತಾ ವರ್ಕಾಡಿ
|

Updated on: Aug 20, 2026 | 11:52 AM

Share

ಶ್ರಾವಣ ಮಾಸದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ವ್ರತವು ಮಹಿಳೆಯರಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಕುಟುಂಬದ ಸೌಭಾಗ್ಯ, ಯೋಗಕ್ಷೇಮ ಮತ್ತು ಆರ್ಥಿಕ ಸಮೃದ್ಧಿಗಾಗಿ ಈ ದಿನ ಲಕ್ಷ್ಮಿ ದೇವಿಯನ್ನು ಶ್ರದ್ಧಾಭಕ್ತಿಗಳಿಂದ ಪೂಜಿಸಲಾಗುತ್ತದೆ. ಈ ಬಾರಿಯ ವರಲಕ್ಷ್ಮಿ ವ್ರತದ ಶುಭ ಸಂದರ್ಭದಲ್ಲಿ ಮಹಾಲಕ್ಷ್ಮಿಯ ವಿಶೇಷ ಆಶೀರ್ವಾದದಿಂದ ನಾಲ್ಕು ರಾಶಿಗಳ ಜನರಿಗೆ ಅಪಾರ ಧನಲಾಭ ಮತ್ತು ಯಶಸ್ಸು ಸಿಗಲಿದೆ. ಆ ರಾಶಿಗಳು ಯಾವುವು ಎಂಬ ವಿವರ ಇಲ್ಲಿದೆ.

ವೃಷಭ ರಾಶಿ:

ವೃಷಭ ರಾಶಿಯವರಿಗೆ ವರಲಕ್ಷ್ಮಿ ವ್ರತದ ನಂತರದ ಸಮಯವು ಅತ್ಯಂತ ಶುಭದಾಯಕವಾಗಿರಲಿದೆ. ಲಕ್ಷ್ಮಿ ದೇವಿಯ ಕೃಪೆಯಿಂದ ಇವರು ಕೈಹಾಕುವ ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲಿದ್ದು, ಅಂದುಕೊಂಡ ಯೋಜನೆಗಳು ಸರಿಯಾದ ಸಮಯಕ್ಕೆ ಪೂರ್ಣಗೊಳ್ಳಲಿವೆ. ಆದಾಯದ ಮೂಲಗಳು ಹೆಚ್ಚಾಗಲಿದ್ದು, ಮನೆಯಲ್ಲಿ ಧನ-ಧಾನ್ಯಗಳ ವೃದ್ಧಿಯಾಗಲಿದೆ. ಅಷ್ಟೇ ಅಲ್ಲದೆ, ಕುಟುಂಬದಲ್ಲಿ ಮದುವೆಯಂತಹ ಶುಭ ಕಾರ್ಯಗಳು ನೆರವೇರಿ ಸಂತಸದ ವಾತಾವರಣ ನೆಲೆಸಲಿದೆ.

ಸಿಂಹ ರಾಶಿ:

ಸಿಂಹ ರಾಶಿಯ ಜನರಿಗೆ ಈ ಸಮಯದಲ್ಲಿ ಮಾನಸಿಕ ಬಲ ಮತ್ತು ಆತ್ಮವಿಶ್ವಾಸ ಹೆಚ್ಚಾಗಲಿದೆ. ದೀರ್ಘಕಾಲದಿಂದ ಸ್ವಂತ ಉದ್ಯೋಗ ಅಥವಾ ಹೊಸ ವ್ಯವಹಾರವನ್ನು ಪ್ರಾರಂಭಿಸಬೇಕೆಂದು ಯೋಜಿಸುತ್ತಿದ್ದವರಿಗೆ ಇದು ಅತ್ಯಂತ ಸೂಕ್ತವಾದ ಸಮಯವಾಗಿದೆ. ಯೋಜಿಸಿದಂತೆಯೇ ನಿಮ್ಮ ನೆಚ್ಚಿನ ಬ್ಯುಸಿನೆಸ್ ಪ್ರಾರಂಭಿಸಿ ಲಾಭ ಗಳಿಸುವಿರಿ. ಆರ್ಥಿಕ ಸ್ಥಿತಿ ಉತ್ತಮಗೊಂಡು ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ.

ಇದನ್ನೂ ಓದಿ: ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ಇಲ್ಲಿ ತಿಳಿದುಕೊಳ್ಳಿ

ತುಲಾ ರಾಶಿ:

ತುಲಾ ರಾಶಿಯವರು ತಮ್ಮ ಬುದ್ಧಿವಂತಿಕೆಯಿಂದ ಬಾಕಿ ಇರುವ ಕೆಲಸಗಳನ್ನು ತ್ವರಿತವಾಗಿ ಮತ್ತು ಸುಲಭವಾಗಿ ಪೂರ್ಣಗೊಳಿಸಲಿದ್ದಾರೆ. ಹಣಕಾಸಿನ ಅಗತ್ಯವಿದ್ದಾಗ ಸರಿಯಾದ ಸಮಯಕ್ಕೆ ಹಣ ಕೈಸೇರಲಿದೆ. ಕೆಲವು ಸಣ್ಣಪುಟ್ಟ ಮಾನಸಿಕ ಗೊಂದಲಗಳು ಎದುರಾದರೂ, ಅಂತಿಮವಾಗಿ ಇವರ ಜೀವನವು ನೆಮ್ಮದಿಯಿಂದ ಕೂಡಿರುತ್ತದೆ. ಸಮಾಜದಲ್ಲಿ ಗೌರವ ಮತ್ತು ವಿಶೇಷ ಮನ್ನಣೆ ದೊರೆಯಲಿದ್ದು, ಎಲ್ಲ ಕ್ಷೇತ್ರಗಳಲ್ಲೂ ಧನಾತ್ಮಕ ಬದಲಾವಣೆಗಳನ್ನು ಕಾಣುವಿರಿ.

ಧನು ರಾಶಿ:

ಧನು ರಾಶಿಯವರಿಗೆ ಇದು ಅತ್ಯಂತ ಸುವರ್ಣ ಕಾಲವೆಂದೇ ಹೇಳಬಹುದು. ಮಹಾಲಕ್ಷ್ಮಿಯ ಕೃಪಾಕಟಾಕ್ಷದಿಂದಾಗಿ ನಿಮ್ಮ ಪ್ರತಿಯೊಂದು ಕಾರ್ಯವೂ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳಲಿದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದ್ದು, ಆರ್ಥಿಕ ಸಮಸ್ಯೆಗಳು ಬಗೆಹರಿಯಲಿವೆ. ಮನೆಯ ಒಳಗೆ ಮತ್ತು ಹೊರಗೆ ಸಂತಸದ ವಾತಾವರಣವಿರಲಿದ್ದು, ನೀವು ಅಂದುಕೊಂಡ ಗುರಿಗಳನ್ನು ಸಾಧಿಸಿ ನೆಮ್ಮದಿಯ ಜೀವನ ನಡೆಸುವಿರಿ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ