AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu Tips: ಭಾನುವಾರ ಈ ವಸ್ತುಗಳನ್ನು ಖರೀದಿಸಬೇಡಿ, ವಾಸ್ತು ಸಲಹೆ ಇಲ್ಲಿದೆ

ವಾಸ್ತು ಶಾಸ್ತ್ರದ ಪ್ರಕಾರ ಭಾನುವಾರ ಸೂರ್ಯ ದೇವರಿಗೆ ಮೀಸಲಾದ ದಿನ. ಈ ದಿನ ಉಪ್ಪು, ಕಬ್ಬಿಣ, ಎಣ್ಣೆ, ಚೂಪಾದ ವಸ್ತುಗಳು, ಹಳೆಯ ಸಾಮಾನುಗಳು ಮತ್ತು ಕಪ್ಪು ಬಟ್ಟೆಗಳನ್ನು ಖರೀದಿಸುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ಆರ್ಥಿಕ ಹಾಗೂ ಮಾನಸಿಕ ಸಮಸ್ಯೆಗಳು ಉಂಟಾಗಬಹುದು. ಉಪ್ಪು ಖರೀದಿಸಲು ಸೋಮವಾರ-ಶುಕ್ರವಾರ ಉತ್ತಮ.

Vasthu Tips: ಭಾನುವಾರ ಈ ವಸ್ತುಗಳನ್ನು ಖರೀದಿಸಬೇಡಿ, ವಾಸ್ತು ಸಲಹೆ ಇಲ್ಲಿದೆ
ವಾಸ್ತು ಶಾಸ್ತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 11, 2026 | 11:35 AM

Share

ವಾಸ್ತು ಶಾಸ್ತ್ರದ ಪ್ರಕಾರ ವಾರದ ಪ್ರತಿಯೊಂದು ದಿನವೂ ವಿಶೇಷ ಶಕ್ತಿಯನ್ನು ಹೊಂದಿದೆ. ಅದರಂತೆ ಮಾಡಬೇಕಾದ ಹಾಗೂ ಮಾಡಬಾರದ ಕಾರ್ಯಗಳನ್ನು ವಿವರಿಸಲಾಗಿದೆ. ಆ ದಿನಗಳಲ್ಲಿ ಭಾನುವಾರ ಅತ್ಯಂತ ಪ್ರಮುಖವಾದುದು. ಭಾನುವಾರವನ್ನು ಸೂರ್ಯ ದೇವರಿಗೆ ಸಮರ್ಪಿತ ದಿನವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ದಿನ ಕೆಲವು ವಸ್ತುಗಳನ್ನು ಖರೀದಿಸುವುದು ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಿಸಿ, ಆರ್ಥಿಕ ಹಾಗೂ ಮಾನಸಿಕ ಸಮಸ್ಯೆಗಳನ್ನುಂಟುಮಾಡಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ.

ಭಾನುವಾರ ಈ ವಸ್ತು ಖರೀದಿಸಲೇಬೇಡಿ:

ವಾಸ್ತು ಪ್ರಕಾರ ಭಾನುವಾರ ಉಪ್ಪು ಖರೀದಿಸುವುದು ಅಶುಭವೆಂದು ಪರಿಗಣಿಸಲಾಗುತ್ತದೆ. ಉಪ್ಪು ರಾಹು ಗ್ರಹಕ್ಕೆ ಸಂಬಂಧಿಸಿದ್ದು, ಭಾನುವಾರ ಸೂರ್ಯನ ದಿನವಾಗಿರುವುದರಿಂದ ಈ ಎರಡು ಗ್ರಹಗಳ ವಿರೋಧಾಭಾಸದಿಂದ ಆರ್ಥಿಕ ನಷ್ಟ, ಅನಗತ್ಯ ಖರ್ಚು ಹಾಗೂ ಕುಟುಂಬ ಕಲಹಗಳು ಉಂಟಾಗಬಹುದು ಎಂದು ನಂಬಲಾಗಿದೆ. ಅದೇ ರೀತಿ ಕಬ್ಬಿಣ ಖರೀದಿಸುವುದೂ ಶುಭವಲ್ಲ. ಕಬ್ಬಿಣವು ಶನಿ ಗ್ರಹಕ್ಕೆ ಸಂಬಂಧಿಸಿದ್ದು, ಸೂರ್ಯ-ಶನಿ ವಿರೋಧದಿಂದ ಕೆಲಸಗಳಲ್ಲಿ ಅಡೆತಡೆಗಳು, ಆರೋಗ್ಯ ಸಮಸ್ಯೆಗಳು ಎದುರಾಗಬಹುದು.

ಭಾನುವಾರದಂದು ಎಣ್ಣೆ, ವಿಶೇಷವಾಗಿ ಅಡುಗೆ ಎಣ್ಣೆ ಅಥವಾ ಸಾಸಿವೆ ಎಣ್ಣೆ ಖರೀದಿಸುವುದನ್ನೂ ತಪ್ಪಿಸುವುದು ಉತ್ತಮ. ಎಣ್ಣೆ ಶನಿ ಮತ್ತು ರಾಹುವಿನ ಪ್ರಭಾವಕ್ಕೆ ಒಳಪಟ್ಟಿದೆ ಎಂದು ಹೇಳಲಾಗುತ್ತದೆ. ಇದರಿಂದ ಆರ್ಥಿಕ ಸ್ಥಿರತೆ ಕುಗ್ಗುವ ಸಾಧ್ಯತೆ ಇದೆ. ಹಾಗೆಯೇ ಚಾಕು, ಬ್ಲೇಡ್‌ಗಳಂತಹ ಚೂಪಾದ ವಸ್ತುಗಳನ್ನು ಖರೀದಿಸುವುದರಿಂದ ಮನೆಯಲ್ಲಿನ ಮಾತಿನ ಜಗಳಗಳು, ಮನಸ್ತಾಪಗಳು ಹೆಚ್ಚಾಗಬಹುದು ಎಂದು ವಾಸ್ತು ಹೇಳುತ್ತದೆ. ಹಳೆಯ ಅಥವಾ ಸೆಕೆಂಡ್ ಹ್ಯಾಂಡ್ ವಸ್ತುಗಳು, ವಿಶೇಷವಾಗಿ ಪೀಠೋಪಕರಣಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳು, ನಕಾರಾತ್ಮಕ ಶಕ್ತಿಯನ್ನು ಹೊತ್ತುಕೊಂಡಿರಬಹುದು ಎಂಬ ಕಾರಣಕ್ಕೆ ಅವುಗಳ ಖರೀದಿಯನ್ನೂ ತಪ್ಪಿಸುವುದು ಒಳಿತು. ಕಪ್ಪು ಬಟ್ಟೆಗಳನ್ನು ಧರಿಸುವುದು ಅಥವಾ ಖರೀದಿಸುವುದನ್ನೂ ಅಶುಭವೆಂದು ಪರಿಗಣಿಸಲಾಗಿದ್ದು, ಈ ದಿನ ಕೆಂಪು, ಕಿತ್ತಳೆ ಮತ್ತು ಹಳದಿ ಬಣ್ಣಗಳನ್ನು ಶುಭಕರವೆಂದು ಹೇಳಲಾಗುತ್ತದೆ.

ಇದನ್ನೂ ಓದಿ: ಈ ರಾಶಿಯವರು ತಪ್ಪಿಯೂ ಬೆಳ್ಳಿ ಧರಿಸಬೇಡಿ, ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು!

ಭಾನುವಾರ ಈ ಕೆಲಸ ಮಾಡಿ:

ಇದರ ಬದಲು ಭಾನುವಾರ ಸೂರ್ಯ ದೇವರ ಪೂಜೆ ಮಾಡುವುದು, ಬೆಳಿಗ್ಗೆ ಸೂರ್ಯನಿಗೆ ಅರ್ಘ್ಯ ಅರ್ಪಿಸುವುದು, ಬೆಲ್ಲದಿಂದ ಮಾಡಿದ ಸಿಹಿತಿಂಡಿಗಳನ್ನು ಸೇವಿಸುವುದು ಹಾಗೂ ಪ್ರಕಾಶಮಾನ ಬಣ್ಣದ ಬಟ್ಟೆಗಳನ್ನು ಧರಿಸುವುದು ಶುಭಫಲಿತಾಂಶಗಳನ್ನು ತರಲಿದೆ ಎಂದು ನಂಬಲಾಗಿದೆ. ಉಪ್ಪು ಖರೀದಿಸಲು ಸೋಮವಾರ ಮತ್ತು ಶುಕ್ರವಾರ ಉತ್ತಮ ದಿನಗಳೆಂದು ವಾಸ್ತು ತಜ್ಞರು ಸೂಚಿಸುತ್ತಾರೆ. ಈ ದಿನಗಳು ಮನಶಾಂತಿ, ಕುಟುಂಬ ಸೌಹಾರ್ದತೆ ಮತ್ತು ಆರ್ಥಿಕ ಸ್ಥಿರತೆ ಹೆಚ್ಚಿಸಲು ಸಹಾಯಕವೆಂದು ಹೇಳಲಾಗುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!