AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Shastra: ಬೇರೆಯವರ ಬಟ್ಟೆಗಳನ್ನು ಧರಿಸುವ ಅಭ್ಯಾಸ ನಿಮಗಿದ್ಯಾ? ವಾಸ್ತು ಎಚ್ಚರಿಕೆ ಇಲ್ಲಿದೆ

ವಾಸ್ತು ಶಾಸ್ತ್ರದ ಪ್ರಕಾರ, ಇತರರ ಬಟ್ಟೆಗಳನ್ನು ಧರಿಸುವುದು ವ್ಯಕ್ತಿಯ ಶಕ್ತಿಯ ಮೇಲೆ ನೇರ ಪ್ರಭಾವ ಬೀರುತ್ತದೆ. ಪ್ರತಿಯೊಬ್ಬರ ದೇಹದ ಸುತ್ತ ಒಂದು ಶಕ್ತಿ ಇರುತ್ತದೆ, ಅದು ಬಟ್ಟೆಗಳ ಮೂಲಕ ಹರಡಬಹುದು. ಅನಾರೋಗ್ಯ ಅಥವಾ ಒತ್ತಡದಲ್ಲಿರುವವರ ಬಟ್ಟೆಗಳು ನಕಾರಾತ್ಮಕ ಶಕ್ತಿಯನ್ನು ಹೊಂದಿದ್ದು, ನಮ್ಮ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಇದು ಆತ್ಮವಿಶ್ವಾಸವನ್ನೂ ಕುಗ್ಗಿಸುತ್ತದೆ.

Vastu Shastra: ಬೇರೆಯವರ ಬಟ್ಟೆಗಳನ್ನು ಧರಿಸುವ ಅಭ್ಯಾಸ ನಿಮಗಿದ್ಯಾ? ವಾಸ್ತು ಎಚ್ಚರಿಕೆ ಇಲ್ಲಿದೆ
ವಾಸ್ತು ಶಾಸ್ತ್ರImage Credit source: iStock
ಅಕ್ಷತಾ ವರ್ಕಾಡಿ
|

Updated on: Jul 15, 2026 | 4:13 PM

Share

ಇಂದಿನ ದಿನಗಳಲ್ಲಿ ಸ್ನೇಹಿತರ, ಒಡಹುಟ್ಟಿದವರ ಅಥವಾ ಸಂಬಂಧಿಕರ ಬಟ್ಟೆಗಳನ್ನು ಧರಿಸುವುದು ಅತ್ಯಂತ ಸಾಮಾನ್ಯವಾಗಿದೆ. ಕೆಲವೊಮ್ಮೆ ಅನುಕೂಲಕ್ಕಾಗಿ ಅಥವಾ ಫ್ಯಾಷನ್‌ಗಾಗಿ ಬೇರೆಯವರ ಬಟ್ಟೆಗಳನ್ನು ಧರಿಸಿ ಸಂಭ್ರಮಿಸುತ್ತೇವೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಬಟ್ಟೆಗಳು ಕೇವಲ ದೇಹವನ್ನು ಮುಚ್ಚುವ ಸಾಧನಗಳಲ್ಲ. ಅವು ವ್ಯಕ್ತಿಯ ಶಕ್ತಿ (Energy), ಆಲೋಚನೆ ಮತ್ತು ಜೀವನಶೈಲಿಯೊಂದಿಗೆ ನಿಕಟ ಸಂಬಂಧ ಹೊಂದಿರುತ್ತವೆ. ಆದ್ದರಿಂದ, ವಾಸ್ತು ನಿಯಮಗಳನ್ನು ತಿಳಿಯದೆ ಬೇರೆಯವರ ಬಟ್ಟೆಗಳನ್ನು ಧರಿಸುವುದು ಯಾವ ರೀತಿ ಪ್ರಭಾವ ಬೀರಬಹುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಶಕ್ತಿಯ ಪ್ರಭಾವ ಮತ್ತು ವಾಸ್ತು ನಿಯಮ:

ವಾಸ್ತು ಶಾಸ್ತ್ರದ ಪ್ರಕಾರ, ಪ್ರತಿಯೊಬ್ಬ ವ್ಯಕ್ತಿಯ ದೇಹದ ಸುತ್ತಲೂ ಒಂದು ನಿರ್ದಿಷ್ಟವಾದ ಸಕಾರಾತ್ಮಕ ಅಥವಾ ನಕಾರಾತ್ಮಕ ಶಕ್ತಿ ನೆಲೆಸಿರುತ್ತದೆ. ಒಬ್ಬ ವ್ಯಕ್ತಿಯು ದೀರ್ಘಕಾಲದವರೆಗೆ ಧರಿಸುವ ಬಟ್ಟೆಗಳು ಅವನ ಆಂತರಿಕ ಶಕ್ತಿಯ ಪ್ರಭಾವವನ್ನು ಹೀರಿಕೊಳ್ಳುತ್ತವೆ. ಹೀಗಾಗಿ, ನಾವು ಆ ಬಟ್ಟೆಯನ್ನು ಬಳಸಿದಾಗ ಅವರ ಶಕ್ತಿಯ ಪ್ರಭಾವವು ನೇರವಾಗಿ ನಮ್ಮ ಮೇಲೆಯೂ ಉಂಟಾಗುತ್ತದೆ.

ನಕಾರಾತ್ಮಕ ಶಕ್ತಿಯ ಅಪಾಯ:

ಒಬ್ಬ ವ್ಯಕ್ತಿಯು ತೀವ್ರವಾದ ಮಾನಸಿಕ ಒತ್ತಡದಲ್ಲಿದ್ದರೆ, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರೆ ಅಥವಾ ಸದಾ ಸಮಸ್ಯೆಗಳಿಂದ ಘಾಸಿಗೊಂಡಿದ್ದರೆ, ಅವರ ದೇಹದಲ್ಲಿನ ನಕಾರಾತ್ಮಕ ಶಕ್ತಿಯು ಅವರು ಧರಿಸುವ ಬಟ್ಟೆಗಳಿಗೂ ಹರಡುತ್ತದೆ. ಅಂತಹ ಬಟ್ಟೆಗಳನ್ನು ನಾವು ಧರಿಸಿದಾಗ, ಆ ನಕಾರಾತ್ಮಕ ಕಂಪನಗಳು ನಮ್ಮ ಮನಸ್ಸಿನ ಮೇಲೂ ಪ್ರಭಾವ ಬೀರಿ, ನಮ್ಮಲ್ಲಿಯೂ ಒತ್ತಡ, ಆತಂಕ ಅಥವಾ ನಕಾರಾತ್ಮಕ ಆಲೋಚನೆಗಳು ಹೆಚ್ಚಾಗುವಂತೆ ಮಾಡುತ್ತವೆ.

ಕುಗ್ಗುವ ಆತ್ಮವಿಶ್ವಾಸ:

ಸ್ವಂತ ಮತ್ತು ಶುಚಿಯಾದ ಬಟ್ಟೆಗಳನ್ನು ಧರಿಸಿದಾಗ ನಮ್ಮಲ್ಲಿ ಸಕಾರಾತ್ಮಕ ಚಿಂತನೆ ಹಾಗೂ ಅದ್ಭುತ ಆತ್ಮವಿಶ್ವಾಸ ಮೂಡುತ್ತದೆ. ಆದರೆ, ಪದೇ ಪದೇ ಇತರರ ಬಟ್ಟೆಗಳನ್ನೇ ಧರಿಸುವುದರಿಂದ ನಮ್ಮ ಸ್ವಂತ ವ್ಯಕ್ತಿತ್ವದ ಶಕ್ತಿ ಹಾಗೂ ಆತ್ಮವಿಶ್ವಾಸ ಕ್ರಮೇಣ ದುರ್ಬಲಗೊಳ್ಳುತ್ತದೆ. ಆದ್ದರಿಂದ, ನಮ್ಮದೇ ಆದ ಬಟ್ಟೆಗಳನ್ನು ಧರಿಸುವುದು ಪ್ರಗತಿಗೆ ಪೂರಕವಾಗಿದೆ.

ಇದನ್ನೂ ಓದಿ: ಚಿಕ್ಕ ಮಕ್ಕಳಿಗೆ ಕನ್ನಡಿ ತೋರಿಸಬಾರದು ಏಕೆ? ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ

ಯಾರ ಬಟ್ಟೆಗಳನ್ನು ಧರಿಸಲೇಬಾರದು?

ವಾಸ್ತು ನಿಯಮಗಳ ಪ್ರಕಾರ, ಈ ಕೆಳಗಿನ ವ್ಯಕ್ತಿಗಳ ಬಟ್ಟೆಗಳನ್ನು ಧರಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ:

  • ದೀರ್ಘಕಾಲದವರೆಗೆ ಕಾಯಿಲೆಯಿಂದ ಬಳಲುತ್ತಿರುವವರು.
  • ಯಾವಾಗಲೂ ತೀವ್ರ ಮಾನಸಿಕ ಒತ್ತಡ ಅಥವಾ ಖಿನ್ನತೆಯಲ್ಲಿರುವವರು.
  • ಸಮಾಜದಲ್ಲಿ ಸದಾ ನಕಾರಾತ್ಮಕ ವಿಚಾರಗಳಿಂದಲೇ ಗುರುತಿಸಿಕೊಂಡವರು.

ಹೊಸ ಉಡುಗೊರೆಗಳು ಮತ್ತು ಹಳೆಯ ಬಟ್ಟೆಗಳಿಗೆ ಪರಿಹಾರ:

ಯಾರಾದರೂ ನಿಮಗೆ ಹೊಸ ಬಟ್ಟೆಗಳನ್ನು ಉಡುಗೊರೆಯಾಗಿ (Gift) ನೀಡಿದ್ದರೆ, ಅವುಗಳನ್ನು ಧರಿಸುವುದರಿಂದ ಯಾವುದೇ ವಾಸ್ತು ದೋಷ ಉಂಟಾಗುವುದಿಲ್ಲ. ಆದರೆ, ಈಗಾಗಲೇ ಬಳಸಿದ ಬಟ್ಟೆಗಳನ್ನು ಧರಿಸಲೇಬೇಕಾದ ಅನಿವಾರ್ಯತೆ ಎದುರಾದರೆ, ಅವುಗಳನ್ನು ಧರಿಸುವ ಮುನ್ನ ಚಿಟಿಕೆ ಉಪ್ಪು ನೀರಿನಲ್ಲಿ ಚೆನ್ನಾಗಿ ತೊಳೆದು, ಒಣಗಿಸಿ, ಸ್ವಚ್ಛಗೊಳಿಸಿದ ನಂತರವಷ್ಟೇ ಬಳಸಬೇಕು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ