Vastu Tips: ನಿಮ್ಮ ಕುಟುಂಬ ಆರೋಗ್ಯವಾಗಿರಲು ಈ ವಾಸ್ತು ಸಲಹೆಯನ್ನು ಅಳವಡಿಸಿಕೊಳ್ಳಿ

ಕೆಲವು ಸಲ ಎಷ್ಟೇ ಪ್ರಯತ್ನ ಪಟ್ಟರೂ ಕೂಡ, ಒಂದರ ನಂತರ ಒಂದು ಕಾಯಿಲೆಗಳು ಬರುತ್ತಲೇ ಇರುತ್ತವೆ. ನೀವು ಸಹ ಈ ರೀತಿಯ ಸಮಸ್ಯೆಯನ್ನು ಎದುರಿಸಿರಬಹುದು ಇದಕ್ಕೆ ಕಾರಣ ನಿಮ್ಮ ಮನೆಯ ವಾಸ್ತು ದೋಷವೂ ಆಗಿರಬಹುದು. ವಾಸ್ತು ಶಾಸ್ತ್ರದ ಕೆಲವು ಸಲಹೆಗಳನ್ನು ತಿಳಿದುಕೊಂಡು ಅದನ್ನು ಪಾಲಿಸುವುದರಿಂದ, ನಿಮ್ಮ ಮನೆಯಿಂದ ರೋಗಗಳನ್ನು ದೂರವಿಡಬಹುದು. ಹಾಗಾದರೆ ಉತ್ತಮ ಆರೋಗ್ಯ ಪಡೆದುಕೊಳ್ಳಲು ಯಾವ ರೀತಿಯ ವಾಸ್ತು ಸಲಹೆಗಳನ್ನು ಪಾಲಿಸಬೇಕು? ಈ ಬಗ್ಗೆ ಮಾಹಿತಿ ಇಲ್ಲಿದೆ.

Vastu Tips: ನಿಮ್ಮ ಕುಟುಂಬ ಆರೋಗ್ಯವಾಗಿರಲು ಈ ವಾಸ್ತು ಸಲಹೆಯನ್ನು ಅಳವಡಿಸಿಕೊಳ್ಳಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 16, 2024 | 5:55 PM

ಪ್ರತಿಯೊಬ್ಬರೂ ಆರೋಗ್ಯಕರ ಮತ್ತು ಸಂತೋಷದ ಜೀವನವನ್ನು ನಡೆಸಬೇಕು ಎಂದು ಬಯಸುತ್ತಾರೆ. ಆದರೆ ಅದಕ್ಕೂ ಮೊದಲು ನೀವು ಮತ್ತು ನಿಮ್ಮ ಕುಟುಂಬದ ಸದಸ್ಯರು ಆರೋಗ್ಯವಾಗಿರುವುದು ಮುಖ್ಯವಾಗುತ್ತದೆ. ಅನೇಕ ಬಾರಿ, ಎಷ್ಟೇ ಪ್ರಯತ್ನ ಪಟ್ಟರೂ ಕೂಡ, ಒಂದರ ನಂತರ ಒಂದು ಕಾಯಿಲೆಗಳು ಬರುತ್ತಲೇ ಇರುತ್ತವೆ. ನೀವು ಸಹ ಈ ರೀತಿಯ ಸಮಸ್ಯೆಯನ್ನು ಎದುರಿಸಿರಬಹುದು ಇದಕ್ಕೆ ಕಾರಣ ನಿಮ್ಮ ಮನೆಯ ವಾಸ್ತು ದೋಷವೂ ಆಗಿರಬಹುದು. ವಾಸ್ತು ಶಾಸ್ತ್ರದ ಕೆಲವು ಸಲಹೆಗಳನ್ನು ತಿಳಿದುಕೊಂಡು ಅದನ್ನು ಪಾಲಿಸುವುದರಿಂದ, ನಿಮ್ಮ ಮನೆಯಿಂದ ರೋಗಗಳನ್ನು ದೂರವಿಡಬಹುದು. ಹಾಗಾದರೆ ಉತ್ತಮ ಆರೋಗ್ಯ ಪಡೆದುಕೊಳ್ಳಲು ಯಾವ ರೀತಿಯ ವಾಸ್ತು ಸಲಹೆಗಳನ್ನು ಪಾಲಿಸಬೇಕು? ಈ ಬಗ್ಗೆ ಮಾಹಿತಿ ಇಲ್ಲಿದೆ.

ಉತ್ತಮ ಆರೋಗ್ಯಕ್ಕಾಗಿ ಈ ವಾಸ್ತು ಸಲಹೆಗಳನ್ನು ಅನುಸರಿಸಿ;

ವಾಸ್ತು ಶಾಸ್ತ್ರದ ಪ್ರಕಾರ, ಕುಟುಂಬದಲ್ಲಿರುವ ಪ್ರತಿಯೊಬ್ಬರ ಆರೋಗ್ಯ ಕಾಪಾಡಿಕೊಳ್ಳಲು, ಮುಖ್ಯವಾಗಿ ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಪರಿಚಲನೆ ಇರಬೇಕು. ಹಾಗಾಗಿ ಮನೆಯ ಮುಖ್ಯ ಬಾಗಿಲು ಮತ್ತು ಹೊಸ್ತಿಲು ಸರಿಯಾದ ಸ್ಥಿತಿಯಲ್ಲಿರುವಂತೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಅಂದರೆ ಮುಖ್ಯ ದ್ವಾರದಲ್ಲಿ ಯಾವುದೇ ರೀತಿಯ ಕೊಳಕು ಇರದಂತೆ ನೋಡಿಕೊಳ್ಳಬೇಕು. ಏಕೆಂದರೆ ಮನೆಯ ಬಾಗಿಲಿನಲ್ಲಿ ಧೂಳು, ಕಸ ಇದ್ದಲ್ಲಿ ನಕಾರಾತ್ಮಕ ಶಕ್ತಿ ಮನೆಯನ್ನು ತುಂಬಿಕೊಳ್ಳುತ್ತದೆ ಇವು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ. ಹಾಗಾಗಿ ಮನೆಯ ಮುಖ್ಯ ದ್ವಾರದ ಮೇಲೆ ಓಂ ಮತ್ತು ಸ್ವಸ್ತಿಕ ಚಿಹ್ನೆಗಳನ್ನು ಬಿಡಿಸುವುದು ತುಂಬಾ ಶುಭವೆಂದು ಹೇಳಲಾಗುತ್ತದೆ. ಕುಟುಂಬದಲ್ಲಿರುವವರ ಆರೋಗ್ಯಕ್ಕಾಗಿ, ಮನೆಯ ಸ್ವಚ್ಛತೆಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಮನೆಯನ್ನು ಪ್ರತಿದಿನ ಸಂಪೂರ್ಣವಾಗಿ ಸ್ವಚ್ಛಗೊಳಿಸಬೇಕು. ಮನೆಯಲ್ಲಿ ಜೇಡರ ಬಲೆ ಕಟ್ಟಲು ಬಿಡಬಾರದು. ಇವು ಮಾನಸಿಕ ಒತ್ತಡವನ್ನು ಉಂಟುಮಾಡುತ್ತವೆ ಎಂದು ನಂಬಲಾಗಿದೆ.

ಬೆಳಿಗ್ಗೆ ಕಿಟಕಿ ಮತ್ತು ಬಾಗಿಲುಗಳನ್ನು ತೆರೆಯಿರಿ;

ಉತ್ತಮ ಆರೋಗ್ಯಕ್ಕಾಗಿ, ನೀವು ಮನೆಯ ಬಾಗಿಲಿನಲ್ಲಿ ಚಿಕ್ಕ ಘಂಟೆ ಅಥವಾ ವಿಂಡ್ ಚೈನ್ ಅನ್ನು ಇಡಬಹುದು ಇದು ಗಾಳಿ ಮನೆಗೆ ಪ್ರವೇಶಿಸುವಾಗ ಸಕಾರಾತ್ಮಕ ಶಬ್ದ ಎಲ್ಲಾ ಕಡೆಗಳಲ್ಲೂ ವ್ಯಾಪಿಸಿಕೊಳ್ಳುವಂತೆ ಮಾಡುತ್ತದೆ. ಬೆಳಿಗ್ಗೆ ಮನೆಯ ಎಲ್ಲಾ ಕಿಟಕಿ ಮತ್ತು ಬಾಗಿಲುಗಳನ್ನು ತೆರೆಯಬೇಕು, ಇದನ್ನು ಮಾಡುವುದರಿಂದ ತಾಜಾ ಗಾಳಿ ಮತ್ತು ಸೂರ್ಯನ ಕಿರಣಗಳು ಮನೆಯನ್ನು ಪ್ರವೇಶಿಸುತ್ತವೆ, ಇದು ಮನೆಯಲ್ಲಿನ ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುತ್ತದೆ.

ಕನ್ನಡಿಯನ್ನು ಮಲಗುವ ಕೋಣೆಯಲ್ಲಿ ಇಡಬೇಡಿ;

ಮಲಗುವ ಕೋಣೆಯಲ್ಲಿ ಕನ್ನಡಿಯನ್ನು ಎಂದಿಗೂ ಹಾಸಿಗೆಯ ಮುಂದೆ ಇಡಬಾರದು ಮತ್ತು ಮಲಗುವಾಗ ಕನ್ನಡಿಯನ್ನು ನೋಡದಂತೆ ವಿಶೇಷ ಕಾಳಜಿ ವಹಿಸಬೇಕು. ಮಲಗುವಾಗ ನಿಮ್ಮ ದೇಹದ ಯಾವುದೇ ಭಾಗವು ಗೋಚರಿಸದ ಸ್ಥಳದಲ್ಲಿ ಕನ್ನಡಿಯನ್ನು ಇಡಬೇಕು. ಇನ್ನು ಮಲಗುವ ಕೋಣೆಯಲ್ಲಿ ಕನ್ನಡಿ ಇದ್ದಲ್ಲಿ, ರಾತ್ರಿ ಮಲಗುವಾಗ ಅದನ್ನು ಒಂದು ಬಟ್ಟೆಯಿಂದ ಮುಚ್ಚಿಡಿ.

ಇದನ್ನೂ ಓದಿ: ಸಂಜೆ ಸಮಯದಲ್ಲಿ ಈ ಕೆಲಸ ಮಾಡಿ, ಶ್ರೀಮಂತರಾಗುವುದು ಖಂಡಿತ

ಉತ್ತರ ದಿಕ್ಕಿಗೆ ತಲೆಯಿಟ್ಟು ಮಲಗಬೇಡಿ;

ರಾತ್ರಿ ಮಲಗುವಾಗ ಉತ್ತರ ದಿಕ್ಕಿನ ಕಡೆಗೆ ಎಂದಿಗೂ ತಲೆಯಿಟ್ಟು ಮಲಗಬಾರದು. ಹಾಗೆ ಮಾಡುವುದರಿಂದ ನಿದ್ರೆಗೆ ಅಡ್ಡಿಯಾಗುತ್ತದೆ ಮತ್ತು ನಿದ್ರಾಹೀನತೆಗೆ ಕಾರಣವಾಗಬಹುದು ಎಂದು ನಂಬಲಾಗಿದೆ. ಉತ್ತರ ದಿಕ್ಕಿನಲ್ಲಿ ದೀರ್ಘಕಾಲ ಮಲಗುವುದು ತಲೆನೋವು ಮತ್ತು ಇತರ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ನಂಬಲಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು