AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ವಾಸ್ತು ಪ್ರಕಾರ ಮನೆಯ ಯಾವ ದಿಕ್ಕಿನಲ್ಲಿ ಮನಿ ಪ್ಲಾಂಟ್​ ಇಟ್ಟರೆ ಧನ ಲಾಭ: ಇಲ್ಲಿದೆ ಮಾಹಿತಿ

ವಾಸ್ತು ಶಾಸ್ತ್ರದಲ್ಲಿ ಮನಿ ಪ್ಲಾಂಟ್​ನ್ನು ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಈ ಮನಿ ಪ್ಲಾಂಟ್​ನ್ನು ಸರಿಯಾದ ಸ್ಥಿತಿ ಮತ್ತು ದಿಕ್ಕಿನಲ್ಲಿ ಇಟ್ಟರೆ ನಿಮ್ಮ ಮನೆ ಹಣದಿಂದ ತುಂಬುತ್ತದೆ ಎಂದು ಹೇಳಲಾಗುತ್ತದೆ.

Vastu Tips: ವಾಸ್ತು ಪ್ರಕಾರ ಮನೆಯ ಯಾವ ದಿಕ್ಕಿನಲ್ಲಿ ಮನಿ ಪ್ಲಾಂಟ್​ ಇಟ್ಟರೆ ಧನ ಲಾಭ: ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರImage Credit source: rastriyakhabars.com
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 14, 2023 | 9:11 PM

Share

ಮನಿ ಪ್ಲಾಂಟ್ (money plant) ಹೆಸರೇ ಸೂಚಿಸುವಂತೆ ಇದೊಂದು ಹಣದ ಗಿಡ. ಆದರೆ ಈ ಗಿಡದಲ್ಲಿ ಹಣ ಬೆಳೆಯದಿದ್ದರೂ, ಅದು ನಮಗೆ ಹಣ ನೀಡಬಹುದು ಎಂಬ ನಂಬಿಕೆ ಇದೆ. ಈ ಗಿಡ ನಿಮ್ಮನ್ನು ಶ್ರೀಮಂತರನ್ನಾಗಿ ಮಾಡಲು ಸಂಪೂರ್ಣವಾಗಿ ಕೊಡುಗೆ ನೀಡುತ್ತದೆ. ವಾಸ್ತು ಶಾಸ್ತ್ರದಲ್ಲಿ ಮನಿ ಪ್ಲಾಂಟ್​ನ್ನು ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಈ ಮನಿ ಪ್ಲಾಂಟ್​ನ್ನು ಸರಿಯಾದ ಸ್ಥಿತಿ ಮತ್ತು ದಿಕ್ಕಿನಲ್ಲಿ ಇಟ್ಟರೆ ನಿಮ್ಮ ಮನೆ ಹಣದಿಂದ ತುಂಬುತ್ತದೆ ಎಂದು ಹೇಳಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಹಲವು ಮನೆಗಳಲ್ಲಿ ಕಾಣಸಿಗುವ ಗಿಡಗಳಲ್ಲಿ ಮನಿ ಪ್ಲಾಂಟ್ ಕೂಡ ಒಂದು. ಇದರ ಬಗ್ಗೆ ಎಲ್ಲರಿಗೂ ತಿಳಿದಿದೆ. ವಾಸ್ತು ಪ್ರಕಾರ ಇದನ್ನು ಮನೆಯಲ್ಲಿ ಬೆಳೆಸಿದರೆ ಒಳ್ಳೆಯ ಹಣ ಮತ್ತು ಅದೃಷ್ಟ ಬರುತ್ತದೆ ಎಂಬ ನಂಬಿಕೆ ಇದೆ.

ಇದನ್ನೂ ಓದಿ: ತುಳು ಸಂಸ್ಕೃತಿಯಲ್ಲಿ‌ ಮಾಯವಾಗುವುದು ಎಂದರೆ ಸಾಯುವುದಲ್ಲ, ಹಾಗಿದ್ದರೆ ಮಾಯವಾದವರು ಏನಾಗುತ್ತಾರೆ? ಇಲ್ಲಿದೆ ನೋಡಿ ಮಾಹಿತಿ

ಮನೆಯಲ್ಲಿ ಮನಿ ಪ್ಲಾಂಟ್ ಇಡುವುದರಿಂದ ಸುತ್ತಲೂ ಧನಾತ್ಮಕ ಶಕ್ತಿ ಉಂಟಾಗುತ್ತದೆ ಎಂದು ವಾಸ್ತುಶಾಸ್ತ್ರಗಳಲ್ಲಿ ಹೇಳಲಾಗಿದೆ. ಆದರೆ ಮನೆಯಲ್ಲಿ ಎಲ್ಲೆಂದರಲ್ಲಿ ಮನಿ ಪ್ಲಾಂಟ್ ಇಡಬಾರದು. ಮನಿಪ್ಲಾಂಟ್​ನ್ನು ನಿರ್ದಿಷ್ಟ ಸ್ಥಳಗಳು ಮತ್ತು ದಿಕ್ಕುಗಳಲ್ಲಿ ಇರಿಸಬೇಕು.

  1. ನೀವು ಮನಿ ಪ್ಲಾಂಟ್​ನ್ನು ಮನೆಯಲ್ಲಿ ಇಡಲು ಬಯಸಿದರೆ, ಅದನ್ನು ಮಡಕೆ ಅಥವಾ ಬಾಟಲಿಯಲ್ಲಿ ನೀರು ತುಂಬಿಸಿ ಇಡಿ. ಹೀಗೆ ಮಾಡುವುರಿಂದ ಮನೆಯಲ್ಲಿರುವವರ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ.
  2. ಮನಿ ಪ್ಲಾಂಟ್‌ಗೆ ನಿಯಮಿತವಾಗಿ ನೀರು ಹಾಕಬೇಕು. ಇದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚುತ್ತದೆ. ಇದು ಮನೆಯಲ್ಲಿನ ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡುತ್ತದೆ.
  3. ಮನೆಯಲ್ಲಿ ಈಶಾನ್ಯ ದಿಕ್ಕಿನಲ್ಲಿ ಮನಿ ಪ್ಲಾಂಟ್​ನ್ನು ಇಡಬಾರದು. ಹಾಗೆ ಇಟ್ಟುಕೊಂಡರೆ ಮನೆಯಲ್ಲಿದ್ದ ಹಣವೆಲ್ಲ ಹೊರ ಹೋಗುತ್ತದೆ. ಮನೆಯಲ್ಲಿರುವವರಲ್ಲಿ ಆರೋಗ್ಯ ಸಮಸ್ಯೆ ಉಂಟಾಗಬಹುದು.
  4. ಮನೆಯಲ್ಲಿ ಮನಿ ಪ್ಲಾಂಟ್​ನ್ನು ಪಶ್ಚಿಮ ದಿಕ್ಕಿನಲ್ಲಿ ಇಡಬಾರದು. ಹಾಗೆ ಮಾಡಿದರೆ ದಂಪತಿಗಳ ನಡುವೆ ಬೇರ್ಪಡುವ ಸಂಭವವಿದೆ.
  5. ಒಣ, ಸತ್ತ ಮತ್ತು ಹಳದಿ ಬಣ್ಣದ ಮನಿ ಪ್ಲಾಂಟ್ ಎಲೆಗಳನ್ನು ಕಾಲಕಾಲಕ್ಕೆ ತೆಗೆದುಹಾಕಬೇಕು. ಇಲ್ಲದಿದ್ದರೆ ಮನೆಯಲ್ಲಿ ವಾಸ್ತುದೋಷ ನಿರ್ಮಾಣವಾಗುತ್ತದೆ.
  6. ಮನೆಯಲ್ಲಿ ಮನಿ ಪ್ಲಾಂಟ್​ನ್ನು ಆಗ್ನೇಯ ದಿಕ್ಕಿನಲ್ಲಿ (ಪೂರ್ವ-ದಕ್ಷಿಣ ನಡುವೆ) ಇಡಬೇಕು. ವಿನಾಯಕನಿಗೆ ಈ ದಿಕ್ಕು ಬಹಳ ಪ್ರಿಯ. ಆದ್ದರಿಂದ, ಆ ದಿಕ್ಕಿನಲ್ಲಿ ಮನಿ ಪ್ಲಾಂಟ್ ಇಡುವುದು ಅದೃಷ್ಟವನ್ನು ತರುತ್ತದೆ.

ಮತ್ತಷ್ಟು ಆಧ್ಯಾತ್ಮ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು