Vastu Tips: ಸೂರ್ಯಾಸ್ತದ ಸಮಯದಲ್ಲಿ ಈ ಕೆಲಸಗಳನ್ನು ಮಾಡಬೇಡಿ

ಸೂರ್ಯಾಸ್ತದ ಸಮಯದಲ್ಲಿ ಕೆಲವು ಕಾರ್ಯಗಳನ್ನು ಮಾಡಬಾರದು ಎಂಬ ನಂಬಿಕೆ ಇದೆ. ಇಲ್ಲವಾದಲ್ಲಿ ಜೀವನದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೆಲವೊಮ್ಮೆ ಕಷ್ಟಪಟ್ಟು ಕೆಲಸ ಮಾಡಿದರೂ, ಶುಭ ಫಲಗಳು ಪ್ರಾಪ್ತವಾಗುವುದಿಲ್ಲ. ಸಣ್ಣ ತಪ್ಪುಗಳು ಸಹ ಸಂತೋಷ, ನೆಮ್ಮದಿಯನ್ನು ಕಸಿದುಕೊಳ್ಳುತ್ತದೆ. ಇಂತಹ ಕಾರ್ಯಗಳನ್ನು ಧಾರ್ಮಿಕ ಗ್ರಂಥಗಳಲ್ಲಿ ವಿವರಿಸಲಾಗಿದೆ. ಹಾಗಾದರೆ ಸೂರ್ಯಾಸ್ತದ ಸಮಯದಲ್ಲಿ ಯಾವ ಕೆಲಸಗಳನ್ನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

Vastu Tips: ಸೂರ್ಯಾಸ್ತದ ಸಮಯದಲ್ಲಿ ಈ ಕೆಲಸಗಳನ್ನು ಮಾಡಬೇಡಿ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: May 01, 2024 | 10:14 AM

ಜನರು ತಮ್ಮ ಮನೆಗಳಲ್ಲಿ ಸದಾಕಾಲ ಸಂತೋಷ, ಸಮೃದ್ಧಿ ಇರಬೇಕು ಎಂದು ಬಯಸುತ್ತಾರೆ. ಆದರೆ ಅದನ್ನು ಗಳಿಸುವುದರ ಜೊತೆಗೆ ಕಾಪಾಡಿಕೊಳ್ಳುವುದು ಕೂಡ ತುಂಬಾ ಮುಖ್ಯವಾಗುತ್ತದೆ. ಕೆಲವೊಮ್ಮೆ ನಮಗೆ ಅರಿವಿಲ್ಲದಂತೆ ಕೆಲವು ತಪ್ಪುಗಳನ್ನು ಮಾಡುತ್ತೇವೆ ಇದು ನಮ್ಮ ಮನೆಯ ನೆಮ್ಮದಿಯನ್ನು ಹಾಳು ಮಾಡುತ್ತದೆ. ಅದರಲ್ಲಿಯೂ ಸೂರ್ಯಾಸ್ತದ ಸಮಯದಲ್ಲಿ ಕೆಲವು ಕಾರ್ಯಗಳನ್ನು ಮಾಡಬಾರದು ಎಂಬ ನಂಬಿಕೆ ಇದೆ. ಇಲ್ಲವಾದಲ್ಲಿ ಜೀವನದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೆಲವೊಮ್ಮೆ ಕಷ್ಟಪಟ್ಟು ಕೆಲಸ ಮಾಡಿದರೂ, ಶುಭ ಫಲಗಳು ಪ್ರಾಪ್ತವಾಗುವುದಿಲ್ಲ. ಸಣ್ಣ ತಪ್ಪುಗಳು ಸಹ ಸಂತೋಷ, ನೆಮ್ಮದಿಯನ್ನು ಕಸಿದುಕೊಳ್ಳುತ್ತದೆ. ಇಂತಹ ಕಾರ್ಯಗಳನ್ನು ಧಾರ್ಮಿಕ ಗ್ರಂಥಗಳಲ್ಲಿ ವಿವರಿಸಲಾಗಿದೆ. ಹಾಗಾದರೆ ಸೂರ್ಯಾಸ್ತದ ಸಮಯದಲ್ಲಿ ಯಾವ ಕೆಲಸಗಳನ್ನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

ಸಂಜೆ ಊಟ ಮಾಡಬೇಡಿ

ಧಾರ್ಮಿಕ ಗ್ರಂಥಗಳ ಪ್ರಕಾರ, ಸೂರ್ಯಾಸ್ತದ ಸಮಯದಲ್ಲಿ ಆಹಾರವನ್ನು ಸೇವಿಸಬಾರದು. ಈ ಸಮಯದಲ್ಲಿ ಆಹಾರವನ್ನು ಸೇವಿಸುವುದರಿಂದ ವ್ಯಕ್ತಿಯು ಮುಂದಿನ ಜನ್ಮದಲ್ಲಿ ಪ್ರಾಣಿಗಳ ರೂಪದಲ್ಲಿ ಜನಿಸುತ್ತಾನೆ. ಇದಲ್ಲದೆ, ಈ ಸಮಯದಲ್ಲಿ ಯಾವುದೇ ಆರೋಗ್ಯವಂತ ವ್ಯಕ್ತಿಯು ಮಲಗಬಾರದು. ಹೀಗೆ ಮಾಡುವುದರಿಂದ, ಮನೆಯಲ್ಲಿ ಇಟ್ಟ ಹಣವು ತ್ವರಿತವಾಗಿ ವ್ಯಯವಾಗುತ್ತದೆ ಮತ್ತು ಹಣಕಾಸಿನ ಸಮಸ್ಯೆಗಳಿಂದಾಗಿ ಜೀವನದಲ್ಲಿ ಅನೇಕ ರೀತಿಯಲ್ಲಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ.

ಸೂರ್ಯಾಸ್ತದ ಸಮಯದಲ್ಲಿ ದೇವರನ್ನು ಪೂಜಿಸಿ

ಸೂರ್ಯ ಮುಳುಗುವ ಸಮಯದಲ್ಲಿ ದೇವರನ್ನು ಪೂಜಿಸುವುದರಿಂದ ಶುಭ ಫಲಗಳು ದೊರೆಯುತ್ತದೆ. ಈ ಸಮಯದಲ್ಲಿ ನಿಮ್ಮ ಲೈಂಗಿಕ ಬಯಕೆಯನ್ನು ನಿಯಂತ್ರಣದಲ್ಲಿಡಬೇಕು. ಸೂರ್ಯಾಸ್ತದ ಸಮಯದಲ್ಲಿ ಜನಿಸಿದ ಮಗು ಜೀವನದಲ್ಲಿ ಅನೇಕ ತೊಂದರೆಗಳನ್ನು ಎದುರಿಸುತ್ತದೆ ಎಂದು ನಂಬಲಾಗಿದೆ. ಶಾಸ್ತ್ರದಲ್ಲಿ ಈ ಸಮಯದಲ್ಲಿ ವೇದ ಮತ್ತು ಶಾಸ್ತ್ರಗಳನ್ನು ಅಧ್ಯಯನ ಮಾಡಬಾರದು. ಈ ಸಮಯದಲ್ಲಿ ಧ್ಯಾನ ಮಾಡುವುದು ಉತ್ತಮವೆಂದು ಪರಿಗಣಿಸಲಾಗಿದೆ.

ಇದನ್ನೂ ಓದಿ: ಕಷ್ಟ ಬಂದರೆ ಏನು ಮಾಡಬೇಕು? ಚಾಣಕ್ಯನ ಈ ನೀತಿ ಹೇಳೋದೇನು?

ಮರೆತು ಉಗುರುಗಳನ್ನು ಕತ್ತರಿಸಬೇಡಿ

ಸೂರ್ಯಾಸ್ತದ ಸಮಯದಲ್ಲಿ ಹಣದ ವಹಿವಾಟುಗಳನ್ನು ಯಾವಾಗಲೂ ತಪ್ಪಿಸಬೇಕು. ಇಲ್ಲವಾದಲ್ಲಿ ಮನೆಯಲ್ಲಿ ಹಣದ ಕೊರತೆ ಉಂಟಾಗುತ್ತದೆ ಮತ್ತು ಆರ್ಥಿಕ ಸ್ಥಿತಿ ಚೆನ್ನಾಗಿರುವುದಿಲ್ಲ. ಇದೆಲ್ಲದರ ಜೊತೆಗೆ ಸೂರ್ಯಾಸ್ತವಾಗುವ ಸಮಯದಲ್ಲಿ ಉಗುರು ಮತ್ತು ಕೂದಲನ್ನು ಎಂದಿಗೂ ಕತ್ತರಿಸಬಾರದು. ಏಕೆಂದರೆ ಇದರಿಂದಲೇ ಜನರು ಅನೇಕ ರೀತಿಯ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’