AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ಅಡುಗೆಮನೆಯಲ್ಲಿರುವ ಈ ವಸ್ತುಗಳೇ ಆರ್ಥಿಕ ನಷ್ಟ ಹಾಗೂ ಅನಾರೋಗ್ಯಕ್ಕೆ ಕಾರಣ!

ಅಡಿಗೆಮನೆಯು ಆರೋಗ್ಯ ಮತ್ತು ಶಕ್ತಿಯ ಮೂಲವಾಗಿದೆ. ವಾಸ್ತು ಪ್ರಕಾರ, ಹಳೆಯ ಆಹಾರ, ಮುರಿದ ಪಾತ್ರೆಗಳು, ಸಿಂಕ್‌ನಲ್ಲಿ ಉಳಿದ ಆಹಾರ ಮತ್ತು ಕಸವನ್ನು ಅಡಿಗೆಮನೆಯಲ್ಲಿ ಇಡುವುದರಿಂದ ಆರ್ಥಿಕ ಸಂಕಷ್ಟಗಳು, ಅನಾರೋಗ್ಯ ಮತ್ತು ಕುಟುಂಬದಲ್ಲಿ ಕಲಹಗಳು ಉಂಟಾಗಬಹುದು. ಉತ್ತಮ ಆರೋಗ್ಯ ಮತ್ತು ಸಮೃದ್ಧಿಗಾಗಿ ಅಡಿಗೆಮನೆಯನ್ನು ಸ್ವಚ್ಛವಾಗಿ, ಅಚ್ಚುಕಟ್ಟಾಗಿ ಇಡುವುದು ಅತಿ ಮುಖ್ಯ.

Vastu Tips: ಅಡುಗೆಮನೆಯಲ್ಲಿರುವ ಈ ವಸ್ತುಗಳೇ ಆರ್ಥಿಕ ನಷ್ಟ ಹಾಗೂ ಅನಾರೋಗ್ಯಕ್ಕೆ ಕಾರಣ!
ವಾಸ್ತು ಶಾಸ್ತ್ರ
ಅಕ್ಷತಾ ವರ್ಕಾಡಿ
|

Updated on: Feb 25, 2026 | 10:39 AM

Share

ಮನೆಯಲ್ಲಿ ಅತ್ಯಂತ ಪ್ರಮುಖ ಮತ್ತು ಶಕ್ತಿಶಾಲಿ ಸ್ಥಳಗಳಲ್ಲಿ ಅಡಿಗೆಮನೆ ಒಂದಾಗಿದೆ. ಅಡಿಗೆಮನೆಯು ಕೇವಲ ಅಡುಗೆಯನ್ನು ತಯಾರಿಸುವ ಸ್ಥಳವಲ್ಲ, ಇದು ನಮ್ಮ ದೇಹಕ್ಕೆ ಶಕ್ತಿ, ಒಳ್ಳೆಯ ಆಲೋಚನೆಗಳು ಮತ್ತು ನಿರ್ದಿಷ್ಟವಾಗಿ ಆರೋಗ್ಯವನ್ನು ಒದಗಿಸುವ ಕೇಂದ್ರವಾಗಿದೆ. ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು, ಕೀರ್ತಿ ಮತ್ತು ಪ್ರತಿಷ್ಠೆ ಹೆಚ್ಚುತ್ತವೆ. ಆರೋಗ್ಯ ನಷ್ಟವಾದರೆ ಎಲ್ಲವೂ ಕಳೆದುಹೋಗುತ್ತದೆ ಎಂಬುದನ್ನು ಮರೆಯಬಾರದು. ಈ ಆರೋಗ್ಯವನ್ನು ಸೃಷ್ಟಿಸುವ ಶಕ್ತಿ ಅಡಿಗೆಮನೆಯಲ್ಲಿದೆ. ಹಾಗಾಗಿ ಅಡಿಗೆಮನೆಯಲ್ಲಿ ಇರಬಾರದ ವಸ್ತುಗಳು ಮತ್ತು ಸ್ಥಿತಿಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸಲಹೆ ನೀಡಿದ್ದಾರೆ.

ವಾಸ್ತು ಶಾಸ್ತ್ರದ ಪ್ರಕಾರ, ಅಡಿಗೆಮನೆಯಲ್ಲಿ ಕೆಲವು ವಸ್ತುಗಳಿದ್ದರೆ ಅಥವಾ ಕೆಲವು ಸ್ಥಿತಿಗಳಿದ್ದರೆ ಅದು ಬಡತನ, ಆಲಸ್ಯ ಮತ್ತು ನಕಾರಾತ್ಮಕ ಆಲೋಚನೆಗಳಿಗೆ ಕಾರಣವಾಗುತ್ತದೆ. ಅಡಿಗೆಮನೆಯನ್ನು ಸಾಮಾನ್ಯವಾಗಿ ಆಗ್ನೇಯ (ಸೌತ್ ಈಸ್ಟ್) ದಿಕ್ಕಿನಲ್ಲಿ ನಿರ್ಮಿಸಲು ಆದ್ಯತೆ ನೀಡಲಾಗುತ್ತದೆ, ನಂತರ ವಾಯುವ್ಯ (ನಾರ್ತ್ ವೆಸ್ಟ್) ದಿಕ್ಕನ್ನು ಆಯ್ಕೆ ಮಾಡಲಾಗುತ್ತದೆ. ಅಡುಗೆ ಮಾಡುವಾಗ ಸೂರ್ಯನ ಕಡೆ ಮುಖ ಮಾಡುವುದು ಶುಭ ಎಂದು ಪರಿಗಣಿಸಲಾಗುತ್ತದೆ.

ಅಡಿಗೆಮನೆಯಲ್ಲಿ ಗಮನಹರಿಸಬೇಕಾದ ನಾಲ್ಕು ಪ್ರಮುಖ ಅಂಶಗಳು ಇಲ್ಲಿವೆ:

ಉಳಿದ ಅಥವಾ ಹಾಳಾದ ಆಹಾರ:

ಅಡುಗೆ ಮಾಡಿದ ಆಹಾರವನ್ನು ಎಲ್ಲರೂ ಸೇವಿಸಿದ ನಂತರ, ಉಳಿದ ಆಹಾರವನ್ನು ಅತಿಯಾಗಿ ಕಾಯಿಸಬಾರದು ಅಥವಾ ಹಾಳಾಗಲು ಬಿಡಬಾರದು. ಆಹಾರ ಹಾಳಾಗಲು ಬಿಟ್ಟರೆ ಅದು ಮನೆಯಲ್ಲಿ ದಾರಿದ್ರ್ಯವನ್ನು ಹೆಚ್ಚಿಸುತ್ತದೆ. ಉಳಿದ ಒಳ್ಳೆಯ ಆಹಾರವನ್ನು ಪ್ರಾಣಿ-ಪಕ್ಷಿಗಳಿಗೆ ನೀಡಬಹುದು ಅಥವಾ ಹಸಿದವರಿಗೆ ಹಂಚಬಹುದು. ಆಹಾರ ಹಾಳಾಗಲು ಬಿಡುವುದು ಎಂದಿಗೂ ಒಳ್ಳೆಯದಲ್ಲ. ಇದು ಶ್ರೀಮಂತರು ಮತ್ತು ಬಡವರು ಎಲ್ಲರಿಗೂ ಅನ್ವಯಿಸುತ್ತದೆ

ಮುರಿದ ಪಾತ್ರೆಗಳು:

ಅಡಿಗೆಮನೆಯಲ್ಲಿ ಮುರಿದ ಅಥವಾ ಒಡೆದ ಪಾತ್ರೆಗಳನ್ನು ಇಡಬಾರದು ಅಥವಾ ಬಳಸಬಾರದು. ತೂತಾದ, ಕೆಟ್ಟಿರುವ ಅಥವಾ ಒಡೆದ ಪಾತ್ರೆಗಳನ್ನು ಇಟ್ಟುಕೊಂಡರೆ ಮನೆಯಲ್ಲಿ ಖರ್ಚು ಜಾಸ್ತಿಯಾಗುತ್ತದೆ ಮತ್ತು ಹಣ ಎಲ್ಲಿ ಹೋಗುತ್ತಿದೆ ಎಂದು ತಿಳಿಯುವುದಿಲ್ಲ. ಮುರಿದ ಪಾತ್ರೆಗಳು ಆರ್ಥಿಕ ನಷ್ಟಕ್ಕೆ ಕಾರಣವಾಗುತ್ತವೆ.

ಇದನ್ನೂ ಓದಿ: ಮನೆಯ ಹತ್ತಿರ ಪಾರಿಜಾತ ಗಿಡ ಇರುವುದು ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ಸಿಂಕ್‌ನಲ್ಲಿ ಉಳಿದ ಆಹಾರದೊಂದಿಗೆ ಪಾತ್ರೆಗಳು:

ಸಿಂಕ್‌ನಲ್ಲಿ ಆಹಾರ ಪದಾರ್ಥಗಳೊಂದಿಗೆ ಪಾತ್ರೆಗಳನ್ನು ಹೆಚ್ಚು ಹೊತ್ತು ಇಡಬಾರದು. ಊಟ ಮಾಡಿದ ತಟ್ಟೆ ಅಥವಾ ಇತರ ಪಾತ್ರೆಗಳಲ್ಲಿ ಉಳಿದಿರುವ ಆಹಾರವನ್ನು ಕೂಡಲೇ ವಿಲೇವಾರಿ ಮಾಡಬೇಕು. ಆಹಾರದ ಅವಶೇಷಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ಪ್ರಾಣಿಗಳಿಗೆ ಅಥವಾ ಪಕ್ಷಿಗಳಿಗೆ ಹಾಕಬೇಕು. ಸಿಂಕ್‌ನಲ್ಲಿ ಆಹಾರ ಪದಾರ್ಥಗಳು ಹಾಗೆಯೇ ಉಳಿದಿದ್ದರೆ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಇದು ಮನೆಯಲ್ಲಿ ಗಂಡ-ಹೆಂಡತಿಯ ನಡುವೆ ಕಲಹಗಳಿಗೆ ಸಹ ಕಾರಣವಾಗಬಹುದು.

ಅಡಿಗೆಮನೆಯಲ್ಲಿ ಕಸ:

ಅಡಿಗೆಮನೆಯನ್ನು ಯಾವಾಗಲೂ ಸ್ವಚ್ಛವಾಗಿ ಮತ್ತು ಅಚ್ಚುಕಟ್ಟಾಗಿ ಇಡಬೇಕು. ಈರುಳ್ಳಿ ಸಿಪ್ಪೆ, ಬೆಳ್ಳುಳ್ಳಿ ಸಿಪ್ಪೆ, ತರಕಾರಿ ತುಂಡುಗಳು ಅಥವಾ ಯಾವುದೇ ಕಸವನ್ನು ಅಡಿಗೆಮನೆಯಲ್ಲಿ ಹಾಗೆಯೇ ಬಿಡಬಾರದು. ಕಸವನ್ನು ಸರಿಯಾಗಿ ವಿಲೇವಾರಿ ಮಾಡದಿದ್ದರೆ ಅನಾರೋಗ್ಯ ಕಾಡುತ್ತದೆ. ಅಲ್ಲದೆ, ಇಂತಹ ಅಶುದ್ಧ ಅಡಿಗೆಮನೆಗೆ ಲಕ್ಷ್ಮಿ ದೇವಿಯು ಪ್ರವೇಶಿಸುವುದಿಲ್ಲ. ಸ್ವಚ್ಛತೆ ಇಲ್ಲದ ಅಡಿಗೆಮನೆಯಲ್ಲಿ ತಯಾರಿಸಿದ ಆಹಾರ ಸೇವಿಸಿದವರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು ಎಂದು ಗುರೂಜಿ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು
ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ