ಯಜ್ಞೋಪವೀತ ಸಂಸ್ಕಾರ (Upnayan thread) ಎಂಬುದು ಪರಮ ಪವಿತ್ರ ಹಾಗೂ ವೈಜ್ಞಾನಿಕ ಹಿನ್ನೆಲೆಯಿಂದ ಕೂಡಿರುವ ಸಂಸ್ಕಾರ. ಯಜ್ಞೋಪವೀತ ಧಾರಣೆ ಪ್ರತಿಯೊಬ್ಬ ಹಿಂದೂವಿನ ಕರ್ತವ್ಯ. ಇದರಿಂದ ವ್ಯಕ್ತಿಯ ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಸಾಧ್ಯವಾಗುತ್ತದೆ. ಯಜ್ಞೋಪವೀತವನ್ನು (Sacred Thread) ಧರಿಸಿದ ವ್ಯಕ್ತಿ ನಿಯಮಗಳಿಂದ ಬಂಧಿತನಾಗುತ್ತಾನೆ. ಅದು ವ್ಯಕ್ತಿಯನ್ನು ಸಾತ್ವಿಕ ಜೀವನದತ್ತ ಕೊಂಡೊಯ್ಯುತ್ತದೆ. ಸಾತ್ವಿಕ ಆಹಾರ ಹಾಗೂ ಸಾತ್ವಿಕ ಜೀವನವನ್ನು ನಡೆಸುವುದರಿಂದ ವ್ಯಕ್ತಿ ದೈಹಿಕ ಆರೋಗ್ಯವನ್ನು ಪಡೆದು ದೀರ್ಘಾಯುಷ್ಯವನ್ನು ಹೊಂದುತ್ತಾನೆ.
* ಮಲ, ಮೂತ್ರಗಳನ್ನು ವಿಸರ್ಜಿಸುವಾಗ ಜನಿವಾರವನ್ನು ಬಲಗಿವಿಯ ಮೇಲೆ ಹಾಕಿ ಕೊಳ್ಳಬೇಕು. ಕೈ, ಕಾಲುಗಳನ್ನು ತೊಳೆದು ಶುಚಿಯಾದ ಬಳಿಕವಷ್ಟೇ ಅದನ್ನು ಪುನಃ ಸರಿ ಮಾಡಿ ಕೊಳ್ಳಬೇಕು. ಏಕೆಂದರೆ ಯಜ್ಞೋಪವೀತ ಸೊಂಟದ ಭಾಗಕ್ಕಿಂತ ಮೇಲಿದ್ದರೆ ಅಶುಚಿ ಆಗುವುದಿಲ್ಲ.
* ಯಜ್ಞೋಪವೀತದ ಎಳೆ ತುಂಡಾದರೆ ತಕ್ಷಣ ಬದಲಿಸಬೇಕು. ತುಂಡಾಗಿರುವ ಜನಿವಾರವನ್ನು ಧರಿಸಿರಬಾರದು. ಯಜ್ಞೋಪವೀತ ಹಳೆಯದಾದರೆ ಆದಷ್ಟು ಬೇಗ ಅದನ್ನು ಬದಲಿಸಬೇಕು.
* ಜನ್ಮ ಹಾಗೂ ಮರಣದ ಸೂತಕದ ನಂತರ ಯಜ್ಞೋಪವೀತವನ್ನು ಬದಲಿಸಬೇಕು.
* ಯಜ್ಞೋಪವೀತವನ್ನು ಶರೀರದಿಂದ ಹೊರಗೆ ತೆಗೆಯ ಬಾರದು. ಯಜ್ಞೋಪವೀತವನ್ನು ಸ್ವಚ್ಛ ಮಾಡ ಬೇಕೆಂದರೆ ಕತ್ತಿನಲ್ಲಿ ಧರಿಸಿ ತೊಳೆಯ ಬಹುದು.
* ಯಜ್ಞೋಪವೀತವನ್ನು ಧರಿಸಿದ ವ್ಯಕ್ತಿ ನಿಯಮಗಳಿಂದ ಬಂಧಿತನಾಗುತ್ತಾನೆ. ಅದು ವ್ಯಕ್ತಿಯನ್ನು ಸಾತ್ವಿಕ ಜೀವನದತ್ತ ಕೊಂಡೊಯ್ಯುತ್ತದೆ. ಸಾತ್ವಿಕ ಆಹಾರ ಹಾಗೂ ಸಾತ್ವಿಕ ಜೀವನವನ್ನು ನಡೆಸುವುದರಿಂದ ವ್ಯಕ್ತಿ ದೈಹಿಕ ಆರೋಗ್ಯವನ್ನು ಪಡೆದು ದೀರ್ಘಾಯುಷ್ಯವನ್ನು ಹೊಂದುತ್ತಾನೆ. ಮಲ, ಮೂತ್ರ ವಿಸರ್ಜನೆಯ ನಂತರ ತನ್ನ ಮುಖ, ಹಲ್ಲುಗಳನ್ನು ಸ್ವಚ್ಛ ಪಡಿಸಿ ಕೊಳ್ಳುವುದರಿಂದ ವಿಷಾಣುಗಳು ನಾಶಗೊಳ್ಳುತ್ತವೆ.
* ಬಲಗಿವಿಯ ಭಾಗದಲ್ಲಿರುವ ಒಂದು ವಿಶೇಷ ನರ ಉದರ ಭಾಗವನ್ನು ಸಂಪರ್ಕಿಸುತ್ತದೆ. ಮಲ ಮೂತ್ರ ವಿಸರ್ಜನೆಯ ಸಮಯದಲ್ಲಿ ಜನಿವಾರವನ್ನು ಬಲಗಿವಿಯ ಮೇಲೆ ಹಾಕಿ ಕೊಂಡಾಗ ಆ ನರದ ಉತ್ತೇಜನವಾಗುತ್ತದೆ. ಇದರಿಂದ ಜೀರ್ಣ ಸಂಬಂಧಿ ಪ್ರಕ್ರಿಯೆಗಳು
ಸುಗಮವಾಗಿ ನಡೆಯುತ್ತವೆ. ಎಸಿಡಿಟಿ, ಉದರ ಸಂಬಂಧಿ ರೋಗಗಳು, ಮೂತ್ರೇಂದ್ರಿಯ ರೋಗಗಳು, ರಕ್ತದೊತ್ತಡ, ಹೃದಯ ಸಂಬಂಧಿ ರೋಗಗಳು ಹಾಗೂ ಹಲವು ಸಾಂಕ್ರಾಮಿಕ ರೋಗಗಳಿಂದ ಮುಕ್ತಿ ಸಿಗುತ್ತದೆ.
* ಚಿಕಿತ್ಸಾ ವಿಜ್ಞಾನದ ಪ್ರಕಾರ ಬಲಗಿವಿಯ ನರ ಗುಪ್ತೇಂದ್ರಿಯಗಳ ಜೊತೆ ಸಂಪರ್ಕವನ್ನು ಹೊಂದಿದೆ. ಮೂತ್ರ ವಿಸರ್ಜನೆಯ ಸಮಯದಲ್ಲಿ ಯಜ್ಞೋಪವೀತವನ್ನು ಬಲಗಿವಿಯ ಮೇಲೆ ಹಾಕಿ ಕೊಂಡಾಗ ಶುಕ್ರಾಣುಗಳ ರಕ್ಷಣೆಯಾಗುತ್ತದೆ.
* ಯಜ್ಞೋಪವೀತವನ್ನು ಧರಿಸಿದ ವ್ಯಕ್ತಿಗೆ ಭಯ ಹಾಗೂ ದುಃಸ್ವಪ್ನಗಳ ಸಮಸ್ಯೆ ಕಾಡುವುದಿಲ್ಲ.
* ಯಜ್ಞೋಪವೀತವನ್ನು ಧರಿಸುವುದರಿಂದ ದೇಹದಲ್ಲಿರುವ ಸೂರ್ಯ ನಾಡಿ ಜಾಗೃತವಾಗಿರುತ್ತದೆ.
* ವ್ಯಕ್ತಿಯ ಎಡ ಬೆನ್ನಿನ ಭಾಗದಲ್ಲಿ ಹೊಟ್ಟೆಯ ಕಡೆ ಸಾಗುವ ಒಂದು ಪ್ರಾಕೃತಿಕ ರೇಖೆಯಿರುತ್ತದೆ. ಈ ರೇಖೆ ವಿದ್ಯುತ್ ಪ್ರವಾಹದಂತೇ ಕಾರ್ಯ ನಿರ್ವಹಿಸುತ್ತಿರುತ್ತದೆ. ಯಜ್ಞೋಪವೀತವನ್ನು ಧರಿಸುವುದರಿಂದ ಈ ರೇಖೆಯ ಶಕ್ತಿ ಕಡಿಮೆಯಾಗುತ್ತದೆ. ಆಗ ವ್ಯಕ್ತಿಯ ಕಾಮ, ಕ್ರೋಧ, ಲೋಭ, ಮೋಹ, ಮದ, ಮಾತ್ಸರ್ಯಗಳೆಂಬ ಅರಿಷಡ್ವರ್ಗಗಳು ನಿಯಂತ್ರಣವಾಗುತ್ತವೆ.
* ಯಜ್ಞೋಪವೀತ ವ್ಯಕ್ತಿಯ ಅಂತಃಪ್ರೇರಣೆಯನ್ನು ಜಾಗೃತಗೊಳಿಸಿ ಸನ್ಮಾರ್ಗದಲ್ಲಿ ನಡೆಯುವಂತೇ ಪ್ರೇರೇಪಿಸುತ್ತದೆ. ವ್ಯಕ್ತಿಯನ್ನು ಅನ್ಯಾಯ, ಅನೀತಿ, ಭ್ರಷ್ಟಾಚಾರಗಳಿಂದ ದೂರವಿರಿಸುತ್ತದೆ. (ಸಂಗ್ರಹ)