
ಗಾಢವಾದ ಕಪ್ಪು ಬಣ್ಣ ಹಾಗೂ ನುಣುಪಾದ ಕಲ್ಲಿನ ರೂಪದಲ್ಲಿ ಇರುವುದೇ ಸಾಲಿಗ್ರಾಮ. ಈ ಕಲ್ಲನ್ನು ವಿಷ್ಣುವಿನ ರೂಪ ಎಂದು ಪರಿಗಣಿಸಲಾಗುವುದು. ದೈವ ಶಕ್ತಿಯನ್ನು ಹೊಂದಿರುವ ಸಾಲಿಗ್ರಾಮವನ್ನು ಮನೆಯಲ್ಲಿ ಇಟ್ಟು ಪೂಜಿಸಿದರೆ ಸಕಾರಾತ್ಮಕ ಶಕ್ತಿಯು ಮನೆಯೊಳಗೆ ಆಗಮಿಸುವುದು. ಇದನ್ನು ಮನೆಯಲ್ಲಿ ಪ್ರತಿಷ್ಠೆ ಮಾಡುವಾಗ ಅಥವಾ ಮನೆಯಲ್ಲಿ ಇಟ್ಟುಕೊಳ್ಳುವಾಗ ಸೂಕ್ತ ಕ್ರಮದಡಿ ಸಮರ್ಥವಾಗಿ ಸ್ವಾಮಿನಿಷ್ಠೆಯಿಂದ ಆರಾಧನೆ ಮಾಡಬೇಕು. ಇಲ್ಲವಾದರೆ ಅದರಿಂದಾಗುವ ದುಷ್ಪರಿಣಾಮಗಳನ್ನು ಎದುರಿಸಬೇಕಾಗುವುದು. ವೈಷ್ಣವರು ಹಾಗೂ ವಿಷ್ಣು ಭಕ್ತರು ಸಾಲಿಗ್ರಾಮವನ್ನು ಮನೆಯಲ್ಲಿಟ್ಟು ಪೂಜಿಸುತ್ತಾರೆ. ಇದನ್ನು ಮನೆಯಲ್ಲಿ ಇಟ್ಟು ಪೂಜಿಸಿದರೆ ಭಗವಾನ್ ವಿಷ್ಣುವಿಗೆ ಗೌರವ ನೀಡಿದಂತೆ ಎಂದು ಹೇಳಲಾಗುವುದು. ಸಾಲಿಗ್ರಾಮಕ್ಕೆ ತುಳಸಿ ಎಲೆಯನ್ನು ಅರ್ಪಿಸಿದರೆ ಭಗವಾನ್ ವಿಷ್ಣು ಸಂತೃಪ್ತನಾಗುತ್ತಾನೆ. ಯಾರು ಸಾಲಿಗ್ರಾಮಕ್ಕೆ ತುಳಸಿ ಎಲೆಯನ್ನು ಇಟ್ಟು ಪೂಜಿಸುತ್ತಾರೋ ಅವರು ಮನೆಯಲ್ಲಿ ನೆಮ್ಮದಿ, ಸಂತೋಷವನ್ನು ಪಡೆದುಕೊಳ್ಳುವರು. ಅವರಿಗೆ ಎಂದಿಗೂ ಬಡತನ, ಹಣದ ಸಮಸ್ಯೆ, ಅಸಮಾಧಾನ, ಆತಂಕ, ಭಯ, ಭ್ರಮೆ ಯಾವುದೂ ಉಂಟಾಗದು. ಜೊತೆಗೆ ಮನೆಯೊಳಗೆ ಯಾವುದೇ ಋಣಾತ್ಮಕ ಶಕ್ತಿ ಮತ್ತು ರೋಗವನ್ನು ತರುವ ಕೀಟಗಳು ಪ್ರವೇಶಿಸುವುದಿಲ್ಲ ಎಂಬ ನಂಬಿಕೆಯಿದೆ. ಸಾಲಿಗ್ರಾಮ ಎನ್ನುವುದು ನೇಪಾಳದ ಗಂಡಕಿ ನದಿಯ ಭಾಗದಲ್ಲಿ ಕಂಡುಬರುತ್ತದೆ. ಸಾಲಿಗ್ರಾಮ ಎನ್ನುವುದು ದೈವ ಶಕ್ತಿಯನ್ನು ಹೊಂದಿರುವ ಒಂದು ಕಲ್ಲಿನ ರೂಪ. ಹಿಂದೂ ಧರ್ಮದಲ್ಲಿ ಪ್ರಕೃತಿಯ ಪ್ರತಿಯೊಂದು ಸಂಗತಿಯಲ್ಲೂ ದೇವರ ರೂಪವನ್ನು ಕಾಣಲಾಗುವುದು. ಅಂತೆಯೇ ಅದಕ್ಕೆ ವಿಶೇಷ ಪೂಜೆ ಪುನಸ್ಕಾರವನ್ನು ಸಲ್ಲಿಸಲಾಗುವುದು. ದೈವ ಶಕ್ತಿಯೊಂದಿಗೆ...
Published On - 6:06 am, Sun, 25 August 24