ಈ ಮಂತ್ರ ಪಠಿಸಿದರೆ ಮಕ್ಕಳು ಅಧ್ಯಯನದಲ್ಲಿ ಏಕಾಗ್ರತೆ ಪಡೆಯುವುದು ನಿಶ್ಚಿತ

ಕೆಲವೊಮ್ಮೆ ಕಠಿಣ ಪರಿಶ್ರಮ ಮತ್ತು ಪ್ರಯತ್ನಗಳ ನಂತರವೂ ಮಕ್ಕಳು ಅಧ್ಯಯನದಲ್ಲಿ ಆಸಕ್ತಿ ಹೊಂದಿಲ್ಲದಿದ್ದರೆ, ಅವರು ಎಲ್ಲೋ ಏಕಾಗ್ರತೆ ಅಥವಾ ಅಧ್ಯಯನದ ಬಗ್ಗೆ ಗಮನ ಕೊಡುತ್ತಿಲ್ಲ ಎಂಬುದು ಸ್ಪಷ್ಟವಾಗಿ ತಿಳಿದು ಬರುತ್ತದೆ. ಹಾಗಾಗಿ ಯಾವುದೇ ವಿದ್ಯಾರ್ಥಿಯು ಅಂತಹ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದ್ದರೆ ಮತ್ತು ಸರಿಯಾಗಿ ಅಧ್ಯಯನ ಮಾಡಲು ಸಾಧ್ಯವಾಗದಿದ್ದರೆ, ಈ ಮಂತ್ರಗಳು ತುಂಬಾ ಸಹಕಾರಿಯಾಗಿದೆ. ಹಾಗಾದರೆ ಯಾವ ಮಂತ್ರಗಳನ್ನು ಪಠಿಸಬೇಕು? ಇಲ್ಲಿದೆ ಮಾಹಿತಿ.

ಈ ಮಂತ್ರ ಪಠಿಸಿದರೆ ಮಕ್ಕಳು ಅಧ್ಯಯನದಲ್ಲಿ ಏಕಾಗ್ರತೆ ಪಡೆಯುವುದು ನಿಶ್ಚಿತ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 22, 2024 | 6:07 PM

ಪೋಷಕರು ತಮ್ಮ ಮಗುವಿಗೆ ಅಧ್ಯಯನದಲ್ಲಿ ಆಸಕ್ತಿ ಇಲ್ಲ ಮತ್ತು ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಚಿಂತೆ ಮಾಡುತ್ತಾರೆ. ಅಲ್ಲದೆ, ಕೆಲವು ಪೋಷಕರು ತಮ್ಮ ಮಗು ಹಗಲು, ರಾತ್ರಿ ಅಧ್ಯಯನ ಮಾಡಿದರು ಕೂಡ ಅಂಕ ಚೆನ್ನಾಗಿ ಬರುವುದಿಲ್ಲ ಎಂದು ದೂರುತ್ತಾರೆ. ಕೆಲವೊಮ್ಮೆ ಉತ್ತಮ ಅಂಕಗಳನ್ನು ಪಡೆಯಬೇಕು ಎನ್ನುವ ಉದ್ವಿಗ್ನತೆ ವಿದ್ಯಾರ್ಥಿಗಳನ್ನು ಸಹ ಕಾಡುತ್ತದೆ. ಇನ್ನು ಕೆಲವೊಮ್ಮೆ ಕಠಿಣ ಪರಿಶ್ರಮ ಮತ್ತು ಪ್ರಯತ್ನಗಳ ನಂತರವೂ ಮಕ್ಕಳು ಅಧ್ಯಯನದಲ್ಲಿ ಆಸಕ್ತಿ ಹೊಂದಿಲ್ಲದಿದ್ದರೆ, ಅವರು ಎಲ್ಲೋ ಏಕಾಗ್ರತೆ ಅಥವಾ ಅಧ್ಯಯನದ ಬಗ್ಗೆ ಗಮನ ಕೊಡುತ್ತಿಲ್ಲ ಎಂಬುದು ಸ್ಪಷ್ಟವಾಗಿ ತಿಳಿದು ಬರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಮತ್ತು ವೈಯಕ್ತಿಕ ಅಭಿವೃದ್ಧಿಯತ್ತ ಸಾಗುವಲ್ಲಿ ಅನೇಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಇವೆಲ್ಲವೂ ವಿದ್ಯಾರ್ಥಿಗಳನ್ನು ಮಾನಸಿಕ ಒತ್ತಡಕ್ಕೆ ತಳ್ಳುತ್ತದೆ. ಆದ್ದರಿಂದ, ಯಾವುದೇ ವಿದ್ಯಾರ್ಥಿಯು ಅಂತಹ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದ್ದರೆ ಮತ್ತು ಸರಿಯಾಗಿ ಅಧ್ಯಯನ ಮಾಡಲು ಸಾಧ್ಯವಾಗದಿದ್ದರೆ, ಈ ಮಂತ್ರಗಳು ತುಂಬಾ ಸಹಕಾರಿಯಾಗಿದೆ. ಹಾಗಾದರೆ ಯಾವ ಮಂತ್ರಗಳನ್ನು ಪಠಿಸಬೇಕು? ಇಲ್ಲಿದೆ ಮಾಹಿತಿ.

ಓಂ ಮಂತ್ರ ಅಥವಾ ಓಂಕಾರ

“ಓಂ” ಎಂಬುದು ಪವಾಡಮಯ ಮತ್ತು ಸರ್ವಶಕ್ತ ಮಂತ್ರವಾಗಿದೆ. ಕೇವಲ ಓಂ ಪಠಣವು ಜೀವನ ನಡೆಸುವ ಶಕ್ತಿಯನ್ನು ನೀಡುತ್ತದೆ ಮತ್ತು ಪ್ರಪಂಚದ ಸವಾಲುಗಳನ್ನು ಎದುರಿಸುವ ಅದಮ್ಯ ಧೈರ್ಯವನ್ನು ನೀಡುತ್ತದೆ. ಇದು ಎಲ್ಲಕ್ಕಿಂತ ಸರಳವಾದ ಮಂತ್ರಗಳಲ್ಲಿ ಒಂದಾಗಿದ್ದು, ಬ್ರಹ್ಮಾಂಡದ ಸಂಪೂರ್ಣ ಸಾರವನ್ನು ಪ್ರತಿನಿಧಿಸುತ್ತದೆ. ಹಾಗಾಗಿ, ನಿಮ್ಮ ದೈನಂದಿನ ಅಭ್ಯಾಸದಲ್ಲಿ ‘ಓಂ’ ಪಠಣವನ್ನು ಸೇರಿಸುವುದರಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯನ್ನು ಹೆಚ್ಚಿಸಿ, ಮಕ್ಕಳು ಚೆನ್ನಾಗಿ ಅಭ್ಯಾಸ ಮಾಡಲು ಸಹಾಯ ಮಾಡುತ್ತದೆ.

ಮಹಾಮೃತ್ಯುಂಜಯ ಮಂತ್ರ

“ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಂ ಉ‌‌ರ್ವಾರುಕಮಿವ ಬಂಧನಾತ್ ಮೃತ್ಯೋರ್ಮುಕ್ಷೀಯಮಾಮೃತಾತ್” ಈ ಮಹಾಮೃತ್ಯುಂಜಯ ಮಂತ್ರವು ನಮ್ಮ ಮಾನಸಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ಇದನ್ನು ಪಠಿಸುವುದರಿಂದ ಭಯ ಮತ್ತು ಜೀವನದಲ್ಲಿ ಬರುವ ತೊಂದರೆಗಳಿಂದ ಮುಕ್ತಿ ಹೊಂದಬಹುದಾಗಿದೆ. ಜೊತೆಗೆ ಈ ಮಂತ್ರವನ್ನು ಪಠಿಸುವ ಮೂಲಕ, ವಿದ್ಯಾರ್ಥಿಗಳು ಭಯವನ್ನು ಹೋಗಲಾಡಿಸಿಕೊಳ್ಳುತ್ತಾರೆ. ಅಲ್ಲದೆ ಈ ಮಂತ್ರವನ್ನು ಪಠಿಸುವುದರಿಂದ ಅಧ್ಯಯನ ಅಥವಾ ಇತರ ಯಾವುದೇ ಕೆಲಸದಲ್ಲಿ ಯಶಸ್ಸನ್ನು ಪಡೆಯಬಹುದಾಗಿದೆ.

ಗಣೇಶ ಮಂತ್ರ

“ಓಂ ಗಣಪತಯೇ ನಮಃ” ಹಿಂದೂ ಧರ್ಮದಲ್ಲಿ, ಗಣೇಶನನ್ನು ವಿಘ್ನ ನಿವಾರಕ ಎಂದು ಕರೆಯಲಾಗುತ್ತದೆ. ಹಾಗಾಗಿ ಅವನ ಮಂತ್ರವನ್ನು ಪಠಿಸುವ ಮೂಲಕ, ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಯಾವುದೇ ರೀತಿಯ ಅಡೆತಡೆ ಬರದಂತೆ ನೋಡಿಕೊಳ್ಳಬಹುದು ಹಾಗೂ ಗಣೇಶನ ಆಶೀರ್ವಾದ ಪಡೆಯಬಹುದು. ಗಣೇಶನ ಈ ಮಂತ್ರವು ಏಕಾಗ್ರತೆಯ ಭಾವನೆಯನ್ನು ಸೃಷ್ಟಿಸಿ ಅಧ್ಯಯನ ಮಾಡಲು ಸಹಾಯ ಮಾಡುತ್ತದೆ.

ಸರಸ್ವತಿ ಮಂತ್ರ

”ಓಂ ವಾಗ್ದೈವ್ಯೈ ಚ ವಿದ್ಮಹೇ ಕಾಮರಾಜಾಯ ಧೀಮಹಿ ತನ್ನೋ ದೇವಿ ಪ್ರಚೋದಯಾತ್‌” ತಾಯಿ ಸರಸ್ವತಿ ಮಾತೆಯ ಆಶೀರ್ವಾದದ ಜೊತೆಗೆ ಜ್ಞಾನ ಮತ್ತು ಬುದ್ಧಿವಂತಿಕೆಯನ್ನು ಪಡೆಯಲು ಈ ಮಂತ್ರವನ್ನು ಪಠಿಸಲಾಗುತ್ತದೆ. ಇದು ಅತ್ಯಂತ ಶಕ್ತಿಯುತವಾದ ಮಂತ್ರವಾಗಿದ್ದು ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ವೃದ್ಧಿಸುವುದಲ್ಲದೆ ಮನಸ್ಸನ್ನು ಹತೋಟಿಯಲ್ಲಿಡಲು ಇದು ಸಹಾಯ ಮಾಡುತ್ತದೆ. ವಿದ್ಯಾರ್ಥಿಯು ಶಿಕ್ಷಣವನ್ನು ಪ್ರಾರಂಭಿಸಿದಾಗ ಅಥವಾ ಹೊಸದನ್ನು ಕಲಿಯುತ್ತಿರುವಾಗ ಸರಸ್ವತಿ ಮಂತ್ರವನ್ನು ಸಾಮಾನ್ಯವಾಗಿ ಪಠಿಸಲಾಗುತ್ತದೆ. ಇದನ್ನು ಮಾಡುವುದರಿಂದ, ವಿಷಯಗಳನ್ನು ಕಲಿಯಲು ಮತ್ತು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮಾಘ ಹುಣ್ಣಿಮೆಯ ಪೂಜಾ ಆಚರಣೆಗಳು ಹೇಗೆ? ಇಲ್ಲಿದೆ ಮಾಹಿತಿ

ಶ್ರೀ ಕೃಷ್ಣ ಮಂತ್ರ

“ಓಂ ಕೃಷ್ಣಾಯ ನಮಃ” ಈ ಸರಳ ಕೃಷ್ಣ ಮಂತ್ರವನ್ನು ಬಾಲ್ಯದಿಂದಲೂ ಕೇಳುತ್ತಾ ಬಂದಿದ್ದೇವೆ. ಕುಟುಂಬದ ಹಿರಿಯರು ಅಥವಾ ಶಾಲಾ ಪ್ರಾರ್ಥನೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಕಲಿಸುತ್ತಾರೆ. ಈ ಕೃಷ್ಣ ಮಂತ್ರವು ಶ್ರೀಕೃಷ್ಣನನ್ನು ಮೆಚ್ಚಿಸಲು ಮತ್ತು ಅವನ ಆಶೀರ್ವಾದವನ್ನು ಪಡೆಯಲು ಸಹಾಯ ಮಾಡುತ್ತದೆ. ಜೊತೆಗೆ ಏಕಾಗ್ರತೆ ಪಡೆಯಲು ಸಹಾಯ ಮಾಡುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್