ಕ್ರೆಡಿಟ್ ಸ್ಕೋರ್ ಮೇಲೆ ಚಿನ್ನದ ಸಾಲ ಹೇಗೆ ಪ್ರಭಾವ ಬೀರುತ್ತದೆ?

ಚಿನ್ನದ ಸಾಲವನ್ನು ಪಡೆದ ನಂತರ ನೀವು ನಿಗದಿತ ನಿಯಮಾನುಸಾರ ಅದನ್ನು ಮರುಪಾವತಿ ಮಾಡಬೇಕು. ಇದರ ಆಧಾರದಲ್ಲಿ ನಿಮ್ಮ ಕ್ರೆಡಿಟ್ ಸ್ಕೋರ್ ಉತ್ತಮಗೊಳ್ಳುತ್ತದೆ.

ಕ್ರೆಡಿಟ್ ಸ್ಕೋರ್ ಮೇಲೆ ಚಿನ್ನದ ಸಾಲ ಹೇಗೆ ಪ್ರಭಾವ ಬೀರುತ್ತದೆ?
ಚಿನ್ನದ ದರ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Ganapathi Sharma

Updated on: Oct 21, 2022 | 6:26 PM

ಸಾಮಾನ್ಯವಾಗಿ ಜನರು ಅಗತ್ಯವಿದ್ದಾಗ ಮಾತ್ರ ಸಾಲ ಪಡೆಯುತ್ತಾರೆ. ಸಾಲ ಎಂದರೆ ಅದೊಂದು ರೀತಿಯ ಹಣಕಾಸು ನೆರವು. ಸಾಲಗಾರರು ಈ ನೆರವನ್ನು ನೀಡುತ್ತಾರೆ. ಉದಾಹರಣೆಗೆ; ಸಾಲ ಪಡೆದವರು ನಿಗದಿತ ಅವಧಿಯೊಳಗೆ ಮರುಪಾವತಿ ಮಾಡುವುದಕ್ಕಾಗಿ ನೀವು ನೀಡುವ ಖಾತರಿಯ ಆಧಾರದಲ್ಲಿ ಸಾಲ ನೀಡಲಾಗುತ್ತದೆ. ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡುವುದು ಕ್ರೆಡಿಟ್ ಸ್ಕೋರ್ ಉತ್ತಮವಾಗಿರಲು ನೆರವಾಗುತ್ತದೆ. ಕ್ರೆಡಿಟ್ ಸ್ಕೋರ್ ಎಂಬುದು ವ್ಯಕ್ತಿಯೊಬ್ಬನ ಕ್ರೆಡಿಟ್ ಇತಿಹಾಸವನ್ನು ಪ್ರತಿಬಿಂಬಿಸುತ್ತದೆ. ನೀವು ಹೇಗೆ ನಿಮ್ಮ ಸಾಲವನ್ನು ಮರುಪಾವತಿ ಮಾಡುತ್ತೀರಿ ಎಂಬುದನ್ನು ಈ ಸ್ಕೋರ್ ತಿಳಿಯಪಡಿಸುತ್ತದೆ. ಚಿನ್ನದ ಸಾಲ ಪಡೆಯುವುದು ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ ಬೀರಬಹುದು ಎಂಬ ಪ್ರಶ್ನೆ ನಿಮ್ಮಲ್ಲಿ ಉದ್ಭವಿಸಬಹುದು. ಇದಕ್ಕೆ ಉತ್ತರ ಹೌದು ಎಂದಾಗಿರುತ್ತದೆ. ಚಿನ್ನದ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡುವುದರಿಂದ ಕ್ರೆಡಿಟ್ ಸ್ಕೋರ್ ಉತ್ತಮಗೊಳ್ಳುತ್ತದೆ. ಅದೇರೀತಿ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡದಿದ್ದರೆ ಕ್ರೆಡಿಟ್ ಸ್ಕೋರ್ ತೀವ್ರ ಕುಸಿತ ಕಾಣಬಹುದು.

ಚಿನ್ನದ ಸಾಲಕ್ಕೆ ಅರ್ಜಿ ಸಲ್ಲಿಸುವುದು ನಿಮ್ಮ ಕ್ರೆಡಿಟ್ ಅಂಕವನ್ನು ಕಡಿಮೆಯಾಗುವಂತೆ ಮಾಡಬಹುದು. ಆದರೆ ತೀರಾ ಕಡಿಮೆಯಾಗದು. ನೀವು ಸಾಲಕ್ಕೆ ಅರ್ಜಿ ಸಲ್ಲಿಸಿದಾಗಲೆಲ್ಲ ಬ್ಯಾಂಕುಗಳು ಕ್ರೆಡಿಟ್ ಬ್ಯೂರೋಗಳ ಬಳಿ ನಿಮ್ಮ ಕ್ರೆಡಿಟ್ ವರದಿಯನ್ನು ಕೇಳುತ್ತವೆ. ನಿಮ್ಮ ಅರ್ಜಿಯ ಬಗ್ಗೆ ನಿರ್ಧಾರ ಕೈಗೊಳ್ಳುವುದಕ್ಕಾಗಿ ಅವುಗಳು ಈ ಕ್ರಮ ಕೈಗೊಳ್ಳುತ್ತವೆ. ಈ ಪರಿಶೀಲನೆಯನ್ನು ಮಾಡದೆ ಬ್ಯಾಂಕುಗಳು ಸಾಲ ನೀಡುವುದಿಲ್ಲ. ಕ್ರೆಡಿಟ್ ವರದಿಯನ್ನು ಹಲವಾರು ಬಾರಿ ತಪಾಸಣೆ ಮಾಡುವುದರಿಂದ ಯಾವುದೇ ತೊಂದರೆ ಇಲ್ಲ. ಆದರೆ ತೀರಾ ಕಡಿಮೆ ಅವಧಿಯಲ್ಲಿ ಹಲವು ಬಾರಿ ಕ್ರೆಡಿಟ್ ವರದಿಯನ್ನು ಬ್ಯಾಂಕುಗಳು ಕೇಳಿದರೆ ನಿಮಗೆ ತೀರಾ ಸಾಲದ ಅಗತ್ಯವಿದೆ ಎಂಬ ಸಂದೇಶ ರವಾನೆಯಾಗುತ್ತದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಇದರ ಪರಿಣಾಮ ನಿಮ್ಮ ಕ್ರೆಡಿಟ್ ಸ್ಕೋರ್ ಮೇಲೆ ಆಗಬಹುದು.

ಚಿನ್ನದ ಸಾಲವನ್ನು ಪಡೆದ ನಂತರ ನೀವು ನಿಗದಿತ ನಿಯಮಾನುಸಾರ ಅದನ್ನು ಮರುಪಾವತಿ ಮಾಡಬೇಕು. ಇದರ ಆಧಾರದಲ್ಲಿ ನಿಮ್ಮ ಕ್ರೆಡಿಟ್ ಸ್ಕೋರ್ ಉತ್ತಮಗೊಳ್ಳುತ್ತದೆ. ಉತ್ತಮ ಕ್ರೆಡಿಟ್ ಸ್ಕೋರ್ ಗಳಿಸುವುದಕ್ಕಾಗಿ ಸಾಲದ ಇಎಂಐಯನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡುವುದು ಅಗತ್ಯ. ಸಮಯಕ್ಕೆ ಸರಿಯಾಗಿ ಸಾಲದ ಕಂತನ್ನು ಮರುಪಾವತಿಸುವುದು ಉತ್ತಮ ಕ್ರೆಡಿಟ್ ಹವ್ಯಾಸ ವೆಂದು ಪರಿಗಣಿಸಲ್ಪಡುತ್ತದೆ. ಇಂಥವರಿಗೆ ಬ್ಯಾಂಕುಗಳು ಸುಲಭವಾಗಿ ಸಾಲವನ್ನು ನೀಡುತ್ತವೆ. ಬ್ಯಾಂಕ್​ಗಳು ಮಾತ್ರವಲ್ಲದೆ ಇತರ ಹಣಕಾಸು ಸಂಸ್ಥೆಗಳು ಕೂಡಾ ಬಡ್ಡಿದರದಲ್ಲಿ ವಿನಾಯಿತಿ ನೀಡುತ್ತವೆ.

ಸಾಲ ಮರುಪಾವತಿಯನ್ನು ಸಮಯಕ್ಕೆ ಸರಿಯಾಗಿ ಮಾಡದೆ ಇರುವುದರಿಂದ ಕ್ರೆಡಿಟ್ ಸ್ಕೋರ್ ಮೇಲೆ ಮಾತ್ರ ಪರಿಣಾಮವಾಗುವುದಲ್ಲದೆ ವಿಳಂಬ ಶುಲ್ಕವನ್ನು ಪಾವತಿ ಮಾಡಬೇಕಾಗಬಹುದು.

ಚಿನ್ನದ ಸಾಲವು ಕ್ರೆಡಿಟ್ ಸ್ಕೋರ್ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ:IIFL

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್