AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Commonwealth Games: 2030ರ ಕಾಮನ್​ವೆಲ್ತ್​ ಕ್ರೀಡಾಕೂಟಕ್ಕೆ ಭಾರತದ ಆತಿಥ್ಯ

hmedabad to Host 2030 Commonwealth Games: 2030 ರ ಕಾಮನ್ವೆಲ್ತ್ ಕ್ರೀಡಾಕೂಟವನ್ನು ಭಾರತದ ಅಹಮದಾಬಾದ್‌ ಆಯೋಜಿಸಲಿದೆ. ಗ್ಲ್ಯಾಸ್ಗೋದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಅನುಮೋದನೆ ದೊರೆತಿದ್ದು, 2010 ರ ನಂತರ 20 ವರ್ಷಗಳ ಬಳಿಕ ಭಾರತಕ್ಕೆ ಮತ್ತೆ ಆತಿಥ್ಯ ದೊರೆತಿದೆ. ಈ ಕ್ರೀಡಾಕೂಟವು ಕಾಮನ್ವೆಲ್ತ್‌ನ 100ನೇ ವಾರ್ಷಿಕೋತ್ಸವದೊಂದಿಗೆ ಹೊಂದಿಕೊಂಡಿದ್ದು, ಐತಿಹಾಸಿಕ ಮಹತ್ವ ಪಡೆದಿದೆ. ಇದು 2036 ಒಲಿಂಪಿಕ್ಸ್‌ ಆಯೋಜಿಸುವ ಭಾರತದ ಗುರಿಯನ್ನು ಬಲಪಡಿಸುತ್ತದೆ.

Commonwealth Games: 2030ರ ಕಾಮನ್​ವೆಲ್ತ್​ ಕ್ರೀಡಾಕೂಟಕ್ಕೆ ಭಾರತದ ಆತಿಥ್ಯ
Commonwealth Games 2030
ಪೃಥ್ವಿಶಂಕರ
|

Updated on:Nov 26, 2025 | 7:13 PM

Share

2030 ರಲ್ಲಿ ನಡೆಯಲ್ಲಿರುವ ಕಾಮನ್ವೆಲ್ತ್ ಕ್ರೀಡಾಕೂಟದ (Commonwealth Games 2030) ಆತಿಥ್ಯದ ಹಕ್ಕುಗಳನ್ನು ಭಾರತಕ್ಕೆ ನೀಡಲಾಗಿದೆ. ಈ ಕ್ರೀಡಾಕೂಟಕ್ಕೆ ಗುಜರಾತ್‌ನ ಅಹಮದಾಬಾದ್‌ (Ahmedabad) ಆತಿಥ್ಯ ನೀಡಲಿದೆ. ಬುಧವಾರ ಗ್ಲ್ಯಾಸ್ಗೋದಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದ ಸಾಮಾನ್ಯ ಸಭೆಯಲ್ಲಿ 2030 ರ ಕಾಮನ್ವೆಲ್ತ್ ಕ್ರೀಡಾಕೂಟದ ಆತಿಥ್ಯದ ಹಕ್ಕುಗಳನ್ನು ಭಾರತಕ್ಕೆ ಅಧಿಕೃತವಾಗಿ ನೀಡಲಾಗಿದೆ. ಈ ಮೂಲಕ ಭಾರತ 2010 ರ ನಂತರ ಅಂದರೆ 20 ವರ್ಷಗಳ ನಂತರ ಈ ಕ್ರೀಡಾಕೂಟವನ್ನು ತನ್ನ ನೆಲದಲ್ಲಿ ಆಯೋಜಿಸುತ್ತಿದೆ. 2010 ರಲ್ಲಿ ನಡೆದಿದ್ದ ಈ ಕ್ರೀಡಾಕೂಟಕ್ಕೆ ನವದೆಹಲಿ ಆತಿಥ್ಯ ನೀಡಿದ್ದರೆ, 2030 ರ ಕ್ರೀಡಾಕೂಟಕ್ಕೆ ಅಹಮದಾಬಾದ್‌ ಆತಿಥ್ಯ ನೀಡಲಿದೆ.

ಭಾರತದಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟ

ಇಂದು ಗ್ಲ್ಯಾಸ್ಗೋದಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದ ಸಾಮಾನ್ಯ ಸಭೆಯಲ್ಲಿ 74 ಕಾಮನ್‌ವೆಲ್ತ್ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಭಾರತದ ಬಿಡ್ ಅನ್ನು ಅನುಮೋದಿಸಿದರು. ಆ ಬಳಿಕ ಮಾತನಾಡಿದ ಕಾಮನ್‌ವೆಲ್ತ್ ಕ್ರೀಡಾಕೂಟದ ಅಧ್ಯಕ್ಷ ಡಾ. ಡೊನಾಲ್ಡ್ ರುಕರೆ, ‘ಭಾರತವು ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಪ್ರಮಾಣ, ಯುವಜನತೆ, ಮಹತ್ವಾಕಾಂಕ್ಷೆ, ಶ್ರೀಮಂತ ಸಂಸ್ಕೃತಿ ಮತ್ತು ಪ್ರಸ್ತುತತೆಯನ್ನು ತರುತ್ತದೆ. ಇದು ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಹೊಸ ಸುವರ್ಣ ಯುಗದ ಆರಂಭವನ್ನು ಸೂಚಿಸುತ್ತದೆ. 2034 ಮತ್ತು ಅದಕ್ಕೂ ಮೀರಿದ ವರ್ಷಗಳಲ್ಲಿ ಕ್ರೀಡಾಕೂಟವನ್ನು ಆಯೋಜಿಸಲು ಅನೇಕ ದೇಶಗಳು ಆಸಕ್ತಿ ತೋರಿವೆ ಎಂದು ಹೇಳಲು ನನಗೆ ಸಂತೋಷವಾಗಿದೆ. ಕಾಮನ್‌ವೆಲ್ತ್ ಕ್ರೀಡಾಕೂಟಕ್ಕಾಗಿ ನಾವು ನಮ್ಮ ಮುಂದಿನ ಶತಮಾನವನ್ನು ಸಕಾರಾತ್ಮಕತೆಯೊಂದಿಗೆ ಪ್ರಾರಂಭಿಸುತ್ತಿದ್ದೇವೆ’ ಎಂದಿದ್ದಾರೆ.

2 ನಗರಗಳ ನಡುವೆ ಪೈಪೋಟಿ

ಕಳೆದ ತಿಂಗಳು, ಕಾಮನ್‌ವೆಲ್ತ್ ಕ್ರೀಡಾಕೂಟದ ಕಾರ್ಯಕಾರಿ ಮಂಡಳಿಯು ಈ ಕ್ರೀಡಾಕೂಟಗಳನ್ನು ಅಹಮದಾಬಾದ್‌ನಲ್ಲಿ ಆಯೋಜಿಸಲು ಶಿಫಾರಸು ಮಾಡಿತ್ತು. ಈಗ ಗ್ಲ್ಯಾಸ್ಗೋದಲ್ಲಿ ನಡೆದ ಸಾಮಾನ್ಯ ಸಭೆಯ ಸಭೆಯಲ್ಲಿ ಅಂತಿಮ ಅನುಮೋದನೆ ದೊರೆತಿದೆ. ಅಹಮದಾಬಾದ್ ಹೊರತುಪಡಿಸಿ, ನೈಜೀರಿಯಾದ ಅಬುಜಾ ಕ್ರೀಡಾಕೂಟವನ್ನು ಆಯೋಜಿಸುವ ಸ್ಪರ್ಧೆಯಲ್ಲಿತ್ತು. ಆದರೆ ಅಂತಿಮವಾಗಿ ಈ ಕ್ರೀಡಾಕೂಟದ ಆತಿಥ್ಯದ ಹಕ್ಕು ಭಾರತದ ಮಡಿಲಿಗೆ ಬಿದ್ದಿದೆ. ಗಮನಿಸಬೇಕಾದ ಸಂಗತಿಯೆಂದರೆ ಕಾಮನ್‌ವೆಲ್ತ್ ಕ್ರೀಡಾಕೂಟವು 2030 ರಲ್ಲಿ 100 ವರ್ಷಗಳನ್ನು ಪೂರೈಸಲಿದೆ, ಆದ್ದರಿಂದ ಈ ಐತಿಹಾಸಿಕ ಸಂದರ್ಭದಲ್ಲಿ ಭಾರತದಲ್ಲಿ ಈ ಕ್ರೀಡಾಕೂಟಗಳನ್ನು ಆಯೋಜಿಸುವುದು ಒಂದು ದೊಡ್ಡ ಸಾಧನೆಯಾಗಿದೆ.

ವಾಸ್ತವವಾಗಿ ಮೊದಲ ಕಾಮನ್‌ವೆಲ್ತ್ ಕ್ರೀಡಾಕೂಟವು 1930 ರಲ್ಲಿ ಕೆನಡಾದ ಹ್ಯಾಮಿಲ್ಟನ್‌ನಲ್ಲಿ ನಡೆದಿತ್ತು. ಇದೀಗ ಅಹಮದಾಬಾದ್‌ನಲ್ಲಿ ನಡೆಯಲಿರುವ 2030 ರ ಕಾಮನ್‌ವೆಲ್ತ್ ಕ್ರೀಡಾಕೂಟವು ಈ ಕ್ರೀಡಾಕೂಟದ ಇತಿಹಾಸದಲ್ಲಿ ಅತ್ಯಂತ ಮಹತ್ವದ್ದಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಅಲ್ಲದೆ ಈ ನಿರ್ಧಾರವು ನಿಸ್ಸಂದೇಹವಾಗಿ 2036 ರಲ್ಲಿ ಒಲಿಂಪಿಕ್ಸ್ ಅನ್ನು ಆಯೋಜಿಸುವ ಭಾರತದ ಮಹತ್ವಾಕಾಂಕ್ಷೆಗೆ ಮತ್ತಷ್ಟು ಬಲ ತುಂಬಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Wed, 26 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ