AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Commonwealth Games 2030: ಬಿಡ್ ಸಲ್ಲಿಕೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ

Commonwealth Games 2030: ಭಾರತ ಸರ್ಕಾರವು 2030ರ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸಲು ಮುಂದಾಗಿದೆ. ಅಹಮದಾಬಾದ್ ಈ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ. ವಿಶ್ವ ದರ್ಜೆಯ ಸೌಲಭ್ಯಗಳು ಮತ್ತು ನರೇಂದ್ರ ಮೋದಿ ಕ್ರೀಡಾಂಗಣದ ಲಭ್ಯತೆ ಇದಕ್ಕೆ ಕಾರಣ. ಈ ಕ್ರೀಡಾಕೂಟವು ಪ್ರವಾಸೋದ್ಯಮವನ್ನು ಉತ್ತೇಜಿಸಿ, ಉದ್ಯೋಗಾವಕಾಶಗಳನ್ನು ಸೃಷ್ಟಿಸಿ, ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ. ದೆಹಲಿ ಮತ್ತು ಭುವನೇಶ್ವರ ಕೂಡ ಪರಿಗಣನೆಯಲ್ಲಿವೆ.

Commonwealth Games 2030: ಬಿಡ್ ಸಲ್ಲಿಕೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ
Commonwealth Games
ಪೃಥ್ವಿಶಂಕರ
|

Updated on:Aug 27, 2025 | 9:01 PM

Share

ಕಾಮನ್‌ವೆಲ್ತ್ ಕ್ರೀಡಾಕೂಟವನ್ನು (Commonwealth Games) ಆಯೋಜಿಸುವ ಬಗ್ಗೆ ಭಾರತ ಸರ್ಕಾರ ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, 2030 ರ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸಲು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ. ಅಂದರೆ, 2030 ರ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸಲು ಭಾರತ ಹರಾಜಿನಲ್ಲಿ ಭಾಗವಹಿಸಲಿದೆ ಎಂಬುದು ಈಗ ಸ್ಪಷ್ಟವಾಗಿದೆ.

72 ದೇಶಗಳು ಭಾಗವಹಿಸಲಿವೆ

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಗುಜರಾತ್ ಸರ್ಕಾರಕ್ಕೆ ಅನುದಾನ ನೆರವು ನೀಡಲು ಅನುಮೋದನೆ ನೀಡಲಾಗಿರುವುದರಿಂದ ಭಾರತ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸಲು ಬಿಡ್ ಗೆದ್ದರೆ, ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಲು ಈ ಅನುದಾನ ನೆರವಾಗಲಿದೆ.ಈ ಕಾಮನ್‌ ವೆಲ್ತ್ ಕ್ರೀಡಾಕೂಟದಲ್ಲಿ 72 ದೇಶಗಳ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕ್ರೀಡಾಕೂಟದಲ್ಲಿ ಕೇವಲ ಕ್ರೀಡಾಪಟುಗಳು ಮಾತ್ರವಲ್ಲದೆ ತರಬೇತುದಾರರು, ತಾಂತ್ರಿಕ ಅಧಿಕಾರಿಗಳು, ಪ್ರವಾಸಿಗರು, ಮಾಧ್ಯಮ ವ್ಯಕ್ತಿಗಳು ಸೇರಿದಂತೆ ಇತರರು ಕೂಡ ಭಾಗವಹಿಸಲಿದ್ದಾರೆ. ಇದು ಸ್ಥಳೀಯ ವ್ಯವಹಾರಗಳಿಗೆ ಪ್ರಯೋಜನವನ್ನು ನೀಡುವುದಲ್ಲದೆ ಹೆಚ್ಚಿನ ಆದಾಯವನ್ನು ತರಲಿದೆ.

ಅಹಮದಾಬಾದ್ ಮೊದಲ ಆಯ್ಕೆ

ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸಲು ಅಹಮದಾಬಾದ್ ಮೊದಲ ಆಯ್ಕೆಯಾಗಿದೆ. ಏಕೆಂದರೆ ಇಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳು ಲಭ್ಯವಿದೆ. ಅಲ್ಲದೆ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 2023ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್ ಯಶಸ್ವಿಯಾಗಿ ನಡೆದಿತ್ತು. ಕ್ರೀಡೆಗಳನ್ನು ಮೀರಿ, ಭಾರತದಲ್ಲಿ ಕಾಮನ್‌ ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸುವುದರಿಂದ ಪ್ರವಾಸೋದ್ಯಮವನ್ನು ಉತ್ತೇಜಿಸಿದಂತ್ತಾಗುತ್ತದೆ. ಇದರ ಜೊತೆಗೆ ಉದ್ಯೋಗಗಳನ್ನು ಸೃಷ್ಟಿಸುವುದು ಮತ್ತು ಲಕ್ಷಾಂತರ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ಸಿಗಲಿದೆ.

ಭಾರತ ಕೊನೆಯದಾಗಿ 2010 ರಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ರಾಜಧಾನಿ ದೆಹಲಿಯಲ್ಲಿ ಆಯೋಜಿಸಲಾಗಿತ್ತು. ಇದೀಗ 2030 ರಲ್ಲಿ ನಡೆಯಲ್ಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಅಹಮದಾಬಾದ್ ಜೊತೆಗೆ ದೆಹಲಿ ಮತ್ತು ಭುವನೇಶ್ವರವನ್ನು ಪರಿಗಣಿಸಲಾಗುವುದು ಎಂದು ಐಒಎ ಅಧ್ಯಕ್ಷೆ ಪಿಟಿ ಉಷಾ ಹೇಳಿದ್ದಾರೆ. ಈ ವೇಳೆ ಮಾತನಾಡಿದ ಅವರು ‘2026 ರಲ್ಲಿ ಗ್ಲ್ಯಾಸ್ಗೋದಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಡಿಮೆ ಕ್ರೀಡೆಗಳನ್ನು ನಡೆಸಲಾಗುತ್ತಿದೆ. ಆದರೆ 2030 ರ ಕಾಮನ್‌ವೆಲ್ತ್ ಕ್ರೀಡಾಕೂಟದ ಆತಿಥ್ಯ ನಮಗೆ ಸಿಕ್ಕರೆ, ಎಲ್ಲಾ ಕ್ರೀಡೆಗಳನ್ನು ನಾವು ನಡೆಸುತ್ತೇವೆ ಎಂದರು. ವಾಸ್ತವವಾಗಿ 2026 ರಲ್ಲಿ ಗ್ಲ್ಯಾಸ್ಗೋದಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಹಾಕಿ, ಬ್ಯಾಡ್ಮಿಂಟನ್, ಕುಸ್ತಿ ಮತ್ತು ಶೂಟಿಂಗ್‌ನಂತಹ ಪ್ರಮುಖ ಕ್ರೀಡೆಗಳನ್ನು ವೆಚ್ಚದ ಕಾರಣ ತೆಗೆದು ಹಾಕಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:00 pm, Wed, 27 August 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ